Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 15:15 - ಕನ್ನಡ ಸಮಕಾಲಿಕ ಅನುವಾದ

15 ಇನ್ನು ಮೇಲೆ ನಾನು ನಿಮ್ಮನ್ನು ಆಳುಗಳೆಂದು ಕರೆಯುವುದಿಲ್ಲ. ಏಕೆಂದರೆ ತನ್ನ ಧಣಿಯು ಮಾಡುವಂಥದ್ದು ಆಳಿಗೆ ತಿಳಿಯುವುದಿಲ್ಲ. ಆದರೆ ನಾನು ನಿಮ್ಮನ್ನು ಸ್ನೇಹಿತರೆಂದು ಕರೆದಿದ್ದೇನೆ. ಏಕೆಂದರೆ ನನ್ನ ತಂದೆಯಿಂದ ಕೇಳಿದ್ದನ್ನೆಲ್ಲಾ ನಾನು ನಿಮಗೆ ತಿಳಿಯಪಡಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಇನ್ನು ಮೇಲೆ ನಾನು ನಿಮ್ಮನ್ನು ಆಳುಗಳೆಂದು ಕರೆಯುವುದಿಲ್ಲ, ಏಕೆಂದರೆ, ಯಜಮಾನನು ಮಾಡುವಂಥದ್ದು ಆಳಿಗೆ ತಿಳಿಯುವುದಿಲ್ಲ. ನಿಮ್ಮನ್ನು ಸ್ನೇಹಿತರೆಂದು ಕರೆದಿದ್ದೇನೆ, ಏಕೆಂದರೆ ತಂದೆಯ ಕಡೆಯಿಂದ ನಾನು ಕೇಳಿದ್ದನ್ನೆಲ್ಲಾ ನಾನು ನಿಮಗೆ ತಿಳಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನಾನಿನ್ನು ನಿಮ್ಮನ್ನು ದಾಸರೆಂದು ಕರೆಯುವುದಿಲ್ಲ. ಧಣಿಯ ಕೆಲಸಕಾರ್ಯಗಳು ದಾಸನಿಗೆ ತಿಳಿಯವು. ನಾನಾದರೋ ಪಿತನಿಂದ ಕೇಳಿಸಿಕೊಂಡದ್ದನ್ನೆಲ್ಲಾ ನಿಮಗೆ ತಿಳಿಸಿದ್ದೇನೆ. ಈ ಕಾರಣ ನಿಮ್ಮನ್ನು ಗೆಳೆಯರೆಂದು ಕರೆದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಇನ್ನು ಮೇಲೆ ನಾನು ನಿಮ್ಮನ್ನು ಆಳುಗಳನ್ನುವದಿಲ್ಲ; ಯಜಮಾನನು ಮಾಡುವಂಥದು ಆಳಿಗೆ ತಿಳಿಯುವದಿಲ್ಲ. ನಿಮ್ಮನ್ನು ಸ್ನೇಹಿತರೆಂದು ಹೇಳಿದ್ದೇನೆ; ತಂದೆಯ ಕಡೆಯಿಂದ ನಾನು ಕೇಳಿದ್ದನ್ನೆಲ್ಲಾ ನಿಮಗೆ ತಿಳಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಈಗ ನಾನು ನಿಮ್ಮನ್ನು ನನ್ನ ಸೇವಕರುಗಳೆಂದು ಕರೆಯುವುದಿಲ್ಲ. ಯಜಮಾನನ ಕೆಲಸಕಾರ್ಯಗಳು ಸೇವಕನಿಗೆ ತಿಳಿದಿರುವುದಿಲ್ಲ. ಆದರೆ ಈಗ ನಾನು ನಿಮ್ಮನ್ನು ನನ್ನ ಗೆಳೆಯರೆಂದು ಕರೆಯುತ್ತೇನೆ. ಏಕೆಂದರೆ ನನ್ನ ತಂದೆಯಿಂದ ಕೇಳಿದ ಪ್ರತಿಯೊಂದನ್ನೂ ನಾನು ನಿಮಗೆ ಹೇಳಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಅನಿ ಫಿಡೆ ಮಿಯಾ ತುಮ್ಕಾ ಸೆವಕ್ ಮನುನ್ ಬಲ್ವಿನಾ ಕಶ್ಯಾಕ್ ಮಟ್ಲ್ಯಾರ್ ಸೆವಕಾಕ್ ತೆಚೊ ಧನಿ ಕಾಯ್ ಕರ್‍ತಾ ಮನ್ತಲೆ ಗೊತ್ತ್ ರ್‍ಹಾಯ್ನಾ. ಹೆಚ್ಯಾ ಬದ್ಲಾಕ್, ಮಿಯಾ ತುಮ್ಕಾ ದೊಸ್ತಾ ಮನುನ್ ಬಲ್ವುತಾ ಕಶ್ಯಾಕ್ ಮಟ್ಲ್ಯಾರ್ ಮಾಜ್ಯಾ ಬಾಬಾಕ್ನಾ ಆಯ್ಕಲ್ಲೆ ಸಗ್ಳೆ ಮಿಯಾ ತುಮ್ಕಾ ಸಾಂಗಟ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 15:15
32 ತಿಳಿವುಗಳ ಹೋಲಿಕೆ  

ಯೆಹೋವ ದೇವರ ರಹಸ್ಯವು ಅವರಿಗೆ ಭಯಪಡುವವರೊಂದಿಗೆ ಇರುವುದು; ತಮ್ಮ ಒಡಂಬಡಿಕೆಯನ್ನು ಅವರು ಅಂಥವರಿಗೇ ತಿಳಿಸುವರು.


ಯೇಸು ಅದಕ್ಕೆ ಉತ್ತರವಾಗಿ ಹೇಳಿದ್ದು: “ಪರಲೋಕ ರಾಜ್ಯದ ರಹಸ್ಯಗಳನ್ನು ತಿಳಿದುಕೊಳ್ಳುವ ಜ್ಞಾನವು ನಿಮಗೆ ಕೊಡಲಾಗಿದೆ, ಆದರೆ ಅವರಿಗಲ್ಲ.


ಹೀಗೆ, “ಅಬ್ರಹಾಮನು ದೇವರನ್ನು ನಂಬಿದನು. ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಎಂದು ಎಣಿಸಲಾಯಿತು,” ಎಂಬ ಪವಿತ್ರ ವೇದದ ವಾಕ್ಯವು ನೆರವೇರಿತು. ಅಬ್ರಹಾಮನು ದೇವರ ಸ್ನೇಹಿತನೆಂದು ಎಣಿಸಿಕೊಂಡನು.


ಆ ರಹಸ್ಯವು ಹಿಂದಿನ ಯುಗಗಳಿಂದಲೂ ತಲತಲಾಂತರಗಳಿಂದಲೂ ಮರೆಯಾಗಿತ್ತು. ಆದರೂ ಈಗ ಅದು ಕರ್ತ ಯೇಸುವಿನ ಜನರಿಗೆ ಪ್ರಕಟವಾಗಿದೆ.


ಇದು ಕ್ರಿಸ್ತ ಯೇಸುವಿನ ಪ್ರಕಟನೆ. ಶೀಘ್ರವೇ ಸಂಭವಿಸಲಿಕ್ಕಿರುವ ಸಂಗತಿಗಳನ್ನು ತಮ್ಮ ದಾಸರಿಗೆ ತೋರಿಸುವುದಕ್ಕಾಗಿ ದೇವರಿಂದ ಈ ಪ್ರಕಟನೆಯನ್ನು ಹೊಂದಿದರು. ಇದಲ್ಲದೆ ದೇವರು ತಮ್ಮ ದೇವದೂತನನ್ನು ಕಳುಹಿಸಿ, ಅವನ ಮುಖಾಂತರ ಆ ಸಂಗತಿಗಳನ್ನು ತಮ್ಮ ದಾಸನಾದ ಯೋಹಾನನಿಗೆ ತಿಳಿಸಿದರು.


ಈ ರಹಸ್ಯವು ದೇವರ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ದೇವರಾತ್ಮರ ಮೂಲಕ ಈಗ ಪ್ರಕಟಿಸಿದಂತೆ, ಬೇರೆ ತಲೆಮಾರುಗಳಲ್ಲಿದ್ದ ಜನರಿಗೆ ತಿಳಿಸಿರಲಿಲ್ಲ.


ದೇವರು ಕ್ರಿಸ್ತನಲ್ಲಿ ಉದ್ದೇಶಮಾಡಿಕೊಂಡ ತಮ್ಮ ಚಿತ್ತದ ರಹಸ್ಯವನ್ನು ಸಂತೋಷದಿಂದ ನಮಗೆ ಪ್ರಕಟಿಸಿದರು,


ಯೇಸು ಆಕೆಗೆ, “ನನ್ನನ್ನು ಹಿಡಿಯಬೇಡ, ಏಕೆಂದರೆ ನಾನು ಇನ್ನೂ ತಂದೆಯ ಬಳಿಗೆ ಹೋಗಲಿಲ್ಲ. ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವರಿಗೆ, ‘ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವ ತಂದೆಯ ಬಳಿಗೆ ನಾನು ಹೋಗುತ್ತೇನೆ’ ಎಂದು ತಿಳಿಸು,” ಎಂದರು.


ಕ್ರಿಸ್ತ ಯೇಸುವಿನ ದಾಸನೂ ಅಪೊಸ್ತಲನೂ ಆಗಿರುವ ಸೀಮೋನ ಪೇತ್ರನು, ನಮ್ಮ ದೇವರ ಮತ್ತು ರಕ್ಷಕ ಆಗಿರುವ ಕ್ರಿಸ್ತ ಯೇಸುವಿನ ನೀತಿಯ ಮೂಲಕ ನಮ್ಮಂತೆಯೇ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ ಬರೆಯುವುದು:


ನೀವು ದೇವರ ಪುತ್ರರಾಗಿರುವುದರಿಂದ, ದೇವರು ತಮ್ಮ ಪುತ್ರ ಆಗಿರುವವರ ಆತ್ಮನನ್ನು ನಮ್ಮ ಹೃದಯಗಳಲ್ಲಿ ಕಳುಹಿಸಿ, “ಅಪ್ಪಾ ತಂದೆಯೇ!” ಎಂದು ಕರೆಯುವಂತೆ ಮಾಡಿದ್ದಾರೆ.


ನನ್ನ ಸೇವೆ ಮಾಡಬೇಕೆಂದಿರುವವರು ನನ್ನನ್ನು ಹಿಂಬಾಲಿಸಲಿ. ಆಗ ನಾನಿರುವಲ್ಲಿಯೇ ನನ್ನ ಸೇವಕರೂ ಇರುವರು. ನನ್ನ ಸೇವೆ ಮಾಡುವವರನ್ನು ನನ್ನ ತಂದೆಯು ಸನ್ಮಾನಿಸುವರು.


ನಿಮ್ಮ ವಿಷಯವಾಗಿ ಮಾತನಾಡುವುದಕ್ಕೂ ತೀರ್ಪುಮಾಡುವುದಕ್ಕೂ ನನಗೆ ಅನೇಕ ವಿಷಯಗಳಿವೆ. ಆದರೆ ನನ್ನನ್ನು ಕಳುಹಿಸಿದ ತಂದೆಯು ಸತ್ಯವಂತರು. ನಾನು ಅವರಿಂದ ಕೇಳಿದವುಗಳನ್ನು ಮಾತ್ರವೇ ಲೋಕಕ್ಕೆ ಹೇಳುತ್ತೇನೆ,” ಎಂದರು.


ನಿಶ್ಚಯವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಯೋಜನೆಗಳನ್ನು ತಿಳಿಸದೆ, ಸಾರ್ವಭೌಮ ಯೆಹೋವ ದೇವರು ಏನನ್ನೂ ಮಾಡುವುದಿಲ್ಲ.


ಅವರಲ್ಲಿದ್ದ ಕ್ರಿಸ್ತ ಯೇಸುವಿನ ಆತ್ಮ, ಕ್ರಿಸ್ತ ಯೇಸುವಿಗೆ ಸಂಭವಿಸಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಮಹಿಮೆಗಳನ್ನೂ ಪ್ರವಾದಿಸಿದಾಗ, ಅದರ ಸಮಯ ಸಂದರ್ಭಗಳನ್ನು ಕಂಡುಹಿಡಿಯಲು ಪರಿಶೋಧನೆ ಮಾಡಿದರು.


ದೇವರಿಗೂ ಕರ್ತ ಆಗಿರುವ ಯೇಸು ಕ್ರಿಸ್ತರಿಗೂ ದಾಸನಾಗಿರುವ ಯಾಕೋಬನು, ವಿವಿಧ ದೇಶಗಳಲ್ಲಿ ಚದರಿರುವ ಇಸ್ರಾಯೇಲರ ಹನ್ನೆರಡು ಗೋತ್ರದವರಿಗೆ ಬರೆಯುವುದು: ನಿಮಗೆ ಶುಭವಾಗಲಿ.


ಇನ್ನು ಮೇಲೆ ಅವನು ದಾಸನಾಗದೆ, ದಾಸನಿಗಿಂತ ಮೇಲಾಗಿ ಪ್ರಿಯ ಸಹೋದರನಂತಾಗಬೇಕು. ಅವನು ವಿಶೇಷವಾಗಿ ನನಗೆ ಬಹು ಪ್ರಿಯನಾಗಿದ್ದಾನೆ. ಆದರೂ ಓನೇಸಿಮನು ನಿನಗೆ ಮಾನವ ರೀತಿಯಲ್ಲಿಯೂ ಕರ್ತ ಯೇಸುವಿನಲ್ಲಿಯೂ ಒಬ್ಬ ಸಹೋದರನಾಗಿ ಇನ್ನು ಎಷ್ಟೋ ಪ್ರಿಯನಾಗಿರಬೇಕಲ್ಲವೇ.


ನೀವು ನನ್ನನ್ನು ಪ್ರೀತಿಸಿದಂಥ ಪ್ರೀತಿಯು ಇವರಲ್ಲಿ ಇರಬೇಕೆಂತಲೂ ನಾನು ಅವರಲ್ಲಿ ಇರುವಂತೆಯೂ ನಾನು ಅವರಿಗೆ ನಿಮ್ಮ ಹೆಸರನ್ನು ತಿಳಿಸಿದ್ದೇನೆ, ಇನ್ನೂ ತಿಳಿಸುವೆನು,” ಎಂದರು.


‘ಧಣಿಗಿಂತ ಆಳು ದೊಡ್ಡವನಲ್ಲ,’ ಎಂದು ನಾನು ನಿಮಗೆ ಹೇಳಿದ ಮಾತನ್ನು ನೆನಪಿಗೆ ತಂದುಕೊಳ್ಳಿರಿ. ಅವರು ನನ್ನನ್ನು ಹಿಂಸಿಸಿದರೆ ನಿಮ್ಮನ್ನು ಸಹ ಹಿಂಸೆಪಡಿಸುವರು. ಅವರು ನನ್ನ ಮಾತನ್ನು ಅನುಸರಿಸಿದರೆ ನಿಮ್ಮ ಮಾತನ್ನು ಸಹ ಅನುಸರಿಸುವರು.


ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ತನ್ನ ಧಣಿಗಿಂತ ಆಳು ದೊಡ್ಡವನಲ್ಲ, ಹಾಗೆಯೇ ಕಳುಹಿಸಲಾದವನು ಅವನನ್ನು ಕಳುಹಿಸಿದವನಿಗಿಂತ ದೊಡ್ಡವನಲ್ಲ.


ಕ್ರಿಸ್ತ ಯೇಸುವಿನ ದಾಸನೂ ಯಾಕೋಬನ ಸಹೋದರನೂ ಆಗಿರುವ ಯೂದನು, ತಂದೆಯಾದ ದೇವರಿಗೆ ಪ್ರಿಯರಾದವವರಿಗೂ ಕ್ರಿಸ್ತ ಯೇಸು ಸುರಕ್ಷತೆಯನ್ನೂ ಅವರ ಕರೆಯುವಿಕೆಯನ್ನೂ ಹೊಂದಿದವರಿಗೆ ಬರೆಯುವ ಪತ್ರ:


ಏಕೆಂದರೆ ದೇವರ ಸಂಕಲ್ಪವನ್ನೆಲ್ಲಾ ನಿಮಗೆ ಬೋಧಿಸುವುದರಲ್ಲಿ ನಾನು ಹಿಂಜರಿಯಲಿಲ್ಲ.


ಆಗ ಆ ಸ್ತ್ರೀಯು ಯೇಸುವಿಗೆ, “ಅಯ್ಯಾ, ನೀವು ಒಬ್ಬ ಪ್ರವಾದಿಯೆಂದು ನನಗೆ ಕಾಣುತ್ತದೆ.


ಯೇಸು ತಮ್ಮ ಶಿಷ್ಯರ ಕಡೆಗೆ ತಿರುಗಿಕೊಂಡು, “ನೀವು ಕಾಣುತ್ತಿರುವುದನ್ನೆಲ್ಲಾ ಕಾಣುವ ಕಣ್ಣುಗಳು ಭಾಗ್ಯವುಳ್ಳವು.


ವಿಶ್ವಾಸಕ್ಕೆ ಅರ್ಹರಲ್ಲದ ಸ್ನೇಹಿತರನ್ನು ಹೊಂದಿರುವವನು ಶೀಘ್ರವೇ ನಾಶವಾಗುತ್ತಾನೆ; ಸಹೋದರನಿಗಿಂತ ಹತ್ತಿರ ಹೊಂದಿಕೊಳ್ಳುವ ಸ್ನೇಹಿತನಿದ್ದಾನೆ.


“ನಾನು ನಿಮಗೆ ಹೇಳಬೇಕಾದ ವಿಷಯಗಳು ಇನ್ನೂ ಬಹಳ ಇವೆ. ಆದರೆ ನೀವು ಈಗ ಅವುಗಳನ್ನು ತಾಳಿಕೊಳ್ಳಲಾರಿರಿ.


ನಾನು ಏನು ಮಾಡುತ್ತೇನೆ ಎಂಬುದನ್ನು ತಿಳಿಯದವನಾಗಿದ್ದೇನೆ. ಏಕೆಂದರೆ ನಾನು ಮಾಡಬೇಕೆಂದು ಬಯಸುವುದನ್ನು ಮಾಡದೆ, ಯಾವುದನ್ನು ದ್ವೇಷಿಸುತ್ತೇನೋ ಅದನ್ನೇ ಮಾಡುವವನಾಗಿದ್ದೇನೆ.


ಏಕೆಂದರೆ, “ಕರ್ತದೇವರ ಮನಸ್ಸನ್ನು ತಿಳಿದುಕೊಂಡು, ಅವರಿಗೆ ಉಪದೇಶಿಸುವವನಾರು?” ಆದರೆ ನಮಗೆ ಕ್ರಿಸ್ತ ಯೇಸುವಿನ ಮನಸ್ಸು ಇದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು