ಯೋಹಾನ 12:43 - ಕನ್ನಡ ಸಮಕಾಲಿಕ ಅನುವಾದ43 ಅವರು ದೇವರಿಂದ ಬರುವ ಹೊಗಳಿಕೆಗಿಂತ ಮನುಷ್ಯರ ಹೊಗಳಿಕೆಯನ್ನೇ ಹೆಚ್ಚಾಗಿ ಪ್ರೀತಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201943 ಅವರು ದೇವರಿಂದ ಬರುವ ಹೊಗಳಿಕೆಗಿಂತ ಮನುಷ್ಯರಿಂದ ಬರುವ ಹೊಗಳಿಕೆ ಅವರಿಗೆ ಇಷ್ಟವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)43 ದೇವರಿಂದ ದೊರಕುವ ಮನ್ನಣೆಗಿಂತ ಮಾನವರಿಂದ ಸಿಗುವ ಮನ್ನಣೆಯೇ ಅವರಿಗೆ ಪ್ರಿಯವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)43 ಯಾಕಂದರೆ ದೇವರಿಂದ ಬರುವ ಮಾನಕ್ಕಿಂತ ಮನುಷ್ಯರಿಂದ ಬರುವ ಮಾನವೇ ಅವರಿಗೆ ಇಷ್ಟವಾಗಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್43 ಈ ಜನರು ದೇವರ ಹೊಗಳಿಕೆಗಿಂತಲೂ ಜನರ ಹೊಗಳಿಕೆಯನ್ನೇ ಹೆಚ್ಚಾಗಿ ಪ್ರೀತಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್43 ತೆನಿ ದೆವಾಚ್ಯಾ ಶಾಬಾಸ್ಕಿನ್ಬಿ ಜಾಸ್ತಿ ಮಾನ್ಸಾಚ್ಯಾ ಶಾಬಾಸ್ಕಿಕ್ ಪ್ರೆಮ್ ಕರ್‍ತಾತ್. ಅಧ್ಯಾಯವನ್ನು ನೋಡಿ |
“ಆದ್ದರಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ, ‘ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಯೆಹೋವ ದೇವರು ಹೇಳುವುದೇನೆಂದರೆ: ನನಗೆ ಅದು ದೂರವಾಗಿರಲಿ. ಏಕೆಂದರೆ ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು. ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು.