Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 11:47 - ಕನ್ನಡ ಸಮಕಾಲಿಕ ಅನುವಾದ

47 ಆಗ ಮುಖ್ಯಯಾಜಕರೂ ಫರಿಸಾಯರೂ ಆಲೋಚನಾ ಸಭೆಯನ್ನು ಕೂಡಿಸಿ, “ಈತನು ಅನೇಕ ಸೂಚಕಕಾರ್ಯಗಳನ್ನು ಮಾಡುತ್ತಾನಲ್ಲಾ, ನಾವು ಏನು ಮಾಡೋಣ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 ಆಗ ಮುಖ್ಯಯಾಜಕರೂ ಫರಿಸಾಯರೂ ಹಿರೀಸಭೆಯನ್ನು ಕೂಡಿಸಿ, “ನಾವು ಈಗ ಏನುಮಾಡಬೇಕು? ಈ ಮನುಷ್ಯನು ಬಹು ಸೂಚಕಕಾರ್ಯಗಳನ್ನು ಮಾಡುತ್ತಾನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

47 ಮುಖ್ಯಯಾಜಕರೂ ಫರಿಸಾಯರೂ ‘ನ್ಯಾಯಸಭೆ’ಯನ್ನು ಕರೆದರು. “ಈಗ ನಾವೇನು ಮಾಡೋಣ? ಈ ಮನುಷ್ಯನು ಎಷ್ಟೋ ಸೂಚಕಕಾರ್ಯಗಳನ್ನು ಮಾಡುತ್ತಾನಲ್ಲಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

47 ಆಗ ಮಹಾಯಾಜಕರೂ ಫರಿಸಾಯರೂ ಹಿರೀಸಭೆಯನ್ನು ಕೂಡಿಸಿ - ನಾವು ಮಾಡುವದು ಇದೇನು? ಈ ಮನುಷ್ಯನು ಬಹು ಸೂಚಕಕಾರ್ಯಗಳನ್ನು ಮಾಡುತ್ತಾನಲ್ಲಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

47 ಆಗ ಮಹಾಯಾಜಕರು ಮತ್ತು ಫರಿಸಾಯರು ಯೆಹೂದ್ಯರ ಆಲೋಚನಾಸಭೆಯನ್ನು ಕರೆದು, “ನಾವು ಏನು ಮಾಡಬೇಕು? ಈ ಮನುಷ್ಯನು (ಯೇಸು) ಅನೇಕ ಸೂಚಕಕಾರ್ಯಗಳನ್ನು ಮಾಡುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

47 ತಸೆಮನುನ್ ಫಾರಿಜೆವಾನಿ ಅನಿ ಯಾಜಕಾಂಚ್ಯಾ ಮುಖಂಡಾನಿ ಸನ್ಹೆದ್ರಿನ್ ಸಭಾ ಜಮುಲ್ಯಾನಿ ಅನಿ, “ಅಮಿ ಕಾಯ್ ಕರುಂವಾ? ಹ್ಯೊ ಮಾನುಸ್ ಕಸ್ಲಿ ಅಜಾಪಾ ಕರುಕ್ ಲಾಗ್ಲಾ ಬಗಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 11:47
17 ತಿಳಿವುಗಳ ಹೋಲಿಕೆ  

ಆಗ ಮುಖ್ಯಯಾಜಕರೂ ಜನರ ಹಿರಿಯರೂ ಒಟ್ಟಾಗಿ ಸೇರಿ, ಕಾಯಫನೆಂಬ ಮಹಾಯಾಜಕನ ಅರಮನೆಗೆ ಬಂದು


ಆದ್ದರಿಂದ ಫರಿಸಾಯರು ತಮ್ಮತಮ್ಮೊಳಗೆ, “ನೋಡಿದಿರಾ, ನಮಗೆ ಏನೂ ಪ್ರಯೋಜನವಾಗಲಿಲ್ಲ. ಲೋಕವೇ ಆತನ ಹಿಂದೆ ಹೋಗುತ್ತಿದೆ!” ಎಂದು ಮಾತನಾಡಿಕೊಂಡರು.


ಆಗ ಮುಖ್ಯಯಾಜಕರೂ ಫರಿಸಾಯರೂ ಯೇಸುವನ್ನು ಬಂಧಿಸುವಂತೆ ಆತನ ಸುಳಿವು ಯಾರಿಗಾದರೂ ತಿಳಿದಿದ್ದರೆ ಅವರು ತಮಗೆ ತಿಳಿಸಬೇಕೆಂದು ಅಪ್ಪಣೆ ಕೊಟ್ಟಿದ್ದರು.


ಯೇಸು ಗಲಿಲಾಯದ ಕಾನಾದಲ್ಲಿ ಮಾಡಿದ ಸೂಚಕಕಾರ್ಯಗಳಲ್ಲಿ ಇದು ಮೊದಲನೆಯದಾಗಿತ್ತು. ಹೀಗೆ ಯೇಸು ತಮ್ಮ ಮಹಿಮೆಯನ್ನು ತೋರ್ಪಡಿಸಿದರು. ಯೇಸುವಿನ ಶಿಷ್ಯರು ಅವರಲ್ಲಿ ನಂಬಿಕೆಯಿಟ್ಟರು.


ಆದರೆ ನಾನು ನಿಮಗೆ ಹೇಳುವುದೇನೆಂದರೆ: ತನ್ನ ಸಹೋದರನ ಮೇಲೆ ಕೋಪಿಸಿಕೊಳ್ಳುವ ಪ್ರತೀ ಮನುಷ್ಯನು ನ್ಯಾಯತೀರ್ಪಿಗೆ ಗುರಿಯಾಗುವನು. ಮಾತ್ರವಲ್ಲದೆ, ಯಾವನಾದರೂ ತನ್ನ ಸಹೋದರನನ್ನು ‘ಬುದ್ಧಿ ಇಲ್ಲದವನೇ’ ಎಂದರೂ ನ್ಯಾಯಸಭೆಯ ವಿಚಾರಣೆಗೆ ಒಳಗಾಗುವನು. ಯಾರನ್ನಾದರೂ, ‘ಮೂರ್ಖಾ,’ ಎನ್ನುವವನು ಅಗ್ನಿನರಕಕ್ಕೆ ಗುರಿಯಾಗುವನು.


ಈ ವರದಿಯನ್ನು ಕೇಳಿದಾಗ, ದೇವಾಲಯದ ಕಾವಲುಗಾರರ ದಳಪತಿಯೂ ಮುಖ್ಯಯಾಜಕರೂ ಇದರಿಂದ ಏನಾಗುವುದೋ ಎಂದು ಕಳವಳಪಟ್ಟರು.


ಪ್ರಾತಃಕಾಲದಲ್ಲಿ ಅವರು ತಮಗೆ ಹೇಳಿದಂತೆಯೇ ದೇವಾಲಯವನ್ನು ಪ್ರವೇಶಿಸಿ ಜನರಿಗೆ ಬೋಧಿಸಲು ಪ್ರಾರಂಭಿಸಿದರು. ಮಹಾಯಾಜಕನು ಮತ್ತು ಅವನೊಂದಿಗಿದ್ದವರು ಕೂಡಿಬಂದಾಗ, ನ್ಯಾಯಸಭೆಯನ್ನೂ ಇಸ್ರಾಯೇಲರ ಹಿರಿಯರ ಪೂರ್ಣಮಂಡಳಿಯನ್ನೂ ಕೂಡಿಸಿ, ಸೆರೆಮನೆಯಿಂದ ಅಪೊಸ್ತಲರನ್ನು ಕರೆಕಳುಹಿಸಿದರು.


ಮುಖ್ಯಯಾಜಕರೂ ನಿಯಮ ಬೋಧಕರೂ ಯೇಸುವನ್ನು ಹೇಗೆ ಕೊಲ್ಲಬೇಕೆಂದು ಹುಡುಕುತ್ತಿದ್ದರು. ಆದರೆ ಅವರು ಜನರಿಗೆ ಭಯಪಟ್ಟರು.


ಪಸ್ಕದ ಮತ್ತು ಹುಳಿಯಿಲ್ಲದ ರೊಟ್ಟಿಯ ಹಬ್ಬ ಬರುವುದಕ್ಕೆ ಇನ್ನೂ ಎರಡು ದಿವಸಗಳಿದ್ದಾಗ, ಮುಖ್ಯಯಾಜಕರೂ ನಿಯಮ ಬೋಧಕರೂ ಉಪಾಯದಿಂದ ಯೇಸುವನ್ನು ಹೇಗೆ ಹಿಡಿದು ಕೊಲ್ಲಬೇಕೆಂದು ಮಾರ್ಗ ಹುಡುಕುತ್ತಿದ್ದರು.


ಯೇಸು ರೋಗಿಗಳಲ್ಲಿ ನಡೆಸಿದ ಸೂಚಕಕಾರ್ಯಗಳನ್ನು ನೋಡಿದ್ದರಿಂದ ಜನರ ದೊಡ್ಡ ಗುಂಪು ಯೇಸುವನ್ನು ಹಿಂಬಾಲಿಸಿತು.


ಯೇಸುವಿನ ವಿಷಯವಾಗಿ ಜನರು ತಮ್ಮತಮ್ಮೊಳಗೆ ಮಾತನಾಡುವುದನ್ನು ಫರಿಸಾಯರು ಕೇಳಿದರು. ಫರಿಸಾಯರು ಮತ್ತು ಮುಖ್ಯಯಾಜಕರು ಯೇಸುವನ್ನು ಬಂಧಿಸಲು ಕಾವಲುಗಾರರನ್ನು ಕಳುಹಿಸಿದರು.


ಬಳಿಕ ಕಾವಲುಗಾರರು, ಮುಖ್ಯಯಾಜಕರ ಹಾಗೂ ಫರಿಸಾಯರ ಬಳಿಗೆ ಬಂದಾಗ ಅವರು, “ನೀವು ಏಕೆ ಆತನನ್ನು ಹಿಡಿದು ತರಲಿಲ್ಲ?” ಎಂದು ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು