Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 15:16 - ಕನ್ನಡ ಸಮಕಾಲಿಕ ಅನುವಾದ

16 ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ. ನಾನೇ ನಿಮ್ಮನ್ನು ಆರಿಸಿಕೊಂಡಿದ್ದೇನೆ. ನೀವು ಹೋಗಿ ಫಲಕೊಡುವಂತೆಯೂ ನಿಮ್ಮ ಫಲವು ಸ್ಥಿರವಾಗಿರುವಂತೆಯೂ ನಾನು ನಿಮ್ಮನ್ನು ನೇಮಿಸಿದ್ದೇನೆ. ಹೀಗೆ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅವರು ನಿಮಗೆ ಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ. ನಾನು ನಿಮ್ಮನ್ನು ಆರಿಸಿಕೊಂಡಿದ್ದೇನೆ, ನೀವು ಹೊರಟು ಹೋಗಿ ಫಲಕೊಡಬೇಕೆಂತಲೂ, ಹಾಗೂ ನೀವು ಕೊಡುವ ಫಲವು ಸದಾಕಾಲ ನಿಲ್ಲುವಂಥದ್ದಾಗಬೇಕಂತಲೂ ನಾನು ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನೇನು ಬೇಡಿಕೊಳ್ಳುವಿರೋ, ಅದನ್ನು ಆತನು ನಿಮಗೆ ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ, ನಾನೇ ನಿಮ್ಮನ್ನು ಆರಿಸಿಕೊಂಡಿದ್ದೇನೆ. ನೀವು ಲೋಕಕ್ಕೆ ಹೋಗಬೇಕು, ಸಫಲರಾಗಬೇಕು; ಆ ಫಲ ಶಾಶ್ವತವಾಗಿರಬೇಕೆಂದೇ ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ಪಿತನಿಂದ ಏನು ಕೇಳಿದರೂ ನಿಮಗೆ ಅದು ಸಿಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನೀವು ನನ್ನನ್ನು ಆರಿಸಿ ತೆಗೆದುಕೊಂಡಿಲ್ಲ; ನಾನು ನಿಮ್ಮನ್ನು ಆರಿಸಿ ತೆಗೆದುಕೊಂಡೆನು. ನೀವು ಹೊರಟುಹೋಗಿ ಫಲಕೊಡುವವರಾಗಬೇಕೆಂತಲೂ ನೀವು ಕೊಡುವ ಫಲವು ನಿಲ್ಲುವಂಥದಾಗಬೇಕೆಂತಲೂ ನಿಮ್ಮನ್ನು ನೇವಿುಸಿದ್ದೇನೆ. ಹೀಗಿರಲಾಗಿ ನನ್ನ ಹೆಸರಿನಲ್ಲಿ ತಂದೆಯನ್ನು ಏನೇನು ಬೇಡಿಕೊಳ್ಳುವಿರೋ ಅದನ್ನು ಆತನು ನಿಮಗೆ ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ; ನಾನು ನಿಮ್ಮನ್ನು ಆರಿಸಿಕೊಂಡೆನು. ನೀವು ಹೊರಟುಹೋಗಿ ಫಲಕೊಡಬೇಕು. ಇದೇ ನಾನು ನಿಮಗೆ ಕೊಟ್ಟಿರುವ ಕೆಲಸ. ಈ ಫಲವು ನಿಮ್ಮ ಜೀವನದಲ್ಲಿ ಶಾಶ್ವತವಾಗಿರಲಿ ಎಂಬುದೇ ನನ್ನ ಬಯಕೆ. ಹೀಗಿರಲಾಗಿ, ನೀವು ನನ್ನ ಹೆಸರಿನಲ್ಲಿ ಏನು ಕೇಳಿಕೊಂಡರೂ ತಂದೆಯು ಅದನ್ನು ನಿಮಗೆ ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ತುಮಿ ಮಾಕಾ ಎಚುನ್ ಕಾಡುಕ್ನ್ಯಾಶಿ, ಮಿಯಾ ತುಮ್ಕಾ ಎಚುನ್ ಕಾಡ್ಲಾ ಅನಿ ಜಾಸ್ತಿಚಿ ಫಳಾ ದಿವ್ ಸಾಟ್ನಿ ಮನುನ್ ನೆಮ್ಲಾ, ಹುರ್‍ತಲಿ ಫಳಾ ದಿವ್‍ಸಾಟ್ನಿ ನೆಮ್ಲಾ. ಅಶೆಚ್ ಮಾಜ್ಯಾ ನಾವಾನ್ ಬಾಬಾಕ್ಡೆನ್ ತುಮಿ ಮಾಗ್ತ್ಯಾಶಿ ತೆ ಸಗ್ಳೆ ತೊ ತುಮ್ಕಾ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 15:16
57 ತಿಳಿವುಗಳ ಹೋಲಿಕೆ  

ನೀವು ಲೋಕದವರಾಗಿದ್ದರೆ ಲೋಕವು ನಿಮ್ಮನ್ನು ಪ್ರೀತಿಸುತ್ತಿತ್ತು. ಆದರೆ ನೀವು ಲೋಕದವರಲ್ಲದೆ ಇರುವುದರಿಂದಲೂ ನಾನು ಲೋಕದೊಳಗಿಂದ ನಿಮ್ಮನ್ನು ಆರಿಸಿಕೊಂಡದ್ದರಿಂದಲೂ ಲೋಕವು ನಿಮ್ಮನ್ನು ದ್ವೇಷಿಸುತ್ತದೆ.


ನಾವು ಕ್ರಿಸ್ತ ಯೇಸುವಿನಲ್ಲಿ ಸತ್ಕ್ರಿಯೆಗಳನ್ನು ಮಾಡುವುದಕ್ಕಾಗಿಯೇ ಸೃಷ್ಟಿಸಲಾದ ದೇವರ ಕಲಾಕೃತಿಯಾಗಿದ್ದೇವೆ. ಸತ್ಕ್ರಿಯೆಗಳನ್ನು ಮಾಡುತ್ತಾ ಬಾಳಬೇಕೆಂದು ದೇವರು ನಮ್ಮನ್ನು ಮುಂಚಿತವಾಗಿ ನೇಮಿಸಿದ್ದಾರೆ.


ಬೆಳಗಾದ ಮೇಲೆ, ಯೇಸು ತಮ್ಮ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡು, ಅವರಿಗೆ “ಅಪೊಸ್ತಲರು” ಎಂದು ಹೆಸರಿಟ್ಟರು.


ಆದರೆ ದೇವರು ನಾನು ನನ್ನ ತಾಯಿಯ ಗರ್ಭದಲ್ಲಿದ್ದಾಗಲೇ ನನ್ನನ್ನು ಪ್ರತ್ಯೇಕಿಸಿ, ತಮ್ಮ ಕೃಪೆಯ ಮೂಲಕ ನನ್ನನ್ನು ಕರೆದು,


ದೇವರು ಮೊದಲು ನಮ್ಮನ್ನು ಪ್ರೀತಿಸಿದ್ದರಿಂದಲೇ ನಾವು ದೇವರನ್ನು ಪ್ರೀತಿಸುತ್ತೇವೆ.


“ಆಗ ಅವನು, ‘ನಮ್ಮ ಪಿತೃಗಳ ದೇವರು ತಮ್ಮ ಚಿತ್ತವನ್ನು ನೀನು ತಿಳಿದುಕೊಳ್ಳುವುದಕ್ಕಾಗಿಯೂ ನೀತಿವಂತ ಆಗಿರುವ ಒಬ್ಬರನ್ನು ಕಾಣುವುದಕ್ಕಾಗಿಯೂ ಅವರ ಬಾಯಿಂದ ಒಂದು ಮಾತನ್ನು ಕೇಳುವುದಕ್ಕಾಗಿಯೂ ನಿನ್ನನ್ನು ಮುಂದಾಗಿಯೇ ನೇಮಿಸಿದ್ದಾರೆ.


ಅನೇಕ ಸಾಕ್ಷಿಗಳ ಮುಂದೆ ನೀನು ನನ್ನಿಂದ ಕೇಳಿದವುಗಳನ್ನು ಇತರರಿಗೆ ಸಹ ಬೋಧಿಸಲು ಶಕ್ತರಾದ ನಂಬಿಗಸ್ತ ಮನುಷ್ಯರಿಗೆ ಒಪ್ಪಿಸಿಕೊಡು.


“ನಾನು ನಿಮ್ಮೆಲ್ಲರನ್ನು ಕುರಿತು ಮಾತನಾಡುತ್ತಿಲ್ಲ. ನಾನು ಆರಿಸಿಕೊಂಡವರನ್ನು ನಾನು ಬಲ್ಲೆನು. ಆದರೆ ‘ನನ್ನ ಸಂಗಡ ರೊಟ್ಟಿಯನ್ನು ತಿಂದವನೇ, ನನಗೆ ದ್ರೋಹ ಬಗೆದನು,’ ಎಂಬ ಪವಿತ್ರ ವಾಕ್ಯವು ನೆರವೇರಬೇಕಾಗಿದೆ.


ಅದಕ್ಕೆ ಯೇಸು ಅವರಿಗೆ, “ಹನ್ನೆರಡು ಮಂದಿಯಾದ ನಿಮ್ಮನ್ನು ನಾನು ಆರಿಸಿಕೊಂಡೆನಲ್ಲವೇ? ಆದರೆ ನಿಮ್ಮಲ್ಲಿಯೂ ಒಬ್ಬನು ಪಿಶಾಚನಾಗಿದ್ದಾನೆ,” ಎಂದರು.


ಆದರೆ ಕ್ರಿಸ್ತ ಯೇಸುವನ್ನು ನಿಮ್ಮ ಹೃದಯಗಳಲ್ಲಿ “ಕರ್ತದೇವರು” ಎಂದು ಪ್ರತಿಷ್ಠೆ ಪಡಿಸಿರಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೇನೆಂದು ಕೇಳುವವರೆಲ್ಲರಿಗೆ ಸಾತ್ವಿಕತ್ವದಿಂದಲೂ ಗೌರವದಿಂದಲೂ ಉತ್ತರ ಹೇಳುವುದಕ್ಕೆ ಯಾವಾಗಲೂ ಸಿದ್ಧವಾಗಿರಿ.


ದೇವರೇ, ನಾನು ಮುಪ್ಪಿನವನೂ, ನೆರೆಕೂದಲಿನವನೂ ಆದಾಗ ಈ ಸಂತತಿಯವರಿಗೆ ನಿಮ್ಮ ಶಕ್ತಿಯನ್ನೂ, ಮುಂದಿನ ಪೀಳಿಗೆಗೆ ನಿಮ್ಮ ಪರಾಕ್ರಮವನ್ನೂ ತಿಳಿಸುವವರೆಗೂ ನನ್ನನ್ನು ಕೈಬಿಡಬೇಡಿರಿ.


ಪ್ರೀತಿಯು ಇದಾಗಿರುತ್ತದೆ: ನಾವು ದೇವರನ್ನು ಪ್ರೀತಿಸಿದ್ದರಲ್ಲಿ ಅಲ್ಲ, ದೇವರೇ ನಮ್ಮನ್ನು ಪ್ರೀತಿಸಿ, ನಮ್ಮ ಪಾಪಗಳಿಗೆ ಪ್ರಾಯಶ್ಚಿತ್ತ ಬಲಿಯಾಗಿ ತಮ್ಮ ಪುತ್ರ ಆಗಿರುವ ಕ್ರಿಸ್ತ ಯೇಸುವನ್ನು ಕಳುಹಿಸಿ ಕೊಟ್ಟಿದ್ದರಲ್ಲಿಯೇ ಅವರ ಸತ್ಯ ಪ್ರೀತಿಯು ತೋರಿಬರುತ್ತದೆ.


ನೀತಿವಂತರ ಫಲವು ಜೀವವೃಕ್ಷ; ಆತ್ಮಗಳನ್ನು ಗೆಲ್ಲುವವನು ಜ್ಞಾನಿಯಾಗಿದ್ದಾನೆ.


ಆಮೇಲೆ ಅವರು, “ಕರ್ತ ಯೇಸುವೇ, ಪ್ರತಿಯೊಬ್ಬರ ಹೃದಯವನ್ನು ನೀವು ತಿಳಿದವರು. ಈ ಸೇವೆಯಿಂದ ಯೂದನು ಭ್ರಷ್ಟನಾಗಿ ತನಗೆ ತಕ್ಕ ಸ್ಥಳಕ್ಕೆ ಹೋಗಿರುವುದರಿಂದ,


ಮುಂದಿನ ಕಾಲದಲ್ಲಿ ಯಾಕೋಬು ಬೇರೂರುವುದು. ಇಸ್ರಾಯೇಲು ಹೂ ಅರಳಿ ಚಿಗುರುವುದು. ಭೂಲೋಕವನ್ನೆಲ್ಲಾ ಫಲದಿಂದ ತುಂಬಿಸುವನು.


ನೀವು ನಿರ್ಮಲರಾಗಿಯೂ ಭಯಭರಿತರಾಗಿಯೂ ನಡೆದುಕೊಳ್ಳುವದನ್ನು ಅವರು ನೋಡಲಿ.


ಪವಿತ್ರ ವೇದದಲ್ಲಿ ಮುಂಚಿತವಾಗಿ ಬರೆದಿರುವುದೆಲ್ಲವೂ ನಮ್ಮ ಬೋಧನೆಗಾಗಿಯೇ ಬರೆಯಲಾಗಿದೆ. ನಾವು ಆ ಬೋಧನೆಗಳ ಮೂಲಕ ಸಹನೆಯನ್ನೂ ಉತ್ತೇಜನೆಯನ್ನೂ ಹೊಂದಿಕೊಂಡು ನಿರೀಕ್ಷೆಯುಳ್ಳವರಾಗಿರಬೇಕೆಂದು ಬರೆಯಲಾಗಿದೆ.


ಆದರೆ ಕರ್ತ ಯೇಸುವು ಅವನಿಗೆ, “ಹೋಗು! ಯೆಹೂದ್ಯರಲ್ಲದವರಿಗೂ ಅವರ ಅರಸುಗಳಿಗೂ ಇಸ್ರಾಯೇಲ್ ದೇಶಕ್ಕೂ ನನ್ನ ಹೆಸರನ್ನು ಪ್ರಸಿದ್ಧಿಪಡಿಸಲು ಅವನು ನಾನು ಆಯ್ದುಕೊಂಡ ಸಾಧನವಾಗಿದ್ದಾನೆ.


ನೀವು ನಂಬಿಕೆಯಿಂದ ಪ್ರಾರ್ಥನೆಯಲ್ಲಿ ಏನೇನು ಬೇಡಿಕೊಳ್ಳುವಿರೋ ಅವುಗಳನ್ನೆಲ್ಲಾ ಪಡೆಯುವಿರಿ,” ಎಂದರು.


ದೇವರೇ ಒಂದು ತಲಾಂತರವು ಇನ್ನೊಂದು ತಲಾಂತರಕ್ಕೆ ನಿಮ್ಮ ಕೆಲಸಗಳನ್ನು ಪ್ರಕಟಿಸುತ್ತದೆ; ಜನರು ನಿಮ್ಮ ಪರಾಕ್ರಮಗಳನ್ನು ತಿಳಿಸುತ್ತಾರೆ.


ಈ ಸುವಾರ್ತೆಯನ್ನು ನಾನು ಸಾರುವವನಾಗಿಯೂ ಅಪೊಸ್ತಲನಾಗಿಯೂ ಯೆಹೂದ್ಯರಲ್ಲದವರಿಗೆ ಉಪದೇಶಕನಾಗಿಯೂ ದೇವರಿಂದ ನೇಮಕವಾದೆನು.


ಆ ಮನುಷ್ಯರಿಗೆ ಸಂಭವಿಸಿದ ಈ ಸಂಗತಿಗಳು ನಿದರ್ಶನಗಳಾಗಿವೆ, ಯುಗಾಂತ್ಯಕ್ಕೆ ಬಂದಿರುವ ನಮಗೆ ಎಚ್ಚರಿಕೆಯ ಮಾತುಗಳಾಗಿವೆ.


ಕುಂಬಾರನಿಗೆ ಒಂದೇ ಮಣ್ಣಿನ ರಾಶಿಯಿಂದ ಒಂದನ್ನು ಉತ್ತಮವಾದ ಪಾತ್ರೆಯನ್ನಾಗಿಯೂ ಮತ್ತೊಂದನ್ನು ಸಾಮಾನ್ಯವಾದ ಪಾತ್ರೆಯನ್ನಾಗಿಯೂ ಮಾಡುವ ಅಧಿಕಾರ ಇಲ್ಲವೋ?


ಸಮಾಧಾನ ಪಡಿಸುವವರು ಸಮಾಧಾನವೆಂಬ ಬೀಜವನ್ನು ಬಿತ್ತಿ ನೀತಿಯೆಂಬ ಫಲವನ್ನು ಕೊಯ್ಯುತ್ತಾರೆ.


ನಂಬಿಕೆಯಿಂದಲೇ ಹೇಬೆಲನು ಕಾಯಿನನ ಯಜ್ಞಕ್ಕಿಂತ ಉತ್ತಮ ಯಜ್ಞವನ್ನು ದೇವರಿಗೆ ಸಮರ್ಪಿಸಿದನು. ಅದರ ಮೂಲಕ ಅವನು ನೀತಿವಂತನೆಂದು ಸಾಕ್ಷಿಹೊಂದಿದನು. ದೇವರು ಸಹ ಅವನ ಕಾಣಿಕೆಗಳನ್ನು ಸ್ವೀಕಾರಮಾಡಿದರು. ಅವನು ಸತ್ತು ಹೋಗಿದ್ದರೂ ನಂಬಿಕೆಯ ಮೂಲಕ ಇನ್ನೂ ಮಾತನಾಡುತ್ತಿದ್ದಾನೆ.


ಕ್ರೇತದ್ವೀಪದಲ್ಲಿ ಪೂರ್ಣಗೊಳಿಸದ ಕಾರ್ಯಗಳನ್ನು ನೀನು ಕ್ರಮಪಡಿಸಿ ನಾನು ನಿನಗೆ ಆಜ್ಞಾಪಿಸಿದ ಪ್ರಕಾರ ಪ್ರತಿಯೊಂದು ಪಟ್ಟಣದಲ್ಲಿ ಹಿರಿಯರನ್ನು ನೇಮಿಸಬೇಕೆಂದು ನಿನ್ನನ್ನು ಅಲ್ಲೇ ಬಿಟ್ಟು ಬಂದೆನು.


ಆ ಸುವಾರ್ತೆಯು ಲೋಕದಲ್ಲೆಲ್ಲಾ ಹರಡಿದಂತೆ, ನಿಮಗೂ ತಲುಪಲು ನೀವು ಸಹ ಅದನ್ನು ಕೇಳಿ ದೇವರ ಕೃಪೆಯನ್ನು ನಿಜವಾಗಿಯೂ ತಿಳಿದುಕೊಂಡ ದಿವಸದಿಂದ ನಿಮ್ಮಲ್ಲಿಯೂ ಫಲಕೊಟ್ಟು ವೃದ್ಧಿಯಾಗುತ್ತಿದೆ.


ಯೇಸುವಿನ ನಾಮದ ಮಹಿಮೆಗಾಗಿ ಯೆಹೂದ್ಯರಲ್ಲದವರಲ್ಲಿಯೂ ನಂಬಿಕೆಯ ವಿಧೇಯತೆ ಉಂಟಾಗುವುದಕ್ಕಾಗಿ ನಾವು ಯೇಸುವಿನ ಮೂಲಕವಾಗಿ ಕೃಪೆಯನ್ನೂ ಅಪೊಸ್ತಲರಾಗಿರುವುದನ್ನೂ ಹೊಂದಿದೆವು.


ಯೇಸುವನ್ನು ಎಲ್ಲರೂ ನೋಡಲಿಲ್ಲ. ಆದರೆ ದೇವರು ಮೊದಲೇ ನೇಮಿಸಿಕೊಂಡ ಸಾಕ್ಷಿಗಳಾಗಿರುವ ನಮಗೆ ಕಾಣಿಸಿಕೊಂಡರು. ಯೇಸು ಸತ್ತವರೊಳಗಿಂದ ಜೀವಂತವಾಗಿ ಎದ್ದು ಬಂದ ತರುವಾಯ ಅವರೊಡನೆ ಊಟ, ಪಾನಮಾಡಿದ ನಮಗೆ ಕಾಣಿಸಿಕೊಂಡರು.


ಇದಕ್ಕಾಗಿಯೇ ಸಂದೇಶ ಸಾರುವವನೂ ಅಪೊಸ್ತಲನೂ ಆಗಿರುವ ನಾನು ಯೆಹೂದ್ಯರಲ್ಲದವರಿಗೆ ನಂಬಿಗಸ್ತನಾದ ಸತ್ಯ ಬೋಧಕನಾಗಿ ನೇಮಕವಾದೆನು. ಇದು ಸುಳ್ಳಲ್ಲ, ಸತ್ಯವನ್ನೇ ಹೇಳುತ್ತೇನೆ.


ನೀವು ನಿಮ್ಮ ನಂಬಿಕೆಯಲ್ಲಿ ಸ್ಥಿರವಾಗಿ ಮುಂದುವರೆದು ನೆಲೆಗೊಂಡು, ಸುವಾರ್ತೆಯ ನಿರೀಕ್ಷೆಯಿಂದ ತೊಲಗಿ ಹೋಗದಿರಿ. ನೀವು ಕೇಳಿದಂಥ ಮತ್ತು ಆಕಾಶದ ಕೆಳಗಿರುವ ಸರ್ವಸೃಷ್ಟಿಗೆ ಸಾರಲಾದ ಈ ಸುವಾರ್ತೆಗೆ ಪೌಲನೆಂಬ ನಾನು ಸೇವಕನಾದೆನು.


ಇದಲ್ಲದೆ ಯಾಕೋಬನ ಶೇಷವು ಅನೇಕ ಜನಾಂಗಳ ಮಧ್ಯದಲ್ಲಿ ಯೆಹೋವ ದೇವರಿಂದ ಬಂದ ಮಂಜಿನ ಹಾಗೆಯೂ ಹುಲ್ಲಿನ ಮೇಲೆ ಜಡಿಮಳೆಯ ಹಾಗೆಯೂ ಇರುವುದು. ಅದು ಮನುಷ್ಯರಿಗೋಸ್ಕರ ಆತುಕೊಳ್ಳುವುದಿಲ್ಲ, ಮನುಷ್ಯ ಮಕ್ಕಳಿಗಾಗಿ ಕಾದುಕೊಳ್ಳುವುದಿಲ್ಲ.


ಅಬ್ರಹಾಮನು ನಿಶ್ಚಯವಾಗಿ ಬಲವಾದ ದೊಡ್ಡ ಜನಾಂಗವಾಗುವನು, ಅವನ ಮೂಲಕ ಭೂಲೋಕದ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದು.


ಪ್ರಿಯರೇ, ನನ್ನ ಸೇವೆಯು ಯೆಹೂದ್ಯರಲ್ಲದವರಲ್ಲಿ ಫಲಉಂಟಾದಂತೆ ನಿಮ್ಮಲ್ಲಿಯೂ ಫಲಉಂಟಾಗಬೇಕೆಂದು ನಿಮ್ಮ ಬಳಿಗೆ ಬರುವುದಕ್ಕೆ ಅನೇಕಾವರ್ತಿ ಉದ್ದೇಶಿಸಿದೆನು. ಆದರೆ ಅದಕ್ಕೆ ಇಂದಿನವರೆಗೂ ಅಡ್ಡಿಯಾಯಿತೆಂದು ನಿಮಗೆ ತಿಳಿದಿರಬೇಕೆಂಬುದು ನನ್ನ ಅಪೇಕ್ಷೆ.


ಆದರೆ ಪವಿತ್ರಾತ್ಮ ದೇವರು ನಿಮ್ಮ ಮೇಲೆ ಬಂದಾಗ ನೀವು ಶಕ್ತಿಯನ್ನು ಪಡೆಯುವಿರಿ. ಆಗ ನೀವು ಯೆರೂಸಲೇಮಿನಲ್ಲಿ, ಯೂದಾಯ ಪ್ರಾಂತ ಮತ್ತು ಸಮಾರ್ಯ ಪ್ರಾಂತದ ಎಲ್ಲಾ ಕಡೆಗಳಲ್ಲಿಯೂ ಹಾಗೂ ಭೂಲೋಕದ ಕೊನೆಯ ಮೇರೆಗಳವರೆಗೂ ನನಗೆ ಸಾಕ್ಷಿಗಳಾಗುವಿರಿ,” ಎಂದರು.


“ಬೇಡಿಕೊಳ್ಳಿರಿ, ನಿಮಗೆ ಕೊಡಲಾಗುವುದು; ಹುಡುಕಿರಿ, ನಿಮಗೆ ಸಿಗುವುದು; ತಟ್ಟಿರಿ, ನಿಮಗೆ ಬಾಗಿಲು ತೆರೆಯಲಾಗುವುದು.


“ನಾನೇ ದ್ರಾಕ್ಷಿಯ ಬಳ್ಳಿ, ನೀವು ಕವಲುಬಳ್ಳಿಗಳು. ನೀವು ನನ್ನಲ್ಲಿ ಮತ್ತು ನಾನು ನಿಮ್ಮಲ್ಲಿ ನೆಲೆಗೊಂಡಿದ್ದರೆ ನೀವು ಬಹಳ ಫಲಕೊಡುವಿರಿ. ಏಕೆಂದರೆ ನೀವು ನನ್ನನ್ನು ಬಿಟ್ಟು ಏನೂ ಮಾಡಲಾರಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು