Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 11:4 - ಕನ್ನಡ ಸಮಕಾಲಿಕ ಅನುವಾದ

4 ಯೇಸು ಅದನ್ನು ಕೇಳಿ, “ಈ ಕಾಯಿಲೆಯು ಮರಣಕ್ಕಾಗಿಯಲ್ಲ. ದೇವರ ಮಹಿಮೆಗಾಗಿಯೇ ಬಂದದ್ದು. ಇದರಿಂದ ದೇವರ ಪುತ್ರನಿಗೆ ಮಹಿಮೆಯಾಗುವುದು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೇಸು ಇದನ್ನು ಕೇಳಿ, “ಈ ರೋಗವು ಮರಣಕ್ಕಾಗಿ ಬಂದದ್ದಲ್ಲ; ಇದರಿಂದ ದೇವಕುಮಾರನಿಗೆ ಮಹಿಮೆ ಉಂಟಾಗುವಂತೆ ದೇವರ ಮಹಿಮೆಗೋಸ್ಕರ ಬಂದದ್ದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಇದನ್ನು ಕೇಳಿದ ಯೇಸು, “ಈ ಕಾಯಿಲೆ ಮರಣಕ್ಕಾಗಿ ಬಂದುದಲ್ಲ, ದೇವರ ಮಹಿಮೆಗೋಸ್ಕರ ಬಂದಿದೆ. ಇದರ ಮೂಲಕ ದೇವರ ಪುತ್ರನಿಗೆ ಮಹಿಮೆ ಉಂಟಾಗಲಿದೆ,” ಎಂದು ನುಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯೇಸು ಅದನ್ನು ಕೇಳಿ - ಈ ರೋಗವು ಮರಣಕ್ಕಾಗಿ ಬಂದದ್ದಲ್ಲ; ಇದರಿಂದ ದೇವಕುಮಾರನಿಗೆ ಮಹಿಮೆ ಉಂಟಾಗುವಂತೆ ದೇವರ ಮಹಿಮೆಗೋಸ್ಕರ ಬಂದದ್ದು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೇಸು ಇದನ್ನು ಕೇಳಿದಾಗ, “ಈ ಕಾಯಿಲೆಯು ದೇವರ ಮತ್ತು ದೇವಕುಮಾರನ ಮಹಿಮೆಗಾಗಿ ಬಂದಿದೆಯೇ ಹೊರತು ಮರಣಕ್ಕಾಗಿಯಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಹಿ ಬಾತ್ಮಿ ಆಯ್ಕಲ್ಲ್ಯಾ ತನ್ನಾ ಜೆಜುನ್ “ಹ್ಯಾ ಪಿಡೆಚೊ ಪರಿನಾಮ್ ಲಾಜರಾಚ್ಯಾ ಮರ್‍ನಾಚ್ಯಾ ವೈನಾ ಸರಿನಾ, ಹೆ ದೆವಾಕ್ ಮಹಿಮಾ ಹಾನುಸಾಟ್ನಿ ಮನುನ್ ಹೊಲಾ, ಅನಿ ಹಿಚ್ಯಾ ವೈನಾ ಮಾನ್ಸಾಚೊ ಲೆಕ್ ಮಹಿಮಾ ಜೊಡುನ್ ಘೆತಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 11:4
20 ತಿಳಿವುಗಳ ಹೋಲಿಕೆ  

ಯೇಸು ಆಕೆಗೆ, “ನೀನು ನಂಬಿದರೆ ದೇವರ ಮಹಿಮೆಯನ್ನು ಕಾಣುವೆ ಎಂದು ನಾನು ನಿನಗೆ ಹೇಳಲಿಲ್ಲವೇ?” ಎಂದರು.


ಯೇಸು, “ಈ ಮನುಷ್ಯನಾಗಲಿ ಇವನ ತಂದೆತಾಯಿಗಳಾಗಲಿ ಪಾಪಮಾಡಲಿಲ್ಲ. ಆದರೆ ದೇವರ ಕ್ರಿಯೆಗಳು ಇವನಲ್ಲಿ ವ್ಯಕ್ತವಾಗುವಂತೆ ಹೀಗಾಯಿತು.


ನೀವು ಕ್ರಿಸ್ತ ಯೇಸುವಿನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ, ಧನ್ಯರು. ಏಕೆಂದರೆ, ಮಹಿಮೆಯ ಆತ್ಮರೂ, ದೇವರೂ ನಿಮ್ಮಲ್ಲಿ ವಾಸಿಸುತ್ತಾರೆ.


ಎಲ್ಲರೂ ತಂದೆಯನ್ನು ಸನ್ಮಾನಿಸುವಂತೆಯೇ ಪುತ್ರನನ್ನೂ ಸನ್ಮಾನಿಸಬೇಕು. ಪುತ್ರನನ್ನು ಸನ್ಮಾನಿಸದವನು ಆತನನ್ನು ಕಳುಹಿಸಿದ ತಂದೆಯನ್ನೂ ಸನ್ಮಾನಿಸುವುದಿಲ್ಲ.


ತಂದೆಯೇ, ಲೋಕವು ಉಂಟಾಗುವದಕ್ಕಿಂತ ಮುಂಚೆ ನಿಮ್ಮೊಡನೆ ನನಗಿದ್ದ ಮಹಿಮೆಯಿಂದ ಈಗ ನೀವು ನನ್ನನ್ನು ಮಹಿಮೆಪಡಿಸಿರಿ.


ಯೇಸು ಗಲಿಲಾಯದ ಕಾನಾದಲ್ಲಿ ಮಾಡಿದ ಸೂಚಕಕಾರ್ಯಗಳಲ್ಲಿ ಇದು ಮೊದಲನೆಯದಾಗಿತ್ತು. ಹೀಗೆ ಯೇಸು ತಮ್ಮ ಮಹಿಮೆಯನ್ನು ತೋರ್ಪಡಿಸಿದರು. ಯೇಸುವಿನ ಶಿಷ್ಯರು ಅವರಲ್ಲಿ ನಂಬಿಕೆಯಿಟ್ಟರು.


ಒಬ್ಬನು ಬೋಧಿಸುವವನಾದರೆ ದೇವರ ವಾಕ್ಯವನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲದರಲ್ಲಿ ಕ್ರಿಸ್ತ ಯೇಸುವಿನ ಮೂಲಕ ದೇವರಿಗೆ ಮಹಿಮೆಯೂ ಸ್ತೋತ್ರವೂ ಅಧಿಪತ್ಯವೂ ಯುಗಯುಗಾಂತರಗಳಲ್ಲಿ ಇರಲಿ. ಆಮೆನ್.


ಹೇಗೆಂದರೆ, ನಾನು ಯಾವ ವಿಷಯದಲ್ಲೂ ನಾಚಿಕೆಪಡದೆ ಎಂದಿನಂತೆ ಈಗಲೂ ಪೂರ್ಣ ಧೈರ್ಯದಿಂದಿರುವಂತೆಯೇ ಬದುಕಿದರೂ ಸತ್ತರೂ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂಬುದೇ ನನ್ನ ಬಯಕೆಯೂ ನಿರೀಕ್ಷೆಯೂ ಆಗಿದೆ.


ಯೇಸು ಇಷ್ಟೆಲ್ಲಾ ಮಾತನಾಡಿ ಆಕಾಶದ ಕಡೆಗೆ ಕಣ್ಣೆತ್ತಿ ನೋಡಿ, “ತಂದೆಯೇ, ಸಮಯ ಬಂದಿದೆ. ನಿಮ್ಮ ಪುತ್ರನು ನಿಮ್ಮನ್ನು ಮಹಿಮೆಪಡಿಸುವುದಕ್ಕಾಗುವಂತೆ ಆತನನ್ನು ಮಹಿಮೆಪಡಿಸಿರಿ.


ಅವರು ಕುರುಡನಾಗಿದ್ದವನನ್ನು ಮತ್ತೊಮ್ಮೆ ಕರೆದು ಅವನಿಗೆ, “ದೇವರಿಗೆ ಮಹಿಮೆಯನ್ನು ಸಲ್ಲಿಸು, ಆ ಮನುಷ್ಯ ಪಾಪಿ ಎಂದು ನಾವು ಬಲ್ಲೆವು,” ಎಂದರು.


ಯೇಸು, “ನನ್ನನ್ನು ನಾನೇ ಮಹಿಮೆಪಡಿಸಿಕೊಂಡರೆ ನನ್ನ ಮಹಿಮೆಯು ಏನೂ ಅಲ್ಲ. ನೀವು ಯಾರನ್ನು, ‘ಅವರೇ ನಮ್ಮ ದೇವರು’ ಎಂದು ಹೇಳುತ್ತೀರೋ ಆ ನನ್ನ ತಂದೆಯೇ ನನ್ನನ್ನು ಮಹಿಮೆ ಪಡಿಸುವವರು.


ಇಸ್ರಾಯೇಲರು ಏಳಲಾರದ ಹಾಗೇ ಎಡವಿದರೋ? ಎಂದು ನಾನು ಕೇಳುತ್ತೇನೆ. ಇಲ್ಲವೇ ಇಲ್ಲ! ಆದರೆ, ಇಸ್ರಾಯೇಲರಲ್ಲಿ ಮತ್ಸರ ಉಂಟಾಗುವಂತೆ ಅವರ ಅಪರಾಧದ ನಿಮಿತ್ತ ಯೆಹೂದ್ಯರಲ್ಲದವರಿಗೆ ರಕ್ಷಣೆಯು ಉಂಟಾಯಿತು.


ನನ್ನದೆಲ್ಲವೂ ನಿಮ್ಮದೇ. ನಿಮ್ಮದೆಲ್ಲವೂ ನನ್ನದೇ. ಇವರಿಂದ ನನಗೆ ಮಹಿಮೆ ಉಂಟಾಗಿದೆ.


ತಂದೆಯೇ, ನಿಮ್ಮ ಹೆಸರನ್ನು ಮಹಿಮೆ ಪಡಿಸಿಕೊಳ್ಳಿರಿ,” ಎಂದರು. ಆಗ, “ಹೌದು, ನಾನು ಮಹಿಮೆಪಡಿಸಿದ್ದೇನೆ, ಪುನಃ ಮಹಿಮೆ ಪಡಿಸುವೆನು,” ಎಂಬ ಸ್ವರವು ಪರಲೋಕದಿಂದ ಕೇಳಿಸಿತು.


ಕ್ರಿಸ್ತ ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿ ಅವರಿಗೆ ಮಹಿಮೆಯನ್ನು ಕೊಟ್ಟ ದೇವರಲ್ಲಿ ನೀವು ಕ್ರಿಸ್ತ ಯೇಸುವಿನ ಮೂಲಕ ವಿಶ್ವಾಸವಿಟ್ಟಿದ್ದೀರಿ. ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿರಲಿ.


ದೇವರ ಮಹಿಮೆ ಹಾಗೂ ಸ್ತೋತ್ರಕ್ಕಾಗಿ ಕ್ರಿಸ್ತ ಯೇಸುವಿನ ಮೂಲಕ ಬರುವ ನೀತಿಯ ಫಲಗಳಿಂದ ತುಂಬಿದವರಾಗಿರಬೇಕೆಂತಲೂ ಪ್ರಾರ್ಥಿಸುತ್ತೇನೆ.


ಬೆಳಿಗ್ಗೆ ಯೆಹೋವ ದೇವರ ಮಹಿಮೆಯನ್ನು ನೋಡುವಿರಿ. ಏಕೆಂದರೆ ಯೆಹೋವ ದೇವರಿಗೆ ವಿರೋಧವಾಗಿ ನೀವು ಗೊಣಗುಟ್ಟಿದ್ದನ್ನು ಅವರು ಕೇಳಿದ್ದಾರೆ. ನಮಗೆ ವಿರೋಧವಾಗಿ ನೀವು ಗೊಣಗುಟ್ಟುವ ಹಾಗೆ ನಾವು ಯಾರು?” ಎಂದರು.


ನಾನು ಮಾಡಿದ್ದರಿಂದ ನೀವು ನನ್ನನ್ನು ನಂಬದಿದ್ದರೂ ಈ ಕಾರ್ಯಗಳನ್ನಾದರೂ ನಂಬಿರಿ. ಆಗ ತಂದೆಯು ನನ್ನಲ್ಲಿಯೂ ನಾನು ತಂದೆಯಲ್ಲಿಯೂ ಇರುವುದು ನಿಮಗೆ ಗೊತ್ತಾಗುವುದು ಹಾಗೂ ಮನದಟ್ಟಾಗುವುದು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು