Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 10:20 - ಕನ್ನಡ ಸಮಕಾಲಿಕ ಅನುವಾದ

20 ಅವರಲ್ಲಿ ಅನೇಕರು, “ಆತನಿಗೆ ದೆವ್ವ ಹಿಡಿದಿದೆ. ಆತನು ಹುಚ್ಚನಾಗಿದ್ದಾನೆ, ನೀವು ಏಕೆ ಆತನಿಗೆ ಕಿವಿಗೊಡುತ್ತೀರಿ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅವರಲ್ಲಿ ಅನೇಕರು ಆತನಿಗೆ, “ದೆವ್ವ ಹಿಡಿದಿದೆ, ಹುಚ್ಚನಾಗಿದ್ದಾನೆ, ನೀವು ಏಕೆ ಆತನ ಮಾತುಗಳನ್ನು ಕೇಳುತ್ತೀರಿ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅವರಲ್ಲಿ ಹಲವರು, “ಅವನಿಗೆ ದೆವ್ವಹಿಡಿದಿದೆ: ಅವನೊಬ್ಬ ಹುಚ್ಚ, ಅವನಿಗೇಕೆ ಕಿವಿಗೊಡುತ್ತೀರಿ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅವರಲ್ಲಿ ಅನೇಕರು - ಅವನಿಗೆ ದೆವ್ವಹಿಡಿದದೆ, ಹುಚ್ಚುಹಿಡಿದದೆ, ಯಾಕೆ ಅವನ ಮಾತು ಕೇಳುತ್ತೀರಿ? ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಅವರಲ್ಲಿ ಅನೇಕರು, “ಅವನೊಳಗೆ ದೆವ್ವವು ಸೇರಿಕೊಂಡು ಅವನನ್ನು ಹುಚ್ಚನನ್ನಾಗಿ ಮಾಡಿದೆ. ಅವನಿಗೆ ಏಕೆ ಕಿವಿಗೊಡುತ್ತೀರಿ?” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ತೆಂಚ್ಯಾತ್ಲೆ ಲೈ ಲೊಕಾ “ತೆಕಾ ಗಿರೊಲಾಗ್ಲಾ! ತೊ ಪಿಸೊ ಹೊಲಾ ತೆಚ್ಯೆ ಅಮಿ ಕಶ್ಯಾಕ್ ಆಯ್ಕುಚೆ” ಮನುಲಾಗಲ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 10:20
15 ತಿಳಿವುಗಳ ಹೋಲಿಕೆ  

ಅದಕ್ಕೆ ಜನರು, “ನಿನಗೆ ದೆವ್ವ ಹಿಡಿದಿದೆ. ನಿನ್ನನ್ನು ಕೊಲ್ಲುವುದಕ್ಕೆ ಹುಡುಕುವವರು ಯಾರು?” ಎಂದರು.


ಯೇಸುವಿನ ಕುಟುಂಬದವರು ಇದನ್ನು ಕೇಳಿದಾಗ, “ಆತನಿಗೆ ಹುಚ್ಚುಹಿಡಿದಿದೆ,” ಎಂದು ಹೇಳಿ, ಯೇಸುವನ್ನು ಹಿಡಿದು ತರಲು ಹೊರಟರು.


ಆಗ ಯೆಹೂದಿ ನಾಯಕರು ಯೇಸುವಿಗೆ, “ನಿನಗೆ ದೆವ್ವ ಹಿಡಿದಿದೆ ಎಂದು ನಮಗೆ ಈಗ ತಿಳಿಯಿತು. ಅಬ್ರಹಾಮನು ಮತ್ತು ಪ್ರವಾದಿಗಳು ಸತ್ತರು. ಆದರೆ, ‘ಯಾರಾದರೂ ನನ್ನ ಮಾತನ್ನು ಪಾಲಿಸಿದರೆ ಅವರು ಎಂದೆಂದಿಗೂ ಮರಣ ಹೊಂದುವುದಿಲ್ಲ,’ ಎಂದು ನೀನು ಹೇಳುತ್ತೀಯಲ್ಲಾ?


ಹೀಗೆ ಪೌಲನು ಪ್ರತಿವಾದ ಮಾಡುತ್ತಿದ್ದಾಗ, ಫೆಸ್ತನು ಮಧ್ಯೆ ಬಾಯಿ ಹಾಕಿ, “ಪೌಲನೇ, ನಿನಗೆ ಹುಚ್ಚುಹಿಡಿದಿದೆ! ನಿನ್ನ ಅಧಿಕಪಾಂಡಿತ್ಯ ನಿನ್ನನ್ನು ಹುಚ್ಚನನ್ನಾಗಿ ಮಾಡಿದೆ,” ಎಂದು ಗಟ್ಟಿಯಾಗಿ ಕೂಗಿದನು.


ಶಿಷ್ಯನು ತನ್ನ ಗುರುವಿನಂತೆಯೂ ದಾಸನು ತನ್ನ ಯಜಮಾನನಂತೆಯೂ ಇದ್ದರೆ ಸಾಕು. ಮನೆಯ ಯಜಮಾನನನ್ನೇ ಅವರು, ‘ಬೆಲ್ಜೆಬೂಲನು’ ಎಂದು ಕರೆದರೆ, ಯಜಮಾನನ ಮನೆಯವರನ್ನು ಇನ್ನೂ ಎಷ್ಟೋ ಕೆಟ್ಟದ್ದಾಗಿ ಕರೆಯುವರಲ್ಲವೇ!


ಆದರೆ ಫರಿಸಾಯರು, “ದೆವ್ವಗಳ ಅಧಿಪತಿಯಿಂದಲೇ ಈತನು ದೆವ್ವಗಳನ್ನು ಓಡಿಸುತ್ತಾನೆ,” ಎಂದರು.


ಆತನನ್ನು ದಬ್ಬಾಳಿಕೆಯಿಂದಲೂ, ನ್ಯಾಯತೀರ್ಪಿನಿಂದಲೂ ಎಳೆದುಕೊಂಡು ಹೋದರು. ಆತನ ಕಾಲದವರಲ್ಲಿ ಯಾರು ಮರುಗಿದರು? ಏಕೆಂದರೆ ಆತನನ್ನು ಜೀವಿತರ ಲೋಕದಿಂದ ತೆಗೆದುಹಾಕಿದರು. ನನ್ನ ಪ್ರಜೆಯ ದ್ರೋಹಕ್ಕಾಗಿ ಆತನು ಶಿಕ್ಷೆಯನ್ನು ಹೊಂದಿದನು.


‘ಏಕೆಂದರೆ, ಹುಚ್ಚನಾದ ತನ್ನನ್ನು ಪ್ರವಾದಿಯಾಗಿ ಮಾಡಿಕೊಳ್ಳುವಂಥ ಪ್ರತಿ ಮನುಷ್ಯನಿಗೆ ಯೆಹೋವ ದೇವರ ಆಲಯದಲ್ಲಿ ಅಧಿಕಾರಿಗಳು ಇರುವ ಹಾಗೆಯೂ, ನೀನು ಅಂಥವರನ್ನು ಕೋಳದಲ್ಲಿಯೂ, ಸೆರೆಯಲ್ಲಿಯೂ ಇಡುವ ಹಾಗೆಯೂ, ಯೆಹೋವ ದೇವರು ಯಾಜಕನಾದ ಯೆಹೋಯಾದನಿಗೆ ಬದಲಾಗಿ ನಿನ್ನನ್ನು ಯಾಜಕನಾಗಿ ಇಟ್ಟಿದ್ದಾರೆ.


“ಏಕೆಂದರೆ ಯೋಹಾನನು ಅನ್ನಪಾನಗಳನ್ನು ತೆಗೆದುಕೊಳ್ಳಲಿಲ್ಲ. ಅದಕ್ಕೆ ಅವರು, ‘ಅವನಿಗೆ ದೆವ್ವ ಹಿಡಿದಿದೆ,’ ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು