Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 15:22 - ಕನ್ನಡ ಸಮಕಾಲಿಕ ಅನುವಾದ

22 ನಾನು ಬಂದು ಅವರೊಂದಿಗೆ ಮಾತನಾಡದಿದ್ದರೆ ಅವರಿಗೆ ಪಾಪವು ಇರುತ್ತಿರಲಿಲ್ಲ. ಆದರೆ ಈಗ ಅವರ ಪಾಪದ ವಿಷಯವಾಗಿ ಅವರಿಗೆ ನೆಪವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನಾನು ಬಾರದೆ ಮತ್ತು ಅವರ ಸಂಗಡ ಮಾತನಾಡದೆ ಹೋಗಿದ್ದಾರೆ ಅವರಿಗೆ ಪಾಪವು ಇರುತ್ತಿರಲಿಲ್ಲ. ಆದರೆ ಅವರ ಪಾಪಕ್ಕಾಗಿ ಈಗ ಯಾವ ನೆಪವೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ನಾನು ಬಂದು ಅವರಿಗೆ ಬೋಧನೆ ಮಾಡದೆಹೋಗಿದ್ದರೆ ಅವರು ಪಾಪದೋಷಿಗಳು ಎಂದು ಹೇಳಲಾಗುತ್ತಿರಲಿಲ್ಲ. ಆದರೆ ಈಗ ಅವರ ದೋಷಕ್ಕೆ ಯಾವ ನೆಪವನ್ನೂ ಒಡ್ಡುವಂತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ನಾನು ಬಂದು ಅವರ ಕೂಡ ಮಾತಾಡದಿದ್ದರೆ ಅವರಿಗೆ ಪಾಪವು ಇರುತ್ತಿದ್ದಿಲ್ಲ; ಆದರೆ ಅವರು ಮಾಡಿದ ಪಾಪಕ್ಕಾಗಿ ಅವರಿಗೆ ಈಗ ನೆವವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನಾನು ಬಂದು ಈ ಲೋಕದ ಜನರೊಂದಿಗೆ ಮಾತಾಡಿಲ್ಲದಿದ್ದರೆ, ಅವರನ್ನು ಪಾಪದೋಷಿಗಳೆಂದು ಹೇಳಲಾಗುತ್ತಿರಲಿಲ್ಲ. ಆದರೆ ಈಗ ನಾನು ಅವರೊಂದಿಗೆ ಮಾತಾಡಿದ್ದೇನೆ. ಆದ್ದರಿಂದ ತಮ್ಮ ಪಾಪಕ್ಕೆ ಅವರಿಗೆ ಯಾವ ನೆವವೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಮಿಯಾ ಯೆವ್ನ್ ತೆಂಚೆಕ್ಡೆ ಬೊಲಲ್ಲೆ ನಸ್ಲ್ಯಾರ್, ತೆಂಕಾ ತೆಂಚ್ಯಾ ಪಾಪಾಚ್ಯಾ ವಿಶಯಾತ್ ಕಾಯ್ಬಿ ಅಸಂಯ್ ದಿಶಿನಶಿ ಹೊತ್ತೆ, ಖರೆ ಅತ್ತಾ ತೆಂಕಾ ತೆಂಚ್ಯಾ ಪಾಪಾತ್ನಾ ಚುಕುನ್ ಘೆವ್ಕ್ ರ್‍ಹಾವ್ಕ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 15:22
17 ತಿಳಿವುಗಳ ಹೋಲಿಕೆ  

ಅದಕ್ಕೆ ಯೇಸು ಅವರಿಗೆ, “ನೀವು ಕುರುಡರಾಗಿದ್ದರೆ ನಿಮಗೆ ಪಾಪವು ಇರುತ್ತಿರಲಿಲ್ಲ. ಆದರೆ, ‘ನಮಗೆ ಕಾಣುತ್ತದೆ,’ ಎಂದು ನೀವು ಹೇಳುವುದರಿಂದ ನಿಮ್ಮ ಪಾಪವು ನಿಮಗೆ ಉಳಿದಿದೆ,” ಎಂದರು.


ಹೀಗಿರುವುದರಿಂದ ಒಳ್ಳೆಯದನ್ನು ಮಾಡಬೇಕೆಂದು ತಿಳಿದು ಅದನ್ನು ಮಾಡದೆ ಇರುವವನಿಗೆ ಅದು ಪಾಪವಾಗಿದೆ.


ಇಂಥಾ ಅಜ್ಞಾನ ಕಾಲವನ್ನು ಹಿಂದಿನ ಕಾಲದಲ್ಲಿ ದೇವರು ತಮ್ಮ ಗಮನಕ್ಕೆ ತಂದುಕೊಳ್ಳಲಿಲ್ಲ. ಆದರೆ ಈಗ ಎಲ್ಲಾ ಕಡೆಗಳಲ್ಲಿರುವ ಸರ್ವಮಾನವರೂ ಪಶ್ಚಾತ್ತಾಪ ಪಡಬೇಕೆಂದು ದೇವರು ಆಜ್ಞಾಪಿಸುತ್ತಾರೆ.


ಹೇಗೆಂದರೆ ಕಣ್ಣಿಗೆ ಕಾಣದ ಗುಣಲಕ್ಷಣಗಳಾಗಿರುವ ದೇವರ ಗುಣವೂ ನಿತ್ಯಶಕ್ತಿಯೂ ದೈವಸ್ವಭಾವವೂ ಜಗದ ಸೃಷ್ಟಿ ದಿನದಿಂದ ಅವರು ಸೃಷ್ಟಿಸಿದವುಗಳ ಮೂಲಕ ಸ್ಪಷ್ಟವಾಗಿ ಕಂಡುಬರುತ್ತಿವೆ. ಹೀಗಿರುವುದರಿಂದ ಜನರಿಗೆ ತಪ್ಪಿಸಿಕೊಳ್ಳಲು ನೆಪ ಇಲ್ಲವಾಗಿದೆ.


ನನ್ನನ್ನು ತಿರಸ್ಕರಿಸಿ ನನ್ನ ಮಾತುಗಳನ್ನು ಸ್ವೀಕರಿಸದವರಿಗೆ ತೀರ್ಪು ಮಾಡುವಂಥದ್ದು ಒಂದು ಇದೆ. ಅದು ನಾನು ಮಾತನಾಡಿದ ವಾಕ್ಯವೇ, ಅದೇ ಕಡೇ ದಿನದಲ್ಲಿ ಅವರಿಗೆ ತೀರ್ಪು ಮಾಡುವುದು.


ಸ್ವತಂತ್ರರಾಗಿರಿ, ಆದರೆ ಕೆಟ್ಟತನವನ್ನು ಮರೆಮಾಡುವುದಕ್ಕೆ ನಿಮ್ಮ ಸ್ವಾತಂತ್ರ್ಯವನ್ನು ಉಪಯೋಗಿಸಬೇಡಿರಿ. ದೇವರ ಸೇವಕರಂತೆಯೇ ಬಾಳಿರಿ.


ಆದ್ದರಿಂದ, ಯಾವ ಕಾರಣಕ್ಕಾಗಿ ನೀನು ಇತರರಿಗೆ ತೀರ್ಪು ಮಾಡುತ್ತಿರುವೆಯೋ ಅದನ್ನೇ ನೀನೂ ಮಾಡುತ್ತಿರುವುದರಿಂದ ನಿನ್ನನ್ನು ನೀನೇ ತೀರ್ಪು ಮಾಡಿಕೊಂಡ ಹಾಗಾಯಿತು. ಇತರರ ಮೇಲೆ ತೀರ್ಪುಮಾಡುವ ನಿನಗೆ ಹೇಳುವುದಕ್ಕೆ ನೆಪವಿಲ್ಲ.


ಆ ಸೇವಕನು ನಿರೀಕ್ಷಿಸದ ದಿನದಲ್ಲಿಯೂ ತಿಳಿಯದ ಸಮಯದಲ್ಲಿಯೂ ಅವನ ಯಜಮಾನನು ಬಂದು, ಅವನನ್ನು ಕಠಿಣವಾಗಿ ಹೊಡಿಸಿ ಅವಿಶ್ವಾಸಿಗಳಿಗೆ ಆಗ ಸಿಕ್ಕುವ ಪಾಲನ್ನು ಅವನಿಗೆ ನೇಮಿಸುವನು.


ಅವರು ಕೇಳಲಿ ಅಥವಾ ಕೇಳದೇ ಇರಲಿ, ಏಕೆಂದರೆ ಅವರು ತಿರುಗಿಬೀಳುವ ಜನರು, ಆದರೆ ತಮ್ಮೊಳಗೆ ಪ್ರವಾದಿ ಇರುವನೆಂದು ತಿಳಿದುಕೊಂಡರೆ ಸಾಕು.


ಅದಕ್ಕೆ ಯೇಸು, “ಪರಲೋಕದಿಂದ ನಿನಗೆ ಕೊಟ್ಟ ಹೊರತು ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪವಿದೆ,” ಎಂದು ಉತ್ತರಕೊಟ್ಟರು.


ನನ್ನನ್ನು ದ್ವೇಷಿಸುವವರು ನನ್ನ ತಂದೆಯನ್ನು ಸಹ ದ್ವೇಷಿಸುತ್ತಾರೆ.


ಬೇರೆ ಯಾರೂ ಮಾಡದ ಕ್ರಿಯೆಗಳನ್ನು ನಾನು ಅವರ ನಡುವೆ ಮಾಡದೆ ಹೋಗಿದ್ದರೆ ಅವರಿಗೆ ಪಾಪವು ಇರುತ್ತಿರಲಿಲ್ಲ. ಆದರೆ ಈಗ ಅವರು ನನ್ನ ಕ್ರಿಯೆಗಳನ್ನು ಕಂಡೂ ನನ್ನನ್ನೂ ನನ್ನ ತಂದೆಯನ್ನೂ ದ್ವೇಷಮಾಡಿದ್ದಾರೆ.


ಜನರು ನನ್ನನ್ನು ನಂಬದೆ ಇರುವ ಕಾರಣದಿಂದ, ಪಾಪದ ವಿಷಯವಾಗಿಯೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು