Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 12:23 - ಕನ್ನಡ ಸಮಕಾಲಿಕ ಅನುವಾದ

23 ಯೇಸು ಅವರಿಗೆ, “ಮನುಷ್ಯಪುತ್ರನು ಮಹಿಮೆಪಡುವ ಸಮಯ ಬಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆಗ ಯೇಸು ಅವರಿಗೆ, “ಮನುಷ್ಯಕುಮಾರನು ಮಹಿಮೆ ಹೊಂದುವ ಗಳಿಗೆಯು ಬಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅದಕ್ಕೆ ಯೇಸು, “ನರಪುತ್ರನು ಮಹಿಮೆಯನ್ನು ಹೊಂದುವ ಗಳಿಗೆ ಬಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆಗ ಯೇಸು ಅವರಿಗೆ ಉತ್ತರಕೊಟ್ಟು ಹೇಳಿದ್ದೇನಂದರೆ - ಮನುಷ್ಯಕುಮಾರನು ತನ್ನ ಮಹಿಮೆಯ ಪದವಿಯನ್ನು ಹೊಂದುವ ಸಮಯ ಬಂದದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಯೇಸು ಅವರಿಗೆ, “ಮನುಷ್ಯಕುಮಾರನು ತನ್ನ ಮಹಿಮೆಯನ್ನು ಹೊಂದುವ ಸಮಯ ಇದೇ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಜೆಜುನ್ ತೆಂಕಾ ಜವಾಬ್ ದಿಲ್ಲ್ಯಾನ್, “ಮಾನ್ಸಾಚೊ ಲೆಕ್ ಮೊಟಿ ಮಹಿಮಾ ಜೊಡುನ್ ಘೆತಲೊ ಎಳ್ ಅತ್ತಾ ಯೆವ್ನ್ ಪಾವ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 12:23
16 ತಿಳಿವುಗಳ ಹೋಲಿಕೆ  

ನಿಶ್ಚಯವಾಗಿ ದ್ವೀಪಗಳು, ತಾರ್ಷೀಷಿನ ಹಡಗುಗಳು ಮೊದಲಾಗಿ ನನಗೋಸ್ಕರ ದೂರದಿಂದ ನಿನ್ನ ಪುತ್ರರನ್ನು ತಮ್ಮ ಬೆಳ್ಳಿಬಂಗಾರದ ಸಹಿತವಾಗಿ ನಿನ್ನ ದೇವರಾದ ಯೆಹೋವ ದೇವರ ಬಳಿಗೂ, ನಿನ್ನನ್ನು ವೈಭವದಿಂದ ಶೃಂಗರಿಸಿರುವ ಇಸ್ರಾಯೇಲಿನ ಪರಿಶುದ್ಧನ ಬಳಿಗೂ ತರುವುದರಲ್ಲಿ ಮುಂದಾಗುತ್ತಿವೆ.


ಯೇಸು ಮೂರನೆಯ ಸಾರಿ ಬಂದು ಅವರಿಗೆ, “ಇನ್ನೂ ವಿಶ್ರಮಿಸುತ್ತಿದ್ದೀರಾ? ಸಾಕು! ಸಮಯವು ಸಮೀಪಿಸಿದೆ; ಮನುಷ್ಯಪುತ್ರನಾದ ನಾನು ಪಾಪಿಗಳ ಕೈವಶವಾಗಲಿದ್ದೇನೆ.


“ಮನುಷ್ಯಪುತ್ರನಾದ ನಾನು ಮಹಿಮೆಯಲ್ಲಿ ಎಲ್ಲಾ ಪರಿಶುದ್ಧ ದೂತರೊಂದಿಗೆ ಬರುವಾಗ, ನನ್ನ ಮಹಿಮೆಯ ಸಿಂಹಾಸನದ ಮೇಲೆ ಕುಳಿತುಕೊಳ್ಳುವೆನು.


ನಿನ್ನ ದೇವರಾದ ಯೆಹೋವ ದೇವರ ನಿಮಿತ್ತವೂ, ಇಸ್ರಾಯೇಲಿನ ಪರಿಶುದ್ಧನ ನಿಮಿತ್ತವೂ ನೀನು ತಿಳಿಯದ ಜನಾಂಗಗಳನ್ನು ಕರೆಯುವೆ, ಏಕೆಂದರೆ ಆತನು ನಿನಗೆ ಕೊಟ್ಟ ವೈಭವದಿಂದ ನಿನ್ನನ್ನು ತಿಳಿಯದ ಜನಾಂಗಗಳು ನಿನ್ನ ಬಳಿಗೆ ಓಡಿ ಬರುವುವು.


ಇವುಗಳನ್ನು ಯೇಸುವಿನ ಶಿಷ್ಯರು ಮೊದಲು ತಿಳಿದಿರಲಿಲ್ಲ. ಆದರೆ ಯೇಸು ಮಹಿಮೆ ಹೊಂದಿದಾಗ ಪವಿತ್ರ ವೇದದಲ್ಲಿ ಅವರ ವಿಷಯವಾಗಿ ಬರೆದಿರುವಂತೆಯೇ, ಇವುಗಳನ್ನು ಜನರು ಅವರಿಗೆ ಮಾಡಿದರೆಂದು ಗ್ರಹಿಸಿದರು.


ತರುವಾಯ ಯೇಸು ತಮ್ಮ ಶಿಷ್ಯರ ಬಳಿಗೆ ಬಂದು ಅವರಿಗೆ, “ಇನ್ನೂ ವಿಶ್ರಮಿಸುತ್ತಿದ್ದೀರಾ? ಇಗೋ, ಮನುಷ್ಯಪುತ್ರನಾದ ನಾನು ಪಾಪಿಗಳ ಕೈವಶವಾಗುವ ಸಮಯವು ಸಮೀಪಿಸಿದೆ.


ಯೇಸು ಸ್ವಲ್ಪ ಮುಂದೆ ಹೋಗಿ ನೆಲದ ಮೇಲೆ ಬಿದ್ದು ಸಾಧ್ಯವಾದರೆ ಆ ಗಳಿಗೆಯು ತನ್ನಿಂದ ದಾಟಿ ಹೋಗುವಂತೆ ಪ್ರಾರ್ಥಿಸಿ,


ಆದರೆ ಯೇಸು ತಮ್ಮಲ್ಲಿ ನಂಬಿಕೆಯಿಡುವವರು ಹೊಂದಲಿರುವ ಪವಿತ್ರಾತ್ಮರನ್ನು ಕುರಿತು ಹೀಗೆ ಹೇಳಿದರು. ಯೇಸು ಇನ್ನೂ ಮಹಿಮೆ ಹೊಂದಿರಲಿಲ್ಲ. ಈ ಕಾರಣದಿಂದ ಪವಿತ್ರ ಆತ್ಮ ಇನ್ನೂ ಬಂದಿರಲಿಲ್ಲ.


“ಈಗ ನನ್ನ ಪ್ರಾಣವು ತತ್ತರಿಸುತ್ತದೆ. ನಾನೇನು ಹೇಳಲಿ? ‘ತಂದೆಯೇ, ಈ ಗಳಿಗೆಯಿಂದ ನನ್ನನ್ನು ತಪ್ಪಿಸಿರಿ’ ಎಂದು ಹೇಳಲೋ? ಇಲ್ಲ. ನಾನು ಈ ಗಳಿಗೆಗಾಗಿಯೇ ಬಂದಿದ್ದೇನಲ್ಲಾ?


ಅಂದು ಪಸ್ಕಹಬ್ಬದ ಹಿಂದಿನ ದಿನವಾಗಿತ್ತು. ಯೇಸು ತಾವು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗಬೇಕಾದ ಸಮಯ ಬಂತೆಂದು ತಿಳಿದು, ಈ ಲೋಕದಲ್ಲಿದ್ದ ತಮ್ಮವರನ್ನು ಪ್ರೀತಿಸುತ್ತಿದ್ದ ಆ ಪ್ರೀತಿಯ ಪರಿಪೂರ್ಣತೆಯನ್ನು ಈಗ ತೋರಿಸಲಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು