Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 17:13 - ಕನ್ನಡ ಸಮಕಾಲಿಕ ಅನುವಾದ

13 “ಈಗ ನಾನು ನಿಮ್ಮ ಬಳಿಗೆ ಬರುತ್ತೇನೆ. ನನ್ನ ಆನಂದವು ಅವರಲ್ಲಿ ಪರಿಪೂರ್ಣವಾಗುವಂತೆ ನಾನು ಲೋಕದಲ್ಲಿ ಇದ್ದು ಇವೆಲ್ಲವನ್ನು ಮಾತನಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 “ಆದರೆ ಈಗ ನಾನು ನಿನ್ನ ಬಳಿಗೆ ಬರುತ್ತೇನೆ. ಆದುದರಿಂದ ನನ್ನ ಆನಂದವು ಇವರಲ್ಲಿ ಪರಿಪೂರ್ಣವಾಗಿರುವಂತೆ ನಾನು ಲೋಕದಲ್ಲಿದ್ದು ಈ ಮಾತುಗಳನ್ನಾಡುತ್ತಿದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಈಗ ನಾನು ನಿಮ್ಮ ಬಳಿಗೆ ಬರುತ್ತಿದ್ದೇನೆ. ನನ್ನ ಆನಂದವು ಅವರ ಹೃದಯದಲ್ಲಿ ತುಂಬಿತುಳುಕುವಂತೆ ಈ ಲೋಕದಲ್ಲಿರುವಾಗಲೇ ಇವುಗಳನ್ನು ಹೇಳುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆದರೆ ಈಗ ನಿನ್ನ ಬಳಿಗೆ ಬರುವವನಾಗಿದ್ದೇನೆ; ಆದದರಿಂದ ಇವರಲ್ಲಿ ನನ್ನ ಆನಂದವು ಪರಿಪೂರ್ಣವಾಗಿರುವಂತೆ ಲೋಕದಲ್ಲಿದ್ದು ಈ ಮಾತುಗಳನ್ನು ಆಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “ಈಗ ನಾನು ನಿನ್ನ ಬಳಿಗೆ ಬರುತ್ತಿದ್ದೇನೆ. ಆದರೆ ನಾನು ಈ ಲೋಕದಲ್ಲಿ ಇನ್ನೂ ಇರುವಾಗಲೇ ಈ ಸಂಗತಿಗಳಿಗಾಗಿ ಪ್ರಾರ್ಥಿಸುತ್ತಿದ್ದೇನೆ. ಈ ಜನರು ನನ್ನ ಆನಂದವನ್ನು ಹೊಂದಿದವರಾಗಿರಬೇಕೆಂದು ಮತ್ತು ನನ್ನ ಆನಂದವು ಇವರಲ್ಲಿ ಪರಿಪೂರ್ಣವಾಗಿರಬೇಕೆಂದು ಈ ಸಂಗತಿಗಳನ್ನು ಹೇಳುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಖರೆ ಅತ್ತಾ ಮಿಯಾ ತುಜೆಕ್ಡೆ ಯೆವ್ಲಾ, ಅನಿ ಮಿಯಾ ಹೆ ಸಗ್ಳೆ ಹ್ಯಾ ಜಗಾತ್ ಸಾಂಗ್ತಾ, ಕಶ್ಯಾಕ್ ಮಟ್ಲ್ಯಾರ್ ಮಾಜಿ ಕುಶಿ ಸಂಪುರ್ನ್ ರಿತಿನ್ ತೆಂಚ್ಯಾ ಮನಾತ್ನಿ ಭರುನ್ ರ್‍ಹಾಂವ್ದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 17:13
17 ತಿಳಿವುಗಳ ಹೋಲಿಕೆ  

ನಮ್ಮಲ್ಲಿ ನಂಬಿಕೆಯನ್ನು ಹುಟ್ಟಿಸುವವರೂ ಅದನ್ನು ಪರಿಪೂರ್ಣಗೊಳಿಸುವವರೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು, ನಮ್ಮ ಮುಂದೆ ಇಟ್ಟಿರುವ ಓಟವನ್ನು ಸಹನೆಯಿಂದ ಓಡೋಣ. ಯೇಸು ತಮ್ಮ ಮುಂದೆ ಇಟ್ಟಿದ್ದ ಸಂತೋಷಕ್ಕಾಗಿ ಶಿಲುಬೆಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ, ಈಗ ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನರಾಗಿದ್ದಾರೆ.


ಪವಿತ್ರಾತ್ಮರ ಫಲವೇನೆಂದರೆ: ಪ್ರೀತಿ, ಆನಂದ, ಸಮಾಧಾನ, ಸಹನೆ, ದಯೆ, ಸದ್ಗುಣ, ನಂಬಿಗಸ್ತಿಕೆ,


ನನ್ನ ಆನಂದವು ನಿಮ್ಮಲ್ಲಿ ಇರುವಂತೆಯೂ ಆ ನಿಮ್ಮ ಆನಂದವು ಪರಿಪೂರ್ಣವಾಗುವಂತೆಯೂ ನಾನು ಇವುಗಳನ್ನು ನಿಮಗೆ ಹೇಳಿದ್ದೇನೆ.


ಮದುಮಗಳು ಮದುಮಗನಿಗೆ ಸೇರಿದವಳು. ಆದರೂ ಮದುಮಗನ ಸ್ನೇಹಿತನು ನಿಂತುಕೊಂಡು ಆತನ ಮಾತಿಗೆ ಕಿವಿಗೊಟ್ಟು, ಮದುಮಗನ ಸ್ವರ ಕೇಳಿ ಸಂತೋಷಪಡುತ್ತಾನೆ. ಆದಕಾರಣ ಈ ನನ್ನ ಸಂತೋಷವು ಪರಿಪೂರ್ಣವಾಯಿತು.


ನಮ್ಮ ಸಂತೋಷವು ಪರಿಪೂರ್ಣವಾಗಬೇಕೆಂದು ನಾವು ಇವುಗಳನ್ನು ಬರೆಯುತ್ತಿದ್ದೇವೆ.


ತಂದೆಯು ತನ್ನ ಕೈಯಲ್ಲಿ ಎಲ್ಲವನ್ನೂ ಕೊಟ್ಟಿದ್ದಾರೆಂದೂ ತಾನು ದೇವರ ಬಳಿಯಿಂದ ಬಂದು ಮರಳಿ ದೇವರ ಬಳಿಗೆ ಹೋಗುತ್ತೇನೆಂದೂ ಯೇಸುವಿಗೆ ತಿಳಿದಿತ್ತು.


ನಿಮಗೆ ಬರೆಯುವುದಕ್ಕೆ ನನಗೆ ಅನೇಕ ವಿಷಯಗಳಿದ್ದರೂ ಅವುಗಳನ್ನು ಮಸಿಯಿಂದ ಕಾಗದದ ಮೇಲೆ ಬರೆಯುವುದಕ್ಕೆ ನನಗೆ ಮನಸ್ಸಿಲ್ಲ. ಆದರೆ ನಾನು ನಿಮ್ಮ ಬಳಿಗೆ ಬಂದು ನಿಮ್ಮ ಸಂಗಡ ಮುಖಾಮುಖಿಯಾಗಿ ಮಾತನಾಡುವೆನೆಂದು ನಿರೀಕ್ಷಿಸುತ್ತೇನೆ. ಆಗ ನಮ್ಮ ಸಂತೋಷವು ಪರಿಪೂರ್ಣವಾಗುವುದು.


ಏಕೆಂದರೆ ತಿನ್ನುವುದೂ ಕುಡಿಯುವುದೂ ದೇವರ ರಾಜ್ಯವಲ್ಲ. ನೀತಿ, ಸಮಾಧಾನ, ಪವಿತ್ರಾತ್ಮರಲ್ಲಿರುವ ಆನಂದವೂ ಆಗಿದೆ.


“ನನ್ನಲ್ಲಿ ನಿಮಗೆ ಸಮಾಧಾನ ಇರುವಂತೆ ಇವುಗಳನ್ನು ನಾನು ನಿಮ್ಮೊಂದಿಗೆ ಮಾತನಾಡಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟವಿರುವದು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ,” ಎಂದರು.


ಕಣ್ಣೀರಿನಿಂದ ಬಿತ್ತುವವರು, ಆನಂದ ಗೀತದೊಡನೆ ಕೊಯ್ಯುವರು;


ದೇವರೇ, ನನ್ನ ದೇವರೇ, ಆಗ ನಿಮ್ಮ ಬಲಿಪೀಠದ ಬಳಿಗೆ ಬರುವೆನು. ನನ್ನ ಸಂತೋಷವೂ ಹರ್ಷವೂ ಆಗಿರುವ ನಿಮ್ಮ ಬಳಿಗೂ ಬಂದು, ಕಿನ್ನರಿಯಿಂದ ನಿಮ್ಮನ್ನು ಕೊಂಡಾಡುವೆನು.


ಇದಲ್ಲದೆ ಎಜ್ರನು ಅವರಿಗೆ, “ನೀವು ಹೋಗಿ ಒಳ್ಳೆಯ ಆಹಾರವನ್ನು ತಿಂದು, ಸಿಹಿಯಾದದ್ದನ್ನು ಕುಡಿಯಿರಿ, ತಮಗಾಗಿ ಸಿದ್ಧಮಾಡಿಕೊಳ್ಳದವರಿಗೆ ಒಂದು ಪಾಲನ್ನು ಕಳುಹಿಸಿಕೊಡಿರಿ. ಈ ದಿನವು ನಮ್ಮ ಯೆಹೋವ ದೇವರಿಗೆ ಪರಿಶುದ್ಧವಾಗಿದೆ. ನೀವು ವ್ಯಥೆಪಡಬೇಡಿರಿ. ಯೆಹೋವ ದೇವರ ಆನಂದವೇ ನಿಮ್ಮ ಬಲ,” ಎಂದು ಹೇಳಿದನು.


ಶಿಷ್ಯರು ಬಹಳ ಸಂತೋಷದಿಂದಲೂ ಪವಿತ್ರಾತ್ಮ ದೇವರಿಂದಲೂ ತುಂಬಿದವರಾದರು.


ಯೇಸು ಅವರಿಗೆ, “ಇನ್ನು ಸ್ವಲ್ಪಕಾಲ ನಾನು ನಿಮ್ಮೊಂದಿಗಿದ್ದು ಅನಂತರ ನನ್ನನ್ನು ಕಳುಹಿಸಿದ ತಂದೆಯ ಬಳಿಗೆ ಹೋಗುತ್ತೇನೆ.


ಇನ್ನು ಮೇಲೆ ನಾನು ಲೋಕದಲ್ಲಿ ಇರುವುದಿಲ್ಲ. ಇವರಾದರೋ ಲೋಕದಲ್ಲಿರುತ್ತಾರೆ. ನಾನು ನಿಮ್ಮ ಬಳಿಗೆ ಬರುತ್ತೇನೆ. ಪರಿಶುದ್ಧ ತಂದೆಯೇ, ನಾವು ಒಂದಾಗಿರುವಂತೆಯೇ ಇವರೂ ಒಂದಾಗಿರಬೇಕೆಂದು ನೀವು ನನಗೆ ಕೊಟ್ಟ ನಿಮ್ಮ ಹೆಸರಿನ ಶಕ್ತಿಯಿಂದ ಇವರನ್ನು ಕಾಪಾಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು