Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 13:4 - ಕನ್ನಡ ಸಮಕಾಲಿಕ ಅನುವಾದ

4 ಯೇಸು ಊಟದಿಂದೆದ್ದು ತಮ್ಮ ಮೇಲು ಹೊದಿಕೆಯನ್ನು ತೆಗೆದಿಟ್ಟು ಅಂಗವಸ್ತ್ರವನ್ನು ತೆಗೆದುಕೊಂಡು ಸೊಂಟಕ್ಕೆ ಕಟ್ಟಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆತನು ಊಟದಿಂದ ಎದ್ದು ತನ್ನ ಮೇಲುಹೊದಿಕೆಯನ್ನು ತೆಗೆದಿಟ್ಟು ಅಂಗ ವಸ್ತ್ರವನ್ನು ತೆಗೆದುಕೊಂಡು ನಡುವಿಗೆ ಕಟ್ಟಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅವರು ಊಟದಿಂದ ಎದ್ದು, ತಮ್ಮ ಮೇಲುಹೊದಿಕೆಯನ್ನು ತೆಗೆದಿಟ್ಟರು. ಅಂಗವಸ್ತ್ರವನ್ನು ಸೊಂಟಕ್ಕೆ ಕಟ್ಟಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಹೊದ್ದಿದ್ದ ಮೇಲ್ಹೊದಿಕೆಯನ್ನು ತೆಗೆದಿಟ್ಟು ಕೈಪಾವುಡವನ್ನು ತಕ್ಕೊಂಡು ನಡುವಿಗೆ ಕಟ್ಟಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅವರು ಊಟಮಾಡುತ್ತಿದ್ದಾಗ ಯೇಸು ಎದ್ದು ತನ್ನ ಮೇಲಂಗಿಯನ್ನು ತೆಗೆದಿಟ್ಟನು; ಅಂಗವಸ್ತ್ರವನ್ನು ಸೊಂಟಕ್ಕೆ ಕಟ್ಟಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತಸೆಮನುನ್ ತೊ ಜೆವ್ನಾಕ್ ಬಸಲ್ಲ್ಯಾಕ್ನಾ ಉಟ್ಲೊ, ಅಪ್ನಾಚಿ ವೈಲಿ ಅಂಗಿ ಕಾಡ್ಲ್ಯಾನ್, ಅನಿ ಕಂಬ್ರೆಕ್ ಎಕ್ ಟಿವಾಲೊ ಭಾಂದುನ್ ಘೆಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 13:4
9 ತಿಳಿವುಗಳ ಹೋಲಿಕೆ  

ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಕೃಪೆಯನ್ನು ನೀವು ಬಲ್ಲವರಾಗಿದ್ದೀರಿ. ಅವರು ಐಶ್ವರ್ಯವಂತರಾಗಿದ್ದರೂ ತಮ್ಮ ಬಡತನದ ಮೂಲಕ ನೀವು ಐಶ್ವರ್ಯವಂತರಾಗುವಂತೆ ಅವರು ನಿಮಗೋಸ್ಕರ ಬಡವರಾದರು.


ಯಾರು ದೊಡ್ಡವನು? ಊಟಕ್ಕೆ ಕುಳಿತುಕೊಂಡಿರುವವನೋ ಅಥವಾ ಸೇವೆ ಮಾಡುವವನೋ? ಊಟಕ್ಕೆ ಕುಳಿತುಕೊಂಡವನಲ್ಲವೋ? ಆದರೆ ನಾನು ನಿಮ್ಮೊಳಗೆ ಸೇವೆ ಮಾಡುವವನಂತಿದ್ದೇನೆ.


ಯಜಮಾನನು ಬಂದಾಗ ಯಾರು ಎಚ್ಚರವಾಗಿರುವುದನ್ನು ಅವನು ಕಾಣುವನೋ ಆ ಸೇವಕರು ಧನ್ಯರು. ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಅವನು ಬಂದು ನಡುಕಟ್ಟಿ ನಿಂತು ಅವರನ್ನು ಊಟಕ್ಕೆ ಕೂರಿಸಿ, ಅವರಿಗೆ ತಾನೇ ಸೇವೆಮಾಡುವನು.


“ನಿಮ್ಮಲ್ಲಿ ಯಾವನಿಗಾದರೂ ಒಬ್ಬ ಕೆಲಸದವನಿರಲಾಗಿ, ಅವನು ಹೊಲದ ಕೆಲಸ ಅಥವಾ ಕುರಿ ಮೇಯಿಸಿ ಮನೆಗೆ ಬಂದ ಕೂಡಲೇ ಯಜಮಾನನು ಕೆಲಸದವನಿಗೆ, ‘ಬಾ ಊಟಕ್ಕೆ ಕುಳಿತುಕೋ,’ ಎಂದು ಹೇಳುವುದುಂಟೇ?


ಆದರೆ ಯೆಹೋಷಾಫಾಟನು ಪ್ರವಾದಿಯ ಮೂಲಕವಾಗಿ ಯೆಹೋವ ದೇವರನ್ನು ಕೇಳುವ ಹಾಗೆ, “ಇಲ್ಲಿ ಯೆಹೋವ ದೇವರ ಪ್ರವಾದಿಯು ಯಾವನೂ ಇಲ್ಲವೋ?” ಎಂದನು. ಆಗ ಇಸ್ರಾಯೇಲಿನ ಅರಸನ ಸೇವಕರಲ್ಲಿ ಒಬ್ಬನು ಉತ್ತರವಾಗಿ, “ಎಲೀಯನ ಕೈಗಳ ಮೇಲೆ ನೀರು ಹೊಯ್ಯುತ್ತಿದ್ದ ಶಾಫಾಟನ ಮಗ ಎಲೀಷನು ಇಲ್ಲಿದ್ದಾನೆ,” ಎಂದು ಹೇಳಿದನು.


ಹಾಗೆ ಹೇಳದೆ, ‘ನೀನು ಊಟ ತಯಾರುಮಾಡಿ, ನೀನೂ ಸಿದ್ಧವಾಗಿ, ನಾನು ತಿಂದು ಕುಡಿಯುವ ತನಕ ನನ್ನ ಸೇವೆಮಾಡು; ಆಮೇಲೆ ನೀನು ಊಟಮಾಡು,’ ಎಂದು ಅವನಿಗೆ ಹೇಳುವಿರಲ್ಲವೇ?


ಯೇಸು ಅವರ ಪಾದಗಳನ್ನು ತೊಳೆದ ಮೇಲೆ ತಮ್ಮ ಮೇಲು ಹೊದಿಕೆಯನ್ನು ಧರಿಸಿ, ತಮ್ಮ ಸ್ಥಳದಲ್ಲಿ ಕುಳಿತುಕೊಂಡು ಅವರಿಗೆ, “ನಾನು ನಿಮಗೆ ಮಾಡಿದ್ದು ಏನೆಂದು ಅರ್ಥವಾಯಿತೋ?


ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ ನೀವು ಮೊದಲಿನಿಂದಲೂ ಕೇಳಿದ ಸಂದೇಶವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು