Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 14:11 - ಕನ್ನಡ ಸಮಕಾಲಿಕ ಅನುವಾದ

11 ನಾನು ತಂದೆಯಲ್ಲಿಯೂ ತಂದೆಯು ನನ್ನಲ್ಲಿಯೂ ಇದ್ದಾರೆಂದು ಹೇಳುವಾಗ ನೀವು ನನ್ನನ್ನು ನಂಬಿರಿ, ಇಲ್ಲದಿದ್ದರೆ ಆ ಕ್ರಿಯೆಗಳನ್ನಾದರೂ ನೀವು ನಂಬಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಾನು ತಂದೆಯಲ್ಲಿಯೂ, ತಂದೆಯು ನನ್ನಲ್ಲಿಯೂ ಇದ್ದಾನೆಂದು ತಿಳಿದು ನೀವು ನನ್ನನ್ನು ನಂಬಿರಿ. ಇಲ್ಲವೇ ನಾನು ಮಾಡಿದ ಕಾರ್ಯಗಳ ನಿಮಿತ್ತದಿಂದಾದರೂ ನೀವು ನನ್ನನ್ನು ನಂಬಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ‘ನಾನು ಪಿತನಲ್ಲಿ ಇದ್ದೇನೆ. ಪಿತನು ನನ್ನಲ್ಲಿ ಇದ್ದಾರೆ,’ ಎನ್ನುವ ನನ್ನ ಮಾತುಗಳನ್ನು ವಿಶ್ವಾಸಿಸಿರಿ; ಇಲ್ಲವೇ, ನಾನು ಸಾಧಿಸಿದ ಸುಕೃತ್ಯಗಳ ನಿಮಿತ್ತದಿಂದಾದರೂ ವಿಶ್ವಾಸಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನಾನು ತಂದೆಯಲ್ಲಿ ಇದ್ದೇನೆ, ತಂದೆಯು ನನ್ನಲ್ಲಿ ಇದ್ದಾನೆಂಬುವ ನನ್ನ ಮಾತನ್ನು ನಂಬಿರಿ; ಇಲ್ಲದಿದ್ದರೆ ಆ ಕ್ರಿಯೆಗಳನ್ನೇ ನೋಡಿ ನನ್ನ ಮಾತನ್ನು ನಂಬಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನಾನು ತಂದೆಯಲ್ಲಿದ್ದೇನೆ ಮತ್ತು ತಂದೆಯು ನನ್ನಲ್ಲಿದ್ದಾನೆ ಎಂಬ ನನ್ನ ಮಾತನ್ನು ನಂಬಿರಿ. ಇಲ್ಲದಿದ್ದರೆ ನಾನು ಮಾಡಿದ ಅದ್ಭುತಕಾರ್ಯಗಳ ನಿಮಿತ್ತವಾದರೂ ನಂಬಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಬಾಬಾ ಮಾಜ್ಯಾ ಭುತ್ತುರ್ ಅನಿ ಮಿಯಾ ಬಾಬಾಚ್ಯಾ ಭುತ್ತುರ್ ಹಾಯ್ ಮನುನ್ ಮಿಯಾ ಸಾಂಗ್ತಾನಾ ಮಾಜೆ ವರ್ತಿ ವಿಶ್ವಾಸ್ ಕರಾ, ನಾಹೊಲ್ಯಾರ್, ಮಿಯಾ ಕರ್‍ತಲಿ ಕಾಮಾ ಸಾಕ್ಷಿ ಸಾಟ್ನಿ ಅಜಾಪಾ ಬಗುನ್ ತರ್ಬಿ ವಿಶ್ವಾಸ್ ಕರಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 14:11
11 ತಿಳಿವುಗಳ ಹೋಲಿಕೆ  

ನಾನು ಮಾಡಿದ್ದರಿಂದ ನೀವು ನನ್ನನ್ನು ನಂಬದಿದ್ದರೂ ಈ ಕಾರ್ಯಗಳನ್ನಾದರೂ ನಂಬಿರಿ. ಆಗ ತಂದೆಯು ನನ್ನಲ್ಲಿಯೂ ನಾನು ತಂದೆಯಲ್ಲಿಯೂ ಇರುವುದು ನಿಮಗೆ ಗೊತ್ತಾಗುವುದು ಹಾಗೂ ಮನದಟ್ಟಾಗುವುದು,” ಎಂದರು.


“ಆದರೆ ನನಗೆ ಯೋಹಾನನಿಗಿಂತಲೂ ಮಹಾ ಸಾಕ್ಷಿ ಉಂಟು. ಹೇಗೆಂದರೆ, ತಂದೆ ನನಗೆ ಮಾಡಿ ಮುಗಿಸಲು ಕೊಟ್ಟ ಕೆಲಸಗಳು, ಅಂದರೆ, ನಾನು ಮಾಡುತ್ತಿರುವ ಈ ಕೆಲಸಗಳೇ, ತಂದೆ ನನ್ನನ್ನು ಕಳಿಹಿಸಿದ್ದಾರೆಂದು ನನ್ನನ್ನು ಕುರಿತು ಸಾಕ್ಷಿ ಕೊಡುತ್ತವೆ.


ಯೇಸು ಅವರಿಗೆ, “ನಾನು ನಿಮಗೆ ಹೇಳಿದೆನು. ಆದರೆ ನೀವು ನಂಬುತ್ತಾ ಇಲ್ಲ. ನನ್ನ ತಂದೆಯ ಹೆಸರಿನಲ್ಲಿ ನಾನು ಮಾಡುವ ಕ್ರಿಯೆಗಳೇ ನನ್ನ ವಿಷಯವಾಗಿ ಸಾಕ್ಷಿ ಕೊಡುತ್ತವೆ.


ನಾನು ತಂದೆಯಲ್ಲಿ ಇದ್ದೇನೆ ಮತ್ತು ತಂದೆಯು ನನ್ನಲ್ಲಿ ಇದ್ದಾರೆ ಎಂದು ನೀನು ನಂಬುವುದಿಲ್ಲವೇ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಮಾತನಾಡುವುದಿಲ್ಲ; ನನ್ನಲ್ಲಿರುವ ತಂದೆಯೇ ತಮ್ಮ ಕ್ರಿಯೆಗಳನ್ನು ಮಾಡುತ್ತಾರೆ.


“ಇಸ್ರಾಯೇಲ್ ಜನರೇ, ಈ ವಿಷಯವನ್ನು ಕೇಳಿರಿ: ದೇವರು ನಜರೇತಿನ ಯೇಸುಸ್ವಾಮಿಯವರ ಮುಖಾಂತರ ನಿಮ್ಮ ಮಧ್ಯದಲ್ಲಿ ಅದ್ಭುತಕಾರ್ಯಗಳನ್ನೂ ಆಶ್ಚರ್ಯಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ನಡೆಸಿದ್ದರಿಂದ, ಯೇಸು ದೇವರ ಮೆಚ್ಚಿಕೆ ಪಡೆದವರಾಗಿದ್ದಾರೆಂಬುದನ್ನು, ನೀವೇ ತಿಳಿದಿರುವಿರಿ.


ದೇವರು ಸಹ ಸೂಚಕಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ನಾನಾ ವಿಧವಾದ ಮಹತ್ಕಾರ್ಯಗಳಿಂದಲೂ ತಮ್ಮ ಚಿತ್ತಾನುಸಾರವಾಗಿ ದಯಪಾಲಿಸಿದ ಪವಿತ್ರಾತ್ಮರ ವರದಾನಗಳಿಂದಲೂ ಸಾಕ್ಷಿನೀಡಿ ದೃಢಪಡಿಸಿದ್ದಾರೆ.


ಅದಕ್ಕೆ ಯೇಸು ಅವರಿಗೆ, “ನನ್ನ ತಂದೆಯಿಂದ ಅನೇಕ ಒಳ್ಳೆಯ ಕಾರ್ಯಗಳನ್ನು ನಾನು ನಿಮಗೆ ತೋರಿಸಿದ್ದೇನೆ. ಅವುಗಳಲ್ಲಿ ಯಾವ ಕಾರ್ಯಕ್ಕಾಗಿ ನೀವು ನನ್ನ ಮೇಲೆ ಕಲ್ಲೆಸೆಯಬೇಕೆಂದಿದ್ದೀರಿ?” ಎಂದು ಕೇಳಿದರು.


ನಾನು ನನ್ನ ತಂದೆಯಲ್ಲಿಯೂ ನೀವು ನನ್ನಲ್ಲಿಯೂ ನಾನು ನಿಮ್ಮಲ್ಲಿಯೂ ಇರುವುದನ್ನು ನೀವು ಆ ದಿನದಲ್ಲಿ ತಿಳಿದುಕೊಳ್ಳುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು