Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 10:38 - ಕನ್ನಡ ಸಮಕಾಲಿಕ ಅನುವಾದ

38 ನಾನು ಮಾಡಿದ್ದರಿಂದ ನೀವು ನನ್ನನ್ನು ನಂಬದಿದ್ದರೂ ಈ ಕಾರ್ಯಗಳನ್ನಾದರೂ ನಂಬಿರಿ. ಆಗ ತಂದೆಯು ನನ್ನಲ್ಲಿಯೂ ನಾನು ತಂದೆಯಲ್ಲಿಯೂ ಇರುವುದು ನಿಮಗೆ ಗೊತ್ತಾಗುವುದು ಹಾಗೂ ಮನದಟ್ಟಾಗುವುದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ನಾನು ಮಾಡಿದ್ದರಿಂದ ನೀವು ನನ್ನನ್ನು ನಂಬದೆ ಇದ್ದರೂ, ಈ ಕಾರ್ಯಗಳನ್ನಾದರೂ ನಂಬಿರಿ. ಆಗ ನನ್ನಲ್ಲಿ ತಂದೆಯು ಇದ್ದಾನೆಂತಲೂ, ತಂದೆಯಲ್ಲಿ ನಾನು ಇದ್ದೇನೆಂತಲೂ ನಿಮಗೆ ತಿಳಿಯುವುದು ಮತ್ತು ಮನದಟ್ಟಾಗುವುದು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ನಾನು ಹಾಗೆ ಮಾಡಿದ್ದೇ ಆದರೆ, ನನ್ನನ್ನು ನಂಬದೆಹೋದರೂ ನನ್ನ ಕಾರ್ಯಗಳನ್ನಾದರೂ ನಂಬಿರಿ. ಆಗ ಪಿತನು ನನ್ನಲ್ಲಿಯೂ ನಾನು ಪಿತನಲ್ಲಿಯೂ ಇರುವುದು ನಿಮಗೆ ಅರಿವಾಗುವುದು ಹಾಗೂ ಮನದಟ್ಟಾಗುವುದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಮಾಡಿದರೆ ನನ್ನ ಮಾತನ್ನು ನಂಬದೆ ಇದ್ದರೂ ಆ ಕ್ರಿಯೆಗಳ ಸಾಕ್ಷಿಯನ್ನಾದರೂ ನಂಬಿರಿ; ಆಗ ನನ್ನಲ್ಲಿ ತಂದೆಯು ಇದ್ದಾನೆಂತಲೂ ತಂದೆಯಲ್ಲಿ ನಾನು ಇದ್ದೇನೆಂತಲೂ ನೀವು ತಿಳುಕೊಂಡು ಮನನಮಾಡಿಕೊಳ್ಳುವಿರಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಆದರೆ ನನ್ನ ತಂದೆಯು ಮಾಡುವ ಕಾರ್ಯಗಳನ್ನೇ ನಾನು ಮಾಡಿದರೆ, ಆ ಕಾರ್ಯಗಳಲ್ಲಿ ನೀವು ನಂಬಿಕೆ ಇಡಬೇಕು. ನೀವು ನನ್ನಲ್ಲಿ ನಂಬಿಕೆ ಇಡದಿದ್ದರೂ ನನ್ನ ಕಾರ್ಯಗಳಲ್ಲಾದರೂ ನಂಬಿಕೆ ಇಡಿರಿ. ತಂದೆಯು ನನ್ನಲ್ಲಿದ್ದಾನೆ ಮತ್ತು ನಾನು ತಂದೆಯಲ್ಲಿದ್ದೇನೆ ಎಂಬುದನ್ನು ಆಗ ನೀವು ತಿಳಿದುಕೊಳ್ಳುವಿರಿ ಮತ್ತು ಅರ್ಥಮಾಡಿಕೊಳ್ಳುವಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

38 ಅಶೆ ತುಮಿ ವಿಶ್ವಾಸ್ ಕರಿನಸ್ಲ್ಯಾರ್ಬಿ ಮಿಯಾ ತಿ ಕರ್‍ತಾ, ತುಮಿ ಮಿಯಾ ಕರ್‍ತಲಿ ಕಾಮಾ ತರ್ಬಿ ಬಗುನ್ ವಿಶ್ವಾಸ್ ಕರಾ, ಅಶೆ ಎಗ್ದಾ ತರ್‍ಬಿ ಸಗ್ಳ್ಯಾತ್ ಮಾಜೊ ಬಾಬಾ ಮಾಜ್ಯಾ ವಾಂಗ್ಡಾ ಹಾಯ್, ಅನಿ ಮಿಯಾ ಮಾಜ್ಯಾ ಬಾಬಾಚ್ಯಾ ವಾಂಗ್ಡಾ ಹಾಂವ್ ಮನುನ್ ಕಳ್ತಾ ಮನುನ್ ಜಬಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 10:38
12 ತಿಳಿವುಗಳ ಹೋಲಿಕೆ  

ನಾನು ನನ್ನ ತಂದೆಯಲ್ಲಿಯೂ ನೀವು ನನ್ನಲ್ಲಿಯೂ ನಾನು ನಿಮ್ಮಲ್ಲಿಯೂ ಇರುವುದನ್ನು ನೀವು ಆ ದಿನದಲ್ಲಿ ತಿಳಿದುಕೊಳ್ಳುವಿರಿ.


ನಾನು ಮತ್ತು ನನ್ನ ತಂದೆ ಒಂದೇ ಆಗಿದ್ದೇವೆ,” ಎಂದು ಉತ್ತರಕೊಟ್ಟರು.


ಯೇಸು ಅವರಿಗೆ, “ನಾನು ನಿಮಗೆ ಹೇಳಿದೆನು. ಆದರೆ ನೀವು ನಂಬುತ್ತಾ ಇಲ್ಲ. ನನ್ನ ತಂದೆಯ ಹೆಸರಿನಲ್ಲಿ ನಾನು ಮಾಡುವ ಕ್ರಿಯೆಗಳೇ ನನ್ನ ವಿಷಯವಾಗಿ ಸಾಕ್ಷಿ ಕೊಡುತ್ತವೆ.


“ಇಸ್ರಾಯೇಲ್ ಜನರೇ, ಈ ವಿಷಯವನ್ನು ಕೇಳಿರಿ: ದೇವರು ನಜರೇತಿನ ಯೇಸುಸ್ವಾಮಿಯವರ ಮುಖಾಂತರ ನಿಮ್ಮ ಮಧ್ಯದಲ್ಲಿ ಅದ್ಭುತಕಾರ್ಯಗಳನ್ನೂ ಆಶ್ಚರ್ಯಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ನಡೆಸಿದ್ದರಿಂದ, ಯೇಸು ದೇವರ ಮೆಚ್ಚಿಕೆ ಪಡೆದವರಾಗಿದ್ದಾರೆಂಬುದನ್ನು, ನೀವೇ ತಿಳಿದಿರುವಿರಿ.


ಇವನು ಒಂದು ರಾತ್ರಿ ಯೇಸುವಿನ ಬಳಿಗೆ ಬಂದು, “ಗುರುವೇ, ನೀವು ದೇವರ ಬಳಿಯಿಂದ ಬಂದ ಬೋಧಕರೆಂದು ನಾವು ಬಲ್ಲೆವು. ಏಕೆಂದರೆ ದೇವರು ಒಬ್ಬನ ಸಂಗಡ ಇಲ್ಲದಿದ್ದರೆ ನೀವು ಮಾಡುವ ಸೂಚಕಕಾರ್ಯಗಳನ್ನು ಯಾವ ಮನುಷ್ಯನೂ ಮಾಡಲಾರನು,” ಎಂದನು.


“ಆದರೆ ನನಗೆ ಯೋಹಾನನಿಗಿಂತಲೂ ಮಹಾ ಸಾಕ್ಷಿ ಉಂಟು. ಹೇಗೆಂದರೆ, ತಂದೆ ನನಗೆ ಮಾಡಿ ಮುಗಿಸಲು ಕೊಟ್ಟ ಕೆಲಸಗಳು, ಅಂದರೆ, ನಾನು ಮಾಡುತ್ತಿರುವ ಈ ಕೆಲಸಗಳೇ, ತಂದೆ ನನ್ನನ್ನು ಕಳಿಹಿಸಿದ್ದಾರೆಂದು ನನ್ನನ್ನು ಕುರಿತು ಸಾಕ್ಷಿ ಕೊಡುತ್ತವೆ.


ಇನ್ನು ಮೇಲೆ ನಾನು ಲೋಕದಲ್ಲಿ ಇರುವುದಿಲ್ಲ. ಇವರಾದರೋ ಲೋಕದಲ್ಲಿರುತ್ತಾರೆ. ನಾನು ನಿಮ್ಮ ಬಳಿಗೆ ಬರುತ್ತೇನೆ. ಪರಿಶುದ್ಧ ತಂದೆಯೇ, ನಾವು ಒಂದಾಗಿರುವಂತೆಯೇ ಇವರೂ ಒಂದಾಗಿರಬೇಕೆಂದು ನೀವು ನನಗೆ ಕೊಟ್ಟ ನಿಮ್ಮ ಹೆಸರಿನ ಶಕ್ತಿಯಿಂದ ಇವರನ್ನು ಕಾಪಾಡಿರಿ.


ಯೇಸು ಅದನ್ನು ಕೇಳಿ, “ಈ ಕಾಯಿಲೆಯು ಮರಣಕ್ಕಾಗಿಯಲ್ಲ. ದೇವರ ಮಹಿಮೆಗಾಗಿಯೇ ಬಂದದ್ದು. ಇದರಿಂದ ದೇವರ ಪುತ್ರನಿಗೆ ಮಹಿಮೆಯಾಗುವುದು,” ಎಂದು ಹೇಳಿದರು.


ದೇವರ ಆಜ್ಞೆಗಳನ್ನು ಕೈಗೊಂಡು ನಡೆಯುವವನು ದೇವರಲ್ಲಿ ವಾಸಮಾಡುತ್ತಾನೆ ಮತ್ತು ದೇವರು ಅವನಲ್ಲಿ ವಾಸಮಾಡುತ್ತಾರೆ. ದೇವರು ನಮ್ಮಲ್ಲಿ ವಾಸಮಾಡುತ್ತಾರೆಂದು ದೇವರು ನಮಗೆ ದಯಪಾಲಿಸಿದ ಆತ್ಮನಿಂದಲೇ ನಾವು ಬಲ್ಲೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು