Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 10:3 - ಕನ್ನಡ ಸಮಕಾಲಿಕ ಅನುವಾದ

3 ಬಾಗಿಲು ಕಾಯುವವನು ಅವನಿಗೆ ಬಾಗಿಲನ್ನು ತೆರೆಯುತ್ತಾನೆ. ಕುರಿಗಳು ಅವನ ಸ್ವರವನ್ನು ಕೇಳುತ್ತವೆ. ಅವನು ತನ್ನ ಸ್ವಂತ ಕುರಿಗಳನ್ನು ಹೆಸರು ಹೇಳಿ ಕರೆದು ಅವುಗಳನ್ನು ಹೊರಗೆ ಬಿಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಬಾಗಿಲು ಕಾಯುವವನು ಅವನಿಗೆ ಬಾಗಿಲನ್ನು ತೆರೆಯುತ್ತಾನೆ; ಕುರಿಗಳು ಅವನ ಸ್ವರಕ್ಕೆ ಕಿವಿಗೊಡುತ್ತವೆ. ಅವನು ತನ್ನ ಸ್ವಂತ ಕುರಿಗಳ ಹೆಸರು ಹೇಳಿ ಕರೆದು ಅವುಗಳನ್ನು ಹೊರಗೆ ಬಿಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಕಾವಲುಗಾರನು ಅವನಿಗೆ ಬಾಗಿಲು ತೆರೆಯುತ್ತಾನೆ. ಕುರಿಗಳು ಅವನ ಸ್ವರವನ್ನು ಕೇಳುತ್ತವೆ. ಅವನು ತನ್ನ ಕುರಿಗಳನ್ನು ಹೆಸರಿಟ್ಟು ಕರೆದು ಹೊರಗೆ ಬಿಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಬಾಗಲು ಕಾಯುವವನು ಅವನಿಗೆ ಬಾಗಲನ್ನು ತೆರೆಯುತ್ತಾನೆ, ಕುರಿಗಳು ಅವನ ಸ್ವರಕ್ಕೆ ಕಿವಿಗೊಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಕಾವಲುಗಾರನು ಕುರುಬನಿಗೆ ಬಾಗಿಲನ್ನು ತೆರೆಯುತ್ತಾನೆ. ಕುರಿಗಳು ಅವನ ಸ್ವರಕ್ಕೆ ಕಿವಿಗೊಡುತ್ತವೆ. ಕುರುಬನು ತನ್ನ ಸ್ವಂತ ಕುರಿಗಳನ್ನು ಹೆಸರು ಹಿಡಿದು ಕರೆದು ಹೊರಗೆ ಬಿಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ದಾರಾಕ್ಡೆ ಹೊತ್ತೆ ರಾಕ್ವಾಲಿ ತೆಕಾ ದಾರ್ ಉಗಡ್ತ್ಯಾತ್, ತೊ ಅಪ್ನಾಚ್ಯಾ ಬಕ್ರ್ಯಾಕ್ನಿ ನಾವಾನಿ ಬಲ್ವುತಾ, ತಿ ಬಕ್ರಿ ತೆಚೊ ಧನ್ ಆಯಿಕ್ತ್ಯಾತ್, ಅನಿ ತೊ ತೆಂಕಾ ಫಾಟ್ನಾ ಚಾಲ್ವುನ್ ಘೆವ್ನ್ ಜಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 10:3
32 ತಿಳಿವುಗಳ ಹೋಲಿಕೆ  

ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ, “ತನ್ನವರು ಯಾರಾರೆಂಬುದನ್ನು ಕರ್ತದೇವರು ತಿಳಿದಿದ್ದಾರೆ!” ಎಂತಲೂ, “ಕರ್ತದೇವರ ಹೆಸರನ್ನು ಅರಿಕೆಮಾಡುವವರೆಲ್ಲರೂ ದುಷ್ಟತನವನ್ನು ಬಿಟ್ಟುಬಿಡಬೇಕು!” ಎಂತಲೂ ಮುದ್ರೆ ಉಂಟು.


ಅವನು ತನ್ನ ಕುರಿಗಳನ್ನೆಲ್ಲಾ ಹೊರಗೆ ಬಿಟ್ಟ ಮೇಲೆ ಅವುಗಳ ಮುಂದೆ ಹೋಗುತ್ತಾನೆ. ಕುರಿಗಳು ಅವನ ಸ್ವರವನ್ನು ತಿಳಿದಿರುವುದರಿಂದ ಅವನನ್ನು ಹಿಂಬಾಲಿಸುತ್ತವೆ.


ಈ ಹಿಂಡಿಗೆ ಸೇರದ ಬೇರೆ ಕುರಿಗಳು ನನಗಿವೆ. ಅವುಗಳನ್ನೂ ಸಹ ನಾನು ತರಬೇಕಾಗಿದೆ. ಅವು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಆಗ ಒಂದೇ ಹಿಂಡೂ ಒಬ್ಬನೇ ಕುರುಬನೂ ಆಗಿರುವುದು.


“ನಾನೇ ಒಳ್ಳೆಯ ಕುರುಬನು. ನನ್ನ ಕುರಿಗಳನ್ನು ನಾನು ತಿಳಿದಿದ್ದೇನೆ. ನನ್ನ ಕುರಿಗಳು ನನ್ನನ್ನು ತಿಳಿದಿವೆ.


ಇಗೋ, ಬಾಗಿಲಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ. ಯಾರಾದರೂ ನನ್ನ ಸ್ವರವನ್ನು ಕೇಳಿ, ಬಾಗಿಲನ್ನು ತೆರೆದರೆ, ನಾನು ಪ್ರವೇಶ ಮಾಡಿ, ಆ ವ್ಯಕ್ತಿಯ ಸಂಗಡ ಊಟಮಾಡುವೆನು. ಅವರೂ ನನ್ನ ಸಂಗಡ ಊಟಮಾಡುವರು.


ಏಕೆಂದರೆ, ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿ ಆಗಿರುವವರು ಇವರನ್ನು ಮೇಯಿಸಿ; ‘ಜೀವಜಲದ ಒರತೆಗಳ ಬಳಿ ನಡೆಸುವರು.’ ‘ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವರು,’” ಎಂದು ಹೇಳಿದನು.


ಆದರೆ ದೇವರು ಯಾರನ್ನು ಮುಂದಾಗಿ ನೇಮಿಸಿದರೋ, ಅವರನ್ನು ಕರೆದರು; ಯಾರನ್ನು ಕರೆದರೋ, ಅವರನ್ನು ನೀತಿವಂತರೆಂದು ನಿರ್ಣಯಿಸಿದರು; ಯಾರನ್ನು ನೀತಿವಂತರೆಂದು ನಿರ್ಣಯಿಸಿದರೋ ಅವರನ್ನು ಮಹಿಮೆಪಡಿಸಿದರು.


‘ಅವರೆಲ್ಲರೂ ದೇವರಿಂದಲೇ ಬೋಧನೆ ಪಡೆಯುವರು,’ ಎಂದು ಪ್ರವಾದಿಗಳ ಗ್ರಂಥದಲ್ಲಿ ಬರೆದಿದೆ. ತಂದೆಯಿಂದ ಕೇಳಿ ಕಲಿತ ಪ್ರತಿಯೊಬ್ಬರೂ ನನ್ನ ಬಳಿಗೆ ಬರುತ್ತಾರೆ.


ತಂದೆಯು ನನಗೆಂದು ಕೊಟ್ಟಿರುವ ಪ್ರತಿಯೊಬ್ಬರೂ ನನ್ನ ಬಳಿಗೆ ಬರುವರು. ನನ್ನ ಬಳಿಗೆ ಬರುವವರನ್ನು ನಾನು ಎಂದಿಗೂ ತಳ್ಳಿಬಿಡುವುದೇ ಇಲ್ಲ.


ಕುರುಡರನ್ನು ಅವರು ತಿಳಿಯದ ಮಾರ್ಗದಲ್ಲಿ ಬರಮಾಡುವೆನು. ಅವರನ್ನು ತಿಳಿಯದ ಹಾದಿಗಳಲ್ಲಿ ನಡೆಸುವೆನು. ಕತ್ತಲೆಯನ್ನು ಅವರ ಮುಂದೆ ಬೆಳಕಾಗಿಯೂ, ಸೊಟ್ಟಾದವುಗಳನ್ನು ನೆಟ್ಟಗಾಗಿಯೂ ಮಾಡುವೆನು. ಇವುಗಳನ್ನು ನಾನು ಅವರಿಗೋಸ್ಕರ ಮಾಡುವೆನು. ನಾನು ಅವರನ್ನು ಕೈಬಿಡುವುದಿಲ್ಲ.


ತೋಟಗಳಲ್ಲಿ ವಾಸವಾಗಿರುವಳೇ, ಸ್ನೇಹಿತರು ನನ್ನ ಸಂಗಡ ಇದ್ದಾರೆ. ನಾನು ನಿನ್ನ ಧ್ವನಿಯನ್ನು ಕೇಳ ಮಾಡು!


ಅದಕ್ಕೆ ಯೆಹೋವ ದೇವರು ಮೋಶೆಗೆ, “ನೀನು ಆಡಿದ ಈ ಮಾತಿನಂತೆಯೇ ನಾನು ಇದನ್ನು ಮಾಡುತ್ತೇನೆ. ಏಕೆಂದರೆ ನನ್ನ ದೃಷ್ಟಿಯಲ್ಲಿ ನಿನಗೆ ದಯೆ ದೊರಕಿತು. ನಾನು ನಿನ್ನನ್ನು ನಿನ್ನ ಹೆಸರಿನಿಂದ ತಿಳಿದಿದ್ದೇನೆ,” ಎಂದರು.


ಯಾರ ಹೆಸರು ಜೀವ ಪುಸ್ತಕದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವರನ್ನು ಬೆಂಕಿಯ ಕೆರೆಗೆ ದೊಬ್ಬಲಾಯಿತು.


ನಾವು ಕ್ರಿಸ್ತ ಯೇಸುವಿನ ರಹಸ್ಯವನ್ನು ಮಾತನಾಡುವಂತೆ ದೇವರು ನಮ್ಮ ಸಂದೇಶಕ್ಕೆ ಬಾಗಿಲನ್ನು ತೆರೆಯುವಂತೆ ನಮಗೋಸ್ಕರವೂ ಪ್ರಾರ್ಥಿಸಿರಿ. ಈ ಸೇವೆಗಾಗಿಯೇ ನಾನು ಸೆರೆಯಲ್ಲಿದ್ದೇನಲ್ಲಾ.


ಜೀವಗ್ರಂಥದಲ್ಲಿ ಹೆಸರು ಬರೆದಿರುವ ಕ್ಲೇಮೆನ್ಸ್ ಮುಂತಾದ ನನ್ನ ಜೊತೆ ಕೆಲಸದವರೊಡನೆ ನನ್ನೊಂದಿಗೆ ಸುವಾರ್ತೆಗೋಸ್ಕರ ಪ್ರಯಾಸಪಟ್ಟ ಆ ಸ್ತ್ರೀಯರಿಗೆ ನೀನೂ ಸಹಾಯಕನಾಗಿರಬೇಕೆಂದು ನಿಜ ಜೊತೆಗಾರನೇ, ನಿನ್ನನ್ನೂ ಕೇಳಿಕೊಳ್ಳುತ್ತೇನೆ.


ಅವರು ತಮ್ಮ ಮಂದೆಯನ್ನು ಕುರುಬನಂತೆ ಮೇಯಿಸುವರು. ಕುರಿಮರಿಗಳನ್ನು ಕೂಡಿಸಿ, ಅವುಗಳನ್ನು ತಮ್ಮ ಎದೆಗಪ್ಪಿಕೊಳ್ಳುವರು, ಎಳೆಯ ಮರಿಗಳನ್ನು ಮೆಲ್ಲಗೆ ನಡಿಸುವರು.


ಮಂದೆಯಂತೆ ಯೋಸೇಫ್ಯರನ್ನು ನಡೆಸುವ ಇಸ್ರಾಯೇಲರ ಕುರುಬ ಆಗಿರುವ ದೇವರೇ, ಕಿವಿಗೊಡಿರಿ. ಕೆರೂಬಿಗಳ ಮಧ್ಯದಲ್ಲಿ ಆಸೀನವಾಗಿರುವ ದೇವರೇ ಪ್ರಕಾಶಿಸಿರಿ.


ತಮಗೋಸ್ಕರವಲ್ಲ ಆದರೆ ನಿಮಗೋಸ್ಕರ ಸೇವೆಮಾಡಿದರೆಂದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಿದವು ಎಂಬ ವರ್ತಮಾನವು, ಪರಲೋಕದಿಂದ ಕಳುಹಿಸಲಾದ ಪವಿತ್ರಾತ್ಮ ದೇವರಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ಪ್ರಸಿದ್ಧಿಮಾಡಲಾಗಿದೆ. ದೇವದೂತರು ಸಹ ಈ ಸಂಗತಿಗಳನ್ನು ಕಣ್ಣಿಟ್ಟು ನೋಡಬೇಕೆಂದು ಅಪೇಕ್ಷಿಸುತ್ತಾರೆ.


ಏಕೆಂದರೆ, ಪರಿಣಾಮಕಾರಿಯಾದ ಸೇವೆಗೆ ದೊಡ್ಡದಾಗಿ ಬಾಗಿಲು ನನಗೆ ತೆರೆದಿದೆ, ಬಹಳ ಜನ ವಿರೋಧಿಗಳೂ ಇದ್ದಾರೆ.


ನಿನ್ನ ಹಿಂಡುಗಳ ಸ್ಥಿತಿಯನ್ನು ತಿಳಿದುಕೊಳ್ಳುವಂತೆ ಶ್ರದ್ಧೆವಹಿಸು; ನಿನ್ನ ಮಂದೆಗಳನ್ನು ಚೆನ್ನಾಗಿ ನೋಡಿಕೋ.


ನಾನೇ ಬಾಗಿಲು; ನನ್ನ ಮೂಲಕವಾಗಿ ಯಾರು ಪ್ರವೇಶಿಸುವರೋ ಅವರೇ ಸುರಕ್ಷಿತವಾಗಿರುವರು. ಇದಲ್ಲದೆ ಅವರು ಒಳಗೆ ಹೋಗುವರು, ಹೊರಗೆ ಬರುವರು ಮತ್ತು ಮೇವನ್ನು ಕಂಡುಕೊಳ್ಳುವರು.


ನಾವಂತೂ ದೇವರಿಗೆ ಸೇರಿದವರಾಗಿದ್ದೇವೆ. ದೇವರನ್ನು ಬಲ್ಲವರು ನಮ್ಮ ಮಾತನ್ನು ಕೇಳುತ್ತಾರೆ. ದೇವರಿಗೆ ಸೇರದವರು ನಮ್ಮ ಮಾತನ್ನು ಕೇಳುವುದಿಲ್ಲ. ಇದು ಸತ್ಯದ ಆತ್ಮ. ಅದು ಸುಳ್ಳಿನ ಆತ್ಮ ಎಂದು ಇದರಿಂದಲೇ ನಾವು ತಿಳಿದುಕೊಳ್ಳುತ್ತೇವೆ.


ಬೇಗನೆ ನಿನ್ನನ್ನು ನೋಡುವೆನೆಂದು ನಿರೀಕ್ಷಿಸುತ್ತೇನೆ. ಆಗ ಮುಖಾಮುಖಿಯಾಗಿ ನಾವು ಮಾತನಾಡುವೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು