ಯೋಹಾನ 13:36 - ಕನ್ನಡ ಸಮಕಾಲಿಕ ಅನುವಾದ36 ಸೀಮೋನ ಪೇತ್ರನು ಯೇಸುವಿಗೆ, “ಸ್ವಾಮೀ, ನೀವು ಎಲ್ಲಿಗೆ ಹೋಗುತ್ತೀರಿ?” ಎಂದು ಕೇಳಿದ್ದಕ್ಕೆ, ಯೇಸು ಅವನಿಗೆ, “ನಾನು ಹೋಗುವ ಕಡೆಗೆ ಈಗ ನೀನು ನನ್ನನ್ನು ಹಿಂಬಾಲಿಸಲಾರೆ, ನಂತರ ಹಿಂಬಾಲಿಸುವೆ,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಸೀಮೋನ್ ಪೇತ್ರನು ಆತನಿಗೆ, “ಕರ್ತನೇ, ನೀನು ಎಲ್ಲಿಗೆ ಹೋಗುತ್ತೀ?” ಎಂದು ಕೇಳಿದ್ದಕ್ಕೆ ಯೇಸು ಅವನಿಗೆ, “ನಾನು ಹೋಗುವ ಕಡೆಗೆ, ಈಗ ನೀನು ನನ್ನನ್ನು ಹಿಂಬಾಲಿಸಲಾರೆ. ಅನಂತರ ನೀನು ನನ್ನನ್ನು ಹಿಂಬಾಲಿಸುವೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಆಗ ಸಿಮೋನ ಪೇತ್ರನು, “ಪ್ರಭುವೇ, ನೀವು ಹೋಗುವುದಾದರೂ ಎಲ್ಲಿಗೆ?” ಎಂದು ಕೇಳಿದನು. “ನಾನು ಹೋಗುವಲ್ಲಿಗೆ ನೀನು ಈಗ ಬರಲಾರೆ. ಅನಂತರ ಬರುವೆ,” ಎಂದು ಯೇಸು ಉತ್ತರಕೊಡಲು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಸೀಮೋನ ಪೇತ್ರನು ಆತನನ್ನು - ಸ್ವಾಮೀ, ಎಲ್ಲಿಗೆ ಹೋಗುತ್ತೀ? ಎಂದು ಕೇಳಿದ್ದಕ್ಕೆ ಯೇಸು - ನಾನು ಹೋಗುವಲ್ಲಿಗೆ ನೀನು ಈಗ ನನ್ನ ಹಿಂದೆ ಬರಲಾರಿ, ತರುವಾಯ ನನ್ನ ಹಿಂದೆ ಬರುವಿ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಸೀಮೋನ್ ಪೇತ್ರನು ಯೇಸುವಿಗೆ, “ಪ್ರಭುವೇ, ನೀನು ಎಲ್ಲಿಗೆ ಹೋಗುತ್ತಿರುವೆ?” ಎಂದು ಕೇಳಿದನು. ಯೇಸು, “ನಾನು ಹೋಗುವಲ್ಲಿಗೆ ಈಗ ನೀನು ಹಿಂಬಾಲಿಸಿಕೊಂಡು ಬರಲಾರೆ. ಆದರೆ ಮುಂದೆ ನೀನು ಹಿಂಬಾಲಿಸಿಕೊಂಡು ಬರುವೆ” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್36 ಸಿಮಾವ್ ಪೆದ್ರುನ್,“ಧನಿಯಾ ತಿಯಾ ಖೈ ಜಾವ್ಲೆಯ್?” ಮನುನ್ ಇಚಾರ್‍ಲ್ಯಾನ್, ತನ್ನಾ ಜೆಜುನ್, “ಮಿಯಾ ಜಾವ್ಕ್ ಲಾಗ್ಲಾ ಥೈ ತುಕಾ ಮಾಜ್ಯಾ ಫಾಟ್ನಾ ಯೆವ್ಕ್ ಹೊಯ್ನಾ”, “ಖರೆ ಮಾನಾ ತಿಯಾ ಮಾಜ್ಯಾ ಫಾಟ್ನಾ ಯೆತೆಯ್” ಮನುನ್ ಜಬಾಬ್ ದಿಲ್ಯಾನ್. ಅಧ್ಯಾಯವನ್ನು ನೋಡಿ |