Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 13:1 - ಕನ್ನಡ ಸಮಕಾಲಿಕ ಅನುವಾದ

1 ಅಂದು ಪಸ್ಕಹಬ್ಬದ ಹಿಂದಿನ ದಿನವಾಗಿತ್ತು. ಯೇಸು ತಾವು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗಬೇಕಾದ ಸಮಯ ಬಂತೆಂದು ತಿಳಿದು, ಈ ಲೋಕದಲ್ಲಿದ್ದ ತಮ್ಮವರನ್ನು ಪ್ರೀತಿಸುತ್ತಿದ್ದ ಆ ಪ್ರೀತಿಯ ಪರಿಪೂರ್ಣತೆಯನ್ನು ಈಗ ತೋರಿಸಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಪಸ್ಕಹಬ್ಬದ ಹಿಂದಿನ ದಿನ ಯೇಸು, ತಾನು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗಬೇಕಾದ ತನ್ನ ಗಳಿಗೆ ಬಂದಿತೆಂದು ತಿಳಿದುಕೊಂಡು, ಈ ಲೋಕದಲ್ಲಿರುವ ತನ್ನವರನ್ನು ಪ್ರೀತಿಸಿ, ಅವರನ್ನು ಕೊನೆಯವರೆಗೂ ಪ್ರೀತಿಸುತ್ತಾ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅಂದು ಪಾಸ್ಕಹಬ್ಬದ ಹಿಂದಿನ ದಿನ. ತಾವು ಈ ಲೋಕವನ್ನು ಬಿಟ್ಟು ಪಿತನ ಬಳಿಗೆ ಹೋಗಬೇಕಾದ ಗಳಿಗೆ ಬಂದಿರುವುದು ಎಂದು ಯೇಸು ಸ್ವಾಮಿಗೆ ತಿಳಿದಿತ್ತು. ಈ ಲೋಕದಲ್ಲಿದ್ದ ತಮ್ಮವರನ್ನು ಯಾವಾಗಲೂ ಪ್ರೀತಿಸುತ್ತಿದ್ದ ಅವರು ಆ ಪ್ರೀತಿಯ ಪರಮಾವಧಿಯನ್ನು ಈಗ ತೋರಿಸಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಪಸ್ಕಹಬ್ಬದ ಮುಂದೆ ಯೇಸು ತಾನು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗಬೇಕಾದ ಕಾಲ ಬಂತೆಂದು ತಿಳುಕೊಂಡು ಲೋಕದಲ್ಲಿರುವ ತನ್ನವರನ್ನು ಪ್ರೀತಿಸಿ ಪರಿಪೂರ್ಣವಾಗಿ ಅವರನ್ನು ಪ್ರೀತಿಸುತ್ತಾ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೂದ್ಯರ ಪಸ್ಕಹಬ್ಬವು ಬಹು ಸಮೀಪವಾಗಿತ್ತು. ತಾನು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುವ ಸಮಯ ಬಂದಿರುವುದಾಗಿ ಯೇಸುವಿಗೆ ತಿಳಿದಿತ್ತು. ಈ ಲೋಕದಲ್ಲಿದ್ದ ತನ್ನವರನ್ನು ಆತನು ಯಾವಾಗಲೂ ಪ್ರೀತಿಸುತ್ತಿದ್ದನು. ಈಗಲಾದರೋ ಅವರ ಮೇಲೆ ತನಗಿರುವ ಅಪಾರ ಪ್ರೀತಿಯನ್ನು ತೋರಿಸುವ ಕಾಲ ಆತನಿಗೆ ಬಂದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಪಾಸ್ಕಾಚ್ಯಾ ಸನಾಚ್ಯಾ ಅದ್ಲೊ ದಿಸ್ ತೊ, ಜೆಜುಕ್ ಅನಿ ಜುವಾಂವ್ ಅಪ್ನಿ ಹ್ಯೊ ಜಗ್ ಸೊಡುನ್ ಬಾಬಾಕ್ಡೆ ಜಾತಲೊ ಎಳ್ ಯೆಲೊ ಮನುನ್ ಗೊತ್ತ್ ಹೊತ್ತೆ, ಹ್ಯಾ ಜಗಾತ್ ಅಪ್ನಾಚೆ ಸ್ವತಾಚೆ ಮನುನ್ ಹೊತ್ತ್ಯಾಂಚೊ ತೆನಿ ಲೈ ಪ್ರೆಮ್ ಕರ್‍ತಲೊ ತೆನಿ ಸೊಡುಕ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 13:1
44 ತಿಳಿವುಗಳ ಹೋಲಿಕೆ  

ಯೇಸು ಅವರಿಗೆ, “ಮನುಷ್ಯಪುತ್ರನು ಮಹಿಮೆಪಡುವ ಸಮಯ ಬಂದಿದೆ.


ದೇವರು ಮೊದಲು ನಮ್ಮನ್ನು ಪ್ರೀತಿಸಿದ್ದರಿಂದಲೇ ನಾವು ದೇವರನ್ನು ಪ್ರೀತಿಸುತ್ತೇವೆ.


“ನಾನು ನಿಮಗೊಂದು ಹೊಸ ಆಜ್ಞೆಯನ್ನು ಕೊಡುತ್ತೇನೆ: ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕು. ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವೂ ಒಬ್ಬರನ್ನೊಬ್ಬರು ಪ್ರೀತಿಸಬೇಕು.


ನಾನು ತಂದೆಯಿಂದ ಹೊರಟು ಈ ಲೋಕಕ್ಕೆ ಬಂದಿದ್ದೇನೆ. ತಿರುಗಿ ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುತ್ತಿದ್ದೇನೆ,” ಎಂದರು.


ತಂದೆಯು ತನ್ನ ಕೈಯಲ್ಲಿ ಎಲ್ಲವನ್ನೂ ಕೊಟ್ಟಿದ್ದಾರೆಂದೂ ತಾನು ದೇವರ ಬಳಿಯಿಂದ ಬಂದು ಮರಳಿ ದೇವರ ಬಳಿಗೆ ಹೋಗುತ್ತೇನೆಂದೂ ಯೇಸುವಿಗೆ ತಿಳಿದಿತ್ತು.


ಆಗ ಯೇಸು ತಮಗೆ ಸಂಭವಿಸುವುದನ್ನೆಲ್ಲಾ ತಿಳಿದುಕೊಂಡು ಮುಂದಕ್ಕೆ ಹೋಗಿ ಅವರಿಗೆ, “ನೀವು ಯಾರನ್ನು ಹುಡುಕುತ್ತೀರಿ?” ಎಂದು ಕೇಳಲು,


ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ದಿನದಲ್ಲಿ ನೀವು ನಿರ್ದೋಷಿಗಳಾಗಿರುವಂತೆ ಅವರು ಕೊನೆಯತನಕವೂ ನಿಮ್ಮನ್ನು ಬಲಪಡಿಸಿ ಕಾಯುವರು.


ನಾನು ಲೋಕದವನಲ್ಲದೆ ಇರುವಂತೆ ಇವರೂ ಲೋಕದವರಲ್ಲ.


ಯೇಸು ಇಷ್ಟೆಲ್ಲಾ ಮಾತನಾಡಿ ಆಕಾಶದ ಕಡೆಗೆ ಕಣ್ಣೆತ್ತಿ ನೋಡಿ, “ತಂದೆಯೇ, ಸಮಯ ಬಂದಿದೆ. ನಿಮ್ಮ ಪುತ್ರನು ನಿಮ್ಮನ್ನು ಮಹಿಮೆಪಡಿಸುವುದಕ್ಕಾಗುವಂತೆ ಆತನನ್ನು ಮಹಿಮೆಪಡಿಸಿರಿ.


ನಂಬಿಗಸ್ತ ಸಾಕ್ಷಿಯೂ ಸತ್ತವರೊಳಗಿಂದ ಪ್ರಥಮವಾಗಿ ಜೀವಂತವಾಗಿ ಎದ್ದು ಬಂದವರೂ ಭೂರಾಜರಿಗೆ ಒಡೆಯರೂ ಆಗಿರುವ ಕ್ರಿಸ್ತ ಯೇಸುವಿನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ಅವರೇ ನಮ್ಮನ್ನು ಪ್ರೀತಿಸುವವರೂ ತಮ್ಮ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದವರೂ ಆಗಿದ್ದಾರೆ.


ಮೊದಲಿನಿಂದಿರುವ ನಮ್ಮ ನಿರೀಕ್ಷೆಯನ್ನು ಅಂತ್ಯದವರೆಗೂ ನಾವು ದೃಢವಾಗಿ ಹಿಡಿದುಕೊಳ್ಳುವುದಾದರೆ ಕ್ರಿಸ್ತ ಯೇಸುವಿನ ಭಾಗಿಗಳಾಗಿದ್ದೇವಲ್ಲಾ!


ತಂದೆಯೇ, ಲೋಕವು ಉಂಟಾಗುವದಕ್ಕಿಂತ ಮುಂಚೆ ನಿಮ್ಮೊಡನೆ ನನಗಿದ್ದ ಮಹಿಮೆಯಿಂದ ಈಗ ನೀವು ನನ್ನನ್ನು ಮಹಿಮೆಪಡಿಸಿರಿ.


ತರುವಾಯ ಯೇಸು ತಮ್ಮ ಶಿಷ್ಯರ ಬಳಿಗೆ ಬಂದು ಅವರಿಗೆ, “ಇನ್ನೂ ವಿಶ್ರಮಿಸುತ್ತಿದ್ದೀರಾ? ಇಗೋ, ಮನುಷ್ಯಪುತ್ರನಾದ ನಾನು ಪಾಪಿಗಳ ಕೈವಶವಾಗುವ ಸಮಯವು ಸಮೀಪಿಸಿದೆ.


ಆದ್ದರಿಂದ, ನೀವು ನಿಮ್ಮ ಮನಸ್ಸನ್ನು ಸಿದ್ಧಮಾಡಿಕೊಂಡು, ಸ್ವಸ್ಥಚಿತ್ತರಾಗಿದ್ದು ಕ್ರಿಸ್ತ ಯೇಸು ಪ್ರತ್ಯಕ್ಷರಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನಿರೀಕ್ಷೆಯನ್ನು ಅಂತ್ಯದವರೆಗೆ ಇಡಿರಿ.


ಅಂತ್ಯದವರೆಗೆ ನೀವು ನಿಮ್ಮ ನಿರೀಕ್ಷೆಯ ಪೂರ್ಣ ನಿಶ್ಚಯವನ್ನು ಗ್ರಹಿಸುವುದಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರು ಅದೇ ಆಸಕ್ತಿಯನ್ನು ತೋರಿಸಬೇಕೆಂದು ನಾವು ಅಪೇಕ್ಷಿಸುತ್ತೇವೆ.


ಕ್ರಿಸ್ತ ಯೇಸುವಾದರೋ ಮಗನಾಗಿ ದೇವರ ಮನೆಯ ಮೇಲೆ ನಂಬಿಗಸ್ತರಾಗಿದ್ದಾರೆ. ಆದುದರಿಂದ ನಾವು ನಮ್ಮ ಧೈರ್ಯವನ್ನೂ ನಾವು ಹೊಗಳಿಕೊಳ್ಳುವ ನಿರೀಕ್ಷೆಯನ್ನೂ ಕಡೆಯತನಕ ದೃಢವಾಗಿ ಹಿಡಿದುಕೊಂಡಿದ್ದರೆ ನಾವೇ ದೇವರ ಮನೆಯಾಗಿರುತ್ತೇವೆ.


ಇವೆಲ್ಲವುಗಳಲ್ಲಿಯೂ ನಾವು ನಮ್ಮನ್ನು ಪ್ರೀತಿಸಿದಾತನ ಮೂಲಕ ಜಯ ಹೊಂದಿದವರಿಗಿಂತಲೂ ಹೆಚ್ಚಿನವರಾಗಿದ್ದೇವೆ.


ನೀವು ನನ್ನನ್ನು ಪ್ರೀತಿಸಿದಂಥ ಪ್ರೀತಿಯು ಇವರಲ್ಲಿ ಇರಬೇಕೆಂತಲೂ ನಾನು ಅವರಲ್ಲಿ ಇರುವಂತೆಯೂ ನಾನು ಅವರಿಗೆ ನಿಮ್ಮ ಹೆಸರನ್ನು ತಿಳಿಸಿದ್ದೇನೆ, ಇನ್ನೂ ತಿಳಿಸುವೆನು,” ಎಂದರು.


“ ‘ನಾನು ಹೋಗಿ ತಿರುಗಿ ನಿಮ್ಮ ಬಳಿಗೆ ಬರುತ್ತೇನೆ,’ ಎಂದು ನಾನು ನಿಮಗೆ ಹೇಳಿದ್ದನ್ನು ಕೇಳಿದ್ದೀರಿ. ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ ತಂದೆಯ ಬಳಿಗೆ ಹೋಗುತ್ತೇನೆಂದು ಹೇಳಿದ್ದಕ್ಕೆ ಸಂತೋಷ ಪಡುತ್ತಿದ್ದಿರಿ. ಏಕೆಂದರೆ ತಂದೆಯು ನನಗಿಂತಲೂ ದೊಡ್ಡವರು.


ಆಗ ಯೆಹೂದ್ಯರ ಪಸ್ಕಹಬ್ಬವು ಹತ್ತಿರವಾಗಿತ್ತು. ಅನೇಕರು ತಮ್ಮನ್ನು ಶುದ್ಧಿ ಮಾಡಿಕೊಳ್ಳುವುದಕ್ಕಾಗಿ ಪಸ್ಕಕ್ಕೆ ಮುಂಚೆ ಹಳ್ಳಿಗಳಿಂದ ಯೆರೂಸಲೇಮಿಗೆ ಹೋದರು.


ಆಗ ಅವರು ಯೇಸುವನ್ನು ಬಂಧಿಸಲು ಪ್ರಯತ್ನಿಸಿದರು. ಆದರೆ ಅವರ ಸಮಯ ಇನ್ನೂ ಬಾರದೆ ಇದ್ದುದರಿಂದ ಅವರ ಮೇಲೆ ಯಾರೂ ಕೈಹಾಕಲಿಲ್ಲ.


ಅದಕ್ಕೆ ಯೇಸು ಅವರಿಗೆ, “ನನ್ನ ಸಮಯವು ಇನ್ನೂ ಬಂದಿಲ್ಲ. ನಿಮ್ಮ ಸಮಯವು ಯಾವಾಗಲೂ ಸಿದ್ಧವಾಗಿದೆ.


ಆಗ ಯೆಹೂದ್ಯರ ಪಸ್ಕಹಬ್ಬವು ಹತ್ತಿರವಾಗಿತ್ತು.


ನಾನು ನಿಮ್ಮ ಸಂಗಡ ಪ್ರತಿದಿನವೂ ದೇವಾಲಯದಲ್ಲಿದ್ದಾಗ, ನೀವು ನನ್ನನ್ನು ಹಿಡಿಯಲಿಲ್ಲ. ಆದರೆ ಇದು ನಿಮ್ಮ ಸಮಯ, ಅಂಧಕಾರ ದೊರೆತನ ಮಾಡುವ ಕಾಲ,” ಎಂದರು.


ಯೇಸು ತಾವು ಸ್ವರ್ಗಕ್ಕೆ ಏರಿಹೋಗುವ ಕಾಲ ಬಂದಾಗ, ಯೆರೂಸಲೇಮಿಗೆ ಹೋಗುವುದಕ್ಕಾಗಿ ತಮ್ಮ ಮನಸ್ಸನ್ನು ದೃಢಮಾಡಿಕೊಂಡು


ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಅನುಸರಿಸುವ ಹಾಗೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಎಲ್ಲಾ ದಿವಸ ನಾನು ನಿಮ್ಮ ಸಂಗಡ ಇರುತ್ತೇನೆ,” ಎಂದರು.


ಯೆಹೋವ ದೇವರು ಪೂರ್ವದಲ್ಲಿ ನನಗೆ ಕಾಣಿಸಿಕೊಂಡು, “ಹೌದು, ಶಾಶ್ವತ ಪ್ರೀತಿಯಿಂದ ನಿನ್ನನ್ನು ಪ್ರೀತಿಸಿದ್ದೇನೆ. ಕುಂದದ ದಯೆಯಿಂದಲೇ ನಿನ್ನನ್ನು ಸೆಳೆದುಕೊಂಡಿದ್ದೇನೆ.


ಯೇಸು ದೇವಾಲಯದ ಕಾಣಿಕೆ ಪೆಟ್ಟಿಗೆಗಳನ್ನಿಟ್ಟ ಸ್ಥಳದಲ್ಲಿ ಬೋಧಿಸುತ್ತಿದ್ದಾಗ ಈ ಮಾತುಗಳನ್ನು ಹೇಳಿದರು. ಆದರೆ ಯೇಸುವಿನ ಸಮಯ ಇನ್ನೂ ಬಾರದಿದ್ದ ಕಾರಣ ಯಾರೂ ಅವರನ್ನು ಬಂಧಿಸಲಿಲ್ಲ.


ಅವರ ಭೂಮಿಯ ವಾಸಸ್ಥಳದ ಭಾಗದಲ್ಲಿ ಸಂತೋಷಿಸುತ್ತಿದ್ದೆನು; ಮಾನವರೊಂದಿಗೆ ಆನಂದಿಸುತ್ತಿದ್ದೆನು.


ಯೆಹೂದ್ಯರ ಪಸ್ಕಹಬ್ಬವು ಹತ್ತಿರವಾದಾಗ ಯೇಸು ಯೆರೂಸಲೇಮಿಗೆ ಹೋದರು.


ಏಕೆಂದರೆ ಯೂದನು ಹಣದ ಚೀಲವನ್ನು ಇಟ್ಟುಕೊಂಡಿದ್ದರಿಂದ ಯೇಸು ಅವನಿಗೆ, ಹಬ್ಬಕ್ಕೆ ನಮಗೆ ಅವಶ್ಯವಾದವುಗಳನ್ನು ಕೊಂಡುಕೋ, ಎಂದೋ ಬಡವರಿಗೆ ಏನಾದರೂ ಕೊಡು ಎಂದೋ ಯೇಸು ಅವನಿಗೆ ಹೇಳಿದರೆಂದು ಅವರಲ್ಲಿ ಕೆಲವರು ಭಾವಿಸಿದರು.


ಆದರೆ ನಾನು ತಂದೆಯನ್ನು ಪ್ರೀತಿಸುತ್ತೇನೆಂದು ಲೋಕವು ತಿಳಿಯುವಂತೆ ತಂದೆ ನನಗೆ ಆಜ್ಞಾಪಿಸಿದಂತೆಯೇ ನಾನು ಮಾಡುತ್ತೇನೆ. “ಏಳಿರಿ, ನಾವು ಇಲ್ಲಿಂದ ಹೋಗೋಣ,” ಎಂದರು.


ಇದಾದ ಮೇಲೆ ಯೇಸು ಈಗ ಎಲ್ಲವೂ ಪೂರ್ತಿಯಾಗಿದೆಯೆಂದು ತಿಳಿದು, ಪವಿತ್ರ ವೇದದ ವಾಕ್ಯವು ನೆರವೇರುವಂತೆ, “ನನಗೆ ನೀರಡಿಕೆಯಾಗಿದೆ” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು