Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 10:14 - ಕನ್ನಡ ಸಮಕಾಲಿಕ ಅನುವಾದ

14 “ನಾನೇ ಒಳ್ಳೆಯ ಕುರುಬನು. ನನ್ನ ಕುರಿಗಳನ್ನು ನಾನು ತಿಳಿದಿದ್ದೇನೆ. ನನ್ನ ಕುರಿಗಳು ನನ್ನನ್ನು ತಿಳಿದಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಾನೇ ನಿಜವಾದ ಒಳ್ಳೆಯ ಕುರುಬನು. ನನ್ನ ಕುರಿಗಳನ್ನು ನಾನು ಬಲ್ಲವನಾಗಿದ್ದೇನೆ. ನನ್ನ ಕುರಿಗಳು ನನ್ನನ್ನು ಬಲ್ಲವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14-15 ನಾನಾದರೋ ಉತ್ತಮ ಕುರಿಗಾಹಿ. ಪಿತನು ನನ್ನನ್ನು ಬಲ್ಲರು; ನಾನೂ ಪಿತನನ್ನು ಬಲ್ಲೆ. ಅಂತೆಯೇ ನಾನು ನನ್ನ ಕುರಿಗಳನ್ನು ಬಲ್ಲೆನು; ಅವು ನನ್ನನ್ನು ಬಲ್ಲವು. ಅವುಗಳಿಗೋಸ್ಕರ ನಾನು ನನ್ನ ಪ್ರಾಣವನ್ನೇ ಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14-15 ನಾನೇ ಒಳ್ಳೇ ಕುರುಬನು; ತಂದೆಯು ನನ್ನನ್ನು ನಾನು ತಂದೆಯನ್ನು ತಿಳಿದಿರುವಂತೆಯೇ ನಾನು ನನ್ನ ಕುರಿಗಳನ್ನು ತಿಳಿದಿದ್ದೇನೆ; ನನ್ನ ಕುರಿಗಳು ನನ್ನನ್ನು ತಿಳಿದವೆ; ಮತ್ತು ಕುರಿಗಳಿಗೋಸ್ಕರ ನನ್ನ ಪ್ರಾಣವನ್ನು ಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14-15 “ನಾನು ಕುರಿಗಳಿಗಾಗಿ (ಜನರಿಗಾಗಿ) ಚಿಂತಿಸುವ ಕುರುಬನಾಗಿದ್ದೇನೆ. ನನ್ನ ತಂದೆಯು ನನ್ನನ್ನು ತಿಳಿದಿರುವಂತೆ ನನ್ನ ಕುರಿಗಳನ್ನು ನಾನು ತಿಳಿದಿದ್ದೇನೆ. ಮತ್ತು ನಾನು ನನ್ನ ತಂದೆಯನ್ನು ತಿಳಿದಿರುವಂತೆ ನನ್ನ ಕುರಿಗಳು ನನ್ನನ್ನು ತಿಳಿದಿವೆ. ಈ ಕುರಿಗಳಿಗೋಸ್ಕರ ನನ್ನ ಜೀವವನ್ನೇ ಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಮಿಯಾ ಬರೊ ಕುರ್‍ಬುರ್, ಕಶೆ ಬಾಬಾ ಮಾಕಾ ವಳಕ್ತಾ ಅನಿ ಮಿಯಾ ಬಾಬಾಕ್ ವಳಕ್ತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 10:14
23 ತಿಳಿವುಗಳ ಹೋಲಿಕೆ  

ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ನಾನು ಅವುಗಳನ್ನು ಬಲ್ಲೆನು. ಅವು ನನ್ನನ್ನು ಹಿಂಬಾಲಿಸುತ್ತವೆ.


ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ, “ತನ್ನವರು ಯಾರಾರೆಂಬುದನ್ನು ಕರ್ತದೇವರು ತಿಳಿದಿದ್ದಾರೆ!” ಎಂತಲೂ, “ಕರ್ತದೇವರ ಹೆಸರನ್ನು ಅರಿಕೆಮಾಡುವವರೆಲ್ಲರೂ ದುಷ್ಟತನವನ್ನು ಬಿಟ್ಟುಬಿಡಬೇಕು!” ಎಂತಲೂ ಮುದ್ರೆ ಉಂಟು.


“ನಾನೇ ಒಳ್ಳೆಯ ಕುರುಬನು. ಒಳ್ಳೆಯ ಕುರುಬನು ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ.


ದೇವರ ಪುತ್ರ ಆಗಿರುವ ಕ್ರಿಸ್ತ ಯೇಸುವು ಬಂದು, ಸತ್ಯವಾಗಿರುವ ದೇವರನ್ನು ನಾವು ಅರಿತುಕೊಳ್ಳುವ ಹಾಗೆ ಅವರು ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾರೆಂದೂ ನಾವು ಸತ್ಯವಾಗಿರುವ ದೇವರಲ್ಲಿ ಅವರ ಪುತ್ರ ಆಗಿರುವ ಕ್ರಿಸ್ತ ಯೇಸುವಿನಲ್ಲಿ ಇರುವವರಾಗಿದ್ದೇವೆ ಎಂದೂ ನಮಗೆ ಗೊತ್ತಿದೆ. ಈ ಕ್ರಿಸ್ತ ಯೇಸುವೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾರೆ.


ನಮ್ಮ ಕರ್ತ ಯೇಸುಕ್ರಿಸ್ತರ ದೇವರೂ ಮಹಿಮೆಯ ತಂದೆಯಾದವರನ್ನು ನೀವು ಪೂರ್ಣವಾಗಿ ತಿಳಿದುಕೊಳ್ಳುವಂತೆ ಜ್ಞಾನದ ಮತ್ತು ಪ್ರಕಟಣೆಯ ಆತ್ಮವನ್ನು ನಿಮಗೆ ಅನುಗ್ರಹಿಸಲಿ ಎಂದು ನಿಮಗಾಗಿ ಯಾವಾಗಲೂ ಪ್ರಾರ್ಥನೆ ಮಾಡುವವನಾಗಿದ್ದೇನೆ.


ಏಕೈಕ ಸತ್ಯ ದೇವರಾಗಿರುವ ನಿಮ್ಮನ್ನೂ ನೀವು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವುದೇ ನಿತ್ಯಜೀವ.


ಯೆಹೋವ ದೇವರು ನೀತಿವಂತರ ಮಾರ್ಗವನ್ನು ಅರಿತಿದ್ದಾರೆ; ಆದರೆ ದುಷ್ಟರ ಮಾರ್ಗವು ನಾಶಕ್ಕೆ ನಡೆಸುವುದು.


ನಾನು ನಿನ್ನ ಕ್ರಿಯೆಗಳನ್ನು ಬಲ್ಲೆನು. ಪ್ರಯಾಸ, ಸಹನೆಯನ್ನು ಬಲ್ಲೆನು. ನೀನು ದುಷ್ಟರನ್ನು ಸಹಿಸಲಾರೆ. ಅಪೊಸ್ತಲರಲ್ಲದಿದ್ದರೂ ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು ನೀನು ಪರೀಕ್ಷಿಸಿ, ಅವರನ್ನು ಸುಳ್ಳುಗಾರರೆಂದು ಕಂಡುಕೊಂಡಿರುವೆ.


ಇದಕ್ಕಾಗಿಯೇ ನಾನು ಈ ಶ್ರಮೆಗಳನ್ನು ಅನುಭವಿಸುತ್ತಿದ್ದೇನೆ. ಆದರೆ ನಾನು ನಾಚಿಕೆಪಡುವುದಿಲ್ಲ. ಏಕೆಂದರೆ ನಾನು ನಂಬಿರುವ ಕ್ರಿಸ್ತ ಯೇಸುವನ್ನು ಬಲ್ಲೆನು. ನಾನು ಕ್ರಿಸ್ತ ಯೇಸುವಿಗೆ ಒಪ್ಪಿಸಿದ್ದನ್ನು ಅವರು ಆ ದಿನಕ್ಕಾಗಿ ಕಾಪಾಡುವುದಕ್ಕೆ ಶಕ್ತರಾಗಿದ್ದಾರೆಂಬ ದೃಢವಿಶ್ವಾಸ ನನಗಿದೆ.


ಇದಲ್ಲದೆ, ನನ್ನ ಕರ್ತದೇವರು ಆಗಿರುವ ಕ್ರಿಸ್ತ ಯೇಸುವನ್ನು ಅರಿತುಕೊಳ್ಳುವುದೇ ಅತಿ ಶ್ರೇಷ್ಠವಾದುದ್ದೆಂದು, ನಾನು ಎಲ್ಲವನ್ನೂ ನಷ್ಟವೆಂದು ಎಣಿಸುತ್ತೇನೆ. ಕ್ರಿಸ್ತನನ್ನೇ ಲಾಭವನ್ನಾಗಿಸಿಕೊಳ್ಳಲು ನಾನು ಎಲ್ಲವನ್ನೂ ಕಸವೆಂದೇ ಪರಿಗಣಿಸುತ್ತೇನೆ.


ಮತ್ತು ತಿಳುವಳಿಕೆಗೆ ಅಪಾರವಾದ ಕ್ರಿಸ್ತನ ಪ್ರೀತಿಯನ್ನು ನೀವು ತಿಳಿದುಕೊಂಡು ದೇವರ ಸರ್ವಸಂಪೂರ್ಣತೆಯಿಂದ ತುಂಬಿದವರಾಗಲಿ ಎಂದು ಅವರನ್ನು ಬೇಡಿಕೊಳ್ಳುತ್ತೇನೆ.


ಏಕೆಂದರೆ ನೀವು ನನಗೆ ಕೊಟ್ಟ ಮಾತುಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ, ಇವರು ಅಂಗೀಕರಿಸಿದ್ದಾರೆ ಮತ್ತು ನಾನು ನಿಮ್ಮ ಬಳಿಯಿಂದ ಬಂದವನೆಂದು ಇವರು ನಿಶ್ಚಯವಾಗಿ ತಿಳಿದು, ನೀವೇ ನನ್ನನ್ನು ಕಳುಹಿಸಿದ್ದೀರಿ, ಎಂದು ನಂಬಿದ್ದಾರೆ.


ನಾನು ನಿನ್ನ ಕ್ರಿಯೆಗಳನ್ನೂ ನಿನ್ನ ಪ್ರೀತಿಯನ್ನೂ ನಂಬಿಕೆಯನ್ನೂ ಸೇವೆಯನ್ನೂ ಮತ್ತು ತಾಳ್ಮೆಯನ್ನೂ ಬಲ್ಲೆನು. ನೀನು ಮೊದಲು ಮಾಡಿದ್ದಕ್ಕಿಂತಲೂ ಈಗ ಹೆಚ್ಚಾಗಿ ಮಾಡುತ್ತಿರುವೆ.


ನೀನು ವಾಸಮಾಡುವ ಸ್ಥಳವನ್ನು ಬಲ್ಲೆನು, ಅದು ಸೈತಾನನ ಸಿಂಹಾಸನವಿರುವ ಸ್ಥಳವಾಗಿದೆ. ನೀನು ನನ್ನ ಹೆಸರನ್ನು ಬಿಡದೇ ಹಿಡಿದುಕೊಂಡಿದ್ದೀ. ನೀನು ಇರುವ ಸೈತಾನನ ನಿವಾಸದಲ್ಲಿ ನನಗೆ ನಂಬಿಗಸ್ತ ಸಾಕ್ಷಿಯಾದ ಅಂತಿಪನನ್ನು ಕೊಲ್ಲಲಾದ ದಿನಗಳಲ್ಲಿಯೂ ನನ್ನಲ್ಲಿಟ್ಟಿರುವ ನಂಬಿಕೆಯನ್ನು ನೀನು ಅಲ್ಲಗಳೆಯಲಿಲ್ಲ.


“ಕತ್ತಲೆಯಿಂದ ಬೆಳಕು ಹೊಳೆಯಲಿ,” ಎಂದು ಆಜ್ಞಾಪಿಸಿದ ದೇವರು ತಾವೇ, ತಮ್ಮ ಪ್ರಕಾಶವನ್ನು ನಮ್ಮ ಹೃದಯದ ಮೇಲೆ ಬೆಳಗಿಸಿದ್ದಾರೆ. ಹೀಗೆ ಕ್ರಿಸ್ತ ಯೇಸುವಿನ ಮುಖದಲ್ಲಿ ಪ್ರತಿಬಿಂಬಿಸುತ್ತಿರುವ ದೇವರ ಮಹಿಮೆಯ ತಿಳುವಳಿಕೆಯನ್ನು ನಮ್ಮಲ್ಲಿ ಉದಯಿಸುವಂತಾಗಿದೆ.


ನಾನು ನಿನ್ನ ಕ್ರಿಯೆಗಳನ್ನು ಬಲ್ಲೆನು. ನೀನು ತಣ್ಣಗೂ ಇಲ್ಲ, ಬಿಸಿಯೂ ಇಲ್ಲ, ನೀನು ತಣ್ಣಗಾಗಲಿ, ಬಿಸಿಯಾಗಲಿ ಇದ್ದಿದ್ದರೆ ಚೆನ್ನಾಗಿತ್ತು.


ನಾನು ನಿನ್ನ ಕ್ರಿಯೆಗಳನ್ನು ಬಲ್ಲೆನು. ನಿನ್ನ ಶಕ್ತಿಯು ಸ್ವಲ್ಪವೇ ಆಗಿದ್ದರೂ ನೀನು ನನ್ನ ಹೆಸರನ್ನು ನಿರಾಕರಿಸದೆ, ನನ್ನ ವಾಕ್ಯವನ್ನು ಕಾಪಾಡಿಕೊಂಡಿದ್ದರಿಂದ, ನಿನ್ನೆದುರಿನಲ್ಲಿ ಒಂದು ದ್ವಾರವನ್ನು ತೆರೆದಿಟ್ಟಿದ್ದೇನೆ, ಅದನ್ನು ಯಾರೂ ಮುಚ್ಚಲಾರರು.


ನಾನು ನಿನ್ನ ಸಂಕಟವನ್ನೂ ನಿನ್ನ ದಾರಿದ್ರ್ಯವನ್ನೂ ಬಲ್ಲೆನು. ಆದರೂ ನೀನು ಸಿರಿವಂತನೇ! ಮಾತ್ರವಲ್ಲದೇ ಅವರು ಯೆಹೂದ್ಯರಲ್ಲದಿದ್ದರೂ ಯೆಹೂದ್ಯರೆಂದು ಹೇಳಿಕೊಳ್ಳುವವರು ನಿನ್ನ ವಿಷಯವಾಗಿ ದೂಷಿಸುವುದನ್ನೂ ಬಲ್ಲೆನು. ಅವರು ಸೈತಾನನ ಸಭಾಮಂದಿರದವರಾಗಿದ್ದಾರೆ.


ಆತನು ತನ್ನ ಪ್ರಾಣದ ವೇದನೆಯನ್ನು ಸಹಿಸಿದ ತರುವಾಯ, ಜೀವದ ಬೆಳಕನ್ನು ಕಂಡು ತೃಪ್ತನಾಗುವನು. ತನ್ನ ತಿಳುವಳಿಕೆಯಿಂದ ನೀತಿವಂತನಾದ ನನ್ನ ಸೇವಕನು ಅನೇಕರಿಗೆ ನೀತಿವಂತನಾಗಿ ನಿರ್ಣಯಿಸುವನು. ಏಕೆಂದರೆ ಆತನೇ ಅವರ ಅಪರಾಧಗಳನ್ನು ಹೊತ್ತುಕೊಳ್ಳುವನು.


“ಸಾರ್ದಿಸಿನಲ್ಲಿರುವ ಸಭೆಯ ಸಂದೇಶಕನಿಗೆ ಬರೆ: ದೇವರ ಏಳು ಆತ್ಮಗಳನ್ನೂ ಏಳು ನಕ್ಷತ್ರಗಳನ್ನೂ ಹಿಡಿದುಕೊಂಡಿರುವವರು ಹೇಳುವುದೇನೆಂದರೆ: ನಾನು ನಿನ್ನ ಕ್ರಿಯೆಗಳನ್ನು ನಾನು ಬಲ್ಲೆನು. ಜೀವಿಸುವವನು ಎಂಬ ಹೆಸರು ನಿನಗಿದ್ದರೂ ಸತ್ತವನಾಗಿದ್ದೀಯೆ.


ಅವರು ತಮ್ಮ ಮಂದೆಯನ್ನು ಕುರುಬನಂತೆ ಮೇಯಿಸುವರು. ಕುರಿಮರಿಗಳನ್ನು ಕೂಡಿಸಿ, ಅವುಗಳನ್ನು ತಮ್ಮ ಎದೆಗಪ್ಪಿಕೊಳ್ಳುವರು, ಎಳೆಯ ಮರಿಗಳನ್ನು ಮೆಲ್ಲಗೆ ನಡಿಸುವರು.


ಯೆಹೋವ ದೇವರು ಒಳ್ಳೆಯವರು. ಇಕ್ಕಟ್ಟಿನ ದಿವಸದಲ್ಲಿ ಆಶ್ರಯದಾತರಾಗಿದ್ದಾರೆ. ತಮ್ಮಲ್ಲಿ ನಂಬಿಕೆ ಇಡುವವರನ್ನು ಅವರು ಪರಿಪಾಲಿಸುತ್ತಾರೆ.


ಅವನು ಕೇವಲ ಕೂಲಿಯಾಳು ಆಗಿರುವುದರಿಂದ ಅವನಿಗೆ ಕುರಿಗಳ ಚಿಂತೆಯಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು