Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 11:27 - ಕನ್ನಡ ಸಮಕಾಲಿಕ ಅನುವಾದ

27 ಆಕೆಯು ಯೇಸುವಿಗೆ, “ಹೌದು, ಸ್ವಾಮೀ, ಲೋಕಕ್ಕೆ ಬರಬೇಕಾಗಿದ್ದ ದೇವರ ಪುತ್ರನಾದ ಕ್ರಿಸ್ತನು ನೀವೇ ಎಂದು ನಾನು ನಂಬಿದ್ದೇನೆ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆಕೆಯು ಆತನಿಗೆ, “ಹೌದು ಕರ್ತನೇ, ಲೋಕಕ್ಕೆ ಬರಬೇಕಾದ ದೇವಕುಮಾರನಾದ ಕ್ರಿಸ್ತನು ನೀನೇ ಎಂದು ನಾನು ನಂಬಿದ್ದೇನೆ” ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 “ಹೌದು ಪ್ರಭುವೇ, ನೀವೇ ಅಭಿಷಿಕ್ತರಾದ ಲೋಕೋದ್ಧಾರಕ; ದೇವರ ಪುತ್ರ; ಈ ಲೋಕಕ್ಕೆ ಬರಬೇಕಾದವರು - ಎಂದು ನಾನು ವಿಶ್ವಾಸಿಸುತ್ತೇನೆ,” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆಕೆ - ಹೌದು, ಸ್ವಾಮೀ, ಲೋಕಕ್ಕೆ ಬರಬೇಕಾದ ದೇವಕುಮಾರನಾದ ಕ್ರಿಸ್ತನು ನೀನೇ ಎಂದು ನಂಬಿದ್ದೇನೆ ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಮಾರ್ಥಳು, “ಹೌದು ಪ್ರಭುವೇ, ನೀನು ದೇವರ ಮಗನಾದ ಕ್ರಿಸ್ತನೆಂದು ನಾನು ನಂಬುವೆ. ಈ ಲೋಕಕ್ಕೆ ಬರಬೇಕಾಗಿದ್ದವನು ನೀನೇ” ಎಂದು ಉತ್ತರಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ತನ್ನಾ ಮಾರ್ಥಾನ್, “ಹೊಯ್ ಧನಿಯಾ! ತಿಯಾ ಮೆಸ್ಸಿಯಾ ಹ್ಯಾ ಜಗಾತ್ ಯೆತಲೊ ಹಾಯ್ ಮನುನ್ ಹೊತ್ತೊ ದೆವಾಚೊಲೆಕ್ ಮನುನ್ಬಿ ಮಿಯಾ ವಿಶ್ವಾಸ್ ಕರ್‍ತಾ” ಮನುನ್ ಜಬಾಬ್ ದಿಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 11:27
17 ತಿಳಿವುಗಳ ಹೋಲಿಕೆ  

ಅದಕ್ಕೆ ಸೀಮೋನ ಪೇತ್ರನು ಉತ್ತರವಾಗಿ, “ನೀವು ಕ್ರಿಸ್ತ ಮತ್ತು ಜೀವಂತ ದೇವರ ಪುತ್ರರಾಗಿದ್ದೀರಿ,” ಎಂದು ಉತ್ತರಕೊಟ್ಟನು.


ನೀವು ದೇವರ ಪರಿಶುದ್ಧರು ಎಂದು ನಾವು ನಂಬಿ ತಿಳಿದಿದ್ದೇವೆ,” ಎಂದನು.


ಆ ಜನರು ಯೇಸು ಮಾಡಿದ ಸೂಚಕಕಾರ್ಯವನ್ನು ಕಂಡು, “ಸತ್ಯವಾಗಿಯೂ ಲೋಕಕ್ಕೆ ಬರಬೇಕಾಗಿದ್ದ ಪ್ರವಾದಿಯು ಇವರೇ,” ಎಂದರು.


“ಇಗೋ, ನಾನು ನನ್ನ ದೂತನನ್ನು ಕಳುಹಿಸುತ್ತೇನೆ. ಅವನು ನನ್ನ ಮುಂದೆ ಮಾರ್ಗವನ್ನು ಸಿದ್ಧಮಾಡುವನು. ನೀವು ಹುಡುಕುವ ಕರ್ತರು ಫಕ್ಕನೆ ತಮ್ಮ ಆಲಯಕ್ಕೆ ಬರುವರು. ನೀವು ಇಷ್ಟಪಡುವ ಒಡಂಬಡಿಕೆಯ ದೂತನೇ, ಇಗೋ, ಬರುತ್ತಾನೆ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಯೇಸುವೇ ಕ್ರಿಸ್ತ ಎಂದು ನಂಬುವ ಪ್ರತಿಯೊಬ್ಬರೂ ದೇವರಿಂದ ಹುಟ್ಟಿದವರಾಗಿದ್ದಾರೆ. ತಂದೆಯನ್ನು ಪ್ರೀತಿಸುವ ಪ್ರತಿಯೊಬ್ಬರು ದೇವರಿಂದ ಹುಟ್ಟಿದವರನ್ನು ಸಹ ಪ್ರೀತಿಸುತ್ತಾರೆ.


ದೇವರ ಪುತ್ರ ಆಗಿರುವ ಕ್ರಿಸ್ತ ಯೇಸುವು ಬಂದು, ಸತ್ಯವಾಗಿರುವ ದೇವರನ್ನು ನಾವು ಅರಿತುಕೊಳ್ಳುವ ಹಾಗೆ ಅವರು ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾರೆಂದೂ ನಾವು ಸತ್ಯವಾಗಿರುವ ದೇವರಲ್ಲಿ ಅವರ ಪುತ್ರ ಆಗಿರುವ ಕ್ರಿಸ್ತ ಯೇಸುವಿನಲ್ಲಿ ಇರುವವರಾಗಿದ್ದೇವೆ ಎಂದೂ ನಮಗೆ ಗೊತ್ತಿದೆ. ಈ ಕ್ರಿಸ್ತ ಯೇಸುವೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾರೆ.


ಮಾರ್ಗದಲ್ಲಿ ಅವರು ಮುಂದೆ ಪ್ರಯಾಣ ಮಾಡುತ್ತಿದ್ದಾಗ, ನೀರಿದ್ದ ಸ್ಥಳಕ್ಕೆ ಬಂದರು. ಆಗ ಕಂಚುಕಿ, “ಇಗೋ ಇಲ್ಲಿ ನೀರಿದೆ. ನನಗೆ ಏಕೆ ದೀಕ್ಷಾಸ್ನಾನ ಕೊಡಬಾರದು?” ಎಂದನು.


ಜನರು ಆ ಸ್ತ್ರೀಗೆ, “ನಾವು ಇನ್ನು ಮುಂದೆ ನಂಬುವುದು ನಿನ್ನ ಮಾತಿನಿಂದಲ್ಲ. ಏಕೆಂದರೆ ನಾವೇ ಸ್ವತಃ ಕೇಳಿದ್ದೇವೆ. ಈತನು ನಿಜವಾಗಿಯೂ ಲೋಕ ರಕ್ಷಕನೆಂದು ತಿಳಿದಿದ್ದೇವೆ,” ಎಂದರು.


ಅದಕ್ಕೆ ನತಾನಯೇಲನು, “ಗುರುವೇ, ನೀವು ದೇವಪುತ್ರ; ಇಸ್ರಾಯೇಲಿನ ಅರಸ ನೀವೇ,” ಎಂದನು.


ಅದೇನೆಂದರೆ, ಈ ದಿನ ದಾವೀದನ ಪಟ್ಟಣದಲ್ಲಿ ನಿಮಗೋಸ್ಕರ ಒಬ್ಬ ರಕ್ಷಕರು ಹುಟ್ಟಿದ್ದಾರೆ. ಅವರು ಯಾರೆಂದರೆ ಕರ್ತದೇವರು ಆಗಿರುವ ಕ್ರಿಸ್ತ.


“ಬರಬೇಕಾದ ಮೆಸ್ಸೀಯ ನೀನೋ ಇಲ್ಲವೇ ನಾವು ಇನ್ನೊಬ್ಬನಿಗಾಗಿ ಎದುರು ನೋಡಬೇಕೋ?” ಎಂದು ವಿಚಾರಿಸಿದನು.


ತರುವಾಯ ಯೇಸು, ತಾನೇ ಕ್ರಿಸ್ತ ಎಂಬುದನ್ನು ಯಾರಿಗೂ ಹೇಳಬಾರದೆಂದು ತಮ್ಮ ಶಿಷ್ಯರಿಗೆ ಆಜ್ಞಾಪಿಸಿದರು.


“ನೀನು ಪೂರ್ಣಹೃದಯದಿಂದ ನಂಬಿದರೆ ನಿನಗೆ ದೀಕ್ಷಾಸ್ನಾನವಾಗಬಹುದು,” ಎಂದು ಫಿಲಿಪ್ಪನು ಹೇಳಿದನು. “ಕ್ರಿಸ್ತ ಯೇಸುವೇ ದೇವಪುತ್ರರು ಎಂದು ನಾನು ನಂಬುತ್ತೇನೆ,” ಎಂದು ಕಂಚುಕಿಯು ಪ್ರಕಟಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು