Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 11:1 - ಕನ್ನಡ ಸಮಕಾಲಿಕ ಅನುವಾದ

1 ಮರಿಯಳ ಮತ್ತು ಆಕೆಯ ಸಹೋದರಿಯಾದ ಮಾರ್ಥಳ ಊರಾದ ಬೇಥಾನ್ಯದಲ್ಲಿ ಲಾಜರನೆಂಬವನೊಬ್ಬನು ಅಸ್ವಸ್ಥನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಮಾರ್ಥಳು ಮತ್ತು ಆಕೆಯ ಸಹೋದರಿಯಾದ, ಮರಿಯಳ ಊರಾದ, ಬೇಥಾನ್ಯದಲ್ಲಿ ಲಾಜರನೆಂಬುವನೊಬ್ಬನು ಅಸ್ವಸ್ಥನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಬೆಥಾನಿಯ ಎಂಬ ಊರಿನಲ್ಲಿ ಲಾಸರ್ ಎಂಬವನು ಅಸ್ವಸ್ಥನಾಗಿದ್ದನು. ಮರಿಯ ಮತ್ತು ಅವಳ ಸಹೋದರಿ ಮಾರ್ತ ಎಂಬವರ ಊರು ಅದೇ ಆಗಿತ್ತು. (

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಬೇಥಾನ್ಯದ ಲಾಜರನೆಂಬವನೊಬ್ಬನು ಅಸ್ವಸ್ಥನಾಗಿದ್ದನು. ಅದು ಮಾರ್ಥಳು ಮರಿಯಳು ಎಂಬ ಅಕ್ಕತಂಗಿಯರು ಇದ್ದ ಊರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಲಾಜರನೆಂಬ ಒಬ್ಬನು ಅಸ್ವಸ್ಥನಾಗಿದ್ದನು. ಅವನು ಬೆಥಾನಿ ಎಂಬ ಊರಿನಲ್ಲಿ ವಾಸವಾಗಿದ್ದನು. ಮರಿಯಳು ಮತ್ತು ಆಕೆಯ ಸಹೋದರಿಯಾದ ಮಾರ್ಥಳು ಈ ಊರಿನಲ್ಲೇ ವಾಸವಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಬೆಥನಿ ಮನ್ತಲ್ಯಾ ಗಾಂವಾತ್ ಲಾಜರ್ ಮನ್ತಲೊ ಎಕ್ ಮಾನುಸ್ ಹೊತ್ತೊ, ತೊ ಶಿಕ್ ಹೊತ್ತೊ, ಮರಿ ಅನಿ ತಿಚಿ ಭೆನ್ ಮಾರ್ಥಾ ಬೆಥನಿ ಮನ್ತಲ್ಯಾ ಗಾಂವಾತ್ ಜಿವನ್ ಕರಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 11:1
15 ತಿಳಿವುಗಳ ಹೋಲಿಕೆ  

ಯೇಸು ಲಾಜರನನ್ನು ಸಮಾಧಿಯೊಳಗಿಂದ ಕರೆದು ಅವನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದಾಗ ಅವರ ಸಂಗಡ ಇದ್ದ ಜನರೇ ಈ ವಿಷಯವನ್ನು ಸಾರುತ್ತಿದ್ದರು.


ಯೇಸು ಅಲ್ಲಿರುವುದನ್ನು ಯೆಹೂದ್ಯರ ದೊಡ್ಡ ಗುಂಪು ತಿಳಿದು, ಅವರನ್ನು ಮಾತ್ರವಲ್ಲ, ಯೇಸು ಮರಣದಿಂದ ಎಬ್ಬಿಸಿದ ಲಾಜರನನ್ನೂ ಕಾಣಲು ಬಂದಿದ್ದರು.


ಇದನ್ನು ಹೇಳಿದ ತರುವಾಯ ಯೇಸು ಅವರಿಗೆ, “ನಮ್ಮ ಸ್ನೇಹಿತ ಲಾಜರನು ನಿದ್ರೆ ಮಾಡುತ್ತಿದ್ದಾನೆ. ಆದರೆ ನಾನು ಹೋಗಿ ಅವನನ್ನು ಎಬ್ಬಿಸಬೇಕು,” ಎಂದರು.


ಯೇಸು ಅವರನ್ನು ಬಿಟ್ಟು ಪಟ್ಟಣದಿಂದ ಹೊರಟು ಬೇಥಾನ್ಯಕ್ಕೆ ಹೋಗಿ, ಅಲ್ಲಿ ರಾತ್ರಿ ಉಳಿದುಕೊಂಡರು.


ಆ ಸಮಯದಲ್ಲಿ ಆಕೆ ಅಸ್ವಸ್ಥಳಾಗಿ ಸತ್ತುಹೋದಳು. ಆಕೆಯ ಶವಕ್ಕೆ ಸ್ನಾನಮಾಡಿಸಿ, ಅದನ್ನು ಮೇಲೆ ಮಾಳಿಗೆಯ ಕೋಣೆಯಲ್ಲಿ ಇಟ್ಟರು.


ಆದ್ದರಿಂದ ಅವನ ಸಹೋದರಿಯರು, “ಸ್ವಾಮೀ, ಇಗೋ, ನೀವು ಪ್ರೀತಿಸುವವನು ಅಸ್ವಸ್ಥನಾಗಿದ್ದಾನೆ,” ಎಂದು ಯೇಸುವಿಗೆ ಹೇಳಿ ಕಳುಹಿಸಿದರು.


ಅವರು ಯೆರೂಸಲೇಮಿಗೆ ಸಮೀಪಿಸಿ ಓಲಿವ್ ಗುಡ್ಡದ ಕಡೆಗೆ ಇರುವ ಬೇತ್ಫಗೆ ಮತ್ತು ಬೇಥಾನ್ಯಕ್ಕೂ ಬಂದಾಗ ಯೇಸು ತಮ್ಮ ಶಿಷ್ಯರಲ್ಲಿ ಇಬ್ಬರನ್ನು ಕಳುಹಿಸಿ ಅವರಿಗೆ,


ಕೆಲವು ಕಾಲದ ನಂತರ ಯೋಸೇಫನಿಗೆ, “ನಿನ್ನ ತಂದೆ ಅಸ್ವಸ್ಥನಾಗಿದ್ದಾನೆ,” ಎಂಬ ಸುದ್ದಿ ಬಂದಿತು. ಆಗ ಅವನು ತನ್ನ ಇಬ್ಬರು ಪುತ್ರರಾದ ಮನಸ್ಸೆಯನ್ನೂ, ಎಫ್ರಾಯೀಮನನ್ನೂ ಕರೆದುಕೊಂಡು ತಂದೆಯ ಬಳಿಗೆ ಬಂದನು.


ಬೇಥಾನ್ಯವು ಯೆರೂಸಲೇಮಿನಿಂದ ಸುಮಾರು ಮೂರು ಕಿಲೋಮೀಟರಿನಷ್ಟು ದೂರವಿತ್ತು.


ಯೆಹೂದ್ಯರಲ್ಲಿ ಅನೇಕರು ಮಾರ್ಥಳನ್ನು ಮತ್ತು ಮರಿಯಳನ್ನು ಅವರ ಸಹೋದರನ ವಿಷಯವಾಗಿ ಸಂತೈಸುವುದಕ್ಕೆ ಬಂದಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು