Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 11:5 - ಕನ್ನಡ ಸಮಕಾಲಿಕ ಅನುವಾದ

5 ಮಾರ್ಥಳನ್ನು ಅವಳ ಸಹೋದರಿಯನ್ನು ಮತ್ತು ಲಾಜರನನ್ನು ಯೇಸು ಪ್ರೀತಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಮಾರ್ಥಳನ್ನು ಆಕೆಯ ತಂಗಿಯನ್ನು ಮತ್ತು ಲಾಜರನನ್ನು ಯೇಸು ಪ್ರೀತಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಮಾರ್ತ, ಅವಳ ಸಹೋದರಿ ಮರಿಯ ಮತ್ತು ಲಾಸರ, ಇವರು ಯೇಸುವಿಗೆ ಅಚ್ಚುಮೆಚ್ಚಿನವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಮಾರ್ಥಳಲ್ಲಿಯೂ ಆಕೆಯ ತಂಗಿಯಲ್ಲಿಯೂ ಲಾಜರನಲ್ಲಿಯೂ ಯೇಸುವಿಗೆ ಪ್ರೀತಿ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೇಸು ಮಾರ್ಥಳನ್ನು, ಆಕೆಯ ಸಹೋದರಿಯನ್ನು ಮತ್ತು ಲಾಜರನ್ನು ಪ್ರೀತಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಜೆಜುಕ್ ಮಾರ್ಥಾ ಅನಿ ತಿಚಿ ಭೆನ್ ಅನಿ ಲಾಜರಾಚೊ ಲೈ ಪ್ರೆಮ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 11:5
11 ತಿಳಿವುಗಳ ಹೋಲಿಕೆ  

ನೀವು ನನ್ನನ್ನು ಪ್ರೀತಿಸಿದಂಥ ಪ್ರೀತಿಯು ಇವರಲ್ಲಿ ಇರಬೇಕೆಂತಲೂ ನಾನು ಅವರಲ್ಲಿ ಇರುವಂತೆಯೂ ನಾನು ಅವರಿಗೆ ನಿಮ್ಮ ಹೆಸರನ್ನು ತಿಳಿಸಿದ್ದೇನೆ, ಇನ್ನೂ ತಿಳಿಸುವೆನು,” ಎಂದರು.


ಏಕೆಂದರೆ ನೀವು ನನ್ನನ್ನು ಪ್ರೀತಿಸಿ ನಾನು ದೇವರಿಂದ ಹೊರಟು ಬಂದವನೆಂದು ನಂಬಿದ್ದರಿಂದ ತಂದೆಯು ತಾವೇ ನಿಮ್ಮನ್ನು ಪ್ರೀತಿಸುತ್ತಾರೆ.


ಆಗ ಯೆಹೂದ್ಯರು, “ನೋಡಿರಿ, ಈತನಿಗೆ ಲಾಜರನ ಮೇಲೆ ಎಷ್ಟು ಪ್ರೀತಿ,” ಎಂದರು.


ಯೇಸುವಿನ ಶಿಷ್ಯರು ಅವರಿಗೆ, “ಬೋಧಕರೇ, ಈಗ ಯೆಹೂದ್ಯರು ನಿಮ್ಮ ಮೇಲೆ ಕಲ್ಲೆಸೆಯಬೇಕೆಂದು ಹುಡುಕುತ್ತಿದ್ದಾರೆ. ತಿರುಗಿ ನೀವು ಅಲ್ಲಿಗೆ ಹೋಗಬೇಕೆಂದಿರುವಿರಾ?” ಎಂದರು.


ಯೇಸು ಮತ್ತು ಅವರ ಶಿಷ್ಯರು ಸಂಚಾರಮಾಡುತ್ತಾ, ಒಂದು ಹಳ್ಳಿಗೆ ಬಂದರು, ಅಲ್ಲಿ ಮಾರ್ಥಳೆಂಬ ಒಬ್ಬ ಸ್ತ್ರೀಯು ಅವರನ್ನು ತನ್ನ ಮನೆಯೊಳಗೆ ಸ್ವೀಕರಿಸಿಕೊಂಡಳು.


ಆದರೆ ಮಾರ್ಥಳು ಬಹಳ ಕೆಲಸದ ನಿಮಿತ್ತವಾಗಿ ಬೇಸರಗೊಂಡು ಅವರ ಬಳಿಗೆ ಬಂದು, “ಕರ್ತದೇವರೇ, ಕೆಲಸ ಮಾಡುವುದಕ್ಕೆ ನನ್ನ ಸಹೋದರಿಯು ನನ್ನೊಬ್ಬಳನ್ನೇ ಬಿಟ್ಟಿರುವುದು ನಿಮಗೆ ಚಿಂತೆಯಿಲ್ಲವೋ? ನನಗೆ ಸಹಾಯಮಾಡುವುದಕ್ಕಾಗಿ ಅವಳಿಗೆ ಹೇಳಿರಿ!” ಎಂದಳು.


ಅದಕ್ಕೆ ಕರ್ತದೇವರು ಪ್ರತ್ಯುತ್ತರವಾಗಿ, “ಮಾರ್ಥಳೇ, ಮಾರ್ಥಳೇ, ನೀನು ಅನೇಕ ವಿಷಯಗಳಿಗಾಗಿ ಚಿಂತಿಸಿ ತೊಂದರೆಗೆ ಒಳಗಾಗಿದ್ದೀ,


ಮರಿಯಳ ಮತ್ತು ಆಕೆಯ ಸಹೋದರಿಯಾದ ಮಾರ್ಥಳ ಊರಾದ ಬೇಥಾನ್ಯದಲ್ಲಿ ಲಾಜರನೆಂಬವನೊಬ್ಬನು ಅಸ್ವಸ್ಥನಾಗಿದ್ದನು.


ಆದ್ದರಿಂದ ಅವನ ಸಹೋದರಿಯರು, “ಸ್ವಾಮೀ, ಇಗೋ, ನೀವು ಪ್ರೀತಿಸುವವನು ಅಸ್ವಸ್ಥನಾಗಿದ್ದಾನೆ,” ಎಂದು ಯೇಸುವಿಗೆ ಹೇಳಿ ಕಳುಹಿಸಿದರು.


ಅವನು ಅಸ್ವಸ್ಥನಾಗಿದ್ದಾನೆಂದು ಯೇಸು ಕೇಳಿದ ಮೇಲೆಯೂ ಎರಡು ದಿವಸ ತಾನಿದ್ದ ಸ್ಥಳದಲ್ಲೇ ಉಳಿದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು