Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 14:23 - ಕನ್ನಡ ಸಮಕಾಲಿಕ ಅನುವಾದ

23 ಯೇಸು ಅವನಿಗೆ, “ಯಾವನಾದರೂ ನನ್ನನ್ನು ಪ್ರೀತಿಸುವುದಾದರೆ ಅವನು ನನ್ನ ವಾಕ್ಯವನ್ನು ಕೈಗೊಳ್ಳುವನು. ನನ್ನ ತಂದೆಯು ಅವನನ್ನು ಪ್ರೀತಿಸುವರು. ಇದಲ್ಲದೆ ನಾವು ಅವನ ಬಳಿಗೆ ಬಂದು ಅವನೊಂದಿಗೆ ನಿವಾಸಮಾಡಿಕೊಳ್ಳುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಯೇಸು ಅವನಿಗೆ, “ಯಾವನಾದರೂ ನನ್ನನ್ನು ಪ್ರೀತಿಸುವುದಾದರೆ ನನ್ನ ಮಾತಿನಂತೆ ನಡೆಯುವನು. ಅವನನ್ನು ನನ್ನ ತಂದೆಯು ಪ್ರೀತಿಸುವನು ಮತ್ತು ನಾವಿಬ್ಬರೂ ಅವನ ಬಳಿಗೆ ಬಂದು, ಅವನೊಂದಿಗೆ ನೆಲೆಸುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಆಗ ಯೇಸು, “ನನ್ನನ್ನು ಪ್ರೀತಿಸುವವನು ನನ್ನ ಮಾತನ್ನು ಕೈಗೊಂಡು ನಡೆಯುವನು. ಅವನನ್ನು ನನ್ನ ಪಿತನೂ ಪ್ರೀತಿಸುವರು ಮತ್ತು ನಾವಿಬ್ಬರೂ ಅವನ ಬಳಿ ಬಂದು ಅವನಲ್ಲಿ ನೆಲೆಸುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಯೇಸು ಅವನಿಗೆ - ಯಾರಾದರೂ ನನ್ನನ್ನು ಪ್ರೀತಿಸುವವನಾದರೆ ನನ್ನ ಮಾತನ್ನು ಕೈಕೊಂಡು ನಡೆಯುವನು; ಅವನನ್ನು ನನ್ನ ತಂದೆಯು ಪ್ರೀತಿಸುವನು, ಮತ್ತು ನಾವಿಬ್ಬರೂ ಅವನ ಬಳಿಗೆ ಬಂದು ಅವನ ಬಳಿಯಲ್ಲಿ ಬಿಡಾರವನ್ನು ಮಾಡಿಕೊಳ್ಳುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಯೇಸು ಹೀಗೆ ಉತ್ತರಕೊಟ್ಟನು: “ನನ್ನನ್ನು ಪ್ರೀತಿಸುವವನು ನನ್ನ ಉಪದೇಶಕ್ಕೆ ವಿಧೇಯನಾಗುವನು. ನನ್ನ ತಂದೆಯು ಅವನನ್ನು ಪ್ರೀತಿಸುವನು. ನನ್ನ ತಂದೆ ಮತ್ತು ನಾನು ಅವನ ಬಳಿಗೆ ಬಂದು ಅವನೊಂದಿಗೆ ವಾಸಿಸುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ತನ್ನಾ ಜೆಜುನ್ ತೆಕಾ, “ಜೆ ಕೊನ್ ಮಾಜೊ ಪ್ರೆಮ್ ಕರ್‍ತಾ ತೊ ಮಿಯಾ ಕಾಯ್ ಶಿಕ್ವುತಾ ತೆ ಮಾನುನ್ ಘೆತಾ. ಮಾಜೊ ಬಾಬಾ ತೆಂಚೊ ಪ್ರೆಮ್ ಕರ್‍ತಾ ಅನಿ ಮಿಯಾ ಅನಿ ಮಾಜೊ ಬಾಬಾ ದೊಗೆಬಿ ತೆಂಚ್ಯಾಕ್ಡೆ ಯೆತಾಂವ್ ಅನಿ ತೆಂಚ್ಯಾ ಮದ್ದಿ ರ್‍ಹಾತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 14:23
30 ತಿಳಿವುಗಳ ಹೋಲಿಕೆ  

ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಕೈಗೊಳ್ಳುವವರೇ ನನ್ನನ್ನು ಪ್ರೀತಿಸುವವರು. ನನ್ನನ್ನು ಪ್ರೀತಿಸುವವನು ತನ್ನ ತಂದೆಗೆ ಪ್ರಿಯನಾಗಿರುವನು. ನಾನು ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ಪ್ರಕಟಿಸಿಕೊಳ್ಳುವೆನು,” ಎಂದು ಹೇಳಿದರು.


“ನೀವು ನನ್ನನ್ನು ಪ್ರೀತಿಸುವವರಾದರೆ ನನ್ನ ಆಜ್ಞೆಗಳನ್ನು ಅನುಸರಿಸುವಿರಿ.


ನೀವಂತೂ ಯಾವುದನ್ನು ಮೊದಲಿನಿಂದ ಕೇಳಿದ್ದೀರೋ ಅದು ನಿಮ್ಮಲ್ಲಿ ನೆಲೆಗೊಂಡಿರಲಿ. ಹಾಗಿದ್ದರೆ, ನೀವು ಸಹ ಮಗನಲ್ಲಿಯೂ ತಂದೆಯಲ್ಲಿಯೂ ನೆಲೆಗೊಂಡಿರುತ್ತೀರಿ.


ಪ್ರಿಯ ಮಕ್ಕಳೇ, ನೀವು ದೇವರಿಗೆ ಸೇರಿದವರಾಗಿದ್ದೀರಿ, ಸುಳ್ಳು ಪ್ರವಾದಿಗಳನ್ನು ಜಯಿಸಿದ್ದೀರಿ. ಏಕೆಂದರೆ ನಿಮ್ಮಲ್ಲಿರುವ ದೇವರು ಲೋಕದಲ್ಲಿ ಇರುವವನಿಗಿಂತ ದೊಡ್ಡವರಾಗಿದ್ದಾರೆ.


ದೇವರ ಆಲಯಕ್ಕೂ ವಿಗ್ರಹಗಳಿಗೂ ಏನು ಒಪ್ಪಂದ? ನಾವು ಜೀವಿಸುವ ದೇವರ ಆಲಯವಾಗಿದ್ದೇವೆ. ದೇವರು ಹೀಗೆ ಹೇಳಿದ್ದಾರೆ: “ನಾನು ಅವರೊಂದಿಗೆ ವಾಸಿಸುವೆನು, ಅವರ ಮಧ್ಯದಲ್ಲಿ ತಿರುಗಾಡುವೆನು. ನಾನು ಅವರಿಗೆ ದೇವರಾಗಿರುವೆನು ಮತ್ತು ಅವರು ನನ್ನ ಜನರಾಗಿರುವರು.”


ಮಹೋನ್ನತ ದೇವರ ಆಶ್ರಯದಲ್ಲಿ ವಾಸಿಸುವವರು ಸರ್ವಶಕ್ತರ ನೆರಳಿನಲ್ಲಿ ವಿಶ್ರಮಿಸುವರು.


ನಾನು ಮತ್ತು ನನ್ನ ತಂದೆ ಒಂದೇ ಆಗಿದ್ದೇವೆ,” ಎಂದು ಉತ್ತರಕೊಟ್ಟರು.


ಏಕೆಂದರೆ ಉನ್ನತನೂ, ಮಹೋನ್ನತನೂ, ನಿತ್ಯವಾಗಿ ವಾಸಿಸುವವನೂ, ಪರಿಶುದ್ಧನು ಎಂಬ ಹೆಸರುಳ್ಳಾತನೂ ಹೇಳುವುದೇನೆಂದರೆ: “ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿಸುವ ನಾನಾದರೂ, ಪಶ್ಚಾತ್ತಾಪ ಪಡುವ ದೀನಮನದೊಂದಿಗೆ ನಾನಿದ್ದೇನೆ. ದೀನನ ಆತ್ಮವನ್ನು ಹಾಗು ಪಶ್ಚಾತ್ತಾಪ ಪಡುವ ಮನಸ್ಸನ್ನು ಉಜ್ಜೀವಗೊಳಿಸುವವನಾಗಿದ್ದೇನೆ.


ಯಾರು ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುತ್ತಾರೋ ಅವರು ನನ್ನಲ್ಲಿ ನೆಲೆಸಿರುತ್ತಾರೆ. ನಾನು ಅವರಲ್ಲಿ ನೆಲೆಸಿರುತ್ತೇನೆ.


ಅವರೇ ಸತ್ಯದ ಆತ್ಮರಾಗಿದ್ದಾರೆ. ಲೋಕವು ಅವರನ್ನು ನೋಡದೆಯೂ ತಿಳಿಯದೆಯೂ ಇರುವುದರಿಂದ ಸತ್ಯದ ಆತ್ಮರಾಗಿರುವ ಅವರನ್ನು ಸ್ವೀಕರಿಸಲಾರದು. ನೀವು ಅವರನ್ನು ಬಲ್ಲಿರಿ. ಏಕೆಂದರೆ ಅವರು ನಿಮ್ಮೊಂದಿಗಿರುವರು ಮತ್ತು ನಿಮ್ಮೊಳಗೂ ನೆಲೆಸಿರುವರು.


ತರುವಾಯ ದೇವರು, “ನಾವು ನಮ್ಮ ಸ್ವರೂಪದಲ್ಲಿ, ನಮ್ಮ ಹೋಲಿಕೆಯಲ್ಲಿ ಮನುಷ್ಯನನ್ನು ಉಂಟುಮಾಡೋಣ. ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಪಶುಗಳ ಮೇಲೆಯೂ ಕಾಡುಮೃಗಗಳ ಮೇಲೆಯೂ ನೆಲದ ಮೇಲೆ ಹರಿದಾಡುವ ಎಲ್ಲಾ ಜೀವಿಗಳ ಮೇಲೆಯೂ ಆಳ್ವಿಕೆ ಮಾಡಲಿ,” ಎಂದರು.


ಪಟ್ಟಣದಲ್ಲಿ ನಾನು ಆಲಯವನ್ನೇ ಕಾಣಲಿಲ್ಲ. ಏಕೆಂದರೆ ಕರ್ತ ಆಗಿರುವ ಸರ್ವಶಕ್ತ ದೇವರೂ, ಕುರಿಮರಿಯಾಗಿರುವವರೂ ಆಲಯವಾಗಿದ್ದಾರೆ.


ನಾವು ಇಳಿದು ಹೋಗಿ, ಇವರು ಒಬ್ಬರ ಮಾತನ್ನು ಒಬ್ಬರು ತಿಳಿಯದಂತೆ, ಇವರ ಭಾಷೆಯನ್ನು ಗಲಿಬಿಲಿ ಮಾಡೋಣ,” ಎಂದರು.


ಇನ್ನು ಯಾವ ಶಾಪವೂ ಇರುವುದಿಲ್ಲ. ಅದರಲ್ಲಿ ದೇವರ ಮತ್ತು ಕುರಿಮರಿಯಾದವರ ಸಿಂಹಾಸನವಿರುವುದು. ದೇವರ ದಾಸರು ಅವರಿಗೆ ಸೇವೆಮಾಡುವರು.


ಯೆಹೋವ ದೇವರೇ, ತಲತಲಾಂತರಗಳಲ್ಲಿ ನೀವು ನಮ್ಮ ವಾಸಸ್ಥಾನವಾಗಿದ್ದೀರಿ.


ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಯಾರು ನನ್ನ ಮಾತನ್ನು ಪಾಲಿಸುತ್ತಾರೋ ಅವರು ಎಂದೆಂದಿಗೂ ಮರಣವನ್ನು ಕಾಣುವುದಿಲ್ಲ,” ಎಂದರು.


ಆಗ ಯೆಹೂದಿ ನಾಯಕರು ಯೇಸುವಿಗೆ, “ನಿನಗೆ ದೆವ್ವ ಹಿಡಿದಿದೆ ಎಂದು ನಮಗೆ ಈಗ ತಿಳಿಯಿತು. ಅಬ್ರಹಾಮನು ಮತ್ತು ಪ್ರವಾದಿಗಳು ಸತ್ತರು. ಆದರೆ, ‘ಯಾರಾದರೂ ನನ್ನ ಮಾತನ್ನು ಪಾಲಿಸಿದರೆ ಅವರು ಎಂದೆಂದಿಗೂ ಮರಣ ಹೊಂದುವುದಿಲ್ಲ,’ ಎಂದು ನೀನು ಹೇಳುತ್ತೀಯಲ್ಲಾ?


ನನ್ನನ್ನು ಪ್ರೀತಿಸದವನು ನನ್ನ ವಾಕ್ಯಗಳನ್ನು ಕೈಗೊಳ್ಳುವುದಿಲ್ಲ. ನೀವು ಕೇಳಿದ ವಾಕ್ಯವು ನನ್ನ ವಾಕ್ಯಗಳಲ್ಲ. ಅವು ನನ್ನನ್ನು ಕಳುಹಿಸಿದ ನನ್ನ ತಂದೆಯ ವಾಕ್ಯಗಳಾಗಿವೆ.


ನಾನು ನನ್ನ ತಂದೆಯ ಆಜ್ಞೆಗಳನ್ನು ಪಾಲಿಸಿ ಅವರ ಪ್ರೀತಿಯಲ್ಲಿ ನೆಲೆಗೊಂಡಿರುವಂತೆಯೇ ನೀವು ನನ್ನ ಆಜ್ಞೆಗಳನ್ನು ಪಾಲಿಸಿ ನಡೆದರೆ ನನ್ನ ಪ್ರೀತಿಯಲ್ಲಿ ನೆಲೆಗೊಳ್ಳುವಿರಿ.


ಏಕೆಂದರೆ ನೀವು ನನ್ನನ್ನು ಪ್ರೀತಿಸಿ ನಾನು ದೇವರಿಂದ ಹೊರಟು ಬಂದವನೆಂದು ನಂಬಿದ್ದರಿಂದ ತಂದೆಯು ತಾವೇ ನಿಮ್ಮನ್ನು ಪ್ರೀತಿಸುತ್ತಾರೆ.


ನಂಬಿಕೆಯ ಮೂಲಕ ಕ್ರಿಸ್ತನು ನಿಮ್ಮ ಹೃದಯಗಳಲ್ಲಿ ವಾಸಿಸಲಿ. ನೀವು ಪ್ರೀತಿಯಲ್ಲಿ ಬೇರೂರಿ ನೆಲೆಗೊಂಡು ನಿಂತು


ಯಾವನಾದರೂ ದೇವರ ವಾಕ್ಯವನ್ನು ಕೈಕೊಂಡು ನಡೆದರೆ ಅವನಲ್ಲಿ ನಿಜವಾಗಿ ದೇವರ ಪ್ರೀತಿಯು ಪರಿಪೂರ್ಣವಾಗಿದೆ. ಇದರಿಂದಲೇ ನಾವು ದೇವರಲ್ಲಿದ್ದೇವೆಂಬುದನ್ನು ತಿಳಿದುಕೊಳ್ಳುತ್ತೇವೆ.


ದೇವರ ಪ್ರೀತಿ ಏನೆಂದರೆ: ದೇವರ ಆಜ್ಞೆಗಳನ್ನು ಕೈಗೊಂಡು ನಡೆಯುವುದೇ. ಅವರ ಆಜ್ಞೆಗಳು ಕಠಿಣವಾದವುಗಳಲ್ಲ.


ದೇವರ ಆಜ್ಞೆಗಳನ್ನು ಅನುಸರಿಸಿ ಬಾಳುವುದೇ ಪ್ರೀತಿ. ಪ್ರೀತಿಯಲ್ಲಿ ಬಾಳಬೇಕೆಂಬುದೇ ನೀವು ಮೊದಲಿನಿಂದಲೂ ಕೇಳಿದ ಅಪ್ಪಣೆಯಾಗಿದೆ.


ಇದಲ್ಲದೆ ಸಿಂಹಾಸನದೊಳಗಿಂದ ಬಂದ ಮಹಾಧ್ವನಿಯು ನನಗೆ ಕೇಳಿಸಿತು. ಅದು, “ಇಗೋ ದೇವರ ನಿವಾಸವು ಮಾನವರೊಂದಿಗೆ ಇದೆ. ದೇವರು ಅವರೊಡನೆ ವಾಸಮಾಡುವರು. ಮಾನವರು ದೇವರಿಗೆ ಪ್ರಜೆಯಾಗಿರುವರು. ದೇವರು ತಾವೇ ಅವರ ಸಂಗಡ ಇರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು