ಯೋಹಾನ 12:42 - ಕನ್ನಡ ಸಮಕಾಲಿಕ ಅನುವಾದ42 ಆದರೂ ಅಧಿಕಾರಿಗಳಲ್ಲಿ ಅನೇಕರು ಆ ಸಮಯದಲ್ಲಿ ಯೇಸುವನ್ನು ನಂಬಿದರು. ಆದರೆ ಫರಿಸಾಯರ ನಿಮಿತ್ತ ತಾವು ಸಭಾಮಂದಿರದಿಂದ ಬಹಿಷ್ಕಾರ ಆಗಬಾರದೆಂದು ಅವರು ತಮ್ಮ ನಂಬಿಕೆಯನ್ನು ಬಹಿರಂಗವಾಗಿ ಅರಿಕೆ ಮಾಡಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201942 ಆದರೂ ಹಿರೀಸಭೆಯವರಲ್ಲಿಯೂ ಸಹ ಅನೇಕರು ಆತನನ್ನು ನಂಬಿದರು, ಆದರೆ ತಮಗೆ ಸಭೆಯಿಂದ ಬಹಿಷ್ಕಾರವಾದೀತೆಂದು, ಫರಿಸಾಯರ ನಿಮಿತ್ತ ಅವರು ಬಹಿರಂಗವಾಗಿ ಅದನ್ನು ಜನರ ಮುಂದೆ ಅರಿಕೆಮಾಡಿಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)42 ಯೆಹೂದ್ಯರಲ್ಲಿ ಹಲವುಮಂದಿ ಮುಖಂಡರಿಗೆ ಯೇಸುವಿನಲ್ಲಿ ವಿಶ್ವಾಸಮೂಡಿತು. ಆದರೆ ಫರಿಸಾಯರು ಪ್ರಾರ್ಥನಾಮಂದಿರಗಳಿಂದ ತಮಗೆ ಬಹಿಷ್ಕಾರ ಹಾಕಿಯಾರೆಂಬ ಅಂಜಿಕೆಯ ಕಾರಣ ಅವರು ತಮ್ಮ ವಿಶ್ವಾಸವನ್ನು ಬಯಲುಮಾಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)42 ಆದರೂ ಹಿರೀಸಭೆಯವರಲ್ಲಿಯೂ ಅನೇಕರು ಆತನನ್ನು ನಂಬಿದರು. ಆದರೆ ತಮಗೆ ಸಭೆಯಿಂದ ಬಹಿಷ್ಕಾರವಾದೀತೆಂದು ಫರಿಸಾಯರಿಗೆ ಅಂಜಿಕೊಂಡು ಅದನ್ನು ಜನರ ಮುಂದೆ ಹೇಳಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್42 ಆದರೆ ಅನೇಕ ಜನರು ಯೇಸುವಿನಲ್ಲಿ ನಂಬಿಕೆ ಇಟ್ಟರು. ಅನೇಕ ಯೆಹೂದ್ಯನಾಯಕರು ಸಹ ಯೇಸುವಿನಲ್ಲಿ ನಂಬಿಕೆಯಿಟ್ಟರು. ಆದರೆ ಅವರು ಫರಿಸಾಯರಿಗೆ ಹೆದರಿಕೊಂಡು ತಮ್ಮ ನಂಬಿಕೆಯನ್ನು ಬಹಿರಂಗಪಡಿಸಲಿಲ್ಲ. ತಮ್ಮನ್ನು ಫರಿಸಾಯರು ಸಭಾಮಂದಿರದಿಂದ ಬಹಿಷ್ಕರಿಸುತ್ತಾರೆ ಎಂಬ ಭಯ ಅವರಿಗಿತ್ತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್42 ಉಲ್ಲೆ ಜುದೆವಾಂಚೆ ಅದಿಕಾರಿಬಿ ಜೆಜುವರ್ತಿ ವಿಶ್ವಾಸ್ ಕರಿತ್ ಖರೆ ಫಾರಿಜೆವಾಕ್ನಿ ಲಾಗುನ್ ತೆನಿ ತೊ ವಿಶ್ವಾಸ್ ದಾಕ್ವುನ್ ದಿ ನಸಿತ್ ಅಶೆಚ್ ಸಿನಾಗೊಗಾನಿತ್ನಾ ಭಾಯ್ರ್ ಘಾಲ್ತಲೆ ತೆಂಕಾ ನಕ್ಕೊ ಹೊಲ್ಲೆ. ಅಧ್ಯಾಯವನ್ನು ನೋಡಿ |