Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 14:21 - ಕನ್ನಡ ಸಮಕಾಲಿಕ ಅನುವಾದ

21 ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಕೈಗೊಳ್ಳುವವರೇ ನನ್ನನ್ನು ಪ್ರೀತಿಸುವವರು. ನನ್ನನ್ನು ಪ್ರೀತಿಸುವವನು ತನ್ನ ತಂದೆಗೆ ಪ್ರಿಯನಾಗಿರುವನು. ನಾನು ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ಪ್ರಕಟಿಸಿಕೊಳ್ಳುವೆನು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಕೈಕೊಂಡು ನಡೆಯುವವನೇ ನನ್ನನ್ನು ಪ್ರೀತಿಸುವವನು. ನನ್ನನ್ನು ಪ್ರೀತಿಸುವವನು ನನ್ನ ತಂದೆಗೆ ಪ್ರಿಯನಾಗಿರುವನು. ನಾನೂ ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ಪ್ರಕಟಪಡಿಸಿ ತೋರಿಸುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ನನ್ನ ಆಜ್ಞೆಗಳನ್ನು ಅಂಗೀಕರಿಸಿ ಅವುಗಳ ಪ್ರಕಾರ ನಡೆಯುವವನೇ ನನ್ನನ್ನು ಪ್ರೀತಿಸುವವನು. ನನ್ನನ್ನು ಪ್ರೀತಿಸುವವನು ನನ್ನ ಪಿತನಿಗೂ ಪ್ರಿಯನಾಗಿರುವನು. ನಾನೂ ಅವನನ್ನು ಪ್ರೀತಿಸಿ ನನ್ನನ್ನೇ ಅವನಿಗೆ ಸಾಕ್ಷಾತ್ಕರಿಸಿಕೊಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಕೈಕೊಂಡು ನಡೆಯುವವನೇ ನನ್ನನ್ನು ಪ್ರೀತಿಸುವವನು. ನನ್ನನ್ನು ಪ್ರೀತಿಸುವವನು ನನ್ನ ತಂದೆಗೆ ಪ್ರಿಯನಾಗಿರುವನು; ನಾನೂ ಅವನನ್ನು ಪ್ರೀತಿಸಿ ಅವನಿಗೆ ಕಾಣಿಸಿಕೊಳ್ಳುವೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಒಬ್ಬನು ನನ್ನ ಆಜ್ಞೆಗಳನ್ನು ಸ್ವೀಕರಿಸಿಕೊಂಡು ಅವುಗಳಿಗೆ ವಿಧೇಯನಾದರೆ ಅವನು ನನ್ನನ್ನು ನಿಜವಾಗಿಯೂ ಪ್ರೀತಿಸುವವನಾಗಿದ್ದಾನೆ. ಅಲ್ಲದೆ ನನ್ನನ್ನು ಪ್ರೀತಿಸುವವನನ್ನು ನನ್ನ ತಂದೆಯೂ ಪ್ರೀತಿಸುವನು ಮತ್ತು ನಾನೂ ಅವನನ್ನು ಪ್ರೀತಿಸುವೆನು. ನಾನು ಅವನಿಗೆ ನನ್ನನ್ನೇ ತೋರ್ಪಡಿಸಿಕೊಳ್ಳುವೆನು” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಜೆ ಕೊನ್ ಮಿಯಾ ದಿಲ್ಲೆ ಖಾಯ್ದೆ ಮಾನುನ್ ಘೆತಾ ಅನಿ ತೆಂಚ್ಯಾ ಸರ್ಕೆ ಚಲ್ತಾ ತೊ ಮಾಜೊ ಪ್ರೆಮ್ ಕರ್‍ತಾ. ಜೆ ಕೊನ್ ಮಾಜೊ ಪ್ರೆಮ್ ಕರ್‍ತಾ ತೆಂಚೊ ಮಾಜೊ ಬಾಬಾ ಪ್ರೆಮ್ ಕರ್‍ತಾ, ಮಿಯಾಬಿ ತೆಂಚೊ ಪ್ರೆಮ್ ಕರ್‍ತಾ ಅನಿ ಮಾಕಾಚ್ ಮಿಯಾ ತೆಂಕಾ ದಾಕ್ವುನ್ ದಿತಾ ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 14:21
43 ತಿಳಿವುಗಳ ಹೋಲಿಕೆ  

“ನೀವು ನನ್ನನ್ನು ಪ್ರೀತಿಸುವವರಾದರೆ ನನ್ನ ಆಜ್ಞೆಗಳನ್ನು ಅನುಸರಿಸುವಿರಿ.


ದೇವರ ಪ್ರೀತಿ ಏನೆಂದರೆ: ದೇವರ ಆಜ್ಞೆಗಳನ್ನು ಕೈಗೊಂಡು ನಡೆಯುವುದೇ. ಅವರ ಆಜ್ಞೆಗಳು ಕಠಿಣವಾದವುಗಳಲ್ಲ.


ಯಾವನಾದರೂ ದೇವರ ವಾಕ್ಯವನ್ನು ಕೈಕೊಂಡು ನಡೆದರೆ ಅವನಲ್ಲಿ ನಿಜವಾಗಿ ದೇವರ ಪ್ರೀತಿಯು ಪರಿಪೂರ್ಣವಾಗಿದೆ. ಇದರಿಂದಲೇ ನಾವು ದೇವರಲ್ಲಿದ್ದೇವೆಂಬುದನ್ನು ತಿಳಿದುಕೊಳ್ಳುತ್ತೇವೆ.


ದೇವರ ಆಜ್ಞೆಗಳನ್ನು ಅನುಸರಿಸಿ ಬಾಳುವುದೇ ಪ್ರೀತಿ. ಪ್ರೀತಿಯಲ್ಲಿ ಬಾಳಬೇಕೆಂಬುದೇ ನೀವು ಮೊದಲಿನಿಂದಲೂ ಕೇಳಿದ ಅಪ್ಪಣೆಯಾಗಿದೆ.


ಹಾಗಾದರೆ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ನನ್ನ ಆಜ್ಞೆಗಳನ್ನು ನೀವು ಲಕ್ಯಕೊಟ್ಟು ಕೇಳಿ, ನಿಮ್ಮ ದೇವರಾದ ಯೆಹೋವ ದೇವರನ್ನು ನಿಮ್ಮ ಪೂರ್ಣಹೃದಯದಿಂದಲೂ, ನಿಮ್ಮ ಪೂರ್ಣಪ್ರಾಣದಿಂದಲೂ ಪ್ರೀತಿಸಿ ಅವರಿಗೆ ಸೇವೆ ಮಾಡಿದರೆ,


ಏಕೆಂದರೆ ನೀವು ನನ್ನನ್ನು ಪ್ರೀತಿಸಿ ನಾನು ದೇವರಿಂದ ಹೊರಟು ಬಂದವನೆಂದು ನಂಬಿದ್ದರಿಂದ ತಂದೆಯು ತಾವೇ ನಿಮ್ಮನ್ನು ಪ್ರೀತಿಸುತ್ತಾರೆ.


ಅದಕ್ಕೆ ಯೇಸು, “ಅದಕ್ಕಿಂತಲೂ ದೇವರ ವಾಕ್ಯವನ್ನು ಕೇಳಿ, ಅದನ್ನು ಅನುಸರಿಸುವವರು ಹೆಚ್ಚು ಭಾಗ್ಯವಂತರು,” ಎಂದರು.


ನಾನು ನಿಮಗೆ ಆಜ್ಞಾಪಿಸಿದ್ದನ್ನು ಪಾಲಿಸಿದರೆ ನೀವು ನನ್ನ ಸ್ನೇಹಿತರು.


ಇಗೋ, ಬಾಗಿಲಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ. ಯಾರಾದರೂ ನನ್ನ ಸ್ವರವನ್ನು ಕೇಳಿ, ಬಾಗಿಲನ್ನು ತೆರೆದರೆ, ನಾನು ಪ್ರವೇಶ ಮಾಡಿ, ಆ ವ್ಯಕ್ತಿಯ ಸಂಗಡ ಊಟಮಾಡುವೆನು. ಅವರೂ ನನ್ನ ಸಂಗಡ ಊಟಮಾಡುವರು.


“ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡವರು ಧನ್ಯರು. ಹೀಗೆ ಅವರಿಗೆ ಜೀವವೃಕ್ಷದ ಹಕ್ಕು ಇರುವುದು. ಅವರು ದ್ವಾರಗಳ ಮೂಲಕ ಆ ಪಟ್ಟಣದೊಳಕ್ಕೆ ಸೇರುವರು.


“ಕತ್ತಲೆಯಿಂದ ಬೆಳಕು ಹೊಳೆಯಲಿ,” ಎಂದು ಆಜ್ಞಾಪಿಸಿದ ದೇವರು ತಾವೇ, ತಮ್ಮ ಪ್ರಕಾಶವನ್ನು ನಮ್ಮ ಹೃದಯದ ಮೇಲೆ ಬೆಳಗಿಸಿದ್ದಾರೆ. ಹೀಗೆ ಕ್ರಿಸ್ತ ಯೇಸುವಿನ ಮುಖದಲ್ಲಿ ಪ್ರತಿಬಿಂಬಿಸುತ್ತಿರುವ ದೇವರ ಮಹಿಮೆಯ ತಿಳುವಳಿಕೆಯನ್ನು ನಮ್ಮಲ್ಲಿ ಉದಯಿಸುವಂತಾಗಿದೆ.


ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವರು ಕೇಳಲಿ. ಯಾರು ಜಯ ಹೊಂದುತ್ತಾರೋ ಅವರಿಗೆ ಬಚ್ಚಿಟ್ಟಿರುವ ಮನ್ನಾವನ್ನು ಕೊಡುವೆನು. ಇದಲ್ಲದೆ ಅವರಿಗೆ ಬಿಳಿಕಲ್ಲನ್ನೂ ಆ ಕಲ್ಲಿನ ಮೇಲೆ ಕೆತ್ತಿದ ಹೊಸ ಹೆಸರನ್ನೂ ಕೊಡುವೆನು. ಆ ಹೆಸರನ್ನು ಹೊಂದಿದವನಿಗೇ ಹೊರತು, ಅದು ಮತ್ತಾರಿಗೂ ತಿಳಿಯದು.


ಹೀಗೆ ನಾನು ಇವರಲ್ಲಿಯೂ ನೀವು ನನ್ನಲ್ಲಿಯೂ ಇರುವಂತೆ ಇವರೂ ಐಕ್ಯತೆಯಲ್ಲಿ ಪರಿಪೂರ್ಣವಾಗಿರಲಿ. ಆಗ ನೀವು ನನ್ನನ್ನು ಕಳುಹಿಸಿದ್ದೀರಿ ಎಂದೂ ನನ್ನನ್ನು ಪ್ರೀತಿಸಿದಂತೆ ಇವರನ್ನು ನೀವು ಪ್ರೀತಿಸಿದ್ದೀರಿ ಎಂದೂ ಲೋಕವು ತಿಳಿದುಕೊಳ್ಳುವುದು.


ನನ್ನ ನೀತಿಯಲ್ಲಿ ಸಂತೋಷಪಡುವವರು ಉತ್ಸಾಹಧ್ವನಿ ಮಾಡಿ, ಆನಂದಪಡಲಿ; “ಹೌದು, ತಮ್ಮ ಸೇವಕನ ಅಭಿವೃದ್ಧಿಯಲ್ಲಿ ಸಂತೋಷಪಡುವ ಯೆಹೋವ ದೇವರು ಮಹಿಮೆಪಡಲಿ,” ಎಂದು ಅವರು ಯಾವಾಗಲೂ ಹೇಳಲಿ.


ಇಗೋ, ನಾವು ದೇವರ ಮಕ್ಕಳೆಂದು ಕರೆಯುವುದರಲ್ಲಿ ತಂದೆಯು ಎಂಥಾ ಮಹಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾರಲ್ಲಾ! ನಿಜಕ್ಕೂ ನಾವು ದೇವರ ಮಕ್ಕಳಾಗಿದ್ದೇವೆ. ಈ ಕಾರಣದಿಂದ ಲೋಕವು ನಮ್ಮನ್ನು ತಿಳಿದುಕೊಳ್ಳುವುದಿಲ್ಲ, ಏಕೆಂದರೆ ಅದು ತಂದೆಯನ್ನು ತಿಳಿದುಕೊಳ್ಳಲಿಲ್ಲ.


ನಿನ್ನ ದೇವರಾದ ಯೆಹೋವ ದೇವರು ನಿನ್ನೊಂದಿಗಿದ್ದಾರೆ. ನಿನ್ನನ್ನು ರಕ್ಷಿಸಲು ಶಕ್ತರಾಗಿದ್ದಾರೆ. ನಿನ್ನಲ್ಲಿ ಬಹಳವಾಗಿ ಹರ್ಷಾನಂದಗೊಳ್ಳುವರು. ತಮ್ಮ ಪ್ರೀತಿಯ ನಿಮಿತ್ತ ಅವರು ಇನ್ನು ಮುಂದೆ ನಿನ್ನನ್ನು ಖಂಡಿಸುವುದಿಲ್ಲ, ಆದರೆ ಆನಂದ ಸ್ವರದಿಂದ ನಿನ್ನ ಮೇಲೆ ಉಲ್ಲಾಸಿಸುವರು.”


ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರು ಹಾಗೂ ನಮ್ಮ ತಂದೆ ದೇವರು ನಮ್ಮನ್ನು ಪ್ರೀತಿಸಿ ಕೃಪೆಯಿಂದ ಕೊಟ್ಟಿರುವ ನಮಗೆ ನಿತ್ಯ ಆದರಣೆಯನ್ನೂ ಒಳ್ಳೆಯ ನಿರೀಕ್ಷೆಯನ್ನೂ ನೀಡಿ,


ಯೆಹೋವ ದೇವರು ಹೇಳುವುದನ್ನು ಕೇಳಿ: “ನಾನು ಇಸ್ರಾಯೇಲ್ ವಂಶದವರೊಂದಿಗೂ, ಯೆಹೂದ ವಂಶದವರೊಂದಿಗೂ ಒಂದು ಹೊಸ ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವು.


ಅವರು ನನ್ನನ್ನು ಮಹಿಮೆಪಡಿಸುವರು. ಏಕೆಂದರೆ ಅವರು ನನ್ನದರೊಳಗಿಂದ ತೆಗೆದುಕೊಂಡು ನಿಮಗೆ ಪ್ರಕಟಿಸುವರು.


ನಾನು ನಿಮ್ಮನ್ನು ಅನಾಥರನ್ನಾಗಿ ಬಿಡುವುದಿಲ್ಲ. ನಿಮ್ಮ ಬಳಿಗೆ ನಾನು ಬರುತ್ತೇನೆ.


ಕರ್ತ ಯೇಸು ನಿನ್ನ ಆತ್ಮದೊಂದಿಗೆ ಇರಲಿ. ಕೃಪೆಯು ನಿಮ್ಮೆಲ್ಲರೊಂದಿಗಿರಲಿ.


ಹಾಗೆಯೇ, ನಾವು ಮುಸುಕಿಲ್ಲದ ನಮ್ಮ ಮುಖದಲ್ಲಿ ಕರ್ತದೇವರ ಮಹಿಮೆಯನ್ನು ಪ್ರತಿಬಿಂಬಿಸುವ ಕನ್ನಡಿಯಂತೆ ಇದ್ದೇವೆ. ಹೀಗೆ ನಾವು ಮಹಿಮೆಯಿಂದ ಅಧಿಕ ಮಹಿಮೆಗೆ ಸಾಗಿ ಅವರ ಸಾರೂಪ್ಯಕ್ಕೆ ಅನುಸಾರವಾಗಿ ನಾವು ರೂಪಾಂತರವಾಗುತ್ತಿದ್ದೇವೆ. ಈ ರೂಪಾಂತರವು ದೇವರಾತ್ಮನಾಗಿರುವ ಕರ್ತನಿಂದಲೇ.


ಆಗ ಕರ್ತ ಯೇಸು ನನ್ನೊಂದಿಗೆ ಮಾತನಾಡುತ್ತಿರುವುದನ್ನು ಕಂಡೆನು. ಅವರು, ‘ತಡಮಾಡದೆ! ತಕ್ಷಣವೇ ಯೆರೂಸಲೇಮನ್ನು ಬಿಟ್ಟು ಹೊರಟು ಹೋಗು, ಏಕೆಂದರೆ ನೀನು ನನ್ನನ್ನು ಕುರಿತು ಹೇಳುವ ಸಾಕ್ಷಿಯನ್ನು ಅವರು ಸ್ವೀಕರಿಸುವುದಿಲ್ಲ,’ ಎಂದರು.


ಅದು ನನ್ನಿಂದ ತಗೆದುಹಾಕಬೇಕೆಂದು ನಾನು ಮೂರು ಸಾರಿ ಕರ್ತ ಯೇಸುವನ್ನು ಬೇಡಿಕೊಂಡೆನು.


ಆಗ ಮೋಶೆ, “ನಿಮ್ಮ ಮಹಿಮೆಯನ್ನು ನನಗೆ ತೋರಿಸಿ ಎಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ,” ಎಂದನು.


ಅವರು ನಿಮ್ಮನ್ನು ಪ್ರೀತಿಸಿ, ನಿಮ್ಮನ್ನು ಆಶೀರ್ವದಿಸಿ, ನಿಮ್ಮನ್ನು ಅಭಿವೃದ್ಧಿಗೊಳಿಸಿ ಮತ್ತು ನಿಮಗೆ ಕೊಡುತ್ತೇನೆಂದು ಅವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಆ ದೇಶದಲ್ಲಿ ನಿಮ್ಮ ಗರ್ಭದ ಫಲವನ್ನೂ ಅಂದರೆ, ಭೂಮಿಯ ಹುಟ್ಟುವಳಿಯನ್ನೂ, ನಿಮ್ಮ ಧಾನ್ಯವನ್ನೂ, ನಿಮ್ಮ ಹೊಸ ದ್ರಾಕ್ಷಾರಸವನ್ನೂ, ನಿಮ್ಮ ಎಣ್ಣೆಯನ್ನೂ, ನಿಮ್ಮ ಪಶುಗಳನ್ನೂ, ನಿಮ್ಮ ಕುರಿಗಳ ಮಂದೆಗಳನ್ನೂ ಆಶೀರ್ವದಿಸುವರು.


ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ; ಹಂಬಲಿಸಿ ನನ್ನನ್ನು ಹುಡುಕುವವರು ನನ್ನನ್ನು ಕಂಡುಕೊಳ್ಳುವರು.


ಅವನು ಯೆಹೋವ ದೇವರನ್ನು ಹಿಂಬಾಲಿಸುವುದನ್ನು ಬಿಟ್ಟುಬಿಡದೆ, ದೇವರನ್ನೇ ಆತುಕೊಂಡು ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಆಜ್ಞೆಗಳನ್ನು ಕೈಗೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು