Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 10:33 - ಕನ್ನಡ ಸಮಕಾಲಿಕ ಅನುವಾದ

33 ಅದಕ್ಕೆ ಯೆಹೂದ್ಯರು ಯೇಸುವಿಗೆ, “ಒಳ್ಳೆಯ ಕಾರ್ಯಗಳಿಗಾಗಿಯಲ್ಲ. ನೀನು ಮನುಷ್ಯನಾಗಿದ್ದು ನಿನ್ನನ್ನೇ ದೇವರನ್ನಾಗಿ ಮಾಡಿಕೊಂಡದ್ದಕ್ಕೂ ದೇವದೂಷಣೆ ಮಾಡುತ್ತಿರುವದಕ್ಕೂ ನಾವು ನಿನ್ನ ಮೇಲೆ ಕಲ್ಲೆಸೆಯುತ್ತೇವೆ,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಯೆಹೂದ್ಯರು, “ನಾವು ನಿನ್ನ ಮೇಲೆ ಕಲ್ಲೆಸೆಯುವುದು ಒಳ್ಳೆಯ ಕಾರ್ಯಗಳಿಗಾಗಿ ಅಲ್ಲ, ಆದರೆ ದೇವದೂಷಣೆಗಾಗಿಯೂ ಮತ್ತು ನೀನು ಮನುಷ್ಯನಾಗಿದ್ದು ನಿನ್ನನ್ನು ನೀನೇ ದೇವರನ್ನಾಗಿ ಮಾಡಿಕೊಳ್ಳುವುದಕ್ಕಾಗಿಯೂ ನಾವು ನಿನ್ನ ಮೇಲೆ ಕಲ್ಲೆಸೆಯುತ್ತೇವೆ” ಎಂದು ಉತ್ತರ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಅದಕ್ಕೆ ಯೆಹೂದ್ಯರು, “ನಿನ್ನ ಮೇಲೆ ಕಲ್ಲೆಸೆಯುವುದು ಸತ್ಕಾರ್ಯಕ್ಕಾಗಿ ಅಲ್ಲ, ದೇವದೂಷಣೆಗಾಗಿ. ನೀನು ಮನುಷ್ಯ ಮಾತ್ರನು; ಆದರೂ ನಿನ್ನನ್ನೇ ದೇವರನ್ನಾಗಿ ಮಾಡಿಕೊಳ್ಳುತ್ತಿದ್ದೀಯೇ,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಯೆಹೂದ್ಯರು - ನಾವು ನಿನ್ನ ಮೇಲೆ ಕಲ್ಲೆಸೆಯುವದು ಒಳ್ಳೇ ಕಾರ್ಯದ ದೆಸೆಯಿಂದಲ್ಲ, ದೇವದೂಷಣೆಯ ದೆಸೆಯಿಂದಲೂ ನೀನು ಮನುಷ್ಯನಾಗಿದ್ದು ನಿನ್ನನ್ನು ನೀನೇ ದೇವರನ್ನಾಗಿ ಮಾಡಿಕೊಳ್ಳುವದರ ದೆಸೆಯಿಂದಲೂ ನಿನ್ನ ಮೇಲೆ ಕಲ್ಲೆಸೆಯುತ್ತೇವೆ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಯೆಹೂದ್ಯರು, “ನಾವು ನಿನ್ನನ್ನು ಕೊಲ್ಲುತ್ತಿರುವುದು ನೀನು ಮಾಡಿದ ಯಾವುದೇ ಒಳ್ಳೆಯ ಕಾರ್ಯದ ನಿಮಿತ್ತದಿಂದಲ್ಲ. ನೀನು ಮಾಡುತ್ತಿರುವ ದೇವದೂಷಣೆಗಾಗಿ. ನೀನು ಕೇವಲ ಒಬ್ಬ ಮನುಷ್ಯ. ನೀನು ನಿನ್ನನ್ನೇ ದೇವರೆಂದು ಹೇಳಿಕೊಳ್ಳುತ್ತಿರುವೆ! ಆದಕಾರಣ ಕಲ್ಲುಗಳಿಂದ ನಿನ್ನನ್ನು ಕೊಲ್ಲಬೇಕೆಂದಿದ್ದೇವೆ!” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ತ್ಯಾ ಲೊಕಾನಿ ತೆಕಾ, “ಅಮಿ ತಿಯಾ ಕರಲ್ಲ್ಯಾ ಖಲ್ಯಾಬಿ ಬರ್‍ಯಾ ಕಾಮಾಸಾಟ್ನಿ ತುಕಾ ಗುಂಡ್ಯಾನಿ ಮಾರುಕ್ ಉಟುಕ್ನಾವ್! ತಿಯಾ ಕರ್‍ತಲ್ಯಾ ನಿಂದ್ಯಾಸಾಟ್ನಿ ಅಮಿ ಮಾರುಕ್ ಉಟ್ಲಾವ್! ತಿಯಾ ಎಕ್ ಮಾನುಸ್, ಖರೆ ತಿಯಾ ತುಕಾಚ್ ದೆವ್ ಕರುಕ್ ಬಗುಲಾಲೆಯ್” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 10:33
11 ತಿಳಿವುಗಳ ಹೋಲಿಕೆ  

ಯೇಸು ಸಬ್ಬತ್ ದಿನವನ್ನು ಮುರಿದದ್ದು ಅಲ್ಲದೆ ದೇವರನ್ನು ತಮ್ಮ ಸ್ವಂತ ತಂದೆ ಎಂದು ಹೇಳಿ ತಮ್ಮನ್ನು ದೇವರಿಗೆ ಸಮಾನ ಮಾಡಿಕೊಂಡ ಕಾರಣ ಯೆಹೂದ್ಯರು ಯೇಸುವನ್ನು ಕೊಲ್ಲುವುದಕ್ಕೆ ಇನ್ನಷ್ಟು ಪ್ರಯತ್ನಮಾಡಿದರು.


ಯೆಹೋವ ದೇವರ ನಾಮವನ್ನು ದೂಷಣೆ ಮಾಡುವವನಿಗೆ ನಿಶ್ಚಯವಾಗಿ ಮರಣವನ್ನು ವಿಧಿಸಬೇಕು. ಸಭೆಯವರೆಲ್ಲರೂ ನಿಶ್ಚಯವಾಗಿ ಅವನಿಗೆ ಕಲ್ಲೆಸೆಯಬೇಕು. ಇದಲ್ಲದೆ ಸ್ವದೇಶೀಯನಾಗಿರಲಿ, ಪರಕೀಯನಾಗಿರಲಿ ಯೆಹೋವ ದೇವರ ಹೆಸರನ್ನು ದೂಷಣೆ ಮಾಡಿದಾಗ, ಅವನನ್ನು ಮರಣ ಶಿಕ್ಷೆಗೆ ಒಳಪಡಿಸಬೇಕು.


ನಾನು ಮತ್ತು ನನ್ನ ತಂದೆ ಒಂದೇ ಆಗಿದ್ದೇವೆ,” ಎಂದು ಉತ್ತರಕೊಟ್ಟರು.


ಅವರು ದೇವರ ಸ್ವರೂಪವಾಗಿದ್ದರೂ, ದೇವರಿಗೆ ಸಮಾನರಾಗಿರುವುದನ್ನು ಬಿಡಲೊಲ್ಲೆನೆಂದು ಎಣಿಸದೆ,


ಪ್ರತಿಯೊಬ್ಬನೂ ಮೇಲಧಿಕಾರಿಗಳಿಗೆ ಅಧೀನನಾಗಿರಬೇಕು, ಏಕೆಂದರೆ ದೇವರು ನೇಮಿಸಿದ ಅಧಿಕಾರದ ಹೊರತು ಬೇರೆ ಯಾವದೂ ಇರುವುದಿಲ್ಲ. ಇರುವ ಅಧಿಕಾರಗಳು ದೇವರಿಂದಲೇ ನೇಮಕಗೊಂಡಿವೆ.


“ನಾನು ಮುಂದುವರೆಸಿ ಅವರಿಗೆ ಹೇಳಿದ್ದು, ‘ನೀವು ದೇವರುಗಳು, ನೀವೆಲ್ಲರು ಮಹೋನ್ನತ ದೇವರ ಮಕ್ಕಳು,’ ಎಂದು ಹೇಳಿದೆನು.


‘ನೀನು ದೇವರನ್ನೂ, ಅರಸನನ್ನೂ ದೂಷಿಸಿದಿ,’ ಎಂದು ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಲು ಅವನ ಮುಂದೆ ದುಷ್ಟರಾದ ಇಬ್ಬರು ಮನುಷ್ಯರನ್ನು ಕೂರಿಸಿರಿ. ತರುವಾಯ ಅವನನ್ನು ಹೊರಗೆ ತೆಗೆದುಕೊಂಡುಹೋಗಿ ಅವನು ಸಾಯುವ ಹಾಗೆ ಕಲ್ಲೆಸೆಯಿರಿ,” ಎಂದು ಬರೆದಿತ್ತು.


“ಶಪಿಸಿದವನನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿರಿ, ಅವನಿಂದ ಕೇಳಿದವರೆಲ್ಲರೂ ಅವನ ತಲೆಯ ಮೇಲೆ ತಮ್ಮ ಕೈಗಳನ್ನಿಡಲಿ, ಸಭೆಯವರೆಲ್ಲರೂ ಅವನಿಗೆ ಕಲ್ಲೆಸೆಯಲಿ.


ಆಗ ಯೆಹೂದ್ಯರು ಯೇಸುವನ್ನು ಸುತ್ತುವರೆದು, “ಇನ್ನೆಷ್ಟು ಕಾಲ ನಮ್ಮನ್ನು ಸಂಶಯದಲ್ಲಿರಿಸುವೆ? ನೀನು ಕ್ರಿಸ್ತನಾಗಿದ್ದರೆ ನಮಗೆ ಸ್ಪಷ್ಟವಾಗಿ ಹೇಳು,” ಎಂದರು.


ಅದಕ್ಕೆ ಯೇಸು ಅವರಿಗೆ, “ನನ್ನ ತಂದೆಯಿಂದ ಅನೇಕ ಒಳ್ಳೆಯ ಕಾರ್ಯಗಳನ್ನು ನಾನು ನಿಮಗೆ ತೋರಿಸಿದ್ದೇನೆ. ಅವುಗಳಲ್ಲಿ ಯಾವ ಕಾರ್ಯಕ್ಕಾಗಿ ನೀವು ನನ್ನ ಮೇಲೆ ಕಲ್ಲೆಸೆಯಬೇಕೆಂದಿದ್ದೀರಿ?” ಎಂದು ಕೇಳಿದರು.


ಯೆಹೂದ್ಯ ನಾಯಕರು ಅವನಿಗೆ, “ನಮಗೆ ಒಂದು ನಿಯಮವಿದೆ, ಆ ನಿಯಮದ ಪ್ರಕಾರ ಅವನು ಸಾಯಲೇಬೇಕು. ಏಕೆಂದರೆ ಅವನು ತನ್ನನ್ನು ದೇವರ ಪುತ್ರನನ್ನಾಗಿ ಮಾಡಿಕೊಂಡಿದ್ದಾನೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು