Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 11:24 - ಕನ್ನಡ ಸಮಕಾಲಿಕ ಅನುವಾದ

24 ಮಾರ್ಥಳು ಯೇಸುವಿಗೆ, “ಕಡೆಯ ದಿನದಲ್ಲಿ ಪುನರುತ್ಥಾನವಾಗುವಾಗ ಅವನು ಪುನಃ ಎದ್ದು ಬರುವನೆಂದು ನಾನು ಬಲ್ಲೆನು,” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಮಾರ್ಥಳು ಆತನಿಗೆ, “ಸತ್ತವರಿಗೆ ಕಡೆಯ ದಿನದಲ್ಲಿ ಪುನರುತ್ಥಾನವಾಗುವಾಗ ಅವನೂ ಎದ್ದು ಬರುವನೆಂದು ನಾನು ಬಲ್ಲೆನು” ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 “ಅವನು ಅಂತಿಮ ದಿನದ ಪುನರುತ್ಥಾನದಲ್ಲಿ ಜೀವಂತನಾಗಿ ಏಳುವನೆಂದು ನನಗೆ ತಿಳಿದಿದೆ,” ಎಂದಳು ಮಾರ್ತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಮಾರ್ಥಳು - ಸತ್ತವರಿಗೆ ಕಡೇ ದಿನದಲ್ಲಿ ಪುನರುತ್ಥಾನವಾಗುವಾಗ ಅವನೂ ಎದ್ದು ಬರುವನೆಂದು ನಾನು ಬಲ್ಲೆನು ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಮಾರ್ಥಳು, “ಅಂತಿಮ ದಿನದಂದು ಪುನರುತ್ಥಾನವಾಗುವಾಗ ಅವನು ಮತ್ತೆ ಎದ್ದುಬರುವನೆಂದು ನನಗೆ ಗೊತ್ತಿದೆ” ಎಂಬುದಾಗಿ ಉತ್ತರ ಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ತನ್ನಾ ತಿನಿ, “ಆಕ್ರಿಚ್ಯಾ ದಿಸಿ ಅನಿ ಪರ್ತುನ್ ಝಿತ್ತೆ ಹೊವ್ನ್ ಉಟ್ತಲ್ಯಾ ಎಳಾರ್ ತೊ ಝಿತ್ತೊ ಹೊವ್ನ್ ಉಟ್ತಾ ಮನುನ್ ಮಾಕಾ ಗೊತ್ತ್ ಹಾಯ್” ಮಟ್ಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 11:24
18 ತಿಳಿವುಗಳ ಹೋಲಿಕೆ  

ನೀತಿವಂತರಿಗೂ ಅನೀತಿವಂತರಿಗೂ ಪುನರುತ್ಥಾನವಿದೆಯೆಂದು ಈ ಜನರು ಎದುರುನೋಡುವಂತೆಯೇ ದೇವರಲ್ಲಿ ನನಗೂ ನಿರೀಕ್ಷೆಯಿದೆ.


ಆದರೆ ಮೃತರಾದ ನಿನ್ನ ಜನರು ಬದುಕುವರು. ಅವರ ದೇಹಗಳು ಏಳುವುವು. ಧೂಳಿನ ನಿವಾಸಿಗಳೇ, ಎಚ್ಚೆತ್ತು ಹರ್ಷಧ್ವನಿಗೈಯಿರಿ! ಯೆಹೋವ ದೇವರೇ, ನಿಮ್ಮ ಇಬ್ಬನಿ ಮುಂಜಾನೆಯ ಇಬ್ಬನಿಯಂತಿರುವುದು. ಭೂಮಿಯು ಸತ್ತವರನ್ನು ಹೊರಪಡಿಸುವುದು.


ಆಗ ಅವರು ನಿನಗೆ ಪ್ರತ್ಯುಪಕಾರ ಮಾಡುವುದಕ್ಕೆ ಆಗದಿರುವುದರಿಂದ, ನೀನು ಧನ್ಯನಾಗುವೆ. ಏಕೆಂದರೆ ನೀತಿವಂತರ ಪುನರುತ್ಥಾನದಲ್ಲಿ ನಿನಗೆ ಪ್ರತ್ಯುಪಕಾರವಾಗುವುದು.”


“ಸಮಾಧಿಯ ಶಕ್ತಿಯಿಂದ ಅವರನ್ನು ಕ್ರಯಕೊಟ್ಟು ವಿಮೋಚಿಸುವೆನು. ಮರಣದಿಂದ ಅವರನ್ನು ಬಿಡಿಸುವೆನು. ಮರಣವೇ ನಿನ್ನ ಉಪದ್ರವ ಎಲ್ಲಿ? ಪಾತಾಳವೇ ನಿನ್ನ ವಿನಾಶವೆಲ್ಲಿ? “ಅನುಕಂಪವು ನನ್ನಿಂದ ದೂರವಾಗಿದೆ.


ಅವರು ಎರಡು ದಿವಸಗಳಾದ ಮೇಲೆ ನಮ್ಮನ್ನು ಪುನರ್ಜೀವಿಸ ಮಾಡುವನು. ಮೂರನೆಯ ದಿವಸದಲ್ಲಿ ಆತನೇ ನಮ್ಮನ್ನು ಪುನಃಸ್ಥಾಪಿಸುವರು. ನಾವು ಅವರ ದೃಷ್ಟಿಯಲ್ಲಿ ಜೀವಿಸುವೆವು.


ನಾನಾದರೋ ನೀತಿಯಲ್ಲಿ ನಿಮ್ಮ ಮುಖವನ್ನು ನೋಡುವೆನು. ನಾನು ಎಚ್ಚೆತ್ತಾಗ ನಿಮ್ಮ ಹೋಲಿಕೆಯನ್ನೇ ಕಂಡು ತೃಪ್ತನಾಗುವೆನು.


ಅವರು ಮರಣವನ್ನು ಜಯದಲ್ಲಿ ನುಂಗಿಬಿಡುವರು. ಸಾರ್ವಭೌಮ ಯೆಹೋವ ದೇವರು ಎಲ್ಲಾ ಮುಖಗಳಲ್ಲಿರುವ ಕಣ್ಣೀರನ್ನೂ ಒರಸಿಬಿಡುವರು. ತಮ್ಮ ಜನರ ನಿಂದೆಯನ್ನೂ ಭೂಮಂಡಲದಿಂದಲೇ ತೆಗೆದುಹಾಕುವರು. ಯೆಹೋವ ದೇವರೇ ಇದನ್ನು ನುಡಿದಿದ್ದಾರೆ.


ಸ್ತ್ರೀಯರು ಸತ್ತು ಹೋಗಿದ್ದ ತಮ್ಮವರನ್ನು ಜೀವದಿಂದ ತಿರುಗಿ ಪಡೆದುಕೊಂಡರು. ಆದರೆ ಬೇರೆ ಕೆಲವರು ತಾವು ಯಾತನೆ ಹೊಂದುತ್ತಿರುವಾಗ ಉತ್ತಮ ಪುನರುತ್ಥಾನ ಹೊಂದುವುದಕ್ಕಾಗಿ ತಮಗೆ ಬಿಡುಗಡೆಯನ್ನು ಸ್ವೀಕರಿಸದೆ ಹೋದರು,


ನನ್ನನ್ನು ಕಳುಹಿಸಿಕೊಟ್ಟ ತಂದೆಯ ಚಿತ್ತವೇನೆಂದರೆ: ಅವರು ನನಗೆ ಕೊಟ್ಟವರಲ್ಲಿ ನಾನು ಯಾರನ್ನೂ ಕಳೆದುಕೊಳ್ಳದೆ ಕಡೆಯ ದಿನದಲ್ಲಿ ಅವರನ್ನು ಎಬ್ಬಿಸುವುದೇ.


ನನ್ನ ತಂದೆಯ ಚಿತ್ತವೇನೆಂದರೆ ನನ್ನನ್ನು ನೋಡಿ ನನ್ನಲ್ಲಿ ವಿಶ್ವಾಸವಿಡುವ ಪ್ರತಿಯೊಬ್ಬರೂ ನಿತ್ಯಜೀವವನ್ನು ಪಡೆಯುವುದೇ; ನಾನು ಅವರನ್ನು ಕಡೆಯ ದಿನದಲ್ಲಿ ಎಬ್ಬಿಸುವೆನು,” ಎಂದು ಹೇಳಿದರು.


ಯೇಸು ಆಕೆಗೆ, “ನಿನ್ನ ಸಹೋದರನು ಪುನಃ ಜೀವಂತನಾಗಿ ಎದ್ದೇಳುವನು,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು