Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 15:12 - ಕನ್ನಡ ಸಮಕಾಲಿಕ ಅನುವಾದ

12 ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದು ನನ್ನ ಆಜ್ಞೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ ನನ್ನ ಆಜ್ಞೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನಾನು ಕೊಡುವ ಆಜ್ಞೆ ಏನೆಂದರೆ: ನಾನು ನಿಮ್ಮನ್ನು ಪ್ರೀತಿಸಿದಂತೆಯೇ ನೀವು ಸಹ ಒಬ್ಬರನ್ನೊಬ್ಬರು ಪ್ರೀತಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಾನು ನಿಮ್ಮನ್ನು ಪ್ರೀತಿಸಿದ ಮೇರೆಗೆ ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬದೇ ನಾನು ಕೊಡುವ ಆಜ್ಞೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಾನು ನಿಮ್ಮನ್ನು ಪ್ರೀತಿಸಿದಂತೆ ನೀವೂ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ ನಾನು ನಿಮಗೆ ಕೊಡುವ ಆಜ್ಞೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಹ್ಯೊ ಮಾಜೊ ಖಾಯ್ದೊ, ಕಶೆ ಮಿಯಾ ತುಮ್ಚೊ ಪ್ರೆಮ್ ಕರ್‍ಲೊ ತಶೆ ತುಮಿಬಿ ಎಕಾಮೆಕಾಚೊ ಪ್ರೆಮ್ ಕರಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 15:12
16 ತಿಳಿವುಗಳ ಹೋಲಿಕೆ  

ದೇವರನ್ನು ಪ್ರೀತಿಸುವವನು ತನ್ನ ಸಹೋದರನನ್ನೂ ಸಹೋದರಿಯನ್ನೂ ಪ್ರೀತಿಸಬೇಕೆಂಬ ಈ ಆಜ್ಞೆಯನ್ನು ನಾವು ದೇವರಿಂದ ಹೊಂದಿದ್ದೇವೆ.


“ನಾನು ನಿಮಗೊಂದು ಹೊಸ ಆಜ್ಞೆಯನ್ನು ಕೊಡುತ್ತೇನೆ: ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕು. ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವೂ ಒಬ್ಬರನ್ನೊಬ್ಬರು ಪ್ರೀತಿಸಬೇಕು.


ಎಲ್ಲಕ್ಕೂ ಮಿಗಿಲಾಗಿ ನಿಮ್ಮನಿಮ್ಮೊಳಗೆ ಯಥಾರ್ಥವಾದ ಪ್ರೀತಿ ಇರಲಿ. ಏಕೆಂದರೆ ಪ್ರೀತಿಯು ಬಹು ಪಾಪಗಳನ್ನು ಮುಚ್ಚುತ್ತದೆ.


ನಾವು ದೇವರ ಪುತ್ರ ಆಗಿರುವ ಯೇಸುಕ್ರಿಸ್ತರ ಹೆಸರನ್ನು ನಂಬಿ, ಅವರು ನಮಗೆ ಆಜ್ಞಾಪಿಸಿದ ಪ್ರಕಾರ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ ದೇವರ ಆಜ್ಞೆಯಾಗಿರುತ್ತದೆ.


ಒಬ್ಬರಿಗೊಬ್ಬರು ಸಹೋದರ ಪ್ರೀತಿಯಲ್ಲಿ ಸಮರ್ಪಿತರಾಗಿರಿ. ಗೌರವಿಸುವುದರಲ್ಲಿ ಒಬ್ಬರಿಗೊಬ್ಬರು ಮುಂದಾಗಿರಿ.


ಕ್ರಿಸ್ತ ಯೇಸು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತಮ್ಮನ್ನೇ ದೇವರಿಗೆ ಸುಗಂಧ ಕಾಣಿಕೆಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಸಹ ಪ್ರೀತಿಯಿಂದ ಬಾಳಿರಿ.


ಕಡೆಗೆ ನೀವೆಲ್ಲರೂ ಏಕ ಮನಸ್ಸುಳ್ಳವರಾಗಿರಿ, ಒಬ್ಬರಿಗೊಬ್ಬರೂ ಕರುಣೆಯುಳ್ಳವರಾಗಿದ್ದು ಸಹೋದರರಂತೆ ಪ್ರೀತಿಸಿರಿ. ಕನಿಕರವೂ ದೀನತೆ ಉಳ್ಳವರಾಗಿರಿ,


ನೀವು ಕ್ರಿಸ್ತ ಯೇಸುವಿನ ಮೂಲಕ ಸತ್ಯಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡಿದ್ದರಿಂದ ನಿಷ್ಕಪಟವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನ್ನೊಬ್ಬರು ಶುದ್ಧವಾದ ಹೃದಯದಿಂದಲೂ ಆಸಕ್ತಿಯಿಂದಲೂ ಪ್ರೀತಿಸಿರಿ.


ಸಹೋದರ ಪ್ರೀತಿಯ ವಿಷಯದಲ್ಲಿ ನಿಮಗೆ ಬರೆಯುವುದು ಅವಶ್ಯವಿಲ್ಲ. ಒಬ್ಬರನ್ನೊಬ್ಬರು ಪ್ರೀತಿಸಬೇಕೆಂದು ನೀವು ದೇವರಿಂದಲೇ ಉಪದೇಶ ಹೊಂದಿದ್ದೀರಿ.


ನಮ್ಮ ಪ್ರೀತಿಯು ನಿಮ್ಮ ಕಡೆಗೆ ಸಮೃದ್ಧಿಯಾಗಿರುವಂತೆಯೇ ನಿಮ್ಮ ಪ್ರೀತಿಯೂ ಒಬ್ಬರಿಂದೊಬ್ಬರಿಗೂ ಎಲ್ಲರ ಮೇಲೆಯೂ ತುಂಬಿರುವಂತೆ ಕರ್ತ ಯೇಸು ನಿಮಗೆ ಅನುಗ್ರಹಿಸಲಿ.


ಪ್ರಿಯರೇ, ನಾವು ಯಾವಾಗಲೂ ನಿಮಗಾಗಿ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಲು ಬದ್ಧರಾಗಿದ್ದೇವೆ. ಹಾಗೆ ಮಾಡುವುದು ಯೋಗ್ಯ. ಏಕೆಂದರೆ ನಿಮ್ಮ ವಿಶ್ವಾಸವು ಹೆಚ್ಚೆಚ್ಚಾಗಿ ಅಭಿವೃದ್ಧಿಯಾಗುತ್ತಾ ಇದೆ ಮತ್ತು ಪರಸ್ಪರ ನಿಮ್ಮೆಲ್ಲರಲ್ಲಿ ಪ್ರೀತಿಯೂ ಹೆಚ್ಚುತ್ತಿದೆ.


“ನಾನು ನಿಮ್ಮನ್ನು ಪ್ರೀತಿ ಮಾಡಿದೆನು” ಎಂದು ಯೆಹೋವ ದೇವರು ಹೇಳುತ್ತಾರೆ. “ನೀವಾದರೋ, ‘ಯಾವುದರಲ್ಲಿ ನೀವು ನಮ್ಮನ್ನು ಪ್ರೀತಿ ಮಾಡಿದ್ದೀರಿ?’ ಎಂದು ಕೇಳುತ್ತೀರಿ. “ಏಸಾವನು ಯಾಕೋಬನಿಗೆ ಅಣ್ಣನಲ್ಲವೋ? ಆದರೂ ನಾನು ಯಾಕೋಬನನ್ನು ಪ್ರೀತಿ ಮಾಡಿದೆನು. ಎಂದು ಯೆಹೋವ ದೇವರು ಅನ್ನುತ್ತಾರೆ.


ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ ನಾನು ನಿಮಗೆ ಕೊಡುವ ಆಜ್ಞೆಯಾಗಿದೆ.


ಅಮ್ಮನವರೇ, ನಾನು ಹೊಸ ಆಜ್ಞೆಯನ್ನು ನಿನಗೆ ಬರೆಯದೆ ಮೊದಲಿನಿಂದಲೂ ನಮಗೆ ಇದ್ದ ಆಜ್ಞೆಯನ್ನು ನಿನಗೆ ಬರೆಯುವವನಾಗಿ ನಾವು ಒಬ್ಬರನ್ನೊಬ್ಬರು ಪ್ರೀತಿಸುವವರಾಗಿರಬೇಕೆಂದು ನಿನ್ನನ್ನು ಕೇಳಿಕೊಳ್ಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು