Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 11:51 - ಕನ್ನಡ ಸಮಕಾಲಿಕ ಅನುವಾದ

51 ಇದನ್ನು ಅವನು ತಾನಾಗಿಯೇ ಹೇಳಲಿಲ್ಲ. ಅವನು ಆ ವರ್ಷದಲ್ಲಿ ಮಹಾಯಾಜಕನಾಗಿದ್ದುದರಿಂದ ಯೇಸು ಆ ರಾಷ್ಟ್ರಕ್ಕಾಗಿ ಮಾತ್ರವಲ್ಲದೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

51 ಇದನ್ನು ಅವನು ತನ್ನಷ್ಟಕ್ಕೆ ತಾನೇ ಹೇಳಲಿಲ್ಲ, ಆದರೆ ತಾನು ಆ ವರ್ಷದಲ್ಲಿ ಮಹಾಯಾಜಕನಾಗಿದ್ದುದರಿಂದ, ಯೇಸು ಆ ಜನರಿಗೋಸ್ಕರ ಹಾಗೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

51 ಇದನ್ನು ಅವನು ತಾನಾಗಿಯೇ ಹೇಳಲಿಲ್ಲ. ಆ ವರ್ಷ ಆತನು ಪ್ರಧಾನಯಾಜಕನಾಗಿದ್ದ ಕಾರಣ, ಯೇಸು ಜನತೆಗಾಗಿ ಪ್ರಾಣತ್ಯಾಗ ಮಾಡಲಿದ್ದಾರೆ ಎಂದು ಹೀಗೆ ಪ್ರವಾದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

51 ಇದನ್ನು ಅವನು ತನ್ನಷ್ಟಕ್ಕೆ ತಾನೇ ಹೇಳಲಿಲ್ಲ; ಆದರೆ ತಾನು ಆ ವರುಷದ ಮಹಾಯಾಜಕನಾಗಿದ್ದದರಿಂದ ದೇವಪ್ರೇರಣೆಯಿಂದ ಮಾತಾಡಿ ಯೇಸು ಆ ಜನಕ್ಕೋಸ್ಕರ ಸಾಯುವದಕ್ಕಿದ್ದನೆಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

51 ಇದು ಕಾಯಫನ ಸ್ವಂತ ಆಲೋಚನೆಯಾಗಿರಲಿಲ್ಲ. ಅವನು ಆ ವರ್ಷ ಮಹಾಯಾಜಕನಾಗಿದ್ದನು. ಆದ್ದರಿಂದ ಯೆಹೂದ್ಯರಿಗೋಸ್ಕರವಾಗಿ ಯೇಸು ಸಾಯುತ್ತಾನೆಂದು ಅವನು ನಿಜವಾಗಿಯೂ ಪ್ರವಾದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

51 ಖರೆ ಮಟ್ಲ್ಯಾರ್ ತೆನಿ ಅಪ್ನಾಚ್ಯಾ ಅಪ್ನಿಚ್, ನಾಹೊಲ್ಯಾರ್ ತ್ಯಾ ವರ್ಸಾ ತೊ ಮೊಟೊ ಮುಖ್ಯ ಯಾಜಕ್ ಹೊವ್ನ್ ಹೊತ್ತೊ ಮನುನ್ ತೆನಿ ಅಶೆಚ್ ಸಾಂಗುಕನ್ಯಾತ್, ತೊ ಜೆಜು ಜುದೆವ್ ಲೊಕಾಂಚ್ಯಾ ಸಾಟ್ನಿ ಮರ್‍ತಲೊ ಹಾಯ್ ಮನುನ್ ಅದ್ದಿಚ್ ಫಿಡೆ ಹೊತಲೆ ಸಾಂಗುಕ್ ಲಾಗಲ್ಲೊ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 11:51
23 ತಿಳಿವುಗಳ ಹೋಲಿಕೆ  

ಅರವತ್ತೆರಡು ವಾರಗಳಾದ ಮೇಲೆ ಆ ಅಭಿಷಿಕ್ತರನ್ನು ಕೊಂದುಹಾಕುವರು. ಅವರಿಗೆ ಏನೂ ಇರುವುದಿಲ್ಲ. ಆದರೆ ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ, ಪರಿಶುದ್ಧ ಸ್ಥಳವನ್ನೂ ನಾಶಮಾಡುವರು. ಪ್ರಳಯದಿಂದ ಅದು ಅಂತ್ಯವಾಗುವುದು. ಅಂತ್ಯದವರೆಗೂ ಯುದ್ಧವಾಗಿ ನಾಶ ಸಂಭವಿಸುವುದು.


ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪವನ್ನಾಗಿ ಮಾಡಿದರು. ಹೀಗೆ ಕ್ರಿಸ್ತ ಯೇಸುವಿನಲ್ಲಿ ದೇವರ ನೀತಿಯನ್ನಾಗಿ ದೇವರು ನಮ್ಮನ್ನು ಮಾಡಿದರು.


ಸೌಲನು ತನಗೆ ಕೇಡನ್ನು ಮಾಡಲು ಗುಟ್ಟಾಗಿ ಯೋಚಿಸುತ್ತಿದ್ದಾನೆಂದು ದಾವೀದನು ತಿಳಿದಿದ್ದರಿಂದ ಯಾಜಕನಾದ ಅಬಿಯಾತರನಿಗೆ, “ಏಫೋದನ್ನು ಇಲ್ಲಿಗೆ ತೆಗೆದುಕೊಂಡು ಬಾ,” ಎಂದನು.


ನಿರ್ಣಯವನ್ನು ತಿಳಿಸುವ ಎದೆಪದಕದಲ್ಲಿ ಊರೀಮ್ ಮತ್ತು ತುಮ್ಮೀಮ್‌ಗಳನ್ನು ಇಡಬೇಕು. ಆರೋನನು ಯೆಹೋವ ದೇವರ ಸನ್ನಿಧಿಗೆ ಬರುವ ಸಮಯದಲ್ಲಿ ಅವು ಅವನ ಹೃದಯದ ಮೇಲೆ ಇರಬೇಕು. ಹೀಗೆ ಆರೋನನು ಯೆಹೋವ ದೇವರ ಮುಂದೆ ಯಾವಾಗಲೂ ಇಸ್ರಾಯೇಲರ ನಿರ್ಣಯಗಳನ್ನು ತನ್ನ ಹೃದಯದ ಮೇಲೆ ಹೊರಬೇಕು.


ಪವಿತ್ರ ವೇದದಲ್ಲಿ, “ಮರಕ್ಕೆ ತೂಗುಹಾಕಲಾದ ಪ್ರತಿಯೊಬ್ಬನೂ ಶಾಪಗ್ರಸ್ತನು,” ಎಂದು ಬರೆದಿರುವಂತೆ ಕ್ರಿಸ್ತ ಯೇಸು ಮರಕ್ಕೆ ತೂಗುಹಾಕಲಾಗಿ ನಮಗೋಸ್ಕರ ಶಾಪಗ್ರಸ್ಥರಾಗಿ ನಿಯಮದ ಶಾಪದೊಳಗಿಂದ ನಮ್ಮನ್ನು ವಿಮೋಚಿಸಿದರು.


ನನಗೆ ಪ್ರವಾದನ ವರವಿದ್ದರೂ ನಾನು ಎಲ್ಲಾ ರಹಸ್ಯಗಳನ್ನೂ, ಸಕಲ ವಿದ್ಯೆಯನ್ನು ತಿಳಿದಿದ್ದರೂ ಬೆಟ್ಟಗಳನ್ನು ಕದಲಿಸುವಷ್ಟು ನಂಬಿಕೆಯಿದ್ದರೂ ನನಗೆ ಪ್ರೀತಿಯಿಲ್ಲದಿದ್ದರೆ, ಶೂನ್ಯನಾಗಿದ್ದೇನೆ.


ತಂದೆಯು ನನ್ನನ್ನು ತಿಳಿದಿರುವಂತೆ ನಾನು ತಂದೆಯನ್ನು ತಿಳಿದಿರುತ್ತೇನೆ; ನಾನು ಕುರಿಗಳಿಗೋಸ್ಕರ ನನ್ನ ಪ್ರಾಣವನ್ನೇ ಕೊಡುತ್ತೇನೆ.


ಮನುಷ್ಯಪುತ್ರನಾದ ನಾನು ಸಹ ಸೇವೆಮಾಡಿಸಿಕೊಳ್ಳುವುದಕ್ಕಾಗಿ ಅಲ್ಲ, ಸೇವೆಮಾಡುವುದಕ್ಕಾಗಿಯೂ ಅನೇಕರಿಗಾಗಿ ನನ್ನ ಪ್ರಾಣವನ್ನೇ ಈಡಾಗಿ ಕೊಡುವುದಕ್ಕಾಗಿಯೂ ಬಂದಿದ್ದೇನೆ,” ಎಂದು ಹೇಳಿದರು.


ಸೌಲನು ಯೆಹೋವ ದೇವರನ್ನು ಕೇಳಿಕೊಂಡಾಗ, ಯೆಹೋವ ದೇವರು ಅವನಿಗೆ ಸ್ವಪ್ನಗಳಿಂದಲಾದರೂ, ಊರೀಮಿನಿಂದಲಾದರೂ, ಪ್ರವಾದಿಗಳಿಂದಲಾದರೂ ಉತ್ತರ ಕೊಡಲಿಲ್ಲ.


ಬಿಳಾಮನು ತನ್ನ ಕಣ್ಣೆತ್ತಿ ಇಸ್ರಾಯೇಲರು ಅವರವರ ಗೋತ್ರಗಳ ಪ್ರಕಾರ ತಮ್ಮ ಡೇರೆಗಳಲ್ಲಿ ವಾಸವಾಗಿರುವುದನ್ನು ನೋಡಿದಾಗ, ದೇವರಾತ್ಮ ಪ್ರೇರಿತನಾಗಿ


ಆಗ ಯೆಹೋವ ದೇವರು ಕತ್ತೆಗೆ ಮಾತಾಡುವ ಶಕ್ತಿಯನ್ನು ಕೊಟ್ಟರು. ಅದು ಬಿಳಾಮನಿಗೆ, “ಈಗ ನನ್ನನ್ನು ಮೂರು ಸಾರಿ ಹೊಡೆಯುವ ಹಾಗೆ ನಾನು ನಿನಗೆ ಏನು ಮಾಡಿದೆನು?” ಎಂದು ಕೇಳಿತು.


ಕ್ರಿಸ್ತ ಯೇಸುವು ನೀತಿವಂತರಾಗಿದ್ದರೂ ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವುದಕ್ಕಾಗಿ, ಒಂದೇ ಸಾರಿ ಪಾಪಗಳಿಗೋಸ್ಕರ ಬಾಧೆಪಟ್ಟು ಶರೀರದಲ್ಲಿ ಮರಣಹೊಂದಿದರು. ಆದರೆ ಆತ್ಮದಲ್ಲಿ ಬದುಕುವವರಾದರು.


ನಾವು ನಮ್ಮ ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಕ್ರಿಸ್ತ ಯೇಸು ಶಿಲುಬೆಯ ಮೇಲೆ, “ನಮ್ಮ ಪಾಪಗಳನ್ನು ತಾವೇ ತಮ್ಮ ದೇಹದಲ್ಲಿ ಹೊತ್ತರು. ಅವರ ಗಾಯಗಳಿಂದ ನಿಮಗೆ ಗುಣವಾಯಿತು.”


ಅವರಲ್ಲಿ ಆ ವರ್ಷದ ಮಹಾಯಾಜಕನಾದ ಕಾಯಫನೆಂಬವನು ಅವರಿಗೆ, “ನಿಮಗೆ ಏನೂ ತಿಳಿಯುವುದಿಲ್ಲ.


ಅವರನ್ನು ಮೊದಲು ಅನ್ನನ ಬಳಿಗೆ ಕರೆದುಕೊಂಡು ಹೋದರು. ಅವನು ಆ ವರ್ಷದ ಮಹಾಯಾಜಕನಾಗಿದ್ದ ಕಾಯಫನ ಮಾವನಾಗಿದ್ದನು.


ಕ್ರಿಸ್ತ ಯೇಸು ನಮ್ಮ ಪಾಪಗಳನ್ನು ಪರಿಹರಿಸುವ ಬಲಿಯಾಗಿದ್ದಾರೆ. ನಮ್ಮ ಪಾಪಗಳಿಗೆ ಮಾತ್ರವಲ್ಲದೆ ಸಮಸ್ತ ಲೋಕದ ಪಾಪಗಳನ್ನೂ ಪರಿಹರಿಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು