Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 12:31 - ಕನ್ನಡ ಸಮಕಾಲಿಕ ಅನುವಾದ

31 ಈಗ ಈ ಲೋಕಕ್ಕೆ ನ್ಯಾಯತೀರ್ಪು ಆಗುತ್ತದೆ. ಇಹಲೋಕದ ಅಧಿಪತಿಯನ್ನು ಈಗ ಹೊರಗೆ ಹಾಕಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಈಗ ಈ ಲೋಕಕ್ಕೆ ನ್ಯಾಯತೀರ್ಪು ಆಗುತ್ತದೆ. ಈಗ ಇಹಲೋಕಾಧಿಪತಿಯು ಹೊರಗೆ ನೂಕಲ್ಪಡುವನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಈಗ ಈ ಲೋಕವು ನ್ಯಾಯತೀರ್ಪಿಗೆ ಒಳಗಾಗುವುದು. ಇದೀಗಲೇ ಈ ಲೋಕಾಧಿಪತಿಯನ್ನು ಹೊರದೂಡಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಈಗ ಈ ಲೋಕಕ್ಕೆ ತೀರ್ಪು ಆಗುತ್ತದೆ; ಈಗ ಇಹಲೋಕಾಧಿಪತಿಯು ಹೊರಗೆ ನೂಕಲ್ಪಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಈ ಲೋಕಕ್ಕೆ ತೀರ್ಪಾಗುವ ಕಾಲ ಇದೇ ಆಗಿದೆ. ಈಗ ಈ ಲೋಕದ ಅಧಿಪತಿಯನ್ನು (ಸೈತಾನ) ಹೊರಗೆ ದಬ್ಬಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ಅತ್ತಾ ಹ್ಯಾ ಜಗಾಚಿ ಝಡ್ತಿ ಹೊತಲೊ ಎಳ್ ಯೆಲೊ ಹ್ಯೊ ಜಗಾಚ್ಯಾ ಅತ್ತಾ ಫುಡಾರ್‍ಯಾಕ್ ಕಡೆಕ್ ಕಾಡುನ್ ಟಾಕುನ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 12:31
22 ತಿಳಿವುಗಳ ಹೋಲಿಕೆ  

ಈ ಲೋಕದ ದೇವರು ನಂಬದವರ ಮನಸ್ಸನ್ನು ಕುರುಡುಮಾಡಿರುತ್ತಾನೆ. ಆದ್ದರಿಂದ ದೇವರ ಸ್ವರೂಪವಾಗಿರುವ ಕ್ರಿಸ್ತ ಯೇಸುವಿನ ಸುವಾರ್ತೆಯ ಮಹಿಮೆಯ ಬೆಳಕನ್ನು ಅವರು ಕಾಣಲಾರರು.


ನಾವು ದೇವರ ಮಕ್ಕಳೆಂದೂ ಲೋಕವೆಲ್ಲವು ಕೆಡುಕನ ನಿಯಂತ್ರಣದಲ್ಲಿ ಇದೆ ಎಂದೂ ನಮಗೆ ಗೊತ್ತಿದೆ.


ಪಾಪದಲ್ಲಿ ಮುಂದುವರೆಯುವವರು ಸೈತಾನನಿಗೆ ಸೇರಿದವರು. ಏಕೆಂದರೆ ಆದಿಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದ್ದರಿಂದ ದೇವಪುತ್ರ ಯೇಸು ಸೈತಾನನ ಕೆಲಸಗಳನ್ನು ಲಯ ಮಾಡುವುದಕ್ಕೋಸ್ಕರವೇ ಪ್ರತ್ಯಕ್ಷರಾದರು.


ಏಕೆಂದರೆ, ನಾವು ಹೋರಾಡುವುದು ನರಮಾನವರೊಂದಿಗಲ್ಲ, ರಾಜತ್ವಗಳ ಮೇಲೆಯೂ ಅಧಿಕಾರಿಗಳ ಮೇಲೆಯೂ ಈ ಲೋಕದ ಅಂಧಕಾರದ ಅಧಿಪತಿಗಳ ಮೇಲೆಯೂ ಆಕಾಶಮಂಡಲದಲ್ಲಿರುವ ದುರಾತ್ಮಗಳ ಸೇನೆಗಳ ಮೇಲೆಯೂ ಆಗಿದೆ.


ಇನ್ನು ಮೇಲೆ ನಾನು ನಿಮ್ಮೊಂದಿಗೆ ಹೆಚ್ಚು ವಿಷಯಗಳನ್ನು ಮಾತನಾಡುವುದಿಲ್ಲ. ಏಕೆಂದರೆ ಇಹಲೋಕದ ಅಧಿಪತಿಯು ಬರಲಿದ್ದಾನೆ. ನನ್ನಲ್ಲಿ ಅವನಿಗೆ ಸೇರಿದ್ದು ಒಂದೂ ಇರುವುದಿಲ್ಲ.


ಮಕ್ಕಳು ರಕ್ತಮಾಂಸಧಾರಿಗಳು ಆಗಿರುವುದರಿಂದ ಯೇಸು ತಮ್ಮ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ, ಸೈತಾನನನ್ನು ನಾಶಮಾಡುವುದಕ್ಕೂ


ಕ್ರಿಸ್ತ ಯೇಸುವು ಆಳುವ ಅದೃಶ್ಯ ಶಕ್ತಿಗಳನ್ನೂ ಅಧಿಕಾರಗಳನ್ನೂ ನಿರಾಯುಧರನ್ನಾಗಿ ಮಾಡಿ ಶಿಲುಬೆಯಲ್ಲಿ ಅವುಗಳ ಮೇಲೆ ಜಯಹೊಂದಿ, ಬಹಿರಂಗವಾಗಿ ಪ್ರದರ್ಶಿಸಿದರು.


ಪ್ರಿಯ ಮಕ್ಕಳೇ, ನೀವು ದೇವರಿಗೆ ಸೇರಿದವರಾಗಿದ್ದೀರಿ, ಸುಳ್ಳು ಪ್ರವಾದಿಗಳನ್ನು ಜಯಿಸಿದ್ದೀರಿ. ಏಕೆಂದರೆ ನಿಮ್ಮಲ್ಲಿರುವ ದೇವರು ಲೋಕದಲ್ಲಿ ಇರುವವನಿಗಿಂತ ದೊಡ್ಡವರಾಗಿದ್ದಾರೆ.


ನಾನು ದೇವರ ಆತ್ಮನಿಂದ ದೆವ್ವಗಳನ್ನು ಓಡಿಸುವುದಾದರೆ ದೇವರ ರಾಜ್ಯವು ನಿಸ್ಸಂದೇಹವಾಗಿ ನಿಮ್ಮ ಬಳಿಗೆ ಬಂದಿದೆಯಲ್ಲಾ.


ನಾನು ನಿನಗೂ ಸ್ತ್ರೀಗೂ ನಿಮ್ಮ ಸಂತಾನಕ್ಕೂ ಆಕೆಯ ಸಂತಾನಕ್ಕೂ ವೈರತ್ವವನ್ನು ಇಡುವೆನು. ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು ಕಚ್ಚುವಿ.”


ನೀನು ಅವರ ಕಣ್ಣುಗಳನ್ನು ತೆರೆದು, ಅವರನ್ನು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಸಿ ಪಾಪಕ್ಷಮಾಪಣೆಯನ್ನು ಪಡೆಯುವಂತೆ ಮಾಡಿ, ನನ್ನಲ್ಲಿ ವಿಶ್ವಾಸವಿದ್ದು ಶುದ್ಧೀಕರಣ ಹೊಂದಿದವರ ಮಧ್ಯದಲ್ಲಿ ಹಕ್ಕುಬಾಧ್ಯತೆಯನ್ನು ಪಡೆಯುವಂತೆ ಮಾಡಬೇಕೆಂದು ನಿನ್ನನ್ನು ಕಳುಹಿಸುತ್ತಿದ್ದೇನೆ,’ ಎಂದರು.


ಶೂರನ ಕೈಯೊಳಗಿಂದ ಕೊಳ್ಳೆಯನ್ನು ತೆಗೆದುಕೊಳ್ಳಬಹುದೋ? ಭಯಂಕರನಿಂದ ಸೆರೆಯವರನ್ನು ಬಿಡಿಸಬಹುದೋ?


ಆ ತೀರ್ಪು ಏನೆಂದರೆ: ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕೃತ್ಯಗಳು ಕೆಟ್ಟವುಗಳಾಗಿರುವುದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿ ಮಾಡಿದರು.


ಯೇಸು, “ಕುರುಡರು ನೋಡುವಂತೆಯೂ ನೋಡುವವರು ಕುರುಡರಾಗುವಂತೆಯೂ ನಾನು ನ್ಯಾಯತೀರ್ಪು ಮಾಡುವುದಕ್ಕಾಗಿ ಈ ಲೋಕಕ್ಕೆ ಬಂದಿದ್ದೇನೆ,” ಎಂದರು.


ಜ್ಞಾನಿಯಾದ ಮನುಷ್ಯನೆಲ್ಲಿ? ಪಂಡಿತನು ಎಲ್ಲಿ? ಈ ಕಾಲದ ತತ್ವಜ್ಞಾನಿ ಎಲ್ಲಿ? ಈ ಲೋಕದ ಜ್ಞಾನವನ್ನು ದೇವರು ಬುದ್ದಿಹೀನತೆಯನ್ನಾಗಿ ಮಾಡಿದ್ದಾರಲ್ಲವೇ?


ಈ ಪ್ರಪಂಚವು ತನ್ನ ಜ್ಞಾನದ ಮೂಲಕ ದೇವರನ್ನು ಅರಿತುಕೊಳ್ಳಲಿಲ್ಲ; ಆದ್ದರಿಂದ ದೇವರ ಜ್ಞಾನದಿಂದ, ನಂಬಿದವರನ್ನು ಪ್ರಸಂಗದ ಬುದ್ದಿಹೀನತೆಯಿಂದ ರಕ್ಷಿಸುವುದು ದೇವರಿಗೆ ಮೆಚ್ಚುಗೆಯಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು