ಯೋಹಾನ 11:31 - ಕನ್ನಡ ಸಮಕಾಲಿಕ ಅನುವಾದ31 ಮರಿಯಳೊಂದಿಗೆ ಮನೆಯಲ್ಲಿ ಆಕೆಯ ಜೊತೆಗಿದ್ದು ಆಕೆಯನ್ನು ಸಂತೈಸುತ್ತಿದ್ದ ಯೆಹೂದ್ಯರು ಆಕೆಯು ತಟ್ಟನೆ ಎದ್ದು ಹೊರಗೆ ಹೋಗುತ್ತಿರುವುದನ್ನು ಕಂಡು, ಆಕೆಯು ಅಳುವುದಕ್ಕಾಗಿ ಸಮಾಧಿಯ ಬಳಿಗೆ ಹೋಗುತ್ತಿದ್ದಾಳೆಂದು ಭಾವಿಸಿ ಆಕೆಯನ್ನು ಹಿಂಬಾಲಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಮರಿಯಳೊಂದಿಗೆ ಮನೆಯಲ್ಲಿ ಇದ್ದುಕೊಂಡು ಆಕೆಯನ್ನು ಸಂತೈಸುತ್ತಿದ್ದ ಯೆಹೂದ್ಯರು ಆಕೆಯು ತಟ್ಟನೆ ಎದ್ದು ಹೊರಗೆ ಹೋಗುವುದನ್ನು ಕಂಡು, ಆಕೆಯು ಅಳುವುದಕ್ಕಾಗಿ ಸಮಾಧಿಗೆ ಹೋಗುತ್ತಿದ್ದಾಳೆಂದು ಭಾವಿಸಿ ಆಕೆಯ ಹಿಂದೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಇತ್ತ ಮನೆಯಲ್ಲಿ ಮರಿಯಳನ್ನು ಸಂತೈಸಿಕೊಂಡಿದ್ದ ಯೆಹೂದ್ಯರು, ಆಕೆ ಅವಸರವಸರವಾಗಿ ಎದ್ದುಹೋಗುವುದನ್ನು ಕಂಡು ಗೋಳಿಡುವುದಕ್ಕಾಗಿ ಸಮಾಧಿಯ ಕಡೆಗೆ ಹೋಗುತ್ತಿದ್ದಾಳೆಂದು ಎಣಿಸಿ ಆಕೆಯ ಹಿಂದೆಯೇ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಮರಿಯಳ ಕೂಡ ಮನೆಯಲ್ಲಿ ಇದ್ದುಕೊಂಡು ಆಕೆಯನ್ನು ಸಂತೈಸುತ್ತಿದ್ದ ಯೆಹೂದ್ಯರು - ಆಕೆ ತಟ್ಟನೆ ಎದ್ದು ಹೊರಗೆ ಹೋಗುವದನ್ನು ಕಂಡು ಈಕೆ ಅಳುವದಕ್ಕಾಗಿ ಸಮಾಧಿಗೆ ಹೋಗುತ್ತಾಳೆಂದು ನೆನಸಿ ಆಕೆಯ ಹಿಂದೆ ಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಯೆಹೂದ್ಯರು ಮರಿಯಳೊಂದಿಗೆ ಮನೆಯಲ್ಲಿದ್ದರು. ಅವರು ಆಕೆಯನ್ನು ಸಂತೈಸುತ್ತಿದ್ದರು. ಮರಿಯಳು ಎದ್ದು ಬೇಗನೆ ಹೋಗುವುದನ್ನು ಅವರು ಕಂಡರು. ಆಕೆಯು ಅಳುವುದಕ್ಕಾಗಿ ಸಮಾಧಿಯ ಬಳಿಗೆ ಹೋಗುತ್ತಿದ್ದಾಳೆಂದು ಅವರು ಭಾವಿಸಿಕೊಂಡು ಆಕೆಯನ್ನು ಹಿಂಬಾಲಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್31 ಘರಾತ್ ಮರಿಕ್ ಸಮಾದಾನ್ ಸಾಂಗುನ್ಗೆತ್ ಹೊತ್ತಿ ಲೊಕಾ. ತಿ ಗಡ್ಬಡಿನ್ ಭಾಯ್ರ್ ಜಾತಲೆ ಬಗುನ್ ತಿಚ್ಯಾ ಫಾಟ್ನಾ ಗೆಲಿ. ತಿ ಲಾಜರಾಕ್ ಮಾಟಿ ದಿಲ್ಲ್ಯಾ ಸಮಾದಿಕ್ಡೆ ರಡುಸಾಟ್ನಿ ಜಾವ್ಕ್ ಲಾಗ್ಲಾ ಕಾಯ್ಕಿ ಮನುನ್ ಚಿಂತ್ಲ್ಯಾನಿ. ಅಧ್ಯಾಯವನ್ನು ನೋಡಿ |