Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 11:48 - ಕನ್ನಡ ಸಮಕಾಲಿಕ ಅನುವಾದ

48 ನಾವು ಈತನನ್ನು ಹಾಗೆಯೇ ಬಿಟ್ಟರೆ ಎಲ್ಲರೂ ಆತನನ್ನೇ ನಂಬುವರು. ರೋಮನ್ನರು ಬಂದು ನಮ್ಮ ದೇವಾಲಯವನ್ನೂ ರಾಷ್ಟ್ರವನ್ನೂ ನಾಶಮಾಡುವರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 ನಾವು ಅವನನ್ನು ಹೀಗೆಯೇ ಬಿಟ್ಟರೆ ಎಲ್ಲರೂ ಆತನ್ನನ್ನೇ ನಂಬುವರು. ರೋಮನ್ನರು ಬಂದು ನಮ್ಮ ಸ್ಥಳವನ್ನೂ ಮತ್ತು ರಾಷ್ಟ್ರವನ್ನೂ ವಶ ಮಾಡಿಕೊಂಡಾರು” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

48 ಇವನನ್ನು ಹೀಗೆಯೇ ಬಿಟ್ಟರೆ ಜನರೆಲ್ಲರೂ ಇವನನ್ನೇ ನಂಬುವರು, ರೋಮನರು ಬಂದು ನಮ್ಮ ಪವಿತ್ರ ದೇವಾಲಯವನ್ನೂ ರಾಷ್ಟ್ರವನ್ನೂ ನೆಲಸಮಮಾಡುವರು,” ಎಂದು ವಾದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

48 ನಾವು ಅವನನ್ನು ಹೀಗೆಯೇ ಬಿಟ್ಟರೆ ಎಲ್ಲರೂ ಅವನನ್ನು ನಂಬಾರು; ಮತ್ತು ರೋಮ್ ರಾಜ್ಯದವರು ಬಂದು ನಮ್ಮ ಸ್ಥಾನವನ್ನೂ ಜನವನ್ನೂ ಸೆಳಕೊಂಡಾರು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

48 ಈ ಕಾರ್ಯಗಳನ್ನು ಮಾಡಲು ನಾವು ಅವನಿಗೆ ಅವಕಾಶ ಕೊಟ್ಟರೆ ಜನರೆಲ್ಲರೂ ಇವನಲ್ಲಿ ನಂಬಿಕೆ ಇಡುವರು. ಆಗ ರೋಮ್ ರಾಜ್ಯದವರು ಬಂದು ನಮ್ಮ ದೇವಾಲಯವನ್ನೂ ನಮ್ಮ ದೇಶವನ್ನೂ ವಶಪಡಿಸಿಕೊಳ್ಳುವರು” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

48 ಅಮಿ ಹೆಕಾ ಅಶಿಚ್ ಫಿಡೆ ಜಾವ್ಕ್ ಸೊಡುನ್ ದಿಲ್ಯಾರ್, ಸಗ್ಳಿ ಲೊಕಾ ಹೆಚೆವರ್ತಿ ವಿಶ್ವಾಸ್ ಕರ್‍ತಾತ್, ಅನಿ ರೊಮಾಚೆ ಅದಿಕಾರಿ ಯೆವ್ನ್ ಅಮ್ಚ್ಯಾ ದೆವಾಚಿ ಗುಡಿ ಅನಿ ಅಮ್ಚೊ ದೆಶ್ ನಾಸ್ ಕರುನ್ ಟಾಕ್ತಿಲ್!” ಮಟ್ಲ್ಯಾನಿ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 11:48
19 ತಿಳಿವುಗಳ ಹೋಲಿಕೆ  

ಅವನು, “ಈ ಹೆಸರಿನಲ್ಲಿ ಉಪದೇಶ ಮಾಡಬಾರದೆಂದು ನಾವು ನಿಮಗೆ ಕಟ್ಟುನಿಟ್ಟಾಗಿ ಅಪ್ಪಣೆಕೊಟ್ಟೆವು. ಇಗೋ ನೀವಾದರೋ ನಿಮ್ಮ ಬೋಧನೆಯಿಂದ ಇಡೀ ಯೆರೂಸಲೇಮನ್ನು ತುಂಬಿಸಿರುವಿರಿ. ಅಲ್ಲದೆ ಈ ಮನುಷ್ಯನನ್ನು ಕೊಂದು ರಕ್ತ ಸುರಿಸಿದ ಅಪರಾಧಕ್ಕೆ ನಮ್ಮನ್ನು ನೀವು ಹೊಣೆಮಾಡಲು ಉದ್ದೇಶಿಸಿದ್ದೀರಿ,” ಎಂದು ಹೇಳಿದನು.


“ನಿಯಮ ಪಂಡಿತರೇ, ನಿಮಗೆ ಕಷ್ಟ, ಏಕೆಂದರೆ ನೀವು ಜ್ಞಾನದ ಬೀಗದ ಕೈಯನ್ನು ತೆಗೆದುಕೊಂಡಿದ್ದೀರಿ. ನೀವಂತೂ ಒಳಗೆ ಪ್ರವೇಶಿಸಲಿಲ್ಲ; ಒಳಗೆ ಪ್ರವೇಶಿಸುತ್ತಿರುವವರಿಗೂ ನೀವು ತಡೆಗಟ್ಟುತ್ತೀರಿ,” ಎಂದು ಹೇಳಿದರು.


ವಾಕ್ಯವನ್ನು ಕೇಳಿದವರು ನಂಬಿ ರಕ್ಷಣೆ ಹೊಂದಿಕೊಳ್ಳದಂತೆ, ಪಿಶಾಚನು ಬಂದು ಅವರ ಹೃದಯದೊಳಗಿಂದ, ಆ ವಾಕ್ಯವನ್ನು ತೆಗೆದುಬಿಡುತ್ತಾನೆ, ಇವರೇ ಆ ಬೀಜಗಳು ಬಿದ್ದ ಪಕ್ಕದ ದಾರಿಯಾಗಿದ್ದಾರೆ.


ಅದಕ್ಕೆ ಜನರೆಲ್ಲರೂ ಉತ್ತರವಾಗಿ, “ಆತನ ರಕ್ತವು ನಮ್ಮ ಮೇಲೆಯೂ ನಮ್ಮ ಮಕ್ಕಳ ಮೇಲೆಯೂ ಇರಲಿ,” ಎಂದರು.


ಆದರೆ ಅರಸನು ಅದನ್ನು ಕೇಳಿ ಬಹುಕೋಪಗೊಂಡು ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.


ತನ್ನ ಮೂಲಕ ಎಲ್ಲರು ವಿಶ್ವಾಸವಿಡುವಂತೆ ಅವನು ಆ ಬೆಳಕಿನ ವಿಷಯದಲ್ಲಿ ಸಾಕ್ಷಿ ಕೊಡಲು ಯೋಹಾನನು ಸಾಕ್ಷಿಯಾಗಿ ಬಂದನು.


ಆದ್ದರಿಂದ ನೀವು ಮುಖ್ಯ ಬೀದಿಗಳಿಗೆ ಹೊರಟುಹೋಗಿ ಅಲ್ಲಿ ಕಂಡವರನ್ನೆಲ್ಲಾ ಮದುವೆಗೆ ಆಹ್ವಾನಿಸಿರಿ,’ ಎಂದನು.


“ಆದ್ದರಿಂದ ಪ್ರವಾದಿ ದಾನಿಯೇಲನಿಂದ ಹೇಳಿದ ಹಾಗೆ ‘ಅಸಹ್ಯ ವಸ್ತು’ ಪವಿತ್ರ ಸ್ಥಳದಲ್ಲಿ ನಿಂತಿರುವುದನ್ನು ನೀವು ಕಾಣುವಾಗ, ಓದುವವನು ತಿಳಿದುಕೊಳ್ಳಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು