ಯೋಹಾನ 13:38 - ಕನ್ನಡ ಸಮಕಾಲಿಕ ಅನುವಾದ38 ಯೇಸು ಅವನಿಗೆ, “ನೀನು ನನಗಾಗಿ ನಿನ್ನ ಪ್ರಾಣವನ್ನೇ ಕೊಡುವೆಯೋ? ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ನನ್ನನ್ನು ಮೂರು ಸಾರಿ ನಿರಾಕರಿಸುವ ತನಕ ಹುಂಜ ಕೂಗುವುದೇ ಇಲ್ಲ,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಆಗ ಯೇಸು ಅವನಿಗೆ, “ನೀನು ನನಗಾಗಿ ಪ್ರಾಣವನ್ನೇ ಕೊಡುವೆಯಾ? ನಿನಗೆ ನಿಜನಿಜವಾಗಿ ಹೇಳುತ್ತೇನೆ: ನೀನು ನನ್ನನ್ನು ಮೂರು ಸಾರಿ ನಿರಾಕರಿಸುವ ತನಕ ಕೋಳಿಯು ಕೂಗುವುದೇ ಇಲ್ಲ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಆಗ ಯೇಸು, “ನನಗಾಗಿ ಪ್ರಾಣವನ್ನುಕೊಡಲು ಸಿದ್ಧನಿರುವೆಯಾ? ನಾನು ನಿನಗೆ ನಿಜವಾಗಿ ಹೇಳುತ್ತೇನೆ ಕೇಳು: ನೀನು ನನ್ನನ್ನು ಅರಿಯೆನೆಂದು ಮೂರುಬಾರಿ ತಿರಸ್ಕರಿಸುವ ತನಕ ನಾಳೆ ಮುಂಜಾನೆ ಕೋಳಿ ಕೂಗುವುದಿಲ್ಲ,” ಎಂದು ನುಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ಯೇಸು - ನನಗಾಗಿ ಪ್ರಾಣ ಕೊಟ್ಟೀಯಾ? ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ನನ್ನ ವಿಷಯದಲ್ಲಿ ಅವನನ್ನು ಅರಿಯೆನೆಂದು ಮೂರು ಸಾರಿ ಹೇಳುವ ತನಕ ಕೋಳಿ ಕೂಗುವದೇ ಇಲ್ಲ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ಯೇಸು, “ನೀನು ನನಗೋಸ್ಕರ ನಿನ್ನ ಪ್ರಾಣವನ್ನು ನಿಜವಾಗಿಯೂ ಕೊಡುವೆಯಾ? ನಾನು ನಿನಗೆ ಸತ್ಯವನ್ನು ಹೇಳುತ್ತೇನೆ, ನಾಳೆ ಮುಂಜಾನೆ ಕೋಳಿ ಕೂಗುವುದಕ್ಕಿಂತ ಮುಂಚಿತವಾಗಿ ನೀನು ನನ್ನನ್ನು ತಿಳಿದಿಲ್ಲವೆಂದು ಮೂರುಸಾರಿ ಹೇಳುವೆ” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್38 ತನ್ನಾ ಜೆಜುನ್ ತೆಕಾ, ತಿಯಾ ಖರೆಚ್! ಮಾಜೆಸಾಟಿ ಮರುಕ್ ತಯಾರ್ ಹಾಸ್ ಕಾಯ್? ಮಿಯಾ ತುಕಾ ಖರೆ ಹೊತ್ತೆ ಸಾಂಗುಕ್ ಲಾಗ್ಲಾ, ಕೊಂಬೊ ಭೊಕುಚ್ಯಾ ಅದ್ದಿ ತಿಯಾ ತಿನ್ದಾ ತುಕಾ ಮಾಜಿ ವಳಕುಚ್ ನಾ ಮನುನ್ ಸಾಂಗ್ತೆಯ್, ಮನುನ್ ಜಬಾಬ್ ದಿಲ್ಯಾನ್. ಅಧ್ಯಾಯವನ್ನು ನೋಡಿ |
ಯೇಸು ಮೂರನೆಯ ಸಾರಿ ಪೇತ್ರನಿಗೆ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ಕೇಳಿದರು. ಯೇಸು ಮೂರನೆಯ ಸಾರಿ, “ನೀನು ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, “ಕರ್ತನೇ, ನಿಮಗೆ ಎಲ್ಲವೂ ತಿಳಿದಿದೆ. ನಾನು ನಿಮ್ಮ ಮೇಲೆ ಎಷ್ಟು ಮಮತೆ ಇಟ್ಟಿದ್ದೇನೆಂದು ನಿಮಗೆ ತಿಳಿದಿದೆ,” ಎಂದನು. ಆಗ ಯೇಸು ಪೇತ್ರನಿಗೆ, “ನನ್ನ ಕುರಿಗಳನ್ನು ಮೇಯಿಸು,” ಎಂದರು.