Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 16:27 - ಕನ್ನಡ ಸಮಕಾಲಿಕ ಅನುವಾದ

27 ಏಕೆಂದರೆ ನೀವು ನನ್ನನ್ನು ಪ್ರೀತಿಸಿ ನಾನು ದೇವರಿಂದ ಹೊರಟು ಬಂದವನೆಂದು ನಂಬಿದ್ದರಿಂದ ತಂದೆಯು ತಾವೇ ನಿಮ್ಮನ್ನು ಪ್ರೀತಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ನೀವು ನನ್ನನ್ನು ಪ್ರೀತಿಸಿ ನಾನು ತಂದೆಯ ಬಳಿಯಿಂದ ಹೊರಟುಬಂದವನೆಂದು ನಂಬಿದ್ದರಿಂದ ತಂದೆಯು ತಾನೇ ನಿಮ್ಮನ್ನು ಪ್ರೀತಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಕಾರಣ, ಪಿತನೇ ನಿಮ್ಮನ್ನು ಪ್ರೀತಿಸುತ್ತಾರೆ. ನೀವು ನನ್ನನ್ನು ಪ್ರೀತಿಸಿ ನಾನು ಅವರಿಂದ ಬಂದವನೆಂದು ವಿಶ್ವಾಸಿಸಿದ್ದರಿಂದ ಪಿತನಿಗೆ ನಿಮ್ಮ ಮೇಲೆ ಅಕ್ಕರೆಯಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ನೀವು ನನ್ನ ಮೇಲೆ ಮಮತೆಯಿಟ್ಟು ನನ್ನನ್ನು ತಂದೆಯ ಬಳಿಯಿಂದ ಹೊರಟುಬಂದವನೆಂದು ನಂಬಿದ್ದರಿಂದ ತಂದೆಯು ತಾನೇ ನಿಮ್ಮ ಮೇಲೆ ಮಮತೆ ಇಡುತ್ತಾನಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಹೌದು, ತಂದೆಯು ತಾನೇ ನಿಮ್ಮನ್ನು ಪ್ರೀತಿಸುತ್ತಾನೆ. ನೀವು ನನ್ನನ್ನು ಪ್ರೀತಿಸಿದರಿಂದ ಮತ್ತು ನಾನು ದೇವರಿಂದ ಬಂದೆನೆಂದು ನೀವು ನಂಬುವುದರಿಂದ ಆತನು ನಿಮ್ಮನ್ನು ಪ್ರೀತಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ತುಮಿ ಮಾಜೊ ಪ್ರೆಮ್ ಕರ್‍ಲ್ಯಾಶಿ ಅನಿ ಮಿಯಾ ದೆವಾಕ್ನಾ ಯೆಲಾ ಮನುನ್ ವಿಶ್ವಾಸ್ ಕರ್ಲ್ಯಾಶಿ ಮನುನ್ ಮಾಜೊ ಬಾಬಾ ತುಮ್ಚೊ ಪ್ರೆಮ್ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 16:27
26 ತಿಳಿವುಗಳ ಹೋಲಿಕೆ  

ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಕೈಗೊಳ್ಳುವವರೇ ನನ್ನನ್ನು ಪ್ರೀತಿಸುವವರು. ನನ್ನನ್ನು ಪ್ರೀತಿಸುವವನು ತನ್ನ ತಂದೆಗೆ ಪ್ರಿಯನಾಗಿರುವನು. ನಾನು ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ಪ್ರಕಟಿಸಿಕೊಳ್ಳುವೆನು,” ಎಂದು ಹೇಳಿದರು.


ಯೇಸು ಅವನಿಗೆ, “ಯಾವನಾದರೂ ನನ್ನನ್ನು ಪ್ರೀತಿಸುವುದಾದರೆ ಅವನು ನನ್ನ ವಾಕ್ಯವನ್ನು ಕೈಗೊಳ್ಳುವನು. ನನ್ನ ತಂದೆಯು ಅವನನ್ನು ಪ್ರೀತಿಸುವರು. ಇದಲ್ಲದೆ ನಾವು ಅವನ ಬಳಿಗೆ ಬಂದು ಅವನೊಂದಿಗೆ ನಿವಾಸಮಾಡಿಕೊಳ್ಳುವೆವು.


ಹೀಗೆ ನಾನು ಇವರಲ್ಲಿಯೂ ನೀವು ನನ್ನಲ್ಲಿಯೂ ಇರುವಂತೆ ಇವರೂ ಐಕ್ಯತೆಯಲ್ಲಿ ಪರಿಪೂರ್ಣವಾಗಿರಲಿ. ಆಗ ನೀವು ನನ್ನನ್ನು ಕಳುಹಿಸಿದ್ದೀರಿ ಎಂದೂ ನನ್ನನ್ನು ಪ್ರೀತಿಸಿದಂತೆ ಇವರನ್ನು ನೀವು ಪ್ರೀತಿಸಿದ್ದೀರಿ ಎಂದೂ ಲೋಕವು ತಿಳಿದುಕೊಳ್ಳುವುದು.


ನೀವು ಕ್ರಿಸ್ತ ಯೇಸುವನ್ನು ನೋಡಲಿಲ್ಲವಾದರೂ ಅವರನ್ನು ಪ್ರೀತಿಸುತ್ತೀರಿ. ನೀವು ಈಗ ಅವರನ್ನು ಕಾಣದಿದ್ದರೂ ಅವರಲ್ಲಿ ನಂಬಿಕೆಯಿಟ್ಟು ವ್ಯಕ್ತಪಡಿಸಲಾಗದಂಥ ಪ್ರಭಾವವುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.


ಯಾವನಾದರೂ ಕರ್ತನನ್ನು ಪ್ರೀತಿಸದಿದ್ದರೆ, ಅವನು ಶಾಪಗ್ರಸ್ತನಾಗಲಿ! ಕರ್ತನೇ, ಬಾ!


ಯೇಸು ಅವರಿಗೆ, “ದೇವರು ನಿಮ್ಮ ತಂದೆಯಾಗಿದ್ದರೆ ನೀವು ನನ್ನನ್ನು ಪ್ರೀತಿಸುತ್ತಿದ್ದಿರಿ. ಏಕೆಂದರೆ ನಾನು ದೇವರಿಂದ ಹೊರಟು ಬಂದಿದ್ದೇನೆ. ನಾನು ನನ್ನಷ್ಟಕ್ಕೆ ಬರಲಿಲ್ಲ. ಆದರೆ ದೇವರೇ ನನ್ನನ್ನು ಕಳುಹಿಸಿದ್ದು.


ದೇವರು ಮೊದಲು ನಮ್ಮನ್ನು ಪ್ರೀತಿಸಿದ್ದರಿಂದಲೇ ನಾವು ದೇವರನ್ನು ಪ್ರೀತಿಸುತ್ತೇವೆ.


ಕ್ರಿಸ್ತ ಯೇಸುವಿನ ಪ್ರೀತಿಯು ನಮ್ಮನ್ನು ಒತ್ತಾಯಪಡಿಸುತ್ತದೆ. ಏಕೆಂದರೆ, ಎಲ್ಲರಿಗೋಸ್ಕರ ಕ್ರಿಸ್ತ ಯೇಸು ಸತ್ತದ್ದರಿಂದ, ಎಲ್ಲರೂ ಸತ್ತಂತಾಯಿತು.


ನೀವು ಎಲ್ಲಾ ತಿಳಿದವರೆಂದೂ ಯಾರೂ ನಿಮ್ಮನ್ನು ಪ್ರಶ್ನಿಸುವುದು ಅಗತ್ಯವಿಲ್ಲವೆಂದು ಈಗ ನಮಗೆ ತಿಳಿಯಿತು. ಆದ್ದರಿಂದ ನೀವು ದೇವರಿಂದ ಹೊರಟು ಬಂದವರೆಂದು ನಾವು ನಂಬುತ್ತೇವೆ,” ಎಂದರು.


“ನನಗಿಂತ ಮೇಲಾಗಿ ತಂದೆಯನ್ನಾಗಲಿ, ತಾಯಿಯನ್ನಾಗಲಿ ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ. ಮಗನನ್ನಾಗಲಿ, ಮಗಳನ್ನಾಗಲಿ ನನಗಿಂತ ಮೇಲಾಗಿ ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ.


ನಾನು ಯಾರನ್ನು ಪ್ರೀತಿಸುತ್ತೇನೋ, ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀನು ಆಸಕ್ತನಾಗಿರು, ಪಶ್ಚಾತ್ತಾಪಪಡು.


ತಾವು ಯೆಹೂದ್ಯರೆಂದು ಸುಳ್ಳಾಗಿ ಹೇಳಿಕೊಳ್ಳುವ ಸೈತಾನನ ಸಭಾಮಂದಿರದಿಂದ ಕೆಲವರು ಬಂದು ನಿನ್ನ ಪಾದಕ್ಕೆ ಬೀಳುವಂತೆಯೂ ನಿನ್ನನ್ನು ನಾನು ಪ್ರೀತಿಸಿದ್ದನ್ನು ತಿಳಿಯುವಂತೆಯೂ ಮಾಡುವೆನು.


ನಮ್ಮ ಕರ್ತ ಆಗಿರುವ ಯೇಸು ಕ್ರಿಸ್ತರನ್ನು ಅಳಿದು ಹೋಗದ ಪ್ರೀತಿಯಿಂದ ಪ್ರೀತಿಸುವವರೆಲ್ಲರ ಮೇಲೆ ಕೃಪೆಯಿರಲಿ.


ನಿನ್ನ ದೇವರಾದ ಯೆಹೋವ ದೇವರು ನಿನ್ನೊಂದಿಗಿದ್ದಾರೆ. ನಿನ್ನನ್ನು ರಕ್ಷಿಸಲು ಶಕ್ತರಾಗಿದ್ದಾರೆ. ನಿನ್ನಲ್ಲಿ ಬಹಳವಾಗಿ ಹರ್ಷಾನಂದಗೊಳ್ಳುವರು. ತಮ್ಮ ಪ್ರೀತಿಯ ನಿಮಿತ್ತ ಅವರು ಇನ್ನು ಮುಂದೆ ನಿನ್ನನ್ನು ಖಂಡಿಸುವುದಿಲ್ಲ, ಆದರೆ ಆನಂದ ಸ್ವರದಿಂದ ನಿನ್ನ ಮೇಲೆ ಉಲ್ಲಾಸಿಸುವರು.”


ಏಕೆಂದರೆ, ಕರ್ತದೇವರು ಯಾರನ್ನು ಪ್ರೀತಿಸುತ್ತಾರೋ ಅವರನ್ನು ಶಿಕ್ಷಿಸುತ್ತಾರೆ. ತಾವು ಸ್ವೀಕರಿಸುವ ಪ್ರತಿಯೊಬ್ಬ ಮಗನನ್ನು ಹೊಡೆಯುತ್ತಾರೆ!” ಎಂಬುದಾಗಿದೆ.


ಕ್ರಿಸ್ತ ಯೇಸು ಪಾಪಿಗಳನ್ನು ರಕ್ಷಿಸುವುದಕ್ಕೋಸ್ಕರ ಈ ಲೋಕಕ್ಕೆ ಬಂದರು, ಎಂಬ ವಾಕ್ಯವು ನಂಬತಕ್ಕದ್ದೂ ಪೂರ್ಣ ಅಂಗೀಕಾರಕ್ಕೆ ಯೋಗ್ಯವಾದದ್ದೂ ಆಗಿದೆ. ಆ ಪಾಪಿಗಳಲ್ಲಿ ನಾನೇ ಮುಖ್ಯನು.


ಆದರೆ ನಿಯಮಿತ ಕಾಲವು ಪರಿಪೂರ್ಣವಾದಾಗ, ದೇವರು ತಮ್ಮ ಮಗನನ್ನು ಸ್ತ್ರೀಯಿಂದ ಹುಟ್ಟಿದವನಾಗಿಯೂ ನಿಯಮಕ್ಕೆ ಒಳಗಾದವನನ್ನಾಗಿಯೂ ಕಳುಹಿಸಿಕೊಟ್ಟರು.


ಮೊದಲನೆಯ ಮನುಷ್ಯ, ಭೂಮಿಯ ಮಣ್ಣಿನವನಾಗಿದ್ದಾನೆ, ಎರಡನೆಯ ಮನುಷ್ಯನು ಪರಲೋಕದಿಂದ ಬಂದವನು.


ನಿಯಮವು ನಮ್ಮ ಮಾಂಸಭಾವದ ಬಲಹೀನತೆಯಿಂದ ಯಾವುದನ್ನು ಮಾಡಲಿಕ್ಕೆ ಸಾಧ್ಯವಾಗದೆ ಹೋಯಿತೋ ಅದನ್ನು ದೇವರೇ ಮಾಡಿದರು. ಪಾಪ ಪರಿಹಾರಕ್ಕಾಗಿ ದೇವರು ತಮ್ಮ ಸ್ವಂತ ಪುತ್ರನನ್ನು ಪಾಪಮಯವಾದ ನರಮಾಂಸದ ರೂಪದಲ್ಲಿ ಕಳುಹಿಸಿಕೊಟ್ಟರು. ಆ ನರಮಾಂಸದಲ್ಲಿಯೇ ಪಾಪಕ್ಕೆ ದಂಡನಾತೀರ್ಪು ಮಾಡಿ ಸಾಧ್ಯಗೊಳಿಸಿದರು.


ನಾನಾದರೋ ಅವರನ್ನು ಅರಿತಿದ್ದೇನೆ. ಏಕೆಂದರೆ ನಾನು ಅವರ ಕಡೆಯಿಂದ ಬಂದವನು. ಅವರೇ ನನ್ನನ್ನು ಕಳುಹಿಸಿಕೊಟ್ಟಿದ್ದಾರೆ,” ಎಂದು ಗಟ್ಟಿಯಾಗಿ ಕೂಗಿ ಹೇಳಿದರು.


ಪರಲೋಕದಿಂದ ಇಳಿದು ಬಂದ ಮನುಷ್ಯಪುತ್ರನಾದ ನನ್ನನ್ನು ಹೊರತು ಯಾರೂ ಪರಲೋಕಕ್ಕೆ ಏರಿ ಹೋದವರಿಲ್ಲ.


ಯೇಸು ಗಲಿಲಾಯದ ಕಾನಾದಲ್ಲಿ ಮಾಡಿದ ಸೂಚಕಕಾರ್ಯಗಳಲ್ಲಿ ಇದು ಮೊದಲನೆಯದಾಗಿತ್ತು. ಹೀಗೆ ಯೇಸು ತಮ್ಮ ಮಹಿಮೆಯನ್ನು ತೋರ್ಪಡಿಸಿದರು. ಯೇಸುವಿನ ಶಿಷ್ಯರು ಅವರಲ್ಲಿ ನಂಬಿಕೆಯಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು