Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 14:22 - ಕನ್ನಡ ಸಮಕಾಲಿಕ ಅನುವಾದ

22 ಇಸ್ಕರಿಯೋತ ಅಲ್ಲದ ಮತ್ತೊಬ್ಬ ಯೂದನು, “ಸ್ವಾಮೀ, ನೀವು ಲೋಕಕ್ಕೆ ಪ್ರಕಟವಾಗದೆ ನಮಗೆ ಮಾತ್ರ ಪ್ರಕಟವಾಗುವುದು ಏಕೆ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಯೂದನು, (ಇವನು ಇಸ್ಕರಿಯೋತನಲ್ಲ) “ಕರ್ತನೇ, ನೀನು ಲೋಕಕ್ಕೆ ಕಾಣಿಸಿಕೊಳ್ಳದೆ ನಮಗೆ ಮಾತ್ರ ಕಾಣಿಸಿಕೊಳ್ಳುವುದಕ್ಕೆ ಕಾರಣವೇನು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆಗ ಯೂದನು, (ಈತ ಇಸ್ಕರಿಯೋತಿನ ಯೂದನಲ್ಲ) “ಪ್ರಭೂ, ನೀವು ಈ ಲೋಕಕ್ಕೆ ನಿಮ್ಮನ್ನು ಸಾಕ್ಷಾತ್ಕರಿಸಿಕೊಳ್ಳದೆ ನಮಗೆ ಮಾತ್ರ ಸಾಕ್ಷಾತ್ಕರಿಸಿಕೊಳ್ಳುತ್ತೀರಲ್ಲಾ, ಏಕೆ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಯೂದನು (ಇವನು ಇಸ್ಕರಿಯೋತನಲ್ಲ) - ಸ್ವಾಮೀ, ನೀನು ಲೋಕಕ್ಕೆ ಕಾಣಿಸಿಕೊಳ್ಳದೆ ನಮಗೆ ಮಾತ್ರ ಕಾಣಿಸಿಕೊಳ್ಳುವದಕ್ಕೆ ಏನು ಸಂಭವಿಸಿತು ಎಂದು ಕೇಳಿದ್ದಕ್ಕೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆಗ ಯೂದನು (ಇಸ್ಕರಿಯೋತ ಯೂದನಲ್ಲ), “ಪ್ರಭುವೇ, ನೀನು ನಿನ್ನನ್ನು ಈ ಲೋಕಕ್ಕೆ ತೋರ್ಪಡಿಸಿಕೊಳ್ಳದೆ ನಮಗೆ ಮಾತ್ರ ತೋರ್ಪಡಿಸಿಕೊಳ್ಳಬೇಕೆಂದಿರುವುದೇಕೆ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ತನ್ನಾ ಜುದಾಸಾನ್, ಜುದಾಸ್ ಇಸ್ಕರಿಯೊತ್ ನ್ಹಯ್, “ಧನಿಯಾ ತಿಯಾ ಅಮ್ಕಾ ಎವ್ಡೆಚ್ ತುಕಾ ದಾಕ್ವುನ್ ದಿ ಅನಿ ಜಗಾಕ್ ದಾಕ್ವುನ್ ದಿನೆಯ್ ಕಶ್ಯಾಕ್?” ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 14:22
12 ತಿಳಿವುಗಳ ಹೋಲಿಕೆ  

ಅವರು ಹಿಂದಿರುಗಿದಾಗ, ತಾವು ವಾಸಿಸುತ್ತಿದ್ದ ಮಾಳಿಗೆ ಮೇಲಿನ ಕೋಣೆಯೊಳಗೆ ಹೋದರು. ಅವರು ಯಾರಾರೆಂದರೆ: ಪೇತ್ರ, ಯೋಹಾನ, ಯಾಕೋಬ, ಅಂದ್ರೆಯ; ಫಿಲಿಪ್ಪ, ತೋಮ; ಬಾರ್ತೊಲೊಮಾಯ ಮತ್ತಾಯ; ಅಲ್ಫಾಯನ ಮಗ ಯಾಕೋಬ, ದೇಶಾಭಿಮಾನಿ ಸೀಮೋನ ಮತ್ತು ಯಾಕೋಬನ ಮಗ ಯೂದ.


ಯಾಕೋಬನ ಮಗ ಯೂದ, ಮತ್ತು ದ್ರೋಹಿಯಾದ ಇಸ್ಕರಿಯೋತ ಯೂದ.


ಫಿಲಿಪ್ಪ, ಬಾರ್ತೊಲೊಮಾಯ; ತೋಮ, ಸುಂಕದವನಾದ ಮತ್ತಾಯ; ಅಲ್ಫಾಯನ ಮಗ ಯಾಕೋಬ, ತದ್ದಾಯ;


ಕ್ರಿಸ್ತ ಯೇಸುವಿನ ದಾಸನೂ ಯಾಕೋಬನ ಸಹೋದರನೂ ಆಗಿರುವ ಯೂದನು, ತಂದೆಯಾದ ದೇವರಿಗೆ ಪ್ರಿಯರಾದವವರಿಗೂ ಕ್ರಿಸ್ತ ಯೇಸು ಸುರಕ್ಷತೆಯನ್ನೂ ಅವರ ಕರೆಯುವಿಕೆಯನ್ನೂ ಹೊಂದಿದವರಿಗೆ ಬರೆಯುವ ಪತ್ರ:


ಯೇಸುವಿನ ಶಿಷ್ಯರಲ್ಲಿ ಅನೇಕರು ಈ ಮಾತುಗಳನ್ನು ಕೇಳಿ, “ಇದು ಕಠಿಣವಾದ ಮಾತು. ಇದನ್ನು ಯಾರು ಪಾಲಿಸುವರು?” ಎಂದರು.


ನಿಕೊದೇಮನು ಯೇಸುವಿಗೆ, “ಇದೆಲ್ಲಾ ಹೇಗೆ ಸಾಧ್ಯ?” ಎಂದು ಕೇಳಿದನು.


ನಿಕೊದೇಮನು ಯೇಸುವಿಗೆ, “ಒಬ್ಬನು ವಯಸ್ಸಾದ ಮೇಲೆ ಮತ್ತೆ ಹುಟ್ಟುವುದು ಹೇಗೆ? ಅವನು ತನ್ನ ತಾಯಿಯ ಗರ್ಭದಲ್ಲಿ ಎರಡನೆಯ ಸಾರಿ ಪ್ರವೇಶಿಸಿ ಹುಟ್ಟುವುದಾದೀತೇ?” ಎಂದು ಕೇಳಿದನು.


ಅಂದ್ರೆಯ, ಫಿಲಿಪ್ಪ, ಬಾರ್ತೊಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗ ಯಾಕೋಬ, ತದ್ದಾಯ, ಕಾನಾನ್ಯನಾದ ಸೀಮೋನನು.


ಆದ್ದರಿಂದ ಯೆಹೂದ್ಯರು ಒಬ್ಬರಿಗೊಬ್ಬರು ಚರ್ಚೆಮಾಡುತ್ತಾ, “ಈ ಮನುಷ್ಯನು ತನ್ನ ಮಾಂಸವನ್ನು ತಿನ್ನುವುದಕ್ಕೆ ನಮಗೆ ಹೇಗೆ ಕೊಡುತ್ತಾನೆ?” ಎಂದರು.


ಅದಕ್ಕೆ ಆ ಸ್ತ್ರೀಯು, “ಅಯ್ಯಾ, ನೀರು ಸೇದುವುದಕ್ಕೆ ನಿಮ್ಮ ಹತ್ತಿರ ಏನೂ ಇಲ್ಲವಲ್ಲಾ, ಬಾವಿಯೋ ಆಳವಾಗಿದೆ. ಹೀಗಿರುವಲ್ಲಿ ಜೀವಜಲವು ನಿನಗೆ ಎಲ್ಲಿಂದ ಬಂದೀತು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು