Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 14:6 - ಕನ್ನಡ ಸಮಕಾಲಿಕ ಅನುವಾದ

6 ಯೇಸು ಅವನಿಗೆ, “ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ. ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೇಸು ಅವನಿಗೆ, “ನಾನೇ ಮಾರ್ಗವೂ, ಸತ್ಯವೂ ಮತ್ತು ಜೀವವೂ ಆಗಿದ್ದೇನೆ. ನನ್ನ ಮೂಲಕವಲ್ಲದೆ ಯಾರೂ ತಂದೆಯ ಬಳಿಗೆ ಬರಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅದಕ್ಕೆ ಯೇಸು, “ಮಾರ್ಗವೂ ಸತ್ಯವೂ ಜೀವವೂ ನಾನೇ. ನನ್ನ ಮುಖಾಂತರ ಬಾರದ ಹೊರತು ಯಾರೂ ಪಿತನ ಬಳಿಗೆ ಬರಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯೇಸು ಅವನಿಗೆ - ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೇಸು, “ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ. ತಂದೆಯ ಬಳಿಗೆ ಹೋಗಲು ನಾನೇ ಏಕೈಕ ಮಾರ್ಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತನ್ನಾ ಜೆಜುನ್ ತೆಕಾ “ಮಿಯಾಚ್ ವಾಟ್, ಖರೆ, ಅನಿ ಜಿವ್, ಮಾಜೆಕ್ನಾ ಹೊವ್ನ್ ಗೆಲ್ಯಾ ಶಿವಾಯ್ ಕೊನಾಕ್ಬಿ ಬಾಬಾಕ್ಡೆ ಯೆವ್ಕ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 14:6
57 ತಿಳಿವುಗಳ ಹೋಲಿಕೆ  

ಯೇಸು ಅಲ್ಲದೆ ಬೇರೆ ಯಾರಿಂದಲೂ ರಕ್ಷಣೆಯು ಇಲ್ಲ, ಏಕೆಂದರೆ ಆಕಾಶದ ಕೆಳಗೆ ಮನುಷ್ಯರೊಳಗೆ ಆ ಹೆಸರಲ್ಲದೇ ಬೇರೆ ಯಾವ ಹೆಸರಿನಿಂದಲೂ ರಕ್ಷಣೆಯಾಗುವುದಿಲ್ಲ,” ಎಂದನು.


ನಾನೇ ಬಾಗಿಲು; ನನ್ನ ಮೂಲಕವಾಗಿ ಯಾರು ಪ್ರವೇಶಿಸುವರೋ ಅವರೇ ಸುರಕ್ಷಿತವಾಗಿರುವರು. ಇದಲ್ಲದೆ ಅವರು ಒಳಗೆ ಹೋಗುವರು, ಹೊರಗೆ ಬರುವರು ಮತ್ತು ಮೇವನ್ನು ಕಂಡುಕೊಳ್ಳುವರು.


ಏಕೆಂದರೆ ಕ್ರಿಸ್ತ ಯೇಸುವಿನ ಮೂಲಕ ನಾವೂ ನೀವೂ ಪವಿತ್ರಾತ್ಮ ದೇವರಿಂದ ತಂದೆಯ ಬಳಿಗೆ ಪ್ರವೇಶಿಸುವುದಕ್ಕೆ ಮಾರ್ಗವಾಯಿತು.


ಅವರಲ್ಲಿ ಜೀವವಿತ್ತು. ಆ ಜೀವವು ಮಾನವರಿಗೆ ಬೆಳಕಾಗಿತ್ತು.


ದೇವರ ಪುತ್ರ ಆಗಿರುವ ಕ್ರಿಸ್ತ ಯೇಸುವು ಬಂದು, ಸತ್ಯವಾಗಿರುವ ದೇವರನ್ನು ನಾವು ಅರಿತುಕೊಳ್ಳುವ ಹಾಗೆ ಅವರು ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾರೆಂದೂ ನಾವು ಸತ್ಯವಾಗಿರುವ ದೇವರಲ್ಲಿ ಅವರ ಪುತ್ರ ಆಗಿರುವ ಕ್ರಿಸ್ತ ಯೇಸುವಿನಲ್ಲಿ ಇರುವವರಾಗಿದ್ದೇವೆ ಎಂದೂ ನಮಗೆ ಗೊತ್ತಿದೆ. ಈ ಕ್ರಿಸ್ತ ಯೇಸುವೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾರೆ.


ವಾಕ್ಯವೆಂಬುವವರು ದೇಹಧಾರಿಯಾಗಿ ನಮ್ಮ ಮಧ್ಯದಲ್ಲಿ ವಾಸಿಸಿದರು. ನಾವು ಅವರ ಮಹಿಮೆಯನ್ನು ಕಂಡೆವು. ಆ ಮಹಿಮೆಯು ತಂದೆಯಿಂದ ಬಂದ ಏಕೈಕ ಪುತ್ರ ಆಗಿರುವವರಿಗೆ ಇರತಕ್ಕ ಮಹಿಮೆ. ಆ ವಾಕ್ಯವೆಂಬುವವರು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವರಾಗಿದ್ದರು.


ಏಕೆಂದರೆ ನಿಯಮವು ಮೋಶೆಯ ಮೂಲಕ ಕೊಡಲಾಯಿತು. ಕೃಪೆಯೂ ಸತ್ಯವೂ ಕ್ರಿಸ್ತ ಯೇಸುವಿನ ಮೂಲಕ ಬಂದವು.


ಇದಲ್ಲದೆ ಯೇಸು ತಮ್ಮ ಮೂಲಕ ದೇವರ ಕಡೆ ಬರುವವರನ್ನು ಪರಿಪೂರ್ಣವಾಗಿ ರಕ್ಷಿಸುವುದಕ್ಕೆ ಶಕ್ತರಾಗಿದ್ದಾರೆ. ಏಕೆಂದರೆ ಅವರಿಗೋಸ್ಕರ ಯೇಸು ವಿಜ್ಞಾಪನೆ ಮಾಡುವುದಕ್ಕಾಗಿ ಯಾವಾಗಲೂ ಬದುಕುವವರಾಗಿದ್ದಾರೆ.


ಇದಲ್ಲದೆ ನೀವು ಸತ್ಯವನ್ನು ತಿಳಿದುಕೊಳ್ಳುವಿರಿ; ಸತ್ಯವು ನಿಮ್ಮನ್ನು ಸ್ವತಂತ್ರರಾಗಿ ಮಾಡುವುದು,” ಎಂದು ಹೇಳಿದರು.


ಕ್ರಿಸ್ತ ಯೇಸುವು ನೀತಿವಂತರಾಗಿದ್ದರೂ ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವುದಕ್ಕಾಗಿ, ಒಂದೇ ಸಾರಿ ಪಾಪಗಳಿಗೋಸ್ಕರ ಬಾಧೆಪಟ್ಟು ಶರೀರದಲ್ಲಿ ಮರಣಹೊಂದಿದರು. ಆದರೆ ಆತ್ಮದಲ್ಲಿ ಬದುಕುವವರಾದರು.


ತಂದೆ ಸತ್ತವರನ್ನು ಎಬ್ಬಿಸಿ ಬದುಕಿಸುವಂತೆಯೇ ಪುತ್ರನೂ ತನಗಿಷ್ಟ ಬಂದವರನ್ನು ಬದುಕಿಸುತ್ತಾರೆ.


ಕ್ರಿಸ್ತ ಯೇಸುವಿನ ಬೋಧನೆಯಲ್ಲಿ ಬಾಳದೆ ಅದನ್ನು ಅತಿಕ್ರಮಿಸುವವರಿಗೆ ದೇವರಿಲ್ಲ. ಕ್ರಿಸ್ತ ಯೇಸುವಿನ ಬೋಧನೆಯಲ್ಲಿ ಬಾಳುವವರಿಗೆ ತಂದೆ ಮತ್ತು ಪುತ್ರ ಇಬ್ಬರೂಇರುತ್ತಾರೆ.


ಯಾರ ಹೆಸರು ಜೀವ ಪುಸ್ತಕದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವರನ್ನು ಬೆಂಕಿಯ ಕೆರೆಗೆ ದೊಬ್ಬಲಾಯಿತು.


“ನಾನೇ ನಿಜವಾದ ದ್ರಾಕ್ಷಿಯ ಬಳ್ಳಿ, ನನ್ನ ತಂದೆಯೇ ತೋಟಗಾರರು.


“ನನ್ನ ತಂದೆ ಎಲ್ಲವನ್ನೂ ನನಗೆ ಒಪ್ಪಿಸಿದ್ದಾರೆ. ತಂದೆಯ ಹೊರತು ಬೇರೆ ಯಾರೂ ಪುತ್ರನನ್ನು ಅರಿಯರು ಮತ್ತು ಪುತ್ರನು ಯಾರಿಗೆ ತಂದೆಯನ್ನು ಪ್ರಕಟಪಡಿಸಲು ಇಷ್ಟಪಡುತ್ತಾನೋ ಅವರೇ ಹೊರತು ಯಾರೂ ತಂದೆಯನ್ನು ಅರಿಯರು.


ನಾನೇ ಪರಲೋಕದಿಂದ ಬಂದ ಜೀವದ ರೊಟ್ಟಿ. ಈ ರೊಟ್ಟಿಯನ್ನು ಯಾರು ತಿನ್ನುವರೋ ಅವರು ಸದಾಕಾಲವೂ ಬದುಕುವರು. ಲೋಕದ ಜೀವಕ್ಕಾಗಿ ನಾನು ಕೊಡುವ ರೊಟ್ಟಿಯು ನನ್ನ ಮಾಂಸವೇ,” ಎಂದರು.


ದೇವರಾತ್ಮ ಹಾಗು ವಧುವೂ “ಬಾ” ಎನ್ನುತ್ತಾರೆ, ಕೇಳುವವರು, “ಬಾ” ಎನ್ನಲಿ. ಬಾಯಾರಿದವರು ಬರಲಿ, ಇಷ್ಟವುಳ್ಳವರು ಜೀವಜಲವನ್ನು ಉಚಿತವಾಗಿ ತೆಗೆದುಕೊಳ್ಳಲಿ.


ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಯಾರು ನನ್ನ ಮಾತನ್ನು ಪಾಲಿಸುತ್ತಾರೋ ಅವರು ಎಂದೆಂದಿಗೂ ಮರಣವನ್ನು ಕಾಣುವುದಿಲ್ಲ,” ಎಂದರು.


ಮಗನನ್ನು ಅಲ್ಲಗಳೆಯುವವನು ತಂದೆಯನ್ನೂ ಅಲ್ಲಗಳೆಯುತ್ತಾನೆ. ಮಗನನ್ನು ಅಂಗೀಕರಿಸುವವನು ತಂದೆಯನ್ನೂ ಅಂಗೀಕರಿಸುತ್ತಾನೆ.


ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದೆಂದಿಗೂ ನಾಶವಾಗುವುದಿಲ್ಲ. ಅವುಗಳನ್ನು ಯಾರೂ ನನ್ನ ಕೈಯಿಂದ ಕಸಿದುಕೊಳ್ಳಲಾರರು.


ಪಿಲಾತನು ಯೇಸುವಿಗೆ, “ನೀನು ಅರಸನೋ?” ಎಂದು ಕೇಳಲು, ಯೇಸು, “ನಾನು ಅರಸನೆಂದು ನೀನೇ ಹೇಳುತ್ತೀ. ನಾನು ಸತ್ಯಕ್ಕೆ ಸಾಕ್ಷಿ ಕೊಡುವುದಕ್ಕಾಗಿ ಹುಟ್ಟಿ, ಇದಕ್ಕಾಗಿಯೇ ಲೋಕಕ್ಕೆ ಬಂದೆನು; ಸತ್ಯಕ್ಕೆ ಸೇರಿದ ಎಲ್ಲರೂ ನನ್ನ ಸ್ವರವನ್ನು ಕೇಳುತ್ತಾರೆ,” ಎಂದರು.


ಪರಲೋಕದಿಂದ ಇಳಿದುಬಂದು ಲೋಕಕ್ಕೆ ಜೀವವನ್ನು ಕೊಡುವ ದೇವರ ರೊಟ್ಟಿಯು ನಾನೇ,” ಎಂದರು.


ಇನ್ನು ಸ್ವಲ್ಪ ಕಾಲವಾದ ಮೇಲೆ ಲೋಕವು ನನ್ನನ್ನು ಕಾಣುವುದಿಲ್ಲ. ಆದರೆ ನೀವು ನನ್ನನ್ನು ಕಾಣುವಿರಿ. ಏಕೆಂದರೆ ನಾನು ಜೀವಿಸುವುದರಿಂದ ನೀವು ಸಹ ಜೀವಿಸುವಿರಿ.


ಜೀವವುಳ್ಳ ತಂದೆಯು ನನ್ನನ್ನು ಕಳುಹಿಸಿದ್ದಾರೆ. ನಾನು ತಂದೆಯ ನಿಮಿತ್ತವಾಗಿ ಜೀವಿಸುವಂತೆಯೇ ನನ್ನನ್ನು ತಿನ್ನುವವರು ನನ್ನ ನಿಮಿತ್ತವಾಗಿಯೇ ಜೀವಿಸುವರು.


ನೀವು ಸಜೀವ ಕಲ್ಲಾಗಿರುವವರ ಬಳಿಗೆ ಬಂದಿದ್ದೀರಿ. ಆ ಕಲ್ಲು ಮನುಷ್ಯರಿಂದ ನಿರಾಕರಿಸಿದರೂ ಅದು ದೇವರಿಂದ ಆರಿಸಿಕೊಂಡದ್ದೂ ಅವರಿಗೆ ಅಮೂಲ್ಯವಾದದ್ದೂ ಆಯಿತು.


ಯೇಸು ತಿರುಗಿ ಅವರಿಗೆ, “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಕುರಿಗಳಿಗೆ ನಾನೇ ಬಾಗಿಲಾಗಿದ್ದೇನೆ.


ಯೇಸುವಿನ ಮೂಲಕವೇ ನಾವು ಈಗ ಈ ಕೃಪೆಯಲ್ಲಿ ವಿಶ್ವಾಸದಿಂದ ಪ್ರವೇಶಮಾಡಿದ್ದೇವೆ. ಈ ಕೃಪೆಯಲ್ಲಿಯೇ ಈಗ ನಿಂತಿದ್ದೇವೆ. ನಾವು ದೇವರ ಮಹಿಮೆಯಲ್ಲಿ ಪಾಲುಗೊಳ್ಳುತ್ತೆವೆಂಬ ನಿರೀಕ್ಷೆಯಲ್ಲಿ ಆನಂದಪಡುತ್ತೇವೆ.


ನಿಮಗೆ ಜೀವವಾಗಿರುವ ಕ್ರಿಸ್ತ ಯೇಸು ಪ್ರತ್ಯಕ್ಷರಾಗುವಾಗ, ನೀವು ಸಹ ಅವರೊಂದಿಗೆ ಮಹಿಮೆಯಲ್ಲಿ ಪ್ರತ್ಯಕ್ಷರಾಗುವಿರಿ.


“ಮೊದಲನೆಯ ಮನುಷ್ಯನಾದ ಆದಾಮನು ಜೀವಿಸುವ ವ್ಯಕ್ತಿಯಾದನು,” ಎಂದು ಬರೆದಿದೆಯಲ್ಲವೇ? ಕಡೇ ಆದಾಮನು ಜೀವಕೊಡುವ ಆತ್ಮನಾದನು.


ನಮ್ಮಲ್ಲಿ ಪಾಪವಿಲ್ಲವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸಪಡಿಸಿಕೊಳ್ಳುತ್ತೇವೆ, ಸತ್ಯವು ನಮ್ಮಲ್ಲಿಲ್ಲ.


ಸೀಮೋನ್ ಪೇತ್ರನು ಯೇಸುವಿಗೆ, “ಸ್ವಾಮೀ, ನಾವು ಯಾರ ಬಳಿಗೆ ಹೋಗೋಣ? ನಿಮ್ಮಲ್ಲಿಯೇ ನಿತ್ಯಜೀವದ ವಾಕ್ಯಗಳಿವೆ.


ಹೀಗೆ ಪಾಪವು ಮರಣದ ಮೂಲಕ ಆಳಿದಂತೆಯೇ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕ ನಿತ್ಯಜೀವವನ್ನುಂಟು ಮಾಡಲು ಕೃಪೆಯು ನೀತಿಯ ಮೂಲಕ ಆಳುವುದು.


ನಂಬಿಗಸ್ತ ಸಾಕ್ಷಿಯೂ ಸತ್ತವರೊಳಗಿಂದ ಪ್ರಥಮವಾಗಿ ಜೀವಂತವಾಗಿ ಎದ್ದು ಬಂದವರೂ ಭೂರಾಜರಿಗೆ ಒಡೆಯರೂ ಆಗಿರುವ ಕ್ರಿಸ್ತ ಯೇಸುವಿನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ಅವರೇ ನಮ್ಮನ್ನು ಪ್ರೀತಿಸುವವರೂ ತಮ್ಮ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದವರೂ ಆಗಿದ್ದಾರೆ.


ಕ್ರಿಸ್ತ ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿ ಅವರಿಗೆ ಮಹಿಮೆಯನ್ನು ಕೊಟ್ಟ ದೇವರಲ್ಲಿ ನೀವು ಕ್ರಿಸ್ತ ಯೇಸುವಿನ ಮೂಲಕ ವಿಶ್ವಾಸವಿಟ್ಟಿದ್ದೀರಿ. ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿರಲಿ.


ಪರಲೋಕವು ತೆರೆದಿರುವುದನ್ನು ನಾನು ಕಂಡೆನು. ಇಗೋ, ಬಿಳಿಯ ಕುದುರೆಯು ಕಾಣಿಸಿತು. ಅದರ ಮೇಲೆ ಕುಳಿತಿದ್ದವರ ಹೆಸರು, ನಂಬಿಗಸ್ತರು ಮತ್ತು ಸತ್ಯವಂತರು ಎಂಬುದು. ಅವರ ನೀತಿಯಿಂದ ನ್ಯಾಯವಿಚಾರಿಸುತ್ತಾ ಯುದ್ಧಮಾಡುತ್ತಾರೆ.


ಏಕೆಂದರೆ ದೇವರ ಸರ್ವಸಂಪೂರ್ಣತೆಯು ಮಾನವ ದೇಹವಾಗಿ ಕ್ರಿಸ್ತ ಯೇಸುವಿನಲ್ಲಿಯೇ ವಾಸಮಾಡಿದೆ.


ಕ್ರಿಸ್ತ ಯೇಸುವೇ ನೀರಿನಿಂದಲೂ ರಕ್ತದಿಂದಲೂ ಬಂದವರು. ನೀರಿನಿಂದ ಮಾತ್ರವಲ್ಲದೆ ನೀರಿನಿಂದಲೂ ರಕ್ತದಿಂದಲೂ ಬಂದರು, ಇದಕ್ಕೆ ಸಾಕ್ಷಿಕೊಡುವವರು ಪವಿತ್ರಾತ್ಮ ದೇವರೇ, ಏಕೆಂದರೆ ಪವಿತ್ರಾತ್ಮ ದೇವರು ಸತ್ಯವಾಗಿದ್ದಾರೆ.


“ಲವೊದಿಕೀಯದಲ್ಲಿರುವ ಸಭೆಯ ಸಂದೇಶಕನಿಗೆ ಬರೆ: ಆಮೆನ್ ಎಂಬವರೂ ನಂಬಿಗಸ್ತರೂ ಸತ್ಯಸಾಕ್ಷಿಯೂ ದೇವರಿಂದಾದ ಸೃಷ್ಟಿಗೆ ಒಡೆಯರೂ ಆಗಿರುವವರು ಹೇಳುವುದೇನೆಂದರೆ:


ಇವು ಬರಬೇಕಾಗಿದ್ದವುಗಳ ಛಾಯೆಯಾಗಿವೆ, ಆದರೆ ನಿಜಸ್ವರೂಪವು ಕ್ರಿಸ್ತ ಯೇಸುವೇ.


“ಫಿಲದೆಲ್ಫಿಯದಲ್ಲಿರುವ ಸಭೆಯ ಸಂದೇಶಕನಿಗೆ ಬರೆ: ಪರಿಶುದ್ಧರೂ ಸತ್ಯವಂತರೂ ದಾವೀದನ ಬೀಗದ ಕೈಯುಳ್ಳವರೂ ಯಾರೂ ಮುಚ್ಚದಂತೆ ತೆರೆಯುವವರೂ ಯಾರೂ ತೆರೆಯದಂತೆ ಮುಚ್ಚುವವರೂ ಆಗಿರುವವರು ಹೇಳುವುದೇನೆಂದರೆ:


ಜೀವದ ಒಡೆಯನನ್ನು ನೀವು ಕೊಂದಿರಿ. ದೇವರಾದರೋ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದರು. ಇದಕ್ಕೆ ನಾವೇ ಸಾಕ್ಷಿಗಳು.


ಆಮೇಲೆ ದೂತನು ಸ್ಪಟಿಕದಂತೆ ಹೊಳೆಯುವ ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ದೇವರ ಮತ್ತು ಕುರಿಮರಿಯಾದವರ ಸಿಂಹಾಸನದಿಂದ ಹೊರಟು,


ಹೊರಗಿನ ಗುಡಾರವು ಇನ್ನೂ ಇರುವ ತನಕ ಅತಿ ಪವಿತ್ರ ಸ್ಥಳಕ್ಕೆ ಹೋಗುವ ಮಾರ್ಗವು ಇದುವರೆಗೂ ಪ್ರಕಟವಾಗಲಿಲ್ಲವೆಂಬುದನ್ನು ಪವಿತ್ರಾತ್ಮ ದೇವರು ವ್ಯಕ್ತಪಡಿಸುತ್ತಾರೆ


ಯೆಹೂದ್ಯರಲ್ಲದವರು ಪವಿತ್ರಾತ್ಮನಿಂದ ಪರಿಶುದ್ಧರಾಗಿ, ದೇವರಿಗೆ ಅಂಗೀಕೃತವಾದ ಕಾಣಿಕೆಗಳಾಗಬೇಕೆಂಬ ಕಾರಣದಿಂದ, ನಾನು ಯೆಹೂದ್ಯರಲ್ಲದವರಿಗೆ ಕ್ರಿಸ್ತ ಯೇಸುವಿನ ಸೇವಕನಾಗಿ ದೇವರ ಸುವಾರ್ತೆಯನ್ನು ಪ್ರಕಟಿಸಲು ದೇವರು ನನಗೆ ಕೃಪೆ ನೀಡಿದ್ದಾರೆ.


ಈ ಮಾರ್ಗಕ್ಕೆ ಸಂಬಂಧಪಟ್ಟ ಪುರುಷರಾಗಲಿ ಸ್ತ್ರೀಯರಾಗಲಿ ದಮಸ್ಕದಲ್ಲಿದ್ದರೆ ಅವರನ್ನು ತಾನು ಬಂಧಿಸಿ ಯೆರೂಸಲೇಮಿಗೆ ತರಲಿಕ್ಕಾಗುವಂತೆ ದಮಸ್ಕದಲ್ಲಿಯ ಸಭಾಮಂದಿರಗಳಿಗೆ ಕೊಡಲು ಮಹಾಯಾಜಕನಿಂದ ಪತ್ರ ಪಡೆದುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು