ಯೋಹಾನ 12:6 - ಕನ್ನಡ ಸಮಕಾಲಿಕ ಅನುವಾದ6 ಅವನು ಬಡವರ ಹಿತಚಿಂತನೆಯಿಂದ ಹೀಗೆ ಹೇಳಲಿಲ್ಲ. ಆದರೆ ಅವನು ಕಳ್ಳನಾಗಿದ್ದು, ಹಣದ ಚೀಲವನ್ನು ಇಟ್ಟುಕೊಂಡು ಅದರಲ್ಲಿ ಹಾಕಿದ್ದನ್ನು ಕದ್ದುಕೊಳ್ಳುತ್ತಿದ್ದನು. ಆದ್ದರಿಂದಲೇ ಇದನ್ನು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅವನು ಬಡವರ ಮೇಲಿನ ಕನಿಕರದಿಂದ ಹೀಗೆ ಹೇಳಲಿಲ್ಲ. ಆದರೆ ಅವನು ಕಳ್ಳನಾಗಿದ್ದು ಹಣದ ಚೀಲವನ್ನು ತನ್ನ ಬಳಿಯಲ್ಲಿ ಇಟ್ಟುಕೊಂಡಿರಲಾಗಿ ಅದರಲ್ಲಿ ಹಾಕಿದ್ದನ್ನು ತನ್ನ ಸ್ವಂತ ಉಪಯೋಗಕ್ಕಾಗಿ ತೆಗೆದುಕೊಳ್ಳುತ್ತಿದ್ದನು, ಆದುದರಿಂದಲೇ ಹೀಗೆ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಬಡವರ ಹಿತಚಿಂತನೆಯಿಂದೇನೂ ಅವನು ಹೀಗೆ ಹೇಳಲಿಲ್ಲ. ತನ್ನ ವಶದಲ್ಲಿ ಇಡಲಾಗಿದ್ದ ಹಣದ ಚೀಲದಿಂದ ಸ್ವಂತ ಉಪಯೋಗಕ್ಕಾಗಿ ಬಳಸುತ್ತಿದ್ದ ಕಳ್ಳ ಅವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅವನು ಬಡವರಿಗೋಸ್ಕರ ಚಿಂತಿಸಿ ಇದನ್ನು ಹೇಳಲಿಲ್ಲ; ಅವನು ಕಳ್ಳನಾಗಿದ್ದು ತನ್ನ ವಶದಲ್ಲಿದ್ದ ಅವರ ಹಣದ ಚೀಲದಲ್ಲಿ ಹಾಕಿದ್ದನ್ನು ತಕ್ಕೊಳ್ಳುವವನಾಗಿದ್ದದರಿಂದಲೇ ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆದರೆ ಯೂದನಿಗೆ ಬಡವರ ಬಗ್ಗೆ ನಿಜವಾಗಿಯೂ ಚಿಂತೆಯಿರಲಿಲ್ಲ. ಅವನು ಕಳ್ಳನಾಗಿದ್ದುದರಿಂದ ಹಾಗೆ ಹೇಳಿದನು. ಶಿಷ್ಯಸಮುದಾಯಕ್ಕೋಸ್ಕರವಿದ್ದ ಹಣದ ಪೆಟ್ಟಿಗೆಯು ಅವನ ವಶದಲ್ಲಿತ್ತು. ಅವನು ಆಗಾಗ್ಗೆ ಆ ಪೆಟ್ಟಿಗೆಯಿಂದ ಹಣವನ್ನು ಕದ್ದುಕೊಳ್ಳುತ್ತಿದ್ದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ತೆಕಾ ಗರಿಬಾಂಚಿ ಕಾಳ್ಜಿ ಹೊತ್ತಿ ಮನುನ್ ತೆನಿ ಅಶೆಚ್ ಸಾಂಗುಕ್ನಾ, ಕಶ್ಯಾಕ್ ಮಟ್ಲ್ಯಾರ್ ತೊ ಎಕ್ ಚೊರ್ ಹೊತ್ತೊ. ತೆಚೆಕ್ಡೆ ಪೈಶಾಂಚಿ ಪಿಶ್ವಿ ಹೊತ್ತಿ ಅನಿ ತ್ಯಾತುರ್‍ಲೆ ಪೈಸೆ ತೊ ಅಪ್ನಾಚ್ಯಾ ಸ್ವತಾಚ್ಯಾ ಕಾಮಾಸಾಟ್ನಿ ವಾಪ್ರಿ. ಅಧ್ಯಾಯವನ್ನು ನೋಡಿ |