Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 16:10 - ಕನ್ನಡ ಸಮಕಾಲಿಕ ಅನುವಾದ

10 ನಾನು ನನ್ನ ತಂದೆಯ ಬಳಿಗೆ ಹೋಗುವುದರಿಂದ ನೀವು ನನ್ನನ್ನು ಎಂದಿಗೂ ನೋಡದ ಕಾರಣದಿಂದ, ನೀತಿಯ ವಿಷಯವಾಗಿಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಾನು ನನ್ನ ತಂದೆಯ ಬಳಿಗೆ ಹೋಗಿ, ಇನ್ನು ಮೇಲೆ ನಿಮಗೆ ಕಾಣಿಸದೆ ಇರುವುದರಿಂದ ನೀತಿಯ ಕುರಿತಾಗಿಯೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನ್ಯಾಯನೀತಿಯ ವಿಷಯವಾಗಿ ಅವರ ತಪ್ಪುಭಾವನೆಯನ್ನು ಮನವರಿಕೆ ಮಾಡಿಕೊಡುವರು. ಏಕೆಂದರೆ, ನಾನು ಪಿತನ ಬಳಿಗೆಹೋಗುತ್ತೇನೆ ಮತ್ತು ನೀವು ನನ್ನನ್ನು ಕಾಣಲಾರಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಾನು ತಂದೆಯ ಬಳಿಗೆ ಹೋಗಿ ಇನ್ನು ಮೇಲೆ ನಿಮಗೆ ಕಾಣಿಸದೆ ಇರುವದರಿಂದ ನೀತಿಯ ವಿಷಯದಲ್ಲಿಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಾನು ತಂದೆಯ ಬಳಿಗೆ ಹೋಗುವುದರಿಂದ ನೀತಿಯ ವಿಷಯವಾಗಿಯೂ ಆತನು ಜನರಿಗೆ ನಿರೂಪಿಸುವನು. ಇನ್ನು ಮೇಲೆ ನೀವು ನನ್ನನ್ನು ನೋಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ತೆನಿ ಖಲೆ ಸಮಾ ಹಾಯ್ ತೆಕಾಚ್ ವ್ಹಾಕ್ಡೆ ಹೊವ್ನ್ ಹಾತ್, ಕಶ್ಯಾಕ್ ಮಟ್ಲ್ಯಾರ್ ಮಿಯಾ ಮಾಜ್ಯಾ ಬಾಬಾಕ್ಡೆ ಜಾವ್‍ಲಾ, ಅನಿ ಫಿಡೆ ಮಿಯಾ ಕೊನಾಕ್ಬಿ ಬಗುಕ್ ಗಾವಿನಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 16:10
26 ತಿಳಿವುಗಳ ಹೋಲಿಕೆ  

ಕ್ರಿಸ್ತ ಯೇಸುವು ನೀತಿವಂತರಾಗಿದ್ದರೂ ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವುದಕ್ಕಾಗಿ, ಒಂದೇ ಸಾರಿ ಪಾಪಗಳಿಗೋಸ್ಕರ ಬಾಧೆಪಟ್ಟು ಶರೀರದಲ್ಲಿ ಮರಣಹೊಂದಿದರು. ಆದರೆ ಆತ್ಮದಲ್ಲಿ ಬದುಕುವವರಾದರು.


ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪವನ್ನಾಗಿ ಮಾಡಿದರು. ಹೀಗೆ ಕ್ರಿಸ್ತ ಯೇಸುವಿನಲ್ಲಿ ದೇವರ ನೀತಿಯನ್ನಾಗಿ ದೇವರು ನಮ್ಮನ್ನು ಮಾಡಿದರು.


ಎಲ್ಲಾ ಪ್ರಶ್ನೆಗಳಿಂದ ಹೆಚ್ಚಾಗಿ ದೈವ ಭಕ್ತಿಯ ರಹಸ್ಯವು ದೊಡ್ಡದಾದದ್ದು ಅದು ಯಾವುದೆಂದರೆ: “ದೇವರು ಮನುಷ್ಯ ರೂಪದಲ್ಲಿ ಪ್ರತ್ಯಕ್ಷರಾದರು. ಆತ್ಮದಲ್ಲಿ ರುಜುಪಡಿಸಲಾದರು. ದೂತರಿಗೆ ಕಾಣಿಸಿಕೊಂಡರು, ಯೆಹೂದ್ಯರಲ್ಲದವರಿಗೆ ಸಾರಲಾದರು, ಲೋಕದಲ್ಲಿ ನಂಬಲಾದರು, ಮಹಿಮೆಗೆ ಒಯ್ಯಲಾದರು!”


ನೀವು ದೇವರಿಂದಲೇ ಕ್ರಿಸ್ತ ಯೇಸುವಿನಲ್ಲಿದ್ದೀರಿ. ಕ್ರಿಸ್ತ ಯೇಸು ನಮಗೆ ದೇವರ ಕಡೆಯಿಂದ ಜ್ಞಾನವೂ ನೀತಿಯೂ ಶುದ್ಧೀಕರಣವೂ ವಿಮೋಚನೆಯೂ ಆಗಿದ್ದಾರೆ.


ಆದರೆ ನೀವು ಪವಿತ್ರರೂ ನೀತಿವಂತರೂ ಆಗಿರುವ ಯೇಸುವನ್ನು ನಿರಾಕರಿಸಿ ಆ ಕೊಲೆಗಾರನನ್ನು ನಿಮಗೆ ಬಿಡುಗಡೆ ಮಾಡಿಕೊಡಬೇಕೆಂದು ಕೇಳಿಕೊಂಡಿರಿ.


ನಾವಾದರೋ ನಂಬಿಕೆಯಿಂದ ನೀತಿವಂತರಾಗುವ ನಮ್ಮ ನಿರೀಕ್ಷೆಯನ್ನು ದೇವರ ಆತ್ಮನ ಮೂಲಕ ಆತುರದಿಂದ ಎದುರುನೋಡುತ್ತಿದ್ದೇವೆ.


ದೇವರಿಂದ ದೊರಕುವ ನೀತಿಯು ಸುವಾರ್ತೆಯಲ್ಲಿ ಪ್ರಕಟವಾಗಿದೆ. “ನೀತಿವಂತನು ನಂಬಿಕೆಯಿಂದಲೇ ಬದುಕುವನು,” ಎಂದು ಬರೆದಿರುವ ಪ್ರಕಾರ, ಆ ನೀತಿಯು ಪ್ರಾರಂಭದಿಂದ ಕೊನೆಯವರೆಗೆ ನಂಬಿಕೆಯಿಂದಲೇ ಆದದ್ದು.


ಏಕೆಂದರೆ ದೇವರು ನೇಮಿಸಿದ ಒಬ್ಬರ ಮುಖಾಂತರ ಇಡೀ ಜಗತ್ತಿಗೆ ನೀತಿಗನುಸಾರವಾಗಿ ನ್ಯಾಯತೀರ್ಪು ಮಾಡುವ ಒಂದು ದಿನವನ್ನು ನೇಮಕ ಮಾಡಿದ್ದಾರೆ. ಇದನ್ನು ಎಲ್ಲರಿಗೂ ಖಚಿತ ಪಡಿಸಲೆಂದೇ ಆ ಒಬ್ಬರನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದಾರೆ.”


ನಿಮ್ಮ ಪಿತೃಗಳು ಹಿಂಸೆಪಡಿಸದೆ ಇದ್ದ ಪ್ರವಾದಿ ಒಬ್ಬನಾದರೂ ಇರುವನೇ? ನೀತಿವಂತರಾಗಿರುವ ಒಬ್ಬರು ಬರಲಿದ್ದಾರೆಂದು ಮುಂತಿಳಿಸಿದವರನ್ನು ಸಹ ಅವರು ಕೊಂದುಹಾಕಿದರು. ಈಗ ನೀವೇ ಅವರನ್ನು ಹಿಡಿದುಕೊಟ್ಟು ಕೊಲೆಮಾಡಿದ್ದೀರಿ.


ದೇವರು ಈ ಯೇಸುವನ್ನೇ ಮರಣದಿಂದ ಎಬ್ಬಿಸಿದರು. ಇದಕ್ಕೆ ನಾವೆಲ್ಲರೂ ಸಾಕ್ಷಿಗಳು.


ನನ್ನನ್ನು ಕುರಿತು ಸಾಕ್ಷಿಕೊಡುವವರು ಬೇರೊಬ್ಬರಿದ್ದಾರೆ. ಅವರು ನನ್ನ ವಿಷಯದಲ್ಲಿ ಕೊಡುವ ಸಾಕ್ಷಿಯೇ ಸತ್ಯವಾದುದೆಂದು ನಾನು ಬಲ್ಲೆನು.


ಇದಲ್ಲದೆ ಮೋಶೆಯು ಅರಣ್ಯದಲ್ಲಿ ಸರ್ಪವನ್ನು ಮೇಲೆ ಎತ್ತಿದ ಹಾಗೆಯೇ ಮನುಷ್ಯಪುತ್ರನಾದ ನನ್ನನ್ನು ಸಹ ಮೇಲಕ್ಕೆ ಏರಿಸಬೇಕು.


“ಅಕ್ರಮಗಳನ್ನು ಮುಗಿಸುವುದಕ್ಕೂ, ಪಾಪಗಳನ್ನು ಮುಚ್ಚುವುದಕ್ಕೂ, ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡುವುದಕ್ಕೂ, ನಿತ್ಯವಾದ ನೀತಿಯನ್ನು ಬರಮಾಡುವುದಕ್ಕೂ, ಆ ದರ್ಶನಕ್ಕೂ, ಪ್ರವಾದಿಯ ನುಡಿಗೆ ಮುದ್ರೆಹಾಕುವುದಕ್ಕೂ, ಮಹಾಪರಿಶುದ್ಧ ಸ್ಥಳವನ್ನು ಅಭಿಷೇಕ ಮಾಡುವುದಕ್ಕೂ ನಿನ್ನ ಜನರ ಮೇಲೆಯೂ, ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.


ಯೆಹೋವ ದೇವರು ಆತನ ನೀತಿಗೋಸ್ಕರ ಬಹಳವಾಗಿ ಮೆಚ್ಚುವನು. ಆತನು ನಿಯಮವನ್ನು ಹೆಚ್ಚಿಸಿ, ಘನಪಡಿಸುವನು.


ಯೇಸು ಅವರಿಗೆ, “ಇನ್ನು ಸ್ವಲ್ಪಕಾಲ ನಾನು ನಿಮ್ಮೊಂದಿಗಿದ್ದು ಅನಂತರ ನನ್ನನ್ನು ಕಳುಹಿಸಿದ ತಂದೆಯ ಬಳಿಗೆ ಹೋಗುತ್ತೇನೆ.


ಈಗ ನನ್ನನ್ನು ಕಳುಹಿಸಿದ ತಂದೆಯ ಬಳಿಗೆ ನಾನು ಹೋಗುತ್ತೇನೆ. ನಿಮ್ಮಲ್ಲಿ ಯಾರೂ, ‘ನೀವು ಎಲ್ಲಿಗೆ ಹೋಗುತ್ತೀರಿ?’ ಎಂದು ನನ್ನನ್ನು ಕೇಳಲಿಲ್ಲ.


ನಾನು ತಂದೆಯಿಂದ ಹೊರಟು ಈ ಲೋಕಕ್ಕೆ ಬಂದಿದ್ದೇನೆ. ತಿರುಗಿ ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುತ್ತಿದ್ದೇನೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು