Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 12:25 - ಕನ್ನಡ ಸಮಕಾಲಿಕ ಅನುವಾದ

25 ತಮ್ಮ ಪ್ರಾಣವನ್ನು ಪ್ರೀತಿಸುವವರು ಅದನ್ನು ಕಳೆದುಕೊಳ್ಳುವರು. ಈ ಲೋಕದಲ್ಲಿ ತಮ್ಮ ಪ್ರಾಣವನ್ನು ದ್ವೇಷಿಸುವವರು ನಿತ್ಯಜೀವಕ್ಕಾಗಿ ಅದನ್ನು ಕಾಪಾಡಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ತನ್ನ ಪ್ರಾಣವನ್ನು ಪ್ರೀತಿಸುವವನು ಅದನ್ನು ಕಳೆದುಕೊಳ್ಳುವನು. ಈ ಲೋಕದಲ್ಲಿ ತನ್ನ ಪ್ರಾಣವನ್ನು ಕಳೆದುಕೊಳ್ಳಲು ಹಿಂಜರಿಯದವನು ನಿತ್ಯಜೀವಕ್ಕಾಗಿ ಅದನ್ನು ಕಾಪಾಡಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ತನ್ನ ಪ್ರಾಣವನ್ನು ಪ್ರೀತಿಸುವವನು ಅದನ್ನು ಕಳೆದುಕೊಳ್ಳುತ್ತಾನೆ. ತನ್ನ ಪ್ರಾಣವನ್ನು ಈ ಲೋಕದಲ್ಲಿ ದ್ವೇಷಿಸುವವನು ಅದನ್ನು ನಿತ್ಯಜೀವಕ್ಕಾಗಿ ಕಾಯ್ದಿರಿಸಿಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ತನ್ನ ಪ್ರಾಣದ ಮೇಲೆ ಮಮತೆಯಿಡುವವನು ಅದನ್ನು ಕಳಕೊಳ್ಳುವನು, ಇಹಲೋಕದಲ್ಲಿ ತನ್ನ ಪ್ರಾಣವನ್ನು ಹಗೆಮಾಡುವವನು ನಿತ್ಯಜೀವಕ್ಕಾಗಿ ಅದನ್ನು ಕಾಪಾಡಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ತನ್ನ ಸ್ವಂತ ಪ್ರಾಣವನ್ನು ಪ್ರೀತಿಸುವವನು ಅದನ್ನು ಕಳೆದುಕೊಳ್ಳುವನು. ಆದರೆ ಈ ಲೋಕದಲ್ಲಿ ತನ್ನ ಪ್ರಾಣವನ್ನು ದ್ವೇಷಿಸುವವನು ಅದನ್ನು ಉಳಿಸಿಕೊಳ್ಳುವನು. ಅವನು ನಿತ್ಯಜೀವವನ್ನು ಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಜೊ ಕೊನ್ ಅಪ್ನಾಚ್ಯಾ ಜಿವಾಚೊ ಪ್ರೆಮ್ ಕರ್‍ತಾ, ತೊ ತೆ ಕಳ್ದುನ್ ಘೆತಾ, ಅನಿ ಜೊ ಕೊನ್ ಹ್ಯಾ ಜಗಾತ್ ಅಪ್ನಾಚ್ಯಾ ಸ್ವಂತ್ ಜಿವಾಚೊ ದ್ವೆಸ್ ಕರ್‍ತಾ ತೊ ಅಪ್ನಾಚೊ ಜಿವ್ ಕನ್ನಾಚ್ ಮರಾನ್ ನಸಲ್ಲ್ಯಾ ಜಿವನಾಕ್ ರಾಕುನ್ ಥವ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 12:25
13 ತಿಳಿವುಗಳ ಹೋಲಿಕೆ  

ತನ್ನ ಪ್ರಾಣವನ್ನು ಕಂಡುಕೊಳ್ಳುವವನು ಅದನ್ನು ಕಳೆದುಕೊಳ್ಳುವನು. ನನ್ನ ನಿಮಿತ್ತವಾಗಿ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ಕಂಡುಕೊಳ್ಳುವನು.


ಯಾರು ತಮ್ಮ ಪ್ರಾಣವನ್ನು ಉಳಿಸಿಕೊಳ್ಳುವುದಕ್ಕೆ ಪ್ರಯತ್ನಿಸುವರೋ ಅವರು ಅದನ್ನು ಕಳೆದುಕೊಳ್ಳುವರು ಮತ್ತು ಯಾರು ತಮ್ಮ ಪ್ರಾಣವನ್ನು ಕಳೆದುಕೊಳ್ಳುವರೋ ಅವರು ಅದನ್ನು ಕಾಪಾಡಿಕೊಳ್ಳುವರು.


ತಮ್ಮ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವರು ಅದನ್ನು ಕಳೆದುಕೊಳ್ಳುವರು. ಆದರೆ ನನ್ನ ನಿಮಿತ್ತವಾಗಿಯೂ ಸುವಾರ್ತೆಯ ನಿಮಿತ್ತವಾಗಿಯೂ ಯಾರು ತಮ್ಮ ಪ್ರಾಣವನ್ನು ಕಳೆದುಕೊಳ್ಳುವರೋ ಅವರು ಅದನ್ನು ಉಳಿಸಿಕೊಳ್ಳುವರು.


ತಮ್ಮ ಪ್ರಾಣವನ್ನು ಉಳಿಸಿಕೊಳ್ಳುವವರು ಅದನ್ನು ಕಳೆದುಕೊಳ್ಳುವರು, ಆದರೆ ನನ್ನ ನಿಮಿತ್ತವಾಗಿ ಯಾರಾದರೂ ತಮ್ಮ ಪ್ರಾಣವನ್ನು ಕಳೆದುಕೊಳ್ಳುವವರು ಅದನ್ನು ಕಂಡುಕೊಳ್ಳುವರು.


“ಯಾರಾದರೂ ನನ್ನ ಬಳಿಗೆ ಬಂದು ತಮ್ಮ ತಂದೆ, ತಾಯಿ, ಹೆಂಡತಿ, ಮಕ್ಕಳು, ಸಹೋದರರು, ಸಹೋದರಿಯರು ಹಾಗೂ ತಮ್ಮ ಸ್ವಂತ ಪ್ರಾಣವನ್ನು ಸಹ ದ್ವೇಷಿಸದಿದ್ದರೆ ಅವರು ನನ್ನ ಶಿಷ್ಯರಾಗಲಾರರು.


ಅವರು ಮರಣದವರೆಗೆ ತಮ್ಮ ಪ್ರಾಣವನ್ನು ಪ್ರೀತಿಸದೆ, ಕುರಿಮರಿಯಾಗಿರುವವರ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವನನ್ನು ಜಯಿಸಿದರು.


ತನ್ನ ಮನೆಗಳನ್ನಾಗಲಿ, ಸಹೋದರರನ್ನಾಗಲಿ, ಸಹೋದರಿಯರನ್ನಾಗಲಿ, ತಂದೆಯನ್ನಾಗಲಿ, ತಾಯಿಯನ್ನಾಗಲಿ, ಮಕ್ಕಳನ್ನಾಗಲಿ, ಹೊಲವನ್ನಾಗಲಿ, ನನ್ನ ಹೆಸರಿನ ನಿಮಿತ್ತವಾಗಿ ಬಿಟ್ಟುಬಿಡುವ ಪ್ರತಿಯೊಬ್ಬನು ನೂರರಷ್ಟು ಪಡೆದುಕೊಳ್ಳುವನು ಮತ್ತು ನಿತ್ಯಜೀವಕ್ಕೆ ಬಾಧ್ಯನಾಗುವನು.


ಆದರೂ ನನ್ನ ಪ್ರಾಣ ನನಗೆ ಅಮೂಲ್ಯವೆಂದು ನಾನು ಎಣಿಸುವುದಿಲ್ಲ. ಕರ್ತ ಯೇಸು ನನಗೆ ಕೊಟ್ಟ, ದೇವರ ಕೃಪೆಯ ಸುವಾರ್ತೆಗೆ ಸಾಕ್ಷಿ ಕೊಡುವ ಸೇವೆಯ ಓಟವನ್ನು ಓಡಿ ಮುಗಿಸುವುದೇ ನನ್ನ ಬಾಳಿನ ಒಂದೇ ಗುರಿಯಾಗಿದೆ.


ಸೂರ್ಯನ ಕೆಳಗೆ ನಡೆಯುವ ಕಾರ್ಯವು ನನಗೆ ದುಃಖಕರವಾಗಿ ತೋರಿತು. ಆದಕಾರಣ ನಾನು ನನ್ನ ಜೀವನವನ್ನು ಹಗೆ ಮಾಡಿದೆನು. ಗಾಳಿಯನ್ನು ಬೆನ್ನಟ್ಟುವಂತೆ ಎಲ್ಲವೂ ವ್ಯರ್ಥವಾಗಿದೆ.


ಆಗ ಪೌಲನು, “ನೀವೇಕೆ ಅತ್ತು ನನ್ನ ಹೃದಯ ಒಡೆಯುತ್ತೀರಿ? ಬಂಧಿತನಾಗಲಷ್ಟೇ ಅಲ್ಲ, ನಮ್ಮ ಕರ್ತ ಯೇಸುವಿನ ಹೆಸರಿನ ನಿಮಿತ್ತ ಯೆರೂಸಲೇಮಿನಲ್ಲಿ ನಾನು ಸಾಯಲಿಕ್ಕೂ ಸಿದ್ಧನಾಗಿದ್ದೇನೆ,” ಎಂದನು.


ಸ್ತ್ರೀಯರು ಸತ್ತು ಹೋಗಿದ್ದ ತಮ್ಮವರನ್ನು ಜೀವದಿಂದ ತಿರುಗಿ ಪಡೆದುಕೊಂಡರು. ಆದರೆ ಬೇರೆ ಕೆಲವರು ತಾವು ಯಾತನೆ ಹೊಂದುತ್ತಿರುವಾಗ ಉತ್ತಮ ಪುನರುತ್ಥಾನ ಹೊಂದುವುದಕ್ಕಾಗಿ ತಮಗೆ ಬಿಡುಗಡೆಯನ್ನು ಸ್ವೀಕರಿಸದೆ ಹೋದರು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು