Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 16:32 - ಕನ್ನಡ ಸಮಕಾಲಿಕ ಅನುವಾದ

32 ಇಗೋ, ನಿಮ್ಮಲ್ಲಿ ಪ್ರತಿಯೊಬ್ಬನು ನಿಮ್ಮ ನಿಮ್ಮ ಮನೆಗೆ ಚದುರಿಹೋಗಿ ನನ್ನನ್ನು ಒಬ್ಬಂಟಿಗನನ್ನಾಗಿ ಬಿಡುವ ಗಳಿಗೆ ಬರುತ್ತದೆ. ಹೌದು, ಈಗಲೇ ಬಂದಿದೆ. ಆದರೂ ನಾನು ಒಬ್ಬಂಟಿಗನಲ್ಲ. ಏಕೆಂದರೆ ತಂದೆ ನನ್ನ ಸಂಗಡ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಇಗೋ, ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ಸ್ಥಳಕ್ಕೆ ಚದರಿಹೋಗಿ ನನ್ನನ್ನು ಒಬ್ಬಂಟಿಗನಾಗಿ ಬಿಡುವ ಸಮಯವು ಬರುತ್ತದೆ. ಹೌದು, ಅದು ಈಗಲೇ ಬಂದಿದೆ. ಆದರೂ ನಾನು ಏಕಾಂಗಿಯಲ್ಲ, ಏಕೆಂದರೆ ತಂದೆಯು ನನ್ನ ಸಂಗಡ ಇದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ನೀವೆಲ್ಲರೂ ನನ್ನನ್ನು ಒಬ್ಬಂಟಿಗನಾಗಿ ಬಿಟ್ಟು ನಿಮ್ಮನಿಮ್ಮ ಮನೆಗೆ ಚದರಿಹೋಗುವ ಕಾಲವು ಬರುತ್ತದೆ. ಈಗಾಗಲೇ ಬಂದಿದೆ. ಆದರೆ ಪಿತನು ನನ್ನೊಡನೆ ಇರುವುದರಿಂದ ನಾನು ಒಬ್ಬಂಟಿಗನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ನೋಡಿರಿ, ನಿಮ್ಮಲ್ಲಿ ಒಬ್ಬೊಬ್ಬನು ತನ್ನತನ್ನ ಸ್ಥಳಕ್ಕೆ ಚದರಿಹೋಗಿ ನನ್ನನ್ನು ಒಂಟಿಗನಾಗಿ ಬಿಡುವ ಕಾಲ ಬರುವದು, ಈಗ ಬಂದಿದೆ. ಆದರೆ ನಾನು ಒಂಟಿಗನಲ್ಲ, ತಂದೆಯು ನನ್ನ ಸಂಗಡ ಇದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ನನಗೆ ಕಿವಿಗೊಡಿರಿ. ನೀವು ಚದರಿಹೋಗುವ ಕಾಲ ಬರುತ್ತಿದೆ. ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸ್ವಂತ ಮನೆಗೆ ಚದರಿಹೋಗುವನು. ಆ ಸಮಯ ಈಗಲೇ ಬಂದಿದೆ. ನೀವು ನನ್ನನ್ನು ಬಿಟ್ಟು ಹೋಗುವಿರಿ. ನಾನು ಒಬ್ಬಂಟಿಗನಾಗಿರುವೆನು. ಆದರೆ ನಿಜವಾಗಿ ನಾನೆಂದಿಗೂ ಒಬ್ಬಂಟಿಗನಲ್ಲ. ಏಕೆಂದರೆ ತಂದೆಯು ನನ್ನೊಂದಿಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ತುಮಿ ಸಗ್ಳಿ ಲೊಕಾ ಮಾಳ್ಬರ್ ಹೊವ್ನ್ ತುಮ್ಚ್ಯಾ ಘರಾಕ್ನಿ ಪಳುನ್ ಜಾತಲೊ ಎಳ್ ಯೆಲೊ, ಅನಿ ತೊ ಯೆವ್ನ್ ಪಾವಲ್ಲೊಚ್ ಹಾಯ್, ಅನಿ ಮಿಯಾ ಎಕ್ಲೊಚ್ ಹುರ್‍ತಾ, ಖರೆ ಮಿಯಾ ಎಕ್ಲೊಚ್ ನಾಂವ್, ಕಶ್ಯಾಕ್ ಮಟ್ಲ್ಯಾರ್ ಬಾಬಾಚ್ ಮಾಜ್ಯಾ ವಾಂಗ್ಡಾ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 16:32
22 ತಿಳಿವುಗಳ ಹೋಲಿಕೆ  

“ಖಡ್ಗವೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ ಎಚ್ಚರವಾಗು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಕುರುಬನನ್ನು ಹೊಡೆ, ಆಗ ಕುರಿಗಳು ಚದರಿಹೋಗುವುವು. ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು.


ಆಗ ಯೇಸು ಅವರಿಗೆ, “ನೀವೆಲ್ಲರೂ ಈ ರಾತ್ರಿ ನನ್ನನ್ನು ಬಿಟ್ಟು ಓಡಿಹೋಗುವಿರಿ. ಪವಿತ್ರ ವೇದದಲ್ಲಿ ಹೀಗೆ ಬರೆದಿದೆ: “ ‘ಏಕೆಂದರೆ ನಾನು ಕುರುಬನನ್ನು ಹೊಡೆಯುವೆನು, ಮಂದೆಯ ಕುರಿಗಳು ಚದರಿಹೋಗುವುವು,’


ನನ್ನನ್ನು ಕಳುಹಿಸಿದ ತಂದೆ ನನ್ನ ಸಂಗಡ ಇದ್ದಾರೆ. ಅವರು ನನ್ನನ್ನು ಒಬ್ಬಂಟಿಗನನ್ನಾಗಿ ಬಿಡಲಿಲ್ಲ, ಏಕೆಂದರೆ ಅವರಿಗೆ ಮೆಚ್ಚಿದವುಗಳನ್ನೇ ನಾನು ಯಾವಾಗಲೂ ಮಾಡುತ್ತೇನೆ,” ಎಂದರು.


ನಾನು ತೀರ್ಪು ಮಾಡಿದರೂ ನನ್ನ ತೀರ್ಪು ಸತ್ಯವಾದದ್ದೇ. ಏಕೆಂದರೆ ನಾನು ಒಂಟಿಗನಲ್ಲ. ನಾನೂ ನನ್ನನ್ನು ಕಳುಹಿಸಿದ ತಂದೆಯೂ ಇದ್ದೇವೆ.


ಆಗ ಯೇಸು, “ನೀವೆಲ್ಲರೂ ಓಡಿಹೋಗುವಿರಿ. ಏಕೆಂದರೆ ಪವಿತ್ರ ವೇದದಲ್ಲಿ ಹೀಗೆ ಬರೆದಿದೆ: “ ‘ನಾನು ಕುರುಬನನ್ನು ಹೊಡೆಯುವೆನು, ಕುರಿಗಳು ಚದರಿಹೋಗುವುವು.’


ಆದರೆ ಪವಿತ್ರ ವೇದದ ಪ್ರವಾದನೆಗಳು ನೆರವೇರುವಂತೆ ಇದೆಲ್ಲಾ ಆಯಿತು,” ಎಂದು ಹೇಳಿದರು. ಆಗ ಶಿಷ್ಯರೆಲ್ಲರೂ ಯೇಸುವನ್ನು ಬಿಟ್ಟು ಓಡಿಹೋದರು.


ತರುವಾಯ ಆ ಶಿಷ್ಯರು ಉಳಿದವರ ಬಳಿಗೆ ಹೊರಟು ಹೋದರು.


“ಇವುಗಳನ್ನು ನಾನು ಸೂಚಕವಾಗಿ ನಿಮ್ಮೊಡನೆ ಮಾತನಾಡಿದ್ದೇನೆ. ನಾನು ಇನ್ನು ಸಾಮ್ಯಗಳಿಂದ ಮಾತನಾಡದೆ ತಂದೆಯ ವಿಷಯವಾಗಿ ನಿಮಗೆ ಸ್ಪಷ್ಟವಾಗಿ ಪ್ರಕಟಿಸುವ ಗಳಿಗೆಯು ಬರುತ್ತದೆ.


ಜನರು ನಿಮ್ಮನ್ನು ಸಭಾಮಂದಿರದಿಂದ ಹೊರಗೆ ಹಾಕುವರು. ಆದರೆ ನಿಮ್ಮನ್ನು ಕೊಲ್ಲುವವರು ದೇವರಿಗೆ ಸೇವೆ ಸಲ್ಲಿಸುತ್ತಾರೆಂದು ಭಾವಿಸುವ ಸಮಯ ಬರುತ್ತದೆ.


ಆದರೆ ನಿಜವಾದ ಆರಾಧಕರು ತಂದೆಯನ್ನು ಆತ್ಮದಿಂದಲೂ ಸತ್ಯದಿಂದಲೂ ಆರಾಧಿಸುವ ಕಾಲ ಬರುತ್ತದೆ; ಅದು ಈಗಲೇ ಬಂದಿದೆ. ಏಕೆಂದರೆ ತಂದೆಯು ನಿಜವಾಗಿಯೂ ಈ ರೀತಿ ಆರಾಧಿಸುವವರನ್ನೇ ಹುಡುಕುತ್ತಾರೆ.


ಯೇಸು ಆಕೆಗೆ, “ಅಮ್ಮಾ, ನನ್ನನ್ನು ನಂಬು, ಈ ಬೆಟ್ಟದಲ್ಲಿಯಾಗಲಿ ಯೆರೂಸಲೇಮಿನಲ್ಲಾಗಲಿ ನೀವು ತಂದೆಯನ್ನು ಆರಾಧಿಸದೆ ಇರುವ ಕಾಲ ಬರುತ್ತದೆ.


ಯೇಸು ಅವರಿಗೆ, “ಮನುಷ್ಯಪುತ್ರನು ಮಹಿಮೆಪಡುವ ಸಮಯ ಬಂದಿದೆ.


“ಇದಕ್ಕೆ ಆಶ್ಚರ್ಯಪಡಬೇಡಿರಿ, ಆಗ ಸಮಾಧಿಗಳಲ್ಲಿ ಇರುವವರೆಲ್ಲರೂ ನನ್ನ ಸ್ವರವನ್ನು ಕೇಳಿ ಹೊರಗೆ ಬರುವ ಒಂದುಕಾಲ ಬರುತ್ತದೆ.


ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಸತ್ತವರು ದೇವಪುತ್ರನ ಸ್ವರವನ್ನು ಕೇಳುವ ಕಾಲ ಬರುತ್ತದೆ. ಈಗಾಗಲೇ ಬಂದಿದೆ. ಈ ಸ್ವರವನ್ನು ಕೇಳುವವರು ಬದುಕುವರು.


ಆಗ ಶಿಷ್ಯರೆಲ್ಲರೂ ಯೇಸುವನ್ನು ಬಿಟ್ಟು ಓಡಿಹೋದರು.


ಸೌಲನು ಸ್ತೆಫನನ ಕೊಲೆಗೆ ಸಮ್ಮತಿಸಿದ್ದನು. ಆ ದಿನವೇ ಯೆರೂಸಲೇಮಿನ ಸಭೆಗೆ ವಿರೋಧವಾಗಿ ಮಹಾಹಿಂಸೆ ಪ್ರಾರಂಭವಾಯಿತು, ಅಪೊಸ್ತಲರನ್ನು ಬಿಟ್ಟು ಉಳಿದವರೆಲ್ಲರೂ ಯೂದಾಯ ಮತ್ತು ಸಮಾರ್ಯ ಪ್ರಾಂತಗಳಿಗೆ ಚದರಿಹೋದರು.


ಅದಕ್ಕೆ ಯೇಸು ಅವರಿಗೆ, “ಈಗ ನೀವು ನಂಬುತ್ತೀರೋ?”


ಆಮೇಲೆ ಯೇಸು ಆ ಶಿಷ್ಯನಿಗೆ, “ಇಗೋ, ನಿನ್ನ ತಾಯಿಯು,” ಎಂದರು. ಆ ಸಮಯದಿಂದ ಆ ಶಿಷ್ಯನು ಆಕೆಯನ್ನು ತನ್ನ ಸ್ವಂತ ಮನೆಯಲ್ಲಿ ಇರಿಸಿಕೊಂಡನು.


ಪರಸ್ಪರ ಬೀಳ್ಕೊಡುಗೆಯಾದ ನಂತರ, ನಾವು ನೌಕೆಯನ್ನೇರಿದೆವು. ಅವರು ತಮ್ಮ ಮನೆಗೆ ಹೊರಟು ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು