Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 16:8 - ಕನ್ನಡ ಸಮಕಾಲಿಕ ಅನುವಾದ

8 ಆ ಸಹಾಯಕರು ಬಂದಾಗ ಪಾಪ, ನೀತಿ ಮತ್ತು ನ್ಯಾಯತೀರ್ಪಿನ ವಿಷಯಗಳಲ್ಲಿ ಲೋಕದವರಿಗೆ ಮನವರಿಕೆಯನ್ನು ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆತನು ಬಂದಾಗ ಪಾಪ, ನೀತಿ ಮತ್ತು ನ್ಯಾಯತೀರ್ಪಿನ ಕುರಿತು ಲೋಕಕ್ಕೆ ಮನವರಿಕೆಯನ್ನು ಉಂಟುಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆ ಪೋಷಕ ಬಂದು ಪಾಪ, ನ್ಯಾಯನೀತಿ, ಮತ್ತು ಅಂತಿಮತೀರ್ಪು ಇವುಗಳನ್ನು ಕುರಿತು ಲೋಕದ ಜನತೆ ತಾಳಿದ್ದ ತಪ್ಪುಭಾವನೆಗಳನ್ನು ಮನವರಿಕೆ ಮಾಡಿಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆತನು ಬಂದು ಪಾಪ ನೀತಿ ನ್ಯಾಯತೀರ್ವಿಕೆ ಈ ವಿಷಯಗಳಲ್ಲಿ ಲೋಕಕ್ಕೆ ಅರುಹನ್ನು ಹುಟ್ಟಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ಸಹಾಯಕನು ಬಂದು ಪಾಪ, ನೀತಿ, ನ್ಯಾಯತೀರ್ಪು ಈ ವಿಷಯಗಳ ಬಗ್ಗೆ ಲೋಕಕ್ಕೆ ತಿಳಿಸಿಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಅನಿ ತೊ ಯೆಲ್ಲ್ಯಾ ತನ್ನಾ ಹ್ಯಾ ಜಗಾತ್ಲ್ಯಾ ಲೊಕಾಕ್ನಿ ಪಾಪಾಚ್ಯಾ ವಿಶಯಾತ್ ತೆನಿ ಚುಕ್ ವಾಟೆರ್ ಹಾತ್ ಮನುನ್ ದಾಕ್ವುನ್ ದಿತಾ ಅನಿ ಖಲೆ ಸಮಾ ಹಾಯ್ ತ್ಯೆಚ್ಯಾ ವಿಶಯಾತ್ ಅನಿ ದೆವಾನ್ ಕರ್‍ತಲ್ಯಾ ಝಡ್ತಿಚ್ಯಾ ವಿಶಯಾತ್ ದಾಕ್ವುನ್ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 16:8
10 ತಿಳಿವುಗಳ ಹೋಲಿಕೆ  

ಎಲ್ಲರಿಗೆ ನ್ಯಾಯತೀರಿಸುವುದಕ್ಕೆ ಬರುವರು. ಮಾತ್ರವಲ್ಲದೆ ಅವರಲ್ಲಿ ಭಕ್ತಿಹೀನರೆಲ್ಲರು ಮಾಡಿದ ದುಷ್ಕೃತ್ಯಗಳನ್ನು ಮತ್ತು ಪಾಪಿಷ್ಠರು ತಮಗೆ ವಿರೋಧವಾಗಿ ಆಡಿದ ಎಲ್ಲಾ ದೂಷಣೆಗಳ ವಿಷಯವಾಗಿ ಅವರನ್ನು ಖಂಡಿಸಲು ಬರುವರು,” ಎಂಬುದಾಗಿ ಪ್ರವಾದಿಸಿದನು.


ಜನರು ಇದನ್ನು ಕೇಳಿದಾಗ ಅವರಿಗೆ ಹೃದಯದಲ್ಲಿ ಅಲಗು ನೆಟ್ಟಂತಾಗಿ, “ಸಹೋದರರೇ, ನಾವೇನು ಮಾಡಬೇಕು?” ಎಂದು ಪೇತ್ರನನ್ನೂ ಉಳಿದ ಅಪೊಸ್ತಲರನ್ನೂ ಕೇಳಿದರು.


“ದಾವೀದನ ಮನೆತನದವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಕೃಪೆಯ ಆತ್ಮವನ್ನು ಮತ್ತು ಮೊರೆಯಿಡುವ ಮನೋಭಾವವನ್ನು ಸುರಿಸುವೆನು. ತಾವು ಇರಿದವನನ್ನು ಅವರು ದೃಷ್ಟಿಸಿನೋಡುವರು. ಒಬ್ಬನೇ ಮಗನ ನಿಮಿತ್ತ ಗೋಳಾಡುವವನ ಹಾಗೆ, ಆತನ ನಿಮಿತ್ತ ಗೋಳಾಡುವರು. ಚೊಚ್ಚಲ ಮಗನ ನಿಮಿತ್ತ ವ್ಯಥೆಪಡುವವನ ಹಾಗೆ ಆತನ ನಿಮಿತ್ತ ವ್ಯಥೆ ಪಡುವರು.


ಆದರೆ ನೀವೆಲ್ಲರೂ ಪ್ರವಾದಿಸುತ್ತಿರಲು, ಅವಿಶ್ವಾಸಿಯಾಗಲಿ, ಅನ್ವೇಷಕನಾಗಲಿ ಒಳಗೆ ಬಂದರೆ, ಅವನು ತಾನು ಪಾಪಿಯೆಂಬ ಮನವರಿಕೆಯನ್ನು ಹೊಂದುವನು. ಅವನು ಎಲ್ಲರ ಮಾತಿನಿಂದ ಪರಿಶೋಧಿತನಾಗುವನು.


ಅದನ್ನು ಅವರು ಕೇಳಿ ಹಿರಿಯರು ಮೊದಲುಗೊಂಡು ಕಿರಿಯರವರೆಗೂ ಒಬ್ಬೊಬ್ಬರಾಗಿ ಹೊರಟು ಹೋದರು; ಆಗ ಯೇಸು ಒಬ್ಬರೇ ಉಳಿದರು. ಆ ಸ್ತ್ರೀಯು ಅಲ್ಲಿಯೇ ನಿಂತಿದ್ದಳು.


ನನ್ನಲ್ಲಿ ಪಾಪವಿದೆಯೆಂದು ರುಜುವಾತು ಪಡಿಸುವವರು ನಿಮ್ಮಲ್ಲಿ ಯಾರಿದ್ದಾರೆ? ನಾನು ಸತ್ಯವನ್ನೇ ಹೇಳುವುದಾದರೆ ನೀವು ನನ್ನನ್ನು ಏಕೆ ನಂಬುವುದಿಲ್ಲ?


ಆದರೂ ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ, ನಾನು ಹೋಗುವುದು ನಿಮ್ಮ ಹಿತಕ್ಕಾಗಿಯೇ. ನಾನು ಹೋಗದಿದ್ದರೆ ಸಹಾಯಕರು ನಿಮ್ಮ ಬಳಿಗೆ ಬರುವುದಿಲ್ಲ. ನಾನು ಹೋದರೆ ಅವರನ್ನು ನಿಮ್ಮ ಬಳಿಗೆ ಕಳುಹಿಸುವೆನು.


ಜನರು ನನ್ನನ್ನು ನಂಬದೆ ಇರುವ ಕಾರಣದಿಂದ, ಪಾಪದ ವಿಷಯವಾಗಿಯೂ


“ಒಬ್ಬನಲ್ಲಿ ಸಾಂಕ್ರಾಮಿಕ ಚರ್ಮರೋಗ ಹತ್ತಿದರೆ ಮತ್ತು ಚರ್ಮವನ್ನೆಲ್ಲಾ ಹರಡಿಕೊಂಡು ತಲೆಯಿಂದ ಪಾದದವರೆಗೂ ಹರಡಿವುದುನ್ನು ಯಾಜಕನು ಪರೀಕ್ಷಿಸಿದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು