Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 16:26 - ಕನ್ನಡ ಸಮಕಾಲಿಕ ಅನುವಾದ

26 ಆ ದಿವಸದಲ್ಲಿ ನೀವು ನನ್ನ ಹೆಸರಿನಲ್ಲಿ ಕೇಳಿಕೊಳ್ಳುವಿರಿ. ನಿಮ್ಮ ವಿಷಯವಾಗಿ ತಂದೆಯನ್ನು ಕೇಳಿಕೊಳ್ಳುವೆನೆಂದು ನಾನು ನಿಮಗೆ ಹೇಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆ ದಿನದಲ್ಲಿ ನೀವು ನನ್ನ ಹೆಸರಿನಲ್ಲಿ ಕೇಳಿಕೊಳ್ಳುವಿರಿ, ನಿಮ್ಮ ಪರವಾಗಿ ನಾನು ತಂದೆಯನ್ನು ಬೇಡಿಕೊಳ್ಳುವೆನೆಂದು ನಾನು ನಿಮಗೆ ಹೇಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಆ ಕಾಲವು ಬಂದಾಗ ನನ್ನ ಹೆಸರು ಹೇಳಿ ನೀವೇ ಪಿತನಲ್ಲಿ ಬೇಡುವಿರಿ. ನಿಮ್ಮ ಪರವಾಗಿ ನಾನು ಪಿತನಲ್ಲಿ ಬೇಡಿಕೊಳ್ಳುವೆನೆಂದು ನಾನು ಹೇಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆ ದಿನದಲ್ಲಿ ನನ್ನ ಹೆಸರಿನ ಮೇಲೆ ಬೇಡಿಕೊಳ್ಳುವಿರಿ. ನಾನು ತಂದೆಯನ್ನು ನಿಮಗೋಸ್ಕರ ಕೇಳಿಕೊಳ್ಳುವೆನೆಂತ ನಿಮಗೆ ಹೇಳುವದಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆಗ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಬೇಡಿಕೊಳ್ಳುವಿರಿ. ನಾನು ನಿಮಗೋಸ್ಕರ ತಂದೆಯನ್ನು ಕೇಳಿಕೊಳ್ಳುವ ಅಗತ್ಯವಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ತೊ ದಿಸ್ ಯೆಲ್ಲ್ಯಾ ತನ್ನಾ ತುಮಿ ತೆಚೆಕ್ಡೆ ಮಾಜ್ಯಾ ನಾವಾನ್ ಮಾಗ್ತ್ಯಾಶಿ, ಅನಿ ಮಿಯಾ ತುಮ್ಚ್ಯಾಸಾಟ್ನಿ ತೆಚ್ಯೆಕ್ಡೆ ಮಾಗ್ತಾ ಮನುನ್ ಸಾಂಗಿನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 16:26
9 ತಿಳಿವುಗಳ ಹೋಲಿಕೆ  

ಅಪರಾಧಿಗಳೆಂದು ನಿರ್ಣಯಿಸುವವರು ಯಾರು? ಕ್ರಿಸ್ತ ಯೇಸು ಮರಣವನ್ನು ಹೊಂದಿದ್ದಲ್ಲದೆ, ಜೀವಿತರಾಗಿ ಎದ್ದು ದೇವರ ಬಲಗಡೆಯಲ್ಲಿ ಇದ್ದಾರೆ ಮತ್ತು ಅವರೇ ನಮಗೋಸ್ಕರ ವಿಜ್ಞಾಪಿಸುವವರಾಗಿರುತ್ತಾರೆ.


“ತಂದೆಯೇ, ನೀವು ನನಗೆ ಕೊಟ್ಟವರು ನಾನಿರುವಲ್ಲಿಯೇ ನನ್ನೊಂದಿಗೆ ಇದ್ದುಕೊಂಡು ಜಗದುತ್ಪತ್ತಿಗೆ ಮುಂಚೆ ನೀವು ನನ್ನನ್ನು ಪ್ರೀತಿಸಿ ನನಗೆ ಕೊಟ್ಟಿರುವ ಮಹಿಮೆಯನ್ನು ಇವರು ಕಾಣಬೇಕೆಂದು ನಾನು ಅಪೇಕ್ಷಿಸುತ್ತೇನೆ.


ಇವರು ನಿಜವಾಗಿಯೂ ಸಮರ್ಪಿತರಾಗಬೇಕೆಂದು ನನ್ನನ್ನು ನಾನೇ ಇವರಿಗೋಸ್ಕರ ಸಮರ್ಪಿಸಿಕೊಳ್ಳುತ್ತೇನೆ.


ನಾನು ಇವರಿಗಾಗಿಯೇ ಬೇಡಿಕೊಳ್ಳುತ್ತೇನೆ. ನೀವು ನನಗೆ ಕೊಟ್ಟವರಿಗಾಗಿಯೇ ಹೊರತು ನಾನು ಲೋಕಕ್ಕಾಗಿ ಬೇಡಿಕೊಳ್ಳುವುದಿಲ್ಲ. ಏಕೆಂದರೆ ಇವರು ನಿಮ್ಮವರು.


ಆ ದಿನದಲ್ಲಿ ನೀವು ನನ್ನನ್ನು ಏನೂ ಪ್ರಶ್ನಿಸುವುದಿಲ್ಲ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅವರು ನಿಮಗೆ ಕೊಡುವರು.


ನಾನು ತಂದೆಯನ್ನು ಕೇಳಿಕೊಳ್ಳುವೆನು. ಆಗ ತಂದೆ ನಿಮಗೆ ಬೇರೊಬ್ಬ ಸಹಾಯಕರನ್ನು ಸದಾಕಾಲವೂ ನಿಮ್ಮೊಂದಿಗೆ ಇರುವುದಕ್ಕೆ ಕೊಡುವರು.


ನಾನು ನನ್ನ ತಂದೆಯಲ್ಲಿಯೂ ನೀವು ನನ್ನಲ್ಲಿಯೂ ನಾನು ನಿಮ್ಮಲ್ಲಿಯೂ ಇರುವುದನ್ನು ನೀವು ಆ ದಿನದಲ್ಲಿ ತಿಳಿದುಕೊಳ್ಳುವಿರಿ.


ಶಿಷ್ಯರು ತಮ್ಮ ಬಗ್ಗೆ ಪ್ರಶ್ನಿಸಬಯಸುತ್ತಿದ್ದಾರೆಂದು ತಿಳಿದು ಯೇಸು, “ಸ್ವಲ್ಪ ಕಾಲವಾದ ಮೇಲೆ ನೀವು ನನ್ನನ್ನು ಕಾಣುವುದಿಲ್ಲ, ‘ಸ್ವಲ್ಪ ಕಾಲವಾದ ಮೇಲೆ ನೀವು ಪುನಃ ನನ್ನನ್ನು ಕಾಣುವಿರಿ ಎಂದು ನಾನು ನಿಮಗೆ ಹೇಳಿದ್ದರ ಕುರಿತಾಗಿ ನೀವು ಒಬ್ಬರಿಗೊಬ್ಬರು ವಿಚಾರಿಸಿಕೊಳ್ಳುತ್ತೀರೋ?’


ನೀವು ಎಲ್ಲಾ ತಿಳಿದವರೆಂದೂ ಯಾರೂ ನಿಮ್ಮನ್ನು ಪ್ರಶ್ನಿಸುವುದು ಅಗತ್ಯವಿಲ್ಲವೆಂದು ಈಗ ನಮಗೆ ತಿಳಿಯಿತು. ಆದ್ದರಿಂದ ನೀವು ದೇವರಿಂದ ಹೊರಟು ಬಂದವರೆಂದು ನಾವು ನಂಬುತ್ತೇವೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು