ಯೋಹಾನ 17:12 - ಕನ್ನಡ ಸಮಕಾಲಿಕ ಅನುವಾದ12 ನಾನು ಇವರೊಡನೆ ಇದ್ದಾಗ ನೀವು ನನಗೆ ಕೊಟ್ಟ ನಿಮ್ಮ ಹೆಸರಿನಲ್ಲಿ ಇವರನ್ನು ಕಾಪಾಡಿ ಸಂರಕ್ಷಿಸಿದೆನು. ಪವಿತ್ರ ವಾಕ್ಯವು ನೆರವೇರುವಂತೆ ಆ ನಾಶದ ಮಗನೇ ಹೊರತು ಇವರಲ್ಲಿ ಒಬ್ಬನೂ ನಾಶವಾಗಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನಾನು ಇವರ ಜೊತೆ ಇದ್ದಾಗ ನೀನು ನನಗೆ ಕೊಟ್ಟ ನಿನ್ನ ಹೆಸರಿನಲ್ಲಿ ಇವರನ್ನು ಕಾಪಾಡಿ ಸಂರಕ್ಷಿಸಿದೆನು. ಧರ್ಮಶಾಸ್ತ್ರದ ಮಾತು ನೆರವೇರುವಂತೆ ನಾಶಕ್ಕಾಗಿ ಹುಟ್ಟಿದವನೇ ಹೊರತು ಇವರಲ್ಲಿ ಒಬ್ಬನೂ ನಾಶವಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ನಾನು ಇವರೊಡನೆ ಇದ್ದಾಗ ಇವರನ್ನು ಕಾಪಾಡಿದೆನು. ನೀವಿತ್ತ ಇವರನ್ನು ನಿಮ್ಮ ನಾಮದ ಶಕ್ತಿಯಿಂದ ಸುರಕ್ಷಿತವಾಗಿ ನೋಡಿಕೊಂಡು ಬಂದೆನು. ಪವಿತ್ರಗ್ರಂಥದ ಮಾತು ನೆರವೇರುವಂತೆ ವಿನಾಶಕ್ಕೆ ಗುರಿಯಾಗಬೇಕಿದ್ದ ಒಬ್ಬನನ್ನು ಬಿಟ್ಟರೆ, ಇವರಲ್ಲಿ ಬೇರೆ ಯಾರೂ ನಾಶವಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನಾನು ಇವರ ಸಂಗಡ ಇದ್ದಾಗ ನೀನು ನನಗೆ ಕೊಟ್ಟಿರುವ ನಿನ್ನ ಹೆಸರಿನಲ್ಲಿ ಇವರನ್ನು ಕಾಯುತ್ತಾ ಬಂದೆನು, ಇವರನ್ನು ಕಾಪಾಡಿದೆನು; ಶಾಸ್ತ್ರದ ಮಾತು ನೆರವೇರುವಂತೆ ನಾಶಕ್ಕೆ ಗುರಿಯಾದ ಆ ಮನುಷ್ಯನೇ ಹೊರತು ಇವರಲ್ಲಿ ಮತ್ತಾರೂ ನಾಶವಾಗಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನಾನು ಇವರೊಂದಿಗೆ ಇದ್ದಾಗ, ನಿನ್ನ ಹೆಸರಿನ ಶಕ್ತಿಯಿಂದ ಇವರನ್ನು ಕಾಯ್ದು ಕಾಪಾಡಿದೆನು. ಪವಿತ್ರ ಗ್ರಂಥದ ಹೇಳಿಕೆಯು ನೆರವೇರುವಂತೆ ಕಳೆದುಹೋಗುವುದಕ್ಕಾಗಿಯೇ ಆರಿಸಲ್ಪಟ್ಟಿದ್ದ (ಯೂದನೆಂಬ) ಒಬ್ಬನೇ ಒಬ್ಬನು ಇವರಲ್ಲಿ ನಾಶವಾದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ಮಿಯಾ ತೆಂಚ್ಯಾ ವಾಂಗ್ಡಾ ಹೊತ್ತೊ ತನ್ನಾ, ತಿಯಾ ಮಾಕಾ ದಿಲ್ಲ್ಯಾ ತುಜ್ಯಾ ನಾವಾಚ್ಯಾ ಬಳಾನ್ ಮಿಯಾ ತೆಂಕಾ ಸುರಕ್ಷಿತ್ ಥವಲ್ಲೊ. ಅಶೆ ಪವಿತ್ರ್ ಪುಸ್ತಕಾತ್, ಕೊನಾಚೆ ನಿಸಂತಾನ್ ಹೊವ್ಕ್ ಪಾಜೆ ಮನುನ್ ಸಾಂಗಲ್ಲೆ ಹಾಯ್, ತೆ ಪುರಾ ಹೊವ್‍ಸಾಟ್ನಿ ತೆಕಾ ಎಕ್ಲ್ಯಾಕ್ ಸೊಡುನ್ ಹುರಲ್ಲೆ ಕೊನ್ಬಿ ನಾಸ್ ಹೊವ್ಕನಾತ್. ಅಧ್ಯಾಯವನ್ನು ನೋಡಿ |