Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 17:19 - ಕನ್ನಡ ಸಮಕಾಲಿಕ ಅನುವಾದ

19 ಇವರು ನಿಜವಾಗಿಯೂ ಸಮರ್ಪಿತರಾಗಬೇಕೆಂದು ನನ್ನನ್ನು ನಾನೇ ಇವರಿಗೋಸ್ಕರ ಸಮರ್ಪಿಸಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಇವರು ನಿಜವಾಗಿ ಪ್ರತಿಷ್ಠಿರಾಗಬೇಕೆಂದು, ನನ್ನನ್ನು ನಾನೇ ಇವರಿಗೋಸ್ಕರ ಪ್ರತಿಷ್ಠಿಸಿಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಸತ್ಯಸಂಧರಾಗಿ ಇವರು ನಿಮ್ಮ ಸೇವೆಗೆ ಮೀಸಲಾಗಬೇಕೆಂದು ನನ್ನನ್ನು ನಾನೇ ಮೀಸಲಾಗಿಸಿಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಇವರು ನಿಜವಾಗಿ ಪ್ರತಿಷ್ಠಿತರಾಗಬೇಕೆಂದು ಇವರಿಗೋಸ್ಕರ ನಾನು ನನ್ನನ್ನು ಪ್ರತಿಷ್ಠೆಪಡಿಸಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಇವರು ನಿಜವಾಗಿ ನಿನ್ನ ಸೇವೆಗೆ ಪ್ರತಿಷ್ಠಿತರಾಗಬೇಕೆಂದು ನಾನು ನನ್ನನ್ನೇ ಪ್ರತಿಷ್ಠಿಸಿಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ತೆಚೆಸಾಟ್ನಿ ಮಿಯಾ ಮಾಕಾಚ್ ತುಜ್ಯಾ ಹಾತಾತ್ ಒಪ್ಸುನ್ ದಿತಾ. ಅಶೆ ತೆನಿಬಿ ಖರೆಚ್! ತುಕಾ ಒಪ್ಸುನ್ ದಿಲ್ಲೆ ಹೊಂವ್ದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 17:19
24 ತಿಳಿವುಗಳ ಹೋಲಿಕೆ  

ಪವಿತ್ರ ಮಾಡುವ ದೇವರೂ ಪವಿತ್ರರಾದವರೆಲ್ಲರೂ ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ಈ ಕಾರಣದಿಂದ ಯೇಸು ಅವರನ್ನು ಸಹೋದರರೆಂದು ಕರೆಯುವುದಕ್ಕೆ ನಾಚಿಕೆಪಡದೆ,


ಕ್ರಿಸ್ತ ಯೇಸು ನಮ್ಮನ್ನು ಎಲ್ಲಾ ದುಷ್ಟತನದಿಂದ ವಿಮೋಚಿಸಿ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಂತ ಜನರನ್ನು ತಮಗಾಗಿ ಪರಿಶುದ್ಧ ಮಾಡುವಂತೆ ನಮಗೋಸ್ಕರ ತಮ್ಮನ್ನು ತಾವೇ ಒಪ್ಪಿಸಿಕೊಟ್ಟರು.


ನೀವು ಸತ್ಯದಿಂದ ಇವರನ್ನು ಸಮರ್ಪಿಸಿರಿ. ನಿಮ್ಮ ವಾಕ್ಯವೇ ಸತ್ಯವು.


ಕ್ರಿಸ್ತ ಯೇಸುವಿನಲ್ಲಿ ಪ್ರತ್ಯೇಕವಾಗಿ, ಪವಿತ್ರರಾಗುವುದಕ್ಕೆ ಕರೆಹೊಂದಿದ ಕೊರಿಂಥದಲ್ಲಿರುವ ದೇವರ ಸಭೆಗೆ ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ನಾಮದಲ್ಲಿ ವಿಶ್ವಾಸವಿಟ್ಟ ಸಕಲ ಜನರಿಗೂ ಬರೆಯುವ ಪತ್ರ:


ಆದಕಾರಣ ಆರಿಸಿಕೊಂಡವರು ಸಹ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯ ಮಹಿಮೆ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನೂ ಸಹಿಸಿಕೊಳ್ಳುತ್ತೇನೆ.


ದೇವರು ನಮ್ಮನ್ನು ಅಶುದ್ಧತೆಗೆ ಕರೆಯದೆ ಪವಿತ್ರ ಜೀವನವನ್ನು ಜೀವಿಸಲು ಕರೆದಿದ್ದಾರೆ.


ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಕೃಪೆಯನ್ನು ನೀವು ಬಲ್ಲವರಾಗಿದ್ದೀರಿ. ಅವರು ಐಶ್ವರ್ಯವಂತರಾಗಿದ್ದರೂ ತಮ್ಮ ಬಡತನದ ಮೂಲಕ ನೀವು ಐಶ್ವರ್ಯವಂತರಾಗುವಂತೆ ಅವರು ನಿಮಗೋಸ್ಕರ ಬಡವರಾದರು.


ಇವೆಲ್ಲವೂ ನಿಮ್ಮ ಒಳ್ಳೆಯದಕ್ಕಾಗಿಯೇ. ಇದರಿಂದ ಹೆಚ್ಚಾದ ಜನರಿಗೆ ತಲುಪುತ್ತಿರುವ ಕೃಪೆಯು, ಕೃತಜ್ಞತೆಯಿಂದ ತುಂಬಿ ಹರಿಯುವುದು. ಆಗ ದೇವರ ಮಹಿಮೆಯು ಸ್ಪಷ್ಟವಾಗುವುದು.


ಹಾಗಿದ್ದರೆ, ಕ್ರಿಸ್ತ ಯೇಸುವು ಲೋಕದ ಅಸ್ತಿವಾರದಿಂದ ಅನೇಕ ಸಾರಿ ಬಾಧೆಪಡಬೇಕಾಗಿತ್ತು. ಆದರೆ ಈಗ ಅವರು ಒಂದೇ ಸಾರಿ ಲೋಕಾಂತ್ಯದಲ್ಲಿ ಪಾಪ ನಿವಾರಣೆ ಮಾಡುವುದಕ್ಕೆ ತಮ್ಮನ್ನು ತಾವೇ ಯಜ್ಞ ಮಾಡಿಕೊಳ್ಳುವವರಾಗಿ ಪ್ರತ್ಯಕ್ಷರಾದರು.


ಯಾವನು ದೇವಪುತ್ರರನ್ನೇ ತುಳಿದು ತನ್ನನ್ನು ಶುದ್ಧೀಕರಿಸಿದ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ ಕೃಪೆಯ ಪವಿತ್ರಾತ್ಮ ದೇವರನ್ನು ತಿರಸ್ಕಾರ ಮಾಡಿದ್ದಾನೋ, ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗುವನೆಂಬುದನ್ನು ಯೋಚಿಸಿರಿ.


ಹೋತ ಹೋರಿಗಳ ರಕ್ತವನ್ನೂ ಅಶುದ್ಧರಾದವರ ಮೇಲೆ ಚಿಮುಕಿಸಲಾಯಿತು. ಯಜ್ಞಪಶುಗಳ ಬೂದಿಯನ್ನೂ ಅವರ ಮೇಲೆ ತೂರಲಾಯಿತು. ಇದು ಅವರ ದೇಹವನ್ನು ಶುದ್ಧೀಕರಿಸಿತು.


ಚೀಯೋನಿಗೋಸ್ಕರ ನಾನು ಮೌನವಾಗಿರುವುದಿಲ್ಲ! ಯೆರೂಸಲೇಮಿಗೋಸ್ಕರ ಅದರ ವಿಮೋಚನೆಯು ಪ್ರಕಾಶದಂತೆಯೂ, ಅದರ ರಕ್ಷಣೆಯು ಉರಿಯುವ ದೀವಿಟಿಗೆಯಂತೆಯೂ ಹೊರಡುವವರೆಗೆ ನಾನು ವಿಶ್ರಾಂತಿಯಿಂದ ಇರುವುದಿಲ್ಲ.


ಆದ್ದರಿಂದ ಮೊದಲನೆಯ ಒಡಂಬಡಿಕೆಯು ಸಹ ರಕ್ತವಿಲ್ಲದೆ ಪ್ರತಿಷ್ಠಾಪನೆ ಆಗಲಿಲ್ಲ.


ಹೀಗಿರುವಾಗ ತಂದೆಯು ಪ್ರತಿಷ್ಠಿಸಿ ನನ್ನನ್ನು ಲೋಕಕ್ಕೆ ಕಳುಹಿಸಿಕೊಟ್ಟಿರುವ ನಾನು, ‘ದೇವರ ಪುತ್ರನಾಗಿದ್ದೇನೆ,’ ಎಂದು ಹೇಳಿದ್ದಕ್ಕೆ, ‘ನೀನು ದೇವದೂಷಣೆ ಮಾಡುತ್ತೀ,’ ಎಂದು ನೀವು ನನಗೆ ಹೇಳುತ್ತೀರಲ್ಲಾ?


“ನಾನು ನಿನ್ನನ್ನು ತಾಯಿಯ ಗರ್ಭದಲ್ಲಿ ನಿರ್ಮಿಸುವುದಕ್ಕಿಂತ ಮುಂಚೆಯೇ ನಿನ್ನನ್ನು ತಿಳಿದಿದ್ದೆನು. ನೀನು ಹುಟ್ಟುವುದಕ್ಕಿಂತ ಮುಂಚೆ ನಿನ್ನನ್ನು ಪ್ರತಿಷ್ಠಿಸಿದ್ದೆನು; ನಿನ್ನನ್ನು ಜನಾಂಗಗಳಿಗೆ ಪ್ರವಾದಿಯಾಗಿ ನೇಮಿಸಿದ್ದೇನೆ.”


ನಾನು ನಿಮಗೆ ಹೇಳಿದ ವಾಕ್ಯದ ದೆಸೆಯಿಂದ ನೀವು ಈಗ ಶುದ್ಧರಾಗಿದ್ದೀರಿ.


ಒಬ್ಬನು ತನ್ನ ಸ್ನೇಹಿತರಿಗಾಗಿ ತನ್ನ ಪ್ರಾಣವನ್ನೇ ಕೊಡುವ ಪ್ರೀತಿಗಿಂತ ಮಹತ್ತಾದದ್ದು ಯಾರಲ್ಲೂ ಇಲ್ಲ.


“ಆದರೆ ಇವರಿಗಾಗಿ ಮಾತ್ರವಲ್ಲದೆ ಇವರ ವಾಕ್ಯದಿಂದ ನನ್ನಲ್ಲಿ ನಂಬುವವರಿಗಾಗಿಯೂ ಬೇಡಿಕೊಳ್ಳುತ್ತೇನೆ.


ನಿಮ್ಮ ವಿಷಯವಾಗಿ ನಾನು ತೀತನ ಮುಂದೆ ಹೊಗಳಿದ್ದಕ್ಕೆ ನಾನು ಬೇಸರಪಡಬೇಕಾಗಿರಲಿಲ್ಲ. ನಾನು ನಿಮಗೆ ಹೇಳಿದ್ದೆಲ್ಲವೂ ಹೇಗೆ ಸತ್ಯವಾಗಿತ್ತೋ, ಹಾಗೆಯೇ ನಿಮ್ಮ ಬಗ್ಗೆ ನಾವು ತೀತನ ಬಗ್ಗೆ ಹೊಗಳಿದ್ದೆಲ್ಲವೂ ಸತ್ಯವಾದವು.


ಆ ಸುವಾರ್ತೆಯು ಲೋಕದಲ್ಲೆಲ್ಲಾ ಹರಡಿದಂತೆ, ನಿಮಗೂ ತಲುಪಲು ನೀವು ಸಹ ಅದನ್ನು ಕೇಳಿ ದೇವರ ಕೃಪೆಯನ್ನು ನಿಜವಾಗಿಯೂ ತಿಳಿದುಕೊಂಡ ದಿವಸದಿಂದ ನಿಮ್ಮಲ್ಲಿಯೂ ಫಲಕೊಟ್ಟು ವೃದ್ಧಿಯಾಗುತ್ತಿದೆ.


ಕ್ರಿಸ್ತ ಯೇಸುವಿನಲ್ಲಿ ಈ ನಿರೀಕ್ಷೆಯನ್ನು ಇಟ್ಟಿರುವ ಪ್ರತಿಯೊಬ್ಬನೂ ಅವರು ಶುದ್ಧರಾಗಿರುವಂತೆಯೇ ತನ್ನನ್ನು ಶುದ್ಧಮಾಡಿಕೊಳ್ಳುತ್ತಾನೆ.


ನನ್ನ ಪ್ರಿಯ ಮಕ್ಕಳೇ, ನೀವು ಬರೀಮಾತಿನಿಂದಾಗಲಿ, ಹೊಗಳಿಕೆಯ ಮಾತಿನಿಂದಾಗಲಿ ಪ್ರೀತಿಸುವವರಾಗಿರದೆ ಕ್ರಿಯೆಯಲ್ಲಿಯೂ ಸತ್ಯದಲ್ಲಿಯೂ ಪ್ರೀತಿಸುವವರಾಗಿರಬೇಕು.


ದಹನಬಲಿಗಾಗಿ ಒಂದು ಎಳೆಯ ಹೋರಿ, ಒಂದು ಟಗರು, ಒಂದು ವರ್ಷದ ಒಂದು ಕುರಿಮರಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು