Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 11:43 - ಕನ್ನಡ ಸಮಕಾಲಿಕ ಅನುವಾದ

43 ಯೇಸು ಹೀಗೆ ಹೇಳಿದ ಮೇಲೆ, “ಲಾಜರನೇ, ಹೊರಗೆ ಬಾ,” ಎಂದು ಗಟ್ಟಿಯಾದ ಸ್ವರದಿಂದ ಕೂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಆತನು ಹೀಗೆ ಹೇಳಿದ ಮೇಲೆ, “ಲಾಜರನೇ, ಹೊರಗೆ ಬಾ!” ಎಂದು ಗಟ್ಟಿಯಾದ ಸ್ವರದಿಂದ ಕೂಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ಅನಂತರ ಗಟ್ಟಿಯಾದ ಧ್ವನಿಯಿಂದ, “ಲಾಸರನೇ, ಹೊರಗೆ ಬಾ,” ಎಂದು ಕೂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಅದನ್ನು ಹೇಳಿದ ಮೇಲೆ ದೊಡ್ಡ ಶಬ್ದದಿಂದ - ಲಾಜರನೇ, ಹೊರಗೆ ಬಾ ಎಂದು ಕೂಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ಬಳಿಕ ಯೇಸು ಗಟ್ಟಿಯಾದ ಧ್ವನಿಯಿಂದ, “ಲಾಜರನೇ, ಹೊರಗೆ ಬಾ!” ಎಂದು ಕರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

43 ಹೆ ಸಾಂಗುನ್ ಹೊಲ್ಲ್ಯಾ ತನ್ನಾ ತೆನಿ ಲಾಜರಾಕ್ ಮೊಟ್ಯಾನ್, “ಲಾಜರ್ ಭಾಯ್ರ್ ಯೆ!” ಮನುನ್ ಬಲ್ವುಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 11:43
12 ತಿಳಿವುಗಳ ಹೋಲಿಕೆ  

ಪೇತ್ರನು ಅವರೆಲ್ಲರನ್ನು ಕೋಣೆಯಿಂದ ಹೊರಗೆ ಕಳುಹಿಸಿ, ಮೊಣಕಾಲೂರಿ ಪ್ರಾರ್ಥನೆಮಾಡಿ ಮೃತ ಸ್ತ್ರೀಯ ಕಡೆಗೆ ತಿರುಗಿಕೊಂಡು, “ತಬಿಥಾ, ಏಳು,” ಎಂದು ಹೇಳಿದನು. ಆಕೆ ತನ್ನ ಕಣ್ಣು ತೆರೆದು ಪೇತ್ರನನ್ನು ಕಂಡು ಎದ್ದು ಕುಳಿತುಕೊಂಡಳು.


ಪೇತ್ರನು ಅವನಿಗೆ, “ಐನೇಯ, ಕ್ರಿಸ್ತ ಯೇಸುವು ನಿನ್ನನ್ನು ಗುಣಪಡಿಸುತ್ತಾರೆ. ಏಳು, ನಿನ್ನ ಹಾಸಿಗೆಯನ್ನು ಸುತ್ತಿಡು,” ಎಂದು ಹೇಳಲು, ತಕ್ಷಣವೇ ಐನೇಯ ಮೇಲಕ್ಕೆದ್ದನು.


ಜನರನ್ನು ಕಂಡು ಪೇತ್ರನು ಅವರಿಗೆ ಹೇಳಿದ ಮಾತುಗಳಿವು: “ಇಸ್ರಾಯೇಲಿನ ಜನರೇ, ಈ ಘಟನೆಯಿಂದ ನೀವೇಕೆ ಆಶ್ಚರ್ಯಚಕಿತರಾಗಿದ್ದೀರಿ? ನಮ್ಮ ಸ್ವಂತ ಬಲದಿಂದಾಗಲಿ, ಭಕ್ತಿಯಿಂದಾಗಲಿ ಈ ಮನುಷ್ಯನನ್ನು ನಡೆಯುವಂತೆ ಮಾಡಿದೆವೆಂದು ಭಾವಿಸಿ ನಮ್ಮ ಕಡೆಗೆ ಏಕೆ ನೋಡುತ್ತಿರುವಿರಿ?


ಆಗ ಪೇತ್ರನು, “ಬೆಳ್ಳಿಬಂಗಾರ ನನ್ನಲ್ಲಿಲ್ಲ, ನನ್ನಲ್ಲಿರುವುದನ್ನು ನಿನಗೆ ಕೊಡುತ್ತೇನೆ. ನಜರೇತಿನ ಕ್ರಿಸ್ತ ಯೇಸುವಿನ ಹೆಸರಿನಲ್ಲಿ, ಎದ್ದು ನಡೆ,” ಎಂದು ಹೇಳಿ,


ಶಿಷ್ಯರು ಭಯಭೀತರಾಗಿ, “ಇವರು ಯಾರಿರಬಹುದು? ಗಾಳಿಯೂ ಸರೋವರವೂ ಸಹ ಇವರ ಮಾತುಗಳನ್ನು ಕೇಳುತ್ತವಲ್ಲಾ!” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.


ನೀವು ನನಗೆ ಯಾವಾಗಲೂ ಕಿವಿಗೊಡುತ್ತೀರಿ ಎಂದು ನಾನು ಬಲ್ಲೆನು. ಆದರೆ ನನ್ನ ಸುತ್ತಲೂ ನಿಂತಿರುವ ಈ ಜನರು, ನೀವೇ ನನ್ನನ್ನು ಕಳುಹಿಸಿದ್ದೀರಿ ಎಂದು ನಂಬುವಂತೆ ನಾನು ಇದನ್ನು ಹೇಳಿದೆನು,” ಎಂದರು.


ಆಗ ಸತ್ತಿದ್ದವನು ಹೊರಗೆ ಬಂದನು. ಅವನ ಕೈಕಾಲುಗಳು ಶವವಸ್ತ್ರದಿಂದ ಕಟ್ಟಿದ್ದವು, ಮುಖಕ್ಕೆ ವಸ್ತ್ರ ಸುತ್ತಲಾಗಿತ್ತು. ಯೇಸು ಅಲ್ಲಿದ್ದವರಿಗೆ, “ಕಟ್ಟುಗಳನ್ನು ಬಿಚ್ಚಿ ಅವನನ್ನು ಹೋಗಲು ಬಿಡಿ,” ಎಂದು ಹೇಳಿದರು.


ಪಸ್ಕಹಬ್ಬಕ್ಕೆ ಆರು ದಿನಗಳ ಮುಂಚೆ ಯೇಸು ಬೇಥಾನ್ಯಕ್ಕೆ ಬಂದರು. ಅಲ್ಲಿಯೇ ಯೇಸು ಮರಣದಿಂದ ಎಬ್ಬಿಸಿದ ಲಾಜರನು ಇದ್ದನು.


ಯೇಸು ಅಲ್ಲಿರುವುದನ್ನು ಯೆಹೂದ್ಯರ ದೊಡ್ಡ ಗುಂಪು ತಿಳಿದು, ಅವರನ್ನು ಮಾತ್ರವಲ್ಲ, ಯೇಸು ಮರಣದಿಂದ ಎಬ್ಬಿಸಿದ ಲಾಜರನನ್ನೂ ಕಾಣಲು ಬಂದಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು