Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 13:3 - ಕನ್ನಡ ಸಮಕಾಲಿಕ ಅನುವಾದ

3 ತಂದೆಯು ತನ್ನ ಕೈಯಲ್ಲಿ ಎಲ್ಲವನ್ನೂ ಕೊಟ್ಟಿದ್ದಾರೆಂದೂ ತಾನು ದೇವರ ಬಳಿಯಿಂದ ಬಂದು ಮರಳಿ ದೇವರ ಬಳಿಗೆ ಹೋಗುತ್ತೇನೆಂದೂ ಯೇಸುವಿಗೆ ತಿಳಿದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ತಂದೆಯು ತನ್ನ ಕೈಯಲ್ಲಿ ಎಲ್ಲದರ ಮೇಲೆ ಅಧಿಕಾರ ಕೊಟ್ಟಿದ್ದಾನೆಂದೂ, ತಾನು ದೇವರ ಬಳಿಯಿಂದ ಬಂದು, ತಿರುಗಿ ದೇವರ ಬಳಿಗೆ ಹೋಗುತ್ತೇನೆಂದೂ ಯೇಸುವಿಗೆ ತಿಳಿದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಊಟಕ್ಕೆ ಎಲ್ಲರೂ ಕುಳಿತಿದ್ದರು. ಪಿತನು ಎಲ್ಲವನ್ನೂ ತಮ್ಮ ಕೈಗೆ ಒಪ್ಪಿಸಿರುವರೆಂದೂ ತಾವು ದೇವರ ಬಳಿಯಿಂದ ಬಂದಿದ್ದು, ಈಗ ದೇವರ ಬಳಿಗೇ ಮರಳುತ್ತಿದ್ದೆನೆಂದೂ ಯೇಸುವಿಗೆ ತಿಳಿದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೇಸು ತನ್ನ ಕೈಯಲ್ಲಿ ತಂದೆ ಎಲ್ಲವನ್ನು ಕೊಟ್ಟಿದ್ದಾನೆಂತಲೂ ತಾನು ದೇವರ ಬಳಿಯಿಂದ ಹೊರಟುಬಂದಿದ್ದು ಮತ್ತೆ ದೇವರ ಬಳಿಗೆ ಹೋಗುತ್ತೇನೆಂತಲೂ ತಿಳುಕೊಂಡವನಾಗಿ ಊಟವನ್ನು ಬಿಟ್ಟು ಎದ್ದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ತಂದೆಯು ಪ್ರತಿಯೊಂದರ ಮೇಲೆ ತನಗೆ ಅಧಿಕಾರವನ್ನು ಕೊಟ್ಟಿದ್ದಾನೆಂಬುದು ಯೇಸುವಿಗೆ ತಿಳಿದಿತ್ತು. ಅಲ್ಲದೆ ತಾನು ದೇವರ ಬಳಿಯಿಂದ ಬಂದಿರುವುದಾಗಿಯೂ ಮತ್ತು ಈಗ ದೇವರ ಬಳಿಗೆ ಮರಳಿಹೋಗುತ್ತಿರುವುದಾಗಿಯೂ ಆತನಿಗೆ ಗೊತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಜೆಜುಕ್ ಗೊತ್ತ್ ಹೊತ್ತೆ ಬಾಬಾನ್ ಸಗ್ಳೊ ಅದಿಕಾರ್ ಅಪ್ನಾಕ್ ದಿಲ್ಯಾನಾಯ್, ಅನಿ ಅಪ್ನಿ ದೆವಾಕ್ನಾ ಯೆಲಾ, ಅನಿ ದೆವಾಕ್ಡೆಚ್ ಜಾವ್ಕ್ ಲಾಗ್ಲಾ ಮನ್ತಲೆ ಗೊತ್ತ್ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 13:3
22 ತಿಳಿವುಗಳ ಹೋಲಿಕೆ  

ತಂದೆಯು ಪುತ್ರನನ್ನು ಪ್ರೀತಿಸಿ ಎಲ್ಲವನ್ನೂ ಅವರ ಕೈಯಲ್ಲಿ ಕೊಟ್ಟಿದ್ದಾರೆ.


“ನನ್ನ ತಂದೆ ಎಲ್ಲವನ್ನೂ ನನಗೆ ಒಪ್ಪಿಸಿದ್ದಾರೆ. ತಂದೆಯ ಹೊರತು ಬೇರೆ ಯಾರೂ ಪುತ್ರನನ್ನು ಅರಿಯರು ಮತ್ತು ಪುತ್ರನು ಯಾರಿಗೆ ತಂದೆಯನ್ನು ಪ್ರಕಟಪಡಿಸಲು ಇಷ್ಟಪಡುತ್ತಾನೋ ಅವರೇ ಹೊರತು ಯಾರೂ ತಂದೆಯನ್ನು ಅರಿಯರು.


ಈ ಅಂತ್ಯ ದಿನಗಳಲ್ಲಿ ನಮ್ಮ ಸಂಗಡ ತಮ್ಮ ಪುತ್ರ ಆಗಿರುವ ಕ್ರಿಸ್ತ ಯೇಸುವಿನ ಮುಖಾಂತರ ಮಾತನಾಡಿದ್ದಾರೆ. ಈ ಕ್ರಿಸ್ತ ಯೇಸುವನ್ನೇ ದೇವರು ಎಲ್ಲಕ್ಕೂ ಬಾಧ್ಯರನ್ನಾಗಿ ನೇಮಿಸಿದರು. ಇವರ ಮೂಲಕವೇ ಇಡೀ ವಿಶ್ವವನ್ನು ಉಂಟುಮಾಡಿದರು.


ನೀವು ಎಲ್ಲರಿಗೂ ನಿತ್ಯಜೀವವನ್ನು ಕೊಡಬೇಕೆಂದು ಆತನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿರುವಿರಿ.


ಯೇಸು ಅವರಿಗೆ, “ದೇವರು ನಿಮ್ಮ ತಂದೆಯಾಗಿದ್ದರೆ ನೀವು ನನ್ನನ್ನು ಪ್ರೀತಿಸುತ್ತಿದ್ದಿರಿ. ಏಕೆಂದರೆ ನಾನು ದೇವರಿಂದ ಹೊರಟು ಬಂದಿದ್ದೇನೆ. ನಾನು ನನ್ನಷ್ಟಕ್ಕೆ ಬರಲಿಲ್ಲ. ಆದರೆ ದೇವರೇ ನನ್ನನ್ನು ಕಳುಹಿಸಿದ್ದು.


ಯೇಸು ಬಂದು ಅವರೊಂದಿಗೆ ಮಾತನಾಡಿ, “ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲಾಗಿದೆ.


ದೇವರು ಸಮಸ್ತವನ್ನೂ ಕ್ರಿಸ್ತನ ಪಾದಗಳ ಕೆಳಗೆ ಹಾಕಿ ಅವರಿಗೆ ಅಧೀನಮಾಡಿದ್ದಾರೆ. “ಸಮಸ್ತವೂ ಅವರಿಗೆ ಅಧೀನ ಮಾಡಲಾಗಿದೆ” ಎಂದು ಹೇಳುವಾಗ, ಸಮಸ್ತವನ್ನೂ ಕ್ರಿಸ್ತನಿಗೆ ಅಧೀನಮಾಡಿಕೊಟ್ಟ ದೇವರು ಇದರಲ್ಲಿ ಒಳಪಡಲಿಲ್ಲ ಎಂಬುದು ಸ್ಪಷ್ಟವಾಗಿದೆ.


“ಆದ್ದರಿಂದ ನೀವು ಶಿಲುಬೆಗೇರಿಸಿದ ಈ ಯೇಸುವನ್ನೇ ದೇವರು ಕರ್ತ ಹಾಗೂ ಕ್ರಿಸ್ತ ಆಗಿಯೂ ಮಾಡಿದ್ದಾರೆ ಎಂಬುದು ಎಲ್ಲಾ ಇಸ್ರಾಯೇಲ್ ಮನೆತನದವರಿಗೆ ಸ್ಪಷ್ಟವಾಗಿ ತಿಳಿದಿರಲಿ,” ಎಂದನು.


ಅಂದು ಪಸ್ಕಹಬ್ಬದ ಹಿಂದಿನ ದಿನವಾಗಿತ್ತು. ಯೇಸು ತಾವು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗಬೇಕಾದ ಸಮಯ ಬಂತೆಂದು ತಿಳಿದು, ಈ ಲೋಕದಲ್ಲಿದ್ದ ತಮ್ಮವರನ್ನು ಪ್ರೀತಿಸುತ್ತಿದ್ದ ಆ ಪ್ರೀತಿಯ ಪರಿಪೂರ್ಣತೆಯನ್ನು ಈಗ ತೋರಿಸಲಿದ್ದರು.


ಯೇಸು ಅವರಿಗೆ, “ಇನ್ನು ಸ್ವಲ್ಪಕಾಲ ನಾನು ನಿಮ್ಮೊಂದಿಗಿದ್ದು ಅನಂತರ ನನ್ನನ್ನು ಕಳುಹಿಸಿದ ತಂದೆಯ ಬಳಿಗೆ ಹೋಗುತ್ತೇನೆ.


ನಾನಾದರೋ ಅವರನ್ನು ಅರಿತಿದ್ದೇನೆ. ಏಕೆಂದರೆ ನಾನು ಅವರ ಕಡೆಯಿಂದ ಬಂದವನು. ಅವರೇ ನನ್ನನ್ನು ಕಳುಹಿಸಿಕೊಟ್ಟಿದ್ದಾರೆ,” ಎಂದು ಗಟ್ಟಿಯಾಗಿ ಕೂಗಿ ಹೇಳಿದರು.


ಪರಲೋಕದಿಂದ ಇಳಿದು ಬಂದ ಮನುಷ್ಯಪುತ್ರನಾದ ನನ್ನನ್ನು ಹೊರತು ಯಾರೂ ಪರಲೋಕಕ್ಕೆ ಏರಿ ಹೋದವರಿಲ್ಲ.


ದೇವರನ್ನು ಯಾರೂ ಎಂದೂ ಕಂಡಿಲ್ಲ; ತಂದೆ ದೇವರ ಹೃದಯಕ್ಕೆ ಹತ್ತಿರವಾಗಿರುವ ಏಕೈಕ ಪುತ್ರ ಆಗಿರುವವರೂ ಸ್ವತಃ ದೇವರೂ ಆಗಿರುವವರೂ ತಂದೆಯನ್ನು ಪ್ರಕಟಪಡಿಸಿದ್ದಾರೆ.


“ನನ್ನ ತಂದೆ ಎಲ್ಲವನ್ನೂ ನನಗೆ ಒಪ್ಪಿಸಿದ್ದಾರೆ. ತಂದೆಯ ಹೊರತು ಯಾರೂ ಪುತ್ರನನ್ನು ಅರಿಯರು ಮತ್ತು ಪುತ್ರನು ಯಾರಿಗೆ ತಂದೆಯನ್ನು ಪ್ರಕಟಪಡಿಸಲು ಇಷ್ಟಪಡುತ್ತಾರೋ ಅವರೇ ಹೊರತು ಯಾರೂ ತಂದೆಯನ್ನು ಅರಿಯರು,” ಎಂದರು.


ಯೇಸು ಅವರಿಗೆ, “ನಾನೇ ನನ್ನ ವಿಷಯವಾಗಿ ನಾನು ಸಾಕ್ಷಿ ನೀಡಿದರೂ ನನ್ನ ಸಾಕ್ಷಿ ಸತ್ಯವಾದದ್ದು. ಏಕೆಂದರೆ ನಾನು ಎಲ್ಲಿಂದ ಬಂದೆ ಮತ್ತು ಎಲ್ಲಿಗೆ ಹೋಗುತ್ತೇನೆಂದು ನನಗೆ ತಿಳಿದಿದೆ. ಆದರೆ ನಾನು ಎಲ್ಲಿಂದ ಬಂದೆ ಇಲ್ಲವೆ ಎಲ್ಲಿಗೆ ಹೋಗುತ್ತೇನೋ ನಿಮಗೆ ತಿಳಿಯದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು