ಯೋಹಾನ 14:17 - ಕನ್ನಡ ಸಮಕಾಲಿಕ ಅನುವಾದ17 ಅವರೇ ಸತ್ಯದ ಆತ್ಮರಾಗಿದ್ದಾರೆ. ಲೋಕವು ಅವರನ್ನು ನೋಡದೆಯೂ ತಿಳಿಯದೆಯೂ ಇರುವುದರಿಂದ ಸತ್ಯದ ಆತ್ಮರಾಗಿರುವ ಅವರನ್ನು ಸ್ವೀಕರಿಸಲಾರದು. ನೀವು ಅವರನ್ನು ಬಲ್ಲಿರಿ. ಏಕೆಂದರೆ ಅವರು ನಿಮ್ಮೊಂದಿಗಿರುವರು ಮತ್ತು ನಿಮ್ಮೊಳಗೂ ನೆಲೆಸಿರುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆ ಸಹಾಯಕನು ಯಾರೆಂದರೆ ಸತ್ಯದ ಆತ್ಮನೇ. ಲೋಕವು ಆತನನ್ನು ನೋಡದೆಯೂ, ತಿಳಿಯದೆಯೂ ಇರುವುದರಿಂದ ಆತನನ್ನು ಸ್ವೀಕರಿಸಲಾರದು. ನೀವು ಆತನನ್ನು ಬಲ್ಲಿರಿ, ಹೇಗೆಂದರೆ ಆತನು ನಿಮ್ಮೊಂದಿಗೆ ವಾಸಮಾಡುತ್ತಾನೆ ಮತ್ತು ನಿಮ್ಮೊಳಗೆ ಇರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಸತ್ಯಸ್ವರೂಪಿಯಾದ ಪವಿತ್ರಾತ್ಮನೇ ಈ ಪೋಷಕ. ಲೋಕವು ಇವರನ್ನು ಬರಮಾಡಿಕೊಳ್ಳದು. ಏಕೆಂದರೆ ಲೋಕ ಇವರನ್ನು ಕಾಣುವುದೂ ಇಲ್ಲ, ಅರಿತುಕೊಳ್ಳುವುದೂ ಇಲ್ಲ. ಆದರೆ ನೀವು ಇವರನ್ನು ಅರಿಯುವಿರಿ. ಕಾರಣ, ಇವರು ನಿಮ್ಮೊಂದಿಗೂ ನಿಮ್ಮಲ್ಲಿಯೂ ನೆಲಸಿರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಆ ಸಹಾಯಕನು ಯಾರಂದರೆ ಸತ್ಯದ ಆತ್ಮನೇ. ಲೋಕವು ಆತನನ್ನು ನೋಡದೆಯೂ ತಿಳಿಯದೆಯೂ ಇರುವದರಿಂದ ಆತನನ್ನು ಹೊಂದಲಾರದು. ನೀವು ಆತನನ್ನು ಬಲ್ಲಿರಿ; ಹೇಗಂದರೆ ನಿಮ್ಮ ಬಳಿಯಲ್ಲಿ ವಾಸಮಾಡುತ್ತಾನೆ ಮತ್ತು ನಿಮ್ಮೊಳಗೆ ಇರುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಸತ್ಯದ ಆತ್ಮನೇ ಈ ಸಹಾಯಕನು. ಈ ಲೋಕವು ಆತನನ್ನು ಸ್ವೀಕರಿಸಿಕೊಳ್ಳಲಾರದು. ಏಕೆಂದರೆ ಲೋಕವು ಆತನನ್ನು ಕಾಣುವುದೂ ಇಲ್ಲ, ತಿಳಿದುಕೊಳ್ಳುವುದೂ ಇಲ್ಲ. ಆದರೆ ನೀವು ಆತನನ್ನು ಬಲ್ಲಿರಿ. ಆತನು ನಿಮ್ಮೊಂದಿಗೆ ಮತ್ತು ನಿಮ್ಮೊಳಗೆ ವಾಸಿಸುವವನಾಗಿದ್ದಾನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ತೊ ಎಕ್ ಆತ್ಮೊ ತೊ ದೆವಾಚ್ಯಾ ವಿಶಯಾತ್ ಖರೆ ದಾಕ್ವುನ್ ದಿತಾ. ಹ್ಯೊ ಜಗ್ ತೆಕಾ ಸ್ವಿಕಾರ್ ಕರಿನಾ, ಕಶ್ಯಾಕ್ ಮಟ್ಲ್ಯಾರ್ ಹ್ಯೊ ಜಗ್ ತೆಕಾ ವಳ್ಕಿನಾ, ತೊ ತೆಕಾ ದಿಸಿನಾ. ಖರೆ ತುಮಿ ತೆಕಾ ವಳಕ್ತ್ಯಾಶಿ, ಕಶ್ಯಾಕ್ ಮಟ್ಲ್ಯಾರ್ ತೊ ತುಮ್ಚ್ಯಾ ವಾಂಗ್ಡಾ ಜಿವನ್ ಕರ್‍ತಾ ಅನಿ ತುಮ್ಚ್ಯಾ ಭುತ್ತುರ್ ರ್‍ಹಾತಾ. ಅಧ್ಯಾಯವನ್ನು ನೋಡಿ |