Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 16:11 - ಕನ್ನಡ ಸಮಕಾಲಿಕ ಅನುವಾದ

11 ಇಹಲೋಕಾಧಿಪತಿಗೆ ನ್ಯಾಯತೀರ್ಪಾದ ಕಾರಣದಿಂದ ನ್ಯಾಯತೀರ್ಪಿನ ವಿಷಯವಾಗಿಯೂ ಮನವರಿಕೆ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇಹಲೋಕಾಧಿಪತಿಗೆ ನ್ಯಾಯತೀರ್ಪಾಗಿರುವುದರಿಂದ ನ್ಯಾಯತೀರ್ಪಿನ ಕುರಿತಾಗಿಯೂ, ಲೋಕಕ್ಕೆ ಮನವರಿಕೆಯನ್ನು ಉಂಟುಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅಂತಿಮ ತೀರ್ಪಿನ ವಿಷಯವಾಗಿ ಅವರ ತಪ್ಪುಭಾವನೆಯನ್ನು ಮನವರಿಕೆ ಮಾಡಿಕೊಡುವರು. ಏಕೆಂದರೆ, ಇಹದ ಲೋಕಾಧಿಪತಿಗೆ ಈಗಾಗಲೇ ನ್ಯಾಯತೀರ್ಪನ್ನು ಕೊಡಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಇಹಲೋಕಾಧಿಪತಿಗೆ ನ್ಯಾಯತೀರ್ವಿಕೆಯಾದದರಿಂದ ನ್ಯಾಯತೀರ್ವಿಕೆಯ ವಿಷಯದಲ್ಲಿಯೂ ಲೋಕಕ್ಕೆ ಅರುಹನ್ನು ಹುಟ್ಟಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನ್ಯಾಯತೀರ್ಪಿನ ಕುರಿತಾದ ಸತ್ಯವನ್ನು ಆ ಸಹಾಯಕನು ಈ ಲೋಕಕ್ಕೆ ಸಾಧರಪಡಿಸುವನು, ಏಕೆಂದರೆ ಈ ಲೋಕದ ಅಧಿಪತಿಗೆ ಈಗಾಗಲೇ ನ್ಯಾಯತೀರ್ಪಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಅನಿ ತೆನಿ ಝಡ್ತಿಚ್ಯಾ ವಿಶಯಾತ್ ಚುಕ್ ಚಿಂತುನ್ ಘೆವ್ನ್ ಹಾತ್ ಕಶ್ಯಾಕ್ ಮಟ್ಲ್ಯಾರ್ ಹ್ಯಾ ಜಗಾಕ್ ಫುಡಾರ್‍ಯಾಚಿ ಝಡ್ತಿ ಹೊವ್ನ್ ನಿರ್‍ನಯ್ ಕರುನ್ ಹೊಲ್ಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 16:11
34 ತಿಳಿವುಗಳ ಹೋಲಿಕೆ  

ಈಗ ಈ ಲೋಕಕ್ಕೆ ನ್ಯಾಯತೀರ್ಪು ಆಗುತ್ತದೆ. ಇಹಲೋಕದ ಅಧಿಪತಿಯನ್ನು ಈಗ ಹೊರಗೆ ಹಾಕಲಾಗುವುದು.


ಪಾಪದಲ್ಲಿ ಮುಂದುವರೆಯುವವರು ಸೈತಾನನಿಗೆ ಸೇರಿದವರು. ಏಕೆಂದರೆ ಆದಿಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದ್ದರಿಂದ ದೇವಪುತ್ರ ಯೇಸು ಸೈತಾನನ ಕೆಲಸಗಳನ್ನು ಲಯ ಮಾಡುವುದಕ್ಕೋಸ್ಕರವೇ ಪ್ರತ್ಯಕ್ಷರಾದರು.


ಮಕ್ಕಳು ರಕ್ತಮಾಂಸಧಾರಿಗಳು ಆಗಿರುವುದರಿಂದ ಯೇಸು ತಮ್ಮ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ, ಸೈತಾನನನ್ನು ನಾಶಮಾಡುವುದಕ್ಕೂ


ಕ್ರಿಸ್ತ ಯೇಸುವು ಆಳುವ ಅದೃಶ್ಯ ಶಕ್ತಿಗಳನ್ನೂ ಅಧಿಕಾರಗಳನ್ನೂ ನಿರಾಯುಧರನ್ನಾಗಿ ಮಾಡಿ ಶಿಲುಬೆಯಲ್ಲಿ ಅವುಗಳ ಮೇಲೆ ಜಯಹೊಂದಿ, ಬಹಿರಂಗವಾಗಿ ಪ್ರದರ್ಶಿಸಿದರು.


ಈ ಲೋಕದ ದೇವರು ನಂಬದವರ ಮನಸ್ಸನ್ನು ಕುರುಡುಮಾಡಿರುತ್ತಾನೆ. ಆದ್ದರಿಂದ ದೇವರ ಸ್ವರೂಪವಾಗಿರುವ ಕ್ರಿಸ್ತ ಯೇಸುವಿನ ಸುವಾರ್ತೆಯ ಮಹಿಮೆಯ ಬೆಳಕನ್ನು ಅವರು ಕಾಣಲಾರರು.


ಇನ್ನು ಮೇಲೆ ನಾನು ನಿಮ್ಮೊಂದಿಗೆ ಹೆಚ್ಚು ವಿಷಯಗಳನ್ನು ಮಾತನಾಡುವುದಿಲ್ಲ. ಏಕೆಂದರೆ ಇಹಲೋಕದ ಅಧಿಪತಿಯು ಬರಲಿದ್ದಾನೆ. ನನ್ನಲ್ಲಿ ಅವನಿಗೆ ಸೇರಿದ್ದು ಒಂದೂ ಇರುವುದಿಲ್ಲ.


“ಇಗೋ, ಯೇಸು ಮೇಘಗಳೊಂದಿಗೆ ಬರುತ್ತಾರೆ,” ಮತ್ತು “ಎಲ್ಲರ ಕಣ್ಣುಗಳು ಅವರನ್ನು ಕಾಣುವವು, ಅವರನ್ನು ಇರಿದವರು ಸಹ ಕಾಣುವರು.” ಭೂಲೋಕದಲ್ಲಿರುವ ಎಲ್ಲಾ ಜನರು, “ಅವರ ದೆಸೆಯಿಂದ ಗೋಳಾಡುವರು.” ಹೌದು, ಹಾಗೆಯೇ ಆಗುವುದು! ಆಮೆನ್.


ಆದರೆ ಈಗಿನ ಆಕಾಶವೂ ಭೂಮಿಯೂ ಅದೇ ವಾಕ್ಯದಿಂದ ಬೆಂಕಿಗಾಗಿ ಕಾದಿರಿಸಲಾಗಿವೆ. ಅವು ನ್ಯಾಯತೀರ್ಪಿಗಾಗಿ ಮತ್ತು ಭಕ್ತಿಹೀನರ ನಾಶನಕ್ಕಾಗಿ ಇಡಲಾಗಿವೆ.


ಒಂದೇ ಸಾರಿ ಸಾಯುವುದೂ ತರುವಾಯ ನ್ಯಾಯತೀರ್ಪು ಪಡೆಯುವುದೂ ಮನುಷ್ಯರಿಗಾಗಿ ನೇಮಕವಾಗಿದೆ.


ದೀಕ್ಷಾಸ್ನಾನಗಳ ಬೋಧನೆಯೂ ಹಸ್ತಾರ್ಪಣೆಯೂ ಸತ್ತವರ ಪುನರುತ್ಥಾನವೂ ನಿತ್ಯವಾದ ನ್ಯಾಯತೀರ್ಪೂ ಮುಂತಾದವುಗಳನ್ನು ಪುನಃ ಅಸ್ತಿವಾರವನ್ನಾಗಿ ಹಾಕದೆ, ನಾವು ಪರಿಪೂರ್ಣತೆಗೆ ಹೋಗೋಣ.


ನೀವು, ಹಿಂದೆ ಇಹಲೋಕದ ಮಾರ್ಗಕ್ಕೆ ಅನುಸಾರವಾಗಿ ನಡೆದುಕೊಂಡು, ವಾಯುಮಂಡಲದ ಅಧಿಪತಿಯ ಆತ್ಮನಿಗನುಸಾರವಾಗಿದ್ದೀರಿ. ಆ ದುರಾತ್ಮವು ಈಗ ಅವಿಧೇಯತೆಯ ಮಕ್ಕಳಲ್ಲಿ ಕಾರ್ಯಮಾಡುತ್ತಿದೆ.


ಆದುದರಿಂದ ನೀವು ಕಾಲಕ್ಕೆ ಮೊದಲು ಯಾವುದನ್ನು ಕುರಿತೂ ತೀರ್ಪುಮಾಡದೆ, ಕರ್ತದೇವರ ಬರುವಿಕೆಗಾಗಿ ಕಾಯಿರಿ. ಅವರು ಕತ್ತಲಲ್ಲಿರುವ ಗುಪ್ತ ಕಾರ್ಯಗಳನ್ನು ಬೆಳಕಿಗೆ ತಂದು ಮನುಷ್ಯನ ಹೃದಯದ ಉದ್ದೇಶಗಳನ್ನು ಪ್ರತ್ಯಕ್ಷಪಡಿಸುವರು. ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ಬರುವುದು.


ಜೀವಿಸುವವರಿಗೂ ಸತ್ತವರಿಗೂ ನ್ಯಾಯಾಧೀಶರಾಗಿ ದೇವರಿಂದ ನೇಮಕವಾದವರು ಯೇಸುವೇ ಎಂದು ನಾವು ಜನರಿಗೆ ಬೋಧಿಸಿ ಸಾಕ್ಷಿ ಕೊಡಬೇಕೆಂದೂ ಕ್ರಿಸ್ತ ಯೇಸು ನಮಗೆ ಆಜ್ಞಾಪಿಸಿದ್ದಾರೆ.


ಯೇಸು ಅವರಿಗೆ, “ಸೈತಾನನು ಮಿಂಚಿನ ಹಾಗೆ ಆಕಾಶದಿಂದ ಬೀಳುವುದನ್ನು ನಾನು ಕಂಡೆನು.


ನಾನು ನಿಮಗೆ ಹೇಳುವುದೇನೆಂದರೆ, ಮನುಷ್ಯರು ಆಡುವ ಪ್ರತಿಯೊಂದು ವ್ಯರ್ಥ ಮಾತಿಗಾಗಿ ನ್ಯಾಯವಿಚಾರಣೆಯ ದಿನದಲ್ಲಿ ಅವರು ಲೆಕ್ಕಕೊಡಬೇಕು.


“ಈತನು ನಾನು ಆರಿಸಿಕೊಂಡ ನನ್ನ ದಾಸನು, ಈ ನನ್ನ ಪ್ರಿಯನಲ್ಲಿ ನನ್ನ ಪ್ರಾಣವು ಸಂಪೂರ್ಣ ಮೆಚ್ಚಿದೆ. ನಾನು ಈತನ ಮೇಲೆ ನನ್ನ ಆತ್ಮವನ್ನು ಇರಿಸುವೆನು, ಈತನು ಜನಾಂಗಗಳಿಗೆ ನ್ಯಾಯವನ್ನು ಸಾರುವನು.


ನೀವು ಅನೇಕ ಸೆರೆಯವರ ಹಿಡಿದುಕೊಂಡು ಉನ್ನತಕ್ಕೆ ಹೋದಾಗ, ಯೆಹೋವ ದೇವರು ತಿರುಗಿಬೀಳುವವರ ಮಧ್ಯದಲ್ಲಿ ಸಹ ನಿವಾಸಿಸುವಂತೆ ಆ ತಿರುಗಿಬಿದ್ದ ಮನುಷ್ಯರಿಂದ ದಾನಗಳನ್ನು ಅಂಗೀಕರಿಸಿದ್ದೀರಿ.


ನಾನು ನಿನಗೂ ಸ್ತ್ರೀಗೂ ನಿಮ್ಮ ಸಂತಾನಕ್ಕೂ ಆಕೆಯ ಸಂತಾನಕ್ಕೂ ವೈರತ್ವವನ್ನು ಇಡುವೆನು. ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು ಕಚ್ಚುವಿ.”


ಆಗ ಸಮಾಧಾನದ ದೇವರು ಬೇಗನೆ ಸೈತಾನನನ್ನು ನಿಮ್ಮ ಕಾಲುಗಳ ಕೆಳಗೆ ಹಾಕಿ ಜಜ್ಜಿಬಿಡುವನು. ನಮ್ಮ ಕರ್ತ ಆಗಿರುವ ಯೇಸುವಿನ ಕೃಪೆಯು ನಿಮ್ಮೊಂದಿಗಿರಲಿ.


ನಾನು ಸಾರುವ ಸುವಾರ್ತೆಯ ಪ್ರಕಾರ ದೇವರು ಕ್ರಿಸ್ತ ಯೇಸುವಿನ ಮೂಲಕವಾಗಿ ಮನುಷ್ಯರ ಗುಟ್ಟುಗಳನ್ನು ವಿಚಾರಿಸುವ ದಿನದಲ್ಲಿ ಇವೆಲ್ಲಾ ಸಂಭವಿಸುವುದು.


ನೀನು ಅವರ ಕಣ್ಣುಗಳನ್ನು ತೆರೆದು, ಅವರನ್ನು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಸಿ ಪಾಪಕ್ಷಮಾಪಣೆಯನ್ನು ಪಡೆಯುವಂತೆ ಮಾಡಿ, ನನ್ನಲ್ಲಿ ವಿಶ್ವಾಸವಿದ್ದು ಶುದ್ಧೀಕರಣ ಹೊಂದಿದವರ ಮಧ್ಯದಲ್ಲಿ ಹಕ್ಕುಬಾಧ್ಯತೆಯನ್ನು ಪಡೆಯುವಂತೆ ಮಾಡಬೇಕೆಂದು ನಿನ್ನನ್ನು ಕಳುಹಿಸುತ್ತಿದ್ದೇನೆ,’ ಎಂದರು.


ನೀತಿ, ದಮೆ, ಬರಲಿಕ್ಕಿರುವ ನ್ಯಾಯವಿಚಾರಣೆಯ ಬಗ್ಗೆ ಪೌಲನು ವಿವರಿಸಿದಾಗ, ಫೇಲಿಕ್ಸ್ ಹೆದರಿಕೊಂಡವನಾಗಿ, “ಈಗ ಇಷ್ಟೇ ಸಾಕು! ಸದ್ಯಕ್ಕೆ ನೀನು ಹೋಗಬಹುದು. ಅನಂತರ ನಾನು ಸಮಯ ಸಿಕ್ಕಿದಾಗ ನಿನ್ನನ್ನು ಪುನಃ ಕರೆಯಿಸುತ್ತೇನೆ,” ಎಂದನು.


“ನಾನು ನಿಮಗೆ ಹೇಳಬೇಕಾದ ವಿಷಯಗಳು ಇನ್ನೂ ಬಹಳ ಇವೆ. ಆದರೆ ನೀವು ಈಗ ಅವುಗಳನ್ನು ತಾಳಿಕೊಳ್ಳಲಾರಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು