Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 15:5 - ಕನ್ನಡ ಸಮಕಾಲಿಕ ಅನುವಾದ

5 “ನಾನೇ ದ್ರಾಕ್ಷಿಯ ಬಳ್ಳಿ, ನೀವು ಕವಲುಬಳ್ಳಿಗಳು. ನೀವು ನನ್ನಲ್ಲಿ ಮತ್ತು ನಾನು ನಿಮ್ಮಲ್ಲಿ ನೆಲೆಗೊಂಡಿದ್ದರೆ ನೀವು ಬಹಳ ಫಲಕೊಡುವಿರಿ. ಏಕೆಂದರೆ ನೀವು ನನ್ನನ್ನು ಬಿಟ್ಟು ಏನೂ ಮಾಡಲಾರಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಾನು ದ್ರಾಕ್ಷಿಬಳ್ಳಿ, ನೀವು ಕೊಂಬೆಗಳು; ಒಬ್ಬನು ನನ್ನಲ್ಲಿಯೂ ನಾನು ಅವನಲ್ಲಿಯೂ ನೆಲೆಗೊಂಡಿದ್ದರೆ ಅವನು ಬಹಳ ಫಲ ಕೊಡುವನು. ನೀವು ನನ್ನನ್ನು ಬಿಟ್ಟು ಏನೂ ಮಾಡಲಾರಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 “ಹೌದು, ನಾನೇ ದ್ರಾಕ್ಷಾಬಳ್ಳಿ; ನೀವೇ ಅದರ ಕವಲುಬಳ್ಳಿಗಳು. ಒಬ್ಬನು ನನ್ನಲ್ಲಿಯೂ ನಾನು ಅವನಲ್ಲಿಯೂ ನೆಲೆಗೊಂಡಿದ್ದರೆ ಅಂಥವನು ಸಮೃದ್ಧಿಯಾಗಿ ಫಲಕೊಡುವನು. ಏಕೆಂದರೆ, ನನ್ನಿಂದ ಬೇರ್ಪಟ್ಟು ನಿಮ್ಮಿಂದ ಏನೂ ಮಾಡಲಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಾನು ದ್ರಾಕ್ಷೇ ಬಳ್ಳಿ, ನೀವು ಕೊಂಬೆಗಳು; ಒಬ್ಬನು ನನ್ನಲ್ಲಿಯೂ ನಾನು ಅವನಲ್ಲಿಯೂ ನೆಲೆಗೊಂಡಿದ್ದರೆ ಅವನೇ ಬಹಳ ಫಲಕೊಡುವನು; ನೀವು ನನ್ನನ್ನು ಬಿಟ್ಟು ಏನೂ ಮಾಡಲಾರಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ನಾನೇ ದ್ರಾಕ್ಷಿಬಳ್ಳಿ; ನೀವೇ ಕವಲುಗಳು. ಒಬ್ಬನು ನನ್ನಲ್ಲಿ ನೆಲೆಗೊಂಡಿದ್ದರೆ ಮತ್ತು ನಾನು ಅವನಲ್ಲಿ ನೆಲೆಗೊಂಡಿದ್ದರೆ, ಆಗ ಅವನು ಹೆಚ್ಚು ಫಲಕೊಡುವನು. ಆದರೆ ಅವನು ನನ್ನನ್ನು ಬಿಟ್ಟು ಏನೂ ಮಾಡಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 “ಮಿಯಾ ದ್ರಾಕ್ಷಿಚಿ ಯೆಲ್ ತುಮಿ ತೆ ಫಾಟೆ. ಜೊ ಕೊನ್ ಮಾಜ್ಯಾ ವಾಂಗ್ಡಾ ಎಕ್ ಹೊವ್ನ್ ರ್‍ಹಾತಾ ಅನಿ ಮಿಯಾ ತ್ಯೆಚ್ಯಾ ವಾಂಗ್ಡಾ ಎಕ್ ಹೊವ್ನ್ ರ್‍ಹಾತಾ ತೊ ಜಾಸ್ತಿಚಿ ಫಳ್ ದಿತಾ, ತುಮ್ಚ್ಯಾ ವಾಂಗ್ಡಾ ಮಿಯಾ ನಸ್ತಾನಾ ತುಮಿ ಕಾಯ್ ಬಿ ಕರುಕ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 15:5
28 ತಿಳಿವುಗಳ ಹೋಲಿಕೆ  

ನನಗೆ ಶಕ್ತಿನೀಡುವ ಕ್ರಿಸ್ತ ಯೇಸುವಿನ ಮೂಲಕ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ.


ಕರ್ತ ಯೇಸುವಿಗೆ ಯೋಗ್ಯರಾಗಿ ಜೀವಿಸಿ ಎಲ್ಲಾ ವಿಧದಲ್ಲಿ ಅವರನ್ನೇ ಮೆಚ್ಚಿಸುವವರಾಗಿರಬೇಕೆಂತಲೂ ನೀವು ಸಕಲ ಸತ್ಕಾರ್ಯದಲ್ಲಿ ಫಲಕೊಡುತ್ತಾ ದೇವರ ತಿಳುವಳಿಕೆಯಲ್ಲಿ ವೃದ್ಧಿಯಾಗುತ್ತಿರಬೇಕೆಂತಲೂ


ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ. ನಾನೇ ನಿಮ್ಮನ್ನು ಆರಿಸಿಕೊಂಡಿದ್ದೇನೆ. ನೀವು ಹೋಗಿ ಫಲಕೊಡುವಂತೆಯೂ ನಿಮ್ಮ ಫಲವು ಸ್ಥಿರವಾಗಿರುವಂತೆಯೂ ನಾನು ನಿಮ್ಮನ್ನು ನೇಮಿಸಿದ್ದೇನೆ. ಹೀಗೆ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅವರು ನಿಮಗೆ ಕೊಡುವರು.


ಪವಿತ್ರಾತ್ಮರ ಫಲವೇನೆಂದರೆ: ಪ್ರೀತಿ, ಆನಂದ, ಸಮಾಧಾನ, ಸಹನೆ, ದಯೆ, ಸದ್ಗುಣ, ನಂಬಿಗಸ್ತಿಕೆ,


ನೀತಿವಂತರ ಫಲವು ಜೀವವೃಕ್ಷ; ಆತ್ಮಗಳನ್ನು ಗೆಲ್ಲುವವನು ಜ್ಞಾನಿಯಾಗಿದ್ದಾನೆ.


ಸತ್ಯಕ್ಕೆ ವಿರುದ್ಧವಾಗಿ ನಾವೇನೂ ಮಾಡಲಾರೆವು. ಸತ್ಯದ ಪರವಾಗಿಯೇ ಎಲ್ಲವನ್ನೂ ಮಾಡುತ್ತೇವೆ.


ಯೇಸು ಅವರಿಗೆ, “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ತಂದೆಯು ಮಾಡುವುದನ್ನು ಕಂಡು ಪುತ್ರನು ಮಾಡುತ್ತಾನೆ ಹೊರತು ಪುತ್ರನು ತನ್ನಷ್ಟಕ್ಕೆ ತಾನೇ ಏನೂ ಮಾಡಲಾರನು. ಏಕೆಂದರೆ ತಂದೆ ಯಾವುದನ್ನೆಲ್ಲಾ ಮಾಡುವರೋ ಹಾಗೆಯೇ ಪುತ್ರನೂ ಮಾಡುವನು.


ಎಲ್ಲಾ ಉತ್ತಮ ಮತ್ತು ಪೂರ್ಣವಾದ ವರಗಳೂ ಮೇಲಿನಿಂದ ಬಂದವುಗಳೇ, ಅವು ಪರಲೋಕದ ಬೆಳಕಿನ ತಂದೆಯಿಂದ ಇಳಿದು ಬರುತ್ತವೆ. ಆ ತಂದೆಯು ಬದಲಾಗುವ ನೆರಳಿನಂತೆ ಬದಲಾಗುವವರಲ್ಲ.


ನೀವು ಕೃಪೆಯಲ್ಲಿ ಬೆಳೆಯಿರಿ ಮತ್ತು ನಮಗೆ ಕರ್ತ ಹಾಗೂ ರಕ್ಷಕ ಆಗಿರುವ ಕ್ರಿಸ್ತ ಯೇಸುವಿನ ವಿಷಯವಾದ ಜ್ಞಾನದಲ್ಲಿಯೂ ಬೆಳೆಯಿರಿ. ಅವರಿಗೆ ಈಗಲೂ ಸರ್ವಕಾಲವೂ ಮಹಿಮೆ ಇರಲಿ! ಆಮೆನ್.


ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಗೋಧಿಯ ಕಾಳು ಭೂಮಿಯಲ್ಲಿ ಬಿದ್ದು ಸಾಯದಿದ್ದರೆ ಒಂಟಿಯಾಗಿ ಉಳಿಯುವುದು, ಆದರೆ ಅದು ಸತ್ತರೆ ಬಹಳ ಫಲಕೊಡುವುದು.


ಆದ್ದರಿಂದ, ನನ್ನ ಪ್ರಿಯರೇ, ನೀವು ದೇವರಿಗೆ ಫಲಕೊಡುವವರಾಗಬೇಕೆಂದು ಸತ್ತವರೊಳಗಿಂದ ಎದ್ದುಬಂದಾತನಿಗೆ ಸೇರಿದವರಾಗಲು ಕ್ರಿಸ್ತ ಯೇಸುವಿನ ದೇಹದ ಮೂಲಕ ನಿಯಮದ ಪಾಲಿಗೆ ಸತ್ತಿರಿ.


ದೇವರ ಮಹಿಮೆ ಹಾಗೂ ಸ್ತೋತ್ರಕ್ಕಾಗಿ ಕ್ರಿಸ್ತ ಯೇಸುವಿನ ಮೂಲಕ ಬರುವ ನೀತಿಯ ಫಲಗಳಿಂದ ತುಂಬಿದವರಾಗಿರಬೇಕೆಂತಲೂ ಪ್ರಾರ್ಥಿಸುತ್ತೇನೆ.


ಅವರು ದೇವರಿಂದ ಬಂದವರಲ್ಲದಿದ್ದರೆ ಅವರಿಂದ ಏನೂ ಮಾಡಲಾಗುತ್ತಿರಲಿಲ್ಲ,” ಎಂದನು.


ನಾನು ನಿಮ್ಮಿಂದ ದಾನವನ್ನು ನಿರೀಕ್ಷಿಸುವುದಿಲ್ಲ. ಆದರೆ ನಿಮ್ಮ ಲೆಕ್ಕಕ್ಕೆ ಲಾಭ ಹೆಚ್ಚಿಸುವುದನ್ನೇ ನೋಡುತ್ತಿದ್ದೇನೆ.


ಆದರೆ ಈಗ ನೀವು ಪಾಪದಿಂದ ಬಿಡುಗಡೆ ಹೊಂದಿದವರಾಗಿ ದೇವರಿಗೆ ಗುಲಾಮರಾಗಿರುವುದರಿಂದ, ಪವಿತ್ರವಾಗಿರುವುದೇ ನಿಮಗೆ ದೊರಕುವ ಫಲವು. ಕಡೆಗೆ ದೊರೆಯುವಂಥದು ನಿತ್ಯಜೀವವಾಗಿರುತ್ತದೆ.


ಯೇಸು ಅಲ್ಲದೆ ಬೇರೆ ಯಾರಿಂದಲೂ ರಕ್ಷಣೆಯು ಇಲ್ಲ, ಏಕೆಂದರೆ ಆಕಾಶದ ಕೆಳಗೆ ಮನುಷ್ಯರೊಳಗೆ ಆ ಹೆಸರಲ್ಲದೇ ಬೇರೆ ಯಾವ ಹೆಸರಿನಿಂದಲೂ ರಕ್ಷಣೆಯಾಗುವುದಿಲ್ಲ,” ಎಂದನು.


ದೇಹವು ಅನೇಕ ಅಂಗಗಳುಳ್ಳದ್ದಾಗಿದ್ದರೂ ಒಂದಾಗಿರುವಂತೆಯೂ, ಅನೇಕ ಅಂಗಗಳೆಲ್ಲವು ಒಂದೇ ದೇಹವನ್ನು ರೂಪಿಸುವಂತೆಯೂ, ಕ್ರಿಸ್ತನ ದೇಹವು ಸಹ ಇರುತ್ತದೆ.


ನೀವು ಸಜೀವ ಕಲ್ಲಾಗಿರುವವರ ಬಳಿಗೆ ಬಂದಿದ್ದೀರಿ. ಆ ಕಲ್ಲು ಮನುಷ್ಯರಿಂದ ನಿರಾಕರಿಸಿದರೂ ಅದು ದೇವರಿಂದ ಆರಿಸಿಕೊಂಡದ್ದೂ ಅವರಿಗೆ ಅಮೂಲ್ಯವಾದದ್ದೂ ಆಯಿತು.


ಈಗ ನೀವು ಕ್ರಿಸ್ತನ ದೇಹವಾಗಿದ್ದೀರಿ. ನಿಮ್ಮಲ್ಲಿ ಪ್ರತಿಯೊಬ್ಬರೂ ಆ ದೇಹದ ಅಂಗಗಳಾಗಿದ್ದೀರಿ.


ಬೆಳಕಿನ ಫಲವು ಎಲ್ಲಾ ಒಳ್ಳೆಯತನದಲ್ಲಿಯೂ ನೀತಿಯಲ್ಲಿಯೂ ಸತ್ಯದಲ್ಲಿಯೂ ಇರುತ್ತದೆ.


ಬಿತ್ತುವವನಿಗೆ ಬೀಜವನ್ನು, ಉಣ್ಣುವವನಿಗೆ ಊಟವನ್ನು ಒದಗಿಸುವ ದೇವರು ನಿಮಗೂ ಬಿತ್ತುವುದಕ್ಕೆ ಬೀಜವನ್ನು ಕೊಟ್ಟು, ಹೆಚ್ಚಿಸಿ ನಿಮ್ಮ ನೀತಿಯ ಸುಗ್ಗಿಯನ್ನು ವೃದ್ಧಿಪಡಿಸುವರು.


ಆ ಸುವಾರ್ತೆಯು ಲೋಕದಲ್ಲೆಲ್ಲಾ ಹರಡಿದಂತೆ, ನಿಮಗೂ ತಲುಪಲು ನೀವು ಸಹ ಅದನ್ನು ಕೇಳಿ ದೇವರ ಕೃಪೆಯನ್ನು ನಿಜವಾಗಿಯೂ ತಿಳಿದುಕೊಂಡ ದಿವಸದಿಂದ ನಿಮ್ಮಲ್ಲಿಯೂ ಫಲಕೊಟ್ಟು ವೃದ್ಧಿಯಾಗುತ್ತಿದೆ.


ಅದೇ ರೀತಿಯಲ್ಲಿ, ಅನೇಕರಾಗಿರುವ ನಾವು ಕ್ರಿಸ್ತನಲ್ಲಿ ಒಂದೇ ದೇಹವಾಗುತ್ತೇವೆ ಮತ್ತು ಪ್ರತಿಯೊಬ್ಬನೂ ಒಬ್ಬರಿಗೊಬ್ಬರು ಅಂಗಗಳಾಗಿರುತ್ತೇವೆ.


ನಾವು ಸ್ತೋತ್ರಮಾಡಿ ಕುಡಿಯುವ ಸ್ತೋತ್ರದ ಪಾತ್ರೆಯು ಕ್ರಿಸ್ತ ಯೇಸುವಿನ ರಕ್ತದ ಅನ್ಯೋನ್ಯತೆಯಲ್ಲವೇ? ನಾವು ಮುರಿಯುವ ರೊಟ್ಟಿಯು ಕ್ರಿಸ್ತನ ದೇಹದಲ್ಲಿಯ ಅನ್ಯೋನ್ಯತೆಯಲ್ಲವೇ?


ಅವರು ನನ್ನ ಜನರ ಪಾಪವನ್ನು ತಿನ್ನುತ್ತಾರೆ. ಅವರು ದುಷ್ಟತನದ ಮೇಲೆ ಅವರ ಮನಸ್ಸನ್ನು ಇಡುತ್ತಾರೆ.


ಆದರೆ ಅವರಲ್ಲಿ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರ ಇದ್ದು, ವಾಕ್ಯದ ನಿಮಿತ್ತವಾಗಿ ಸಂಕಟ ಇಲ್ಲವೆ ಹಿಂಸೆ ಬಂದಾಗ, ಅವರು ಬೇಗನೆ ಬಿದ್ದು ಹೋಗುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು