Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 13:21 - ಕನ್ನಡ ಸಮಕಾಲಿಕ ಅನುವಾದ

21 ಯೇಸು ಇವುಗಳನ್ನು ಹೇಳುತ್ತಾ ಆತ್ಮದಲ್ಲಿ ನೊಂದುಕೊಂಡವರಾಗಿ, “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನಿಮ್ಮಲ್ಲಿ ಒಬ್ಬನು ನನಗೆ ದ್ರೋಹ ಬಗೆಯುವನು,” ಎಂದು ಸ್ವಷ್ಟವಾಗಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಇದನ್ನು ಹೇಳುತ್ತಾ ಯೇಸು ಆತ್ಮದಲ್ಲಿ ನೊಂದುಕೊಂಡವನಾಗಿ, “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ; ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡಿದು ಕೊಡುತ್ತಾನೆ” ಎಂದು ಸಾಕ್ಷಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಇದೆಲ್ಲವನ್ನೂ ಹೇಳಿಯಾದ ಮೇಲೆ ಯೇಸು ಸ್ವಾಮಿ ಮನಸ್ಸಿನಲ್ಲಿ ಬಹಳವಾಗಿ ನೊಂದುಕೊಂಡರು. ಅವರು, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ; ನಿಮ್ಮಲ್ಲೊಬ್ಬನು ದ್ರೋಹ ಬಗೆದು ನನ್ನನ್ನು ಹಿಡಿದೊಪ್ಪಿಸುವನು,” ಎಂದು ಸ್ಪಷ್ಟವಾಗಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಇದನ್ನು ಹೇಳಿ ಯೇಸು ಆತ್ಮದಲ್ಲಿ ತತ್ತರಗೊಂಡು - ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡುಕೊಡುವನೆಂದು ಸ್ಪಷ್ಟವಾಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಯೇಸು ಈ ಸಂಗತಿಗಳನ್ನು ಹೇಳಿದ ಮೇಲೆ ಆತ್ಮದಲ್ಲಿ ತತ್ತರಗೊಂಡು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನಿಮ್ಮಲ್ಲಿ ಒಬ್ಬನು ನನಗೆ ದ್ರೋಹ ಮಾಡುವನು” ಎಂದು ಬಹಿರಂಗವಾಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಹೆ ಸಗ್ಳೆ ಸಾಂಗುನ್ ಸರಲ್ಲ್ಯಾ ಮಾನಾ, ಜೆಜು ದುಕಾನಿ ಭರಲ್ಲೊ ತನ್ನಾ ತೆನಿ “ಮಿಯಾ ತುಮ್ಕಾ ಖರೆ ಹೊತ್ತೆ ಸಾಂಗುಕ್ ಲಾಗ್ಲಾ, ತುಮ್ಚ್ಯಾತ್ಲೊ ಎಕ್ಲೊ ಮಾಕಾ ಘಾತ್‍ ಕರುನ್ ಧರುನ್ ದಿನಾರ್ ಹಾಯ್” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 13:21
17 ತಿಳಿವುಗಳ ಹೋಲಿಕೆ  

ಅವರು ಊಟಮಾಡುತ್ತಿದ್ದಾಗ ಯೇಸು, “ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ನಿಮ್ಮಲ್ಲಿ ಒಬ್ಬನು ನನಗೆ ದ್ರೋಹ ಮಾಡುವನು,” ಎಂದರು.


“ನಾನು ನಿಮ್ಮೆಲ್ಲರನ್ನು ಕುರಿತು ಮಾತನಾಡುತ್ತಿಲ್ಲ. ನಾನು ಆರಿಸಿಕೊಂಡವರನ್ನು ನಾನು ಬಲ್ಲೆನು. ಆದರೆ ‘ನನ್ನ ಸಂಗಡ ರೊಟ್ಟಿಯನ್ನು ತಿಂದವನೇ, ನನಗೆ ದ್ರೋಹ ಬಗೆದನು,’ ಎಂಬ ಪವಿತ್ರ ವಾಕ್ಯವು ನೆರವೇರಬೇಕಾಗಿದೆ.


ಅವರು ಕುಳಿತುಕೊಂಡು ಊಟಮಾಡುತ್ತಿದ್ದಾಗ ಯೇಸು, “ನನ್ನೊಂದಿಗೆ ಊಟಮಾಡುತ್ತಿರುವ ನಿಮ್ಮಲ್ಲಿ ಒಬ್ಬನು ನನಗೆ ದ್ರೋಹ ಬಗೆಯುವನು ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ,” ಎಂದರು.


“ಈಗ ನನ್ನ ಪ್ರಾಣವು ತತ್ತರಿಸುತ್ತದೆ. ನಾನೇನು ಹೇಳಲಿ? ‘ತಂದೆಯೇ, ಈ ಗಳಿಗೆಯಿಂದ ನನ್ನನ್ನು ತಪ್ಪಿಸಿರಿ’ ಎಂದು ಹೇಳಲೋ? ಇಲ್ಲ. ನಾನು ಈ ಗಳಿಗೆಗಾಗಿಯೇ ಬಂದಿದ್ದೇನಲ್ಲಾ?


ಆಕೆಯು ಅಳುವುದನ್ನು ಮತ್ತು ಆಕೆಯೊಂದಿಗೆ ಬಂದ ಯೆಹೂದ್ಯರು ಅಳುವುದನ್ನು ಯೇಸು ಕಂಡಾಗ ಆತ್ಮದಲ್ಲಿ ನೊಂದುಕೊಂಡು ಕಳವಳಗೊಂಡವರಾಗಿ,


ಅವರು ನಮ್ಮಿಂದ ಹೊರಟು ಹೋದರು. ಆದರೆ ಅವರು ನಮ್ಮವರಾಗಿರಲಿಲ್ಲ. ಏಕೆಂದರೆ ಅವರು ನಮ್ಮವರಾಗಿದ್ದರೆ, ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟು ಹೋದುದರಿಂದ ಅವರೆಲ್ಲರೂ ನಮ್ಮವರಲ್ಲವೆಂಬುದು ತೋರಿಬಂತು.


ಪೌಲನು ಅವರಿಗಾಗಿ ಕಾಯುತ್ತಾ ಅಥೇನೆಯಲ್ಲಿ ಇದ್ದಾಗ, ಆ ಪಟ್ಟಣವು ವಿಗ್ರಹಗಳಿಂದ ತುಂಬಿಕೊಂಡಿದ್ದನ್ನು ಕಂಡು, ಅವನ ಆತ್ಮವು ಅವನೊಳಗೆ ಕುದಿಯಿತು.


ಸಾಯಂಕಾಲ ಊಟದ ಸಮಯದಲ್ಲಿ ಯೇಸುವನ್ನು ಹಿಡಿದುಕೊಡಬೇಕೆಂಬ ಯೋಚನೆಯನ್ನು, ಸೈತಾನನು ಸೀಮೋನನ ಮಗನಾದ ಇಸ್ಕರಿಯೋತ ಯೂದನ ಹೃದಯದಲ್ಲಿ ಹಾಕಿದ್ದನು.


ಯೇಸು ತಿರುಗಿ ತಮ್ಮಲ್ಲಿ ನೊಂದುಕೊಳ್ಳುತ್ತಾ ಸಮಾಧಿಗೆ ಬಂದರು. ಅದು ಗವಿಯಾಗಿತ್ತು; ಒಂದು ಕಲ್ಲು ಅದರ ಬಾಗಿಲಿಗೆ ಮುಚ್ಚಲಾಗಿತ್ತು.


ಯೇಸು ಕಣ್ಣೀರಿಟ್ಟರು.


ಆಗ ಯೇಸು ಸುತ್ತಲೂ ಇದ್ದವರನ್ನು ಕೋಪದಿಂದ ನೋಡಿ, ಅವರ ಹೃದಯಕಾಠಿಣ್ಯಕ್ಕಾಗಿ ದುಃಖಪಟ್ಟು, ಆ ಮನುಷ್ಯನಿಗೆ, “ನಿನ್ನ ಕೈಚಾಚು,” ಎಂದು ಹೇಳಿದರು. ಅವನು ಕೈಚಾಚಿದಾಗ, ಅವನ ಕೈ ಸಂಪೂರ್ಣವಾಗಿ ಗುಣವಾಯಿತು.


ಯೇಸು ಅವರಿಗೆ, “ನನ್ನ ಪ್ರಾಣವು ಸಾಯುವಷ್ಟು ತೀವ್ರವಾದ ದುಃಖಕ್ಕೆ ಒಳಗಾಗಿದೆ. ನೀವು ಇಲ್ಲೇ ಇದ್ದು ನನ್ನೊಡನೆ ಎಚ್ಚರವಾಗಿರಿ,” ಎಂದರು.


ಆಗ ಶಿಷ್ಯರು ಗಲಿಬಿಲಿಗೊಂಡು, “ಯೇಸು ಯಾರನ್ನು ಕುರಿತು ಹೇಳಿದರು?” ಎಂದು ಒಬ್ಬರನ್ನೊಬ್ಬರು ನೋಡುವವರಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು