Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 12:27 - ಕನ್ನಡ ಸಮಕಾಲಿಕ ಅನುವಾದ

27 “ಈಗ ನನ್ನ ಪ್ರಾಣವು ತತ್ತರಿಸುತ್ತದೆ. ನಾನೇನು ಹೇಳಲಿ? ‘ತಂದೆಯೇ, ಈ ಗಳಿಗೆಯಿಂದ ನನ್ನನ್ನು ತಪ್ಪಿಸಿರಿ’ ಎಂದು ಹೇಳಲೋ? ಇಲ್ಲ. ನಾನು ಈ ಗಳಿಗೆಗಾಗಿಯೇ ಬಂದಿದ್ದೇನಲ್ಲಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಈಗ ನನ್ನ ಪ್ರಾಣವು ತತ್ತರಿಸುತ್ತಿದೆ. ನಾನೇನು ಹೇಳಲಿ? ‘ತಂದೆಯೇ, ಈ ಗಳಿಗೆಯಿಂದ ನನ್ನನ್ನು ತಪ್ಪಿಸು.’ ಆದರೆ ಈ ಕಾರಣಕ್ಕಾಗಿಯೇ ಈ ಗಳಿಗೆಗೆ ಬಂದಿದ್ದೇನಲ್ಲಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಯೇಸು ಸ್ವಾಮಿ ತಮ್ಮ ಮಾತನ್ನು ಮುಂದುವರಿಸುತ್ತಾ, “ಈಗ ನನ್ನಾತ್ಮ ತತ್ತರಿಸುತ್ತಿದೆ. ನಾನು ಏನೆಂದು ಹೇಳಲಿ? ‘ಪಿತನೇ, ಈ ಗಳಿಗೆಯಿಂದ ನನ್ನನ್ನು ಕಾಪಾಡು ಎನ್ನಲೇ?’ ಇಲ್ಲ, ಅದಕ್ಕೆ ಬದಲಾಗಿ ಇದನ್ನು ಅನುಭವಿಸಲೆಂದೇ ನಾನು ಈ ಗಳಿಗೆಗೆ ಕಾಲಿಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಈಗ ನನ್ನ ಪ್ರಾಣವು ತತ್ತರಿಸುತ್ತದೆ; ಮತ್ತು ನಾನೇನು ಹೇಳಲಿ? ತಂದೆಯೇ, ಈ ಕಾಲದೊಳಗಿಂದ ನನ್ನನ್ನು ತಪ್ಪಿಸು. ಆದರೆ ಇದಕ್ಕಾಗಿಯೇ ಈ ಕಾಲ ಸೇರಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಯೇಸು ಮಾತನ್ನು ಮುಂದುವರಿಸಿ, “ನನ್ನ ಪ್ರಾಣವು ತತ್ತರಿಸುತ್ತಿದೆ. ನಾನೇನು ಹೇಳಲಿ? ‘ತಂದೆಯೇ, ನನ್ನನ್ನು ಈ ಸಂಕಟ ಕಾಲದಿಂದ ರಕ್ಷಿಸು ಎನ್ನಬೇಕೇ?’ ಇಲ್ಲ! ಸಂಕಟಪಡುವುದಕ್ಕೋಸ್ಕರವೇ ನಾನು ಬಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 “ಅತ್ತಾ ಮಾಜೊ ಜಿವ್ ಭಿಂವ್ಲಾ, ಅನಿ ಮಿಯಾ ಕಾಯ್ ಸಾಂಗು? ಬಾಬಾ ಹ್ಯೊ ಎಳ್ ಮಾಜೆವರ್ತಿ ಯೆವ್ಕ್ ದಿವ್‍ನಕೊ? ಖರೆ ತೆಚೆಸಾಟ್ನಿಚ್ ಮನುನ್ ಮಿಯಾ ಯೆಲಾ ತಶೆ ಮನುನ್ ಮಿಯಾ ಹ್ಯೊ ಕಸ್ಟ್ ಅನ್ಬೊಗ್ಸುಕುಚ್ ಪಾಜೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 12:27
24 ತಿಳಿವುಗಳ ಹೋಲಿಕೆ  

ಯೇಸು ಅವರಿಗೆ, “ಮನುಷ್ಯಪುತ್ರನು ಮಹಿಮೆಪಡುವ ಸಮಯ ಬಂದಿದೆ.


ಕ್ರಿಸ್ತ ಯೇಸುವು ಭೂಲೋಕದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತರಾಗಿರುವ ದೇವರಿಗೆ ಬಲವಾಗಿ ಕೂಗುತ್ತಾ ಕಣ್ಣೀರಿಟ್ಟರು. ಯೇಸುವಿನ ಭಯಭಕ್ತಿಯ ನಿಮಿತ್ತ ಅವರ ಪ್ರಾರ್ಥನೆ, ವಿಜ್ಞಾಪನೆಗಳಿಗೆ ಉತ್ತರ ಸಿಕ್ಕಿತ್ತು.


ಯೇಸು ಇವುಗಳನ್ನು ಹೇಳುತ್ತಾ ಆತ್ಮದಲ್ಲಿ ನೊಂದುಕೊಂಡವರಾಗಿ, “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನಿಮ್ಮಲ್ಲಿ ಒಬ್ಬನು ನನಗೆ ದ್ರೋಹ ಬಗೆಯುವನು,” ಎಂದು ಸ್ವಷ್ಟವಾಗಿ ಹೇಳಿದರು.


ಯೇಸು ಎರಡನೆಯ ಸಾರಿ ಹೋಗಿ, ಪ್ರಾರ್ಥಿಸುತ್ತಾ, “ನನ್ನ ತಂದೆಯೇ ನಾನು ಕುಡಿಯದ ಹೊರತು ಈ ಪಾತ್ರೆಯು ನನ್ನನ್ನು ಬಿಟ್ಟು ಹೋಗಕೂಡದಾಗಿದ್ದರೆ, ನಿನ್ನ ಚಿತ್ತವೇ ಆಗಲಿ,” ಎಂದರು.


ಆದರೆ, ನಾನು ಏನು ಹೇಳಲಿ, ಆತನು ನನಗೆ ಮಾತುಕೊಟ್ಟು, ತಾನೇ ಅದನ್ನು ನೆರವೇರಿಸಿದ್ದಾನೆ. ನನ್ನ ಆತ್ಮಕ್ಕೆ ಸಂಭವಿಸಿದ ದುಃಖದಲ್ಲಿ ನನ್ನ ವರುಷಗಳಲ್ಲೆಲ್ಲಾ ವಿನಯದಿಂದ ನಡೆಯುವೆನು.


ಮಕ್ಕಳು ರಕ್ತಮಾಂಸಧಾರಿಗಳು ಆಗಿರುವುದರಿಂದ ಯೇಸು ತಮ್ಮ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ, ಸೈತಾನನನ್ನು ನಾಶಮಾಡುವುದಕ್ಕೂ


ಯೇಸು ವೇದನೆಯಲ್ಲಿದ್ದು ಬಹಳ ಆಸಕ್ತಿಯಿಂದ ಪ್ರಾರ್ಥಿಸಿದರು. ಯೇಸುವಿನ ಬೆವರು ನೆಲಕ್ಕೆ ಬೀಳುತ್ತಿರುವ ರಕ್ತದ ದೊಡ್ಡ ಹನಿಗಳಂತಿದ್ದವು.


ಪಿಲಾತನು ಯೇಸುವಿಗೆ, “ನೀನು ಅರಸನೋ?” ಎಂದು ಕೇಳಲು, ಯೇಸು, “ನಾನು ಅರಸನೆಂದು ನೀನೇ ಹೇಳುತ್ತೀ. ನಾನು ಸತ್ಯಕ್ಕೆ ಸಾಕ್ಷಿ ಕೊಡುವುದಕ್ಕಾಗಿ ಹುಟ್ಟಿ, ಇದಕ್ಕಾಗಿಯೇ ಲೋಕಕ್ಕೆ ಬಂದೆನು; ಸತ್ಯಕ್ಕೆ ಸೇರಿದ ಎಲ್ಲರೂ ನನ್ನ ಸ್ವರವನ್ನು ಕೇಳುತ್ತಾರೆ,” ಎಂದರು.


ನಾನು ನಿಮ್ಮ ಸಂಗಡ ಪ್ರತಿದಿನವೂ ದೇವಾಲಯದಲ್ಲಿದ್ದಾಗ, ನೀವು ನನ್ನನ್ನು ಹಿಡಿಯಲಿಲ್ಲ. ಆದರೆ ಇದು ನಿಮ್ಮ ಸಮಯ, ಅಂಧಕಾರ ದೊರೆತನ ಮಾಡುವ ಕಾಲ,” ಎಂದರು.


ನನ್ನ ಪ್ರಾಣವು ಕಷ್ಟದಿಂದ ತುಂಬಿದೆ; ನನ್ನ ಜೀವವು ಸಮಾಧಿಯ ಸಮೀಪಕ್ಕೆ ಎಳೆಯುತ್ತದೆ.


ಆತನು ತಿರಸ್ಕೃತನೂ ಮಾನವಕುಲದಿಂದ ನಿರಾಕರಿಸಲಾದವನೂ, ದುಃಖಿತ ಮನುಷ್ಯನೂ, ನೋವನ್ನು ಅನುಭವಿಸಿದವನೂ ಆಗಿದ್ದನು. ನಾವು ನಮ್ಮ ಮುಖಗಳನ್ನು ಆತನಿಂದ ಮರೆಮಾಡಿಕೊಂಡೆವು. ಆತನು ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು. ನಾವು ಆತನನ್ನು ಅತ್ಯಲ್ಪವಾಗಿ ಎಣಿಸಿದೆವು.


ಕ್ರಿಸ್ತ ಯೇಸು ಪಾಪಿಗಳನ್ನು ರಕ್ಷಿಸುವುದಕ್ಕೋಸ್ಕರ ಈ ಲೋಕಕ್ಕೆ ಬಂದರು, ಎಂಬ ವಾಕ್ಯವು ನಂಬತಕ್ಕದ್ದೂ ಪೂರ್ಣ ಅಂಗೀಕಾರಕ್ಕೆ ಯೋಗ್ಯವಾದದ್ದೂ ಆಗಿದೆ. ಆ ಪಾಪಿಗಳಲ್ಲಿ ನಾನೇ ಮುಖ್ಯನು.


ಆಗ ಕೆಲವರು ಕಲ್ಲನ್ನು ತೆಗೆದುಹಾಕಿದರು. ಯೇಸು ಕಣ್ಣೆತ್ತಿ ಮೇಲೆ ನೋಡಿ, “ತಂದೆಯೇ, ನೀವು ನನಗೆ ಕಿವಿಗೊಟ್ಟಿದ್ದಕ್ಕಾಗಿ ನಿಮಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.


ಆ ಸಮಯದಲ್ಲಿ ಯೇಸು, “ತಂದೆಯೇ, ಪರಲೋಕ ಭೂಲೋಕಗಳ ಒಡೆಯನೇ, ನೀವು ಈ ವಿಷಯಗಳನ್ನು ಜ್ಞಾನಿಗಳಿಂದಲೂ ಬುದ್ಧಿವಂತರಿಂದಲೂ ಮರೆಮಾಡಿ, ಶಿಶುಗಳಿಗೆ ಪ್ರಕಟ ಮಾಡಿರುವುದರಿಂದ ನಾನು ನಿಮ್ಮನ್ನು ಕೊಂಡಾಡುತ್ತೇನೆ.


ನನ್ನ ಪ್ರಾಣವು ಬಹು ಸಂಕಟದಲ್ಲಿದೆ. ಎಲ್ಲಿಯತನಕ, ಯೆಹೋವ ದೇವರೇ, ಇನ್ನೂ ಎಲ್ಲಿಯತನಕ?


ಹೌದು ತಂದೆಯೇ, ಹೀಗೆ ಮಾಡುವುದು ನಿಮ್ಮ ದೃಷ್ಟಿಗೆ ಒಳ್ಳೆಯದಾಗಿ ತೋಚಿತು.


ತರುವಾಯ ಯೇಸು ತಮ್ಮ ಶಿಷ್ಯರ ಬಳಿಗೆ ಬಂದು ಅವರಿಗೆ, “ಇನ್ನೂ ವಿಶ್ರಮಿಸುತ್ತಿದ್ದೀರಾ? ಇಗೋ, ಮನುಷ್ಯಪುತ್ರನಾದ ನಾನು ಪಾಪಿಗಳ ಕೈವಶವಾಗುವ ಸಮಯವು ಸಮೀಪಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು