Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 17:6 - ಕನ್ನಡ ಸಮಕಾಲಿಕ ಅನುವಾದ

6 “ಲೋಕದೊಳಗಿಂದ ನೀವು ನನಗೆ ಕೊಟ್ಟ ಈ ನನ್ನ ಶಿಷ್ಯರಿಗೆ ನಾನು ನಿಮ್ಮ ಹೆಸರನ್ನು ಪ್ರಕಟಪಡಿಸಿದ್ದೇನೆ. ಇವರು ನಿಮ್ಮವರಾಗಿದ್ದರು. ನೀವು ಇವರನ್ನು ನನಗೆ ಕೊಟ್ಟಿದ್ದೀರಿ. ಇವರು ನಿಮ್ಮ ವಾಕ್ಯವನ್ನು ಕೈಗೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 “ಲೋಕದಲ್ಲಿ ನೀನು ನನಗೆ ಕೊಟ್ಟಿರುವ ಮನುಷ್ಯರಿಗೆ ನಾನು ನಿನ್ನ ಹೆಸರನ್ನು ಪ್ರಕಟಪಡಿಸಿದ್ದೇನೆ. ಇವರು ನಿನ್ನವರಾಗಿದ್ದರು ಮತ್ತು ನೀನು ಇವರನ್ನು ನನಗೆ ಕೊಟ್ಟಿದ್ದೀ. ಇವರು ನಿನ್ನ ವಾಕ್ಯಕ್ಕೆ ವಿಧೇಯರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 “ನೀವು ಲೋಕದಿಂದ ಆರಿಸಿ ನನಗೆ ಕೊಟ್ಟ ಜನರಿಗೆ ನಿಮ್ಮ ನಾಮವನ್ನು ತಿಳಿಯಪಡಿಸಿದ್ದೇನೆ. ಇವರು ನಿಮ್ಮವರಾಗಿದ್ದರು. ಆದರೂ ಇವರನ್ನು ನನಗೆ ಕೊಟ್ಟಿರಿ. ನಿಮ್ಮ ಮಾತಿಗೆ ವಿಧೇಯರಾಗಿ ಇವರು ನಡೆದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಲೋಕದೊಳಗಿಂದ ನೀನು ನನಗೆ ಕೊಟ್ಟ ಮನುಷ್ಯರಿಗೆ ನಿನ್ನ ಹೆಸರನ್ನು ತಿಳಿಯಪಡಿಸಿದೆನು. ಇವರು ನಿನ್ನವರಾಗಿದ್ದರು, ನೀನು ಇವರನ್ನು ನನಗೆ ಕೊಟ್ಟೆ; ಮತ್ತು ಇವರು ನಿನ್ನ ವಾಕ್ಯವನ್ನು ಕೈಕೊಂಡು ನಡೆದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ನೀನು ಈ ಲೋಕದೊಳಗಿಂದ ಕೆಲವು ಜನರನ್ನು ನನಗೆ ಕೊಟ್ಟೆ. ನಿನ್ನ ಸ್ವರೂಪವನ್ನು ನಾನು ಇವರಿಗೆ ತೋರಿಸಿದೆನು. ಇವರು ನಿನ್ನವರಾಗಿದ್ದಾರೆ ಮತ್ತು ನೀನೇ ಇವರನ್ನು ನನಗೆ ಕೊಟ್ಟೆ. ಇವರು ನಿನ್ನ ಆಜ್ಞೆಗಳಿಗೆ ವಿಧೇಯರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಹ್ಯಾ ಜಗಾತ್ ಮಾಜೆ ಮನುನ್ ತಿಯಾ ಮಾಕಾ ದಿಲ್ಲ್ಯಾಕ್ನಿ ಮಿಯಾ ತುಜಿ ವಳಕ್ ಕರುನ್ ದಿಲೊ. ತೆನಿ ತುಕಾ ಸಮಂದ್ ಪಡಲ್ಲೆ ಹಾತ್, ಅನಿ ತಿಯಾಚ್ ತೆಂಕಾ ಮಾಜ್ಯಾ ತಾಬೆತ್ ದಿಲೆಯ್, ತೆನಿ ತುಜ್ಯಾ ಗೊಸ್ಟಿಯಾಕ್ನಿ ಖಾಲ್ತಿ ಹೊವ್ನ್ ಹಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 17:6
48 ತಿಳಿವುಗಳ ಹೋಲಿಕೆ  

ನೀವು ನನ್ನನ್ನು ಪ್ರೀತಿಸಿದಂಥ ಪ್ರೀತಿಯು ಇವರಲ್ಲಿ ಇರಬೇಕೆಂತಲೂ ನಾನು ಅವರಲ್ಲಿ ಇರುವಂತೆಯೂ ನಾನು ಅವರಿಗೆ ನಿಮ್ಮ ಹೆಸರನ್ನು ತಿಳಿಸಿದ್ದೇನೆ, ಇನ್ನೂ ತಿಳಿಸುವೆನು,” ಎಂದರು.


ದೇವರ ಪುತ್ರ ಆಗಿರುವ ಕ್ರಿಸ್ತ ಯೇಸುವು ಬಂದು, ಸತ್ಯವಾಗಿರುವ ದೇವರನ್ನು ನಾವು ಅರಿತುಕೊಳ್ಳುವ ಹಾಗೆ ಅವರು ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾರೆಂದೂ ನಾವು ಸತ್ಯವಾಗಿರುವ ದೇವರಲ್ಲಿ ಅವರ ಪುತ್ರ ಆಗಿರುವ ಕ್ರಿಸ್ತ ಯೇಸುವಿನಲ್ಲಿ ಇರುವವರಾಗಿದ್ದೇವೆ ಎಂದೂ ನಮಗೆ ಗೊತ್ತಿದೆ. ಈ ಕ್ರಿಸ್ತ ಯೇಸುವೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾರೆ.


ತಂದೆಯು ನನಗೆಂದು ಕೊಟ್ಟಿರುವ ಪ್ರತಿಯೊಬ್ಬರೂ ನನ್ನ ಬಳಿಗೆ ಬರುವರು. ನನ್ನ ಬಳಿಗೆ ಬರುವವರನ್ನು ನಾನು ಎಂದಿಗೂ ತಳ್ಳಿಬಿಡುವುದೇ ಇಲ್ಲ.


“ತಂದೆಯೇ, ನೀವು ನನಗೆ ಕೊಟ್ಟವರು ನಾನಿರುವಲ್ಲಿಯೇ ನನ್ನೊಂದಿಗೆ ಇದ್ದುಕೊಂಡು ಜಗದುತ್ಪತ್ತಿಗೆ ಮುಂಚೆ ನೀವು ನನ್ನನ್ನು ಪ್ರೀತಿಸಿ ನನಗೆ ಕೊಟ್ಟಿರುವ ಮಹಿಮೆಯನ್ನು ಇವರು ಕಾಣಬೇಕೆಂದು ನಾನು ಅಪೇಕ್ಷಿಸುತ್ತೇನೆ.


ನೀವು ಎಲ್ಲರಿಗೂ ನಿತ್ಯಜೀವವನ್ನು ಕೊಡಬೇಕೆಂದು ಆತನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿರುವಿರಿ.


“ಕತ್ತಲೆಯಿಂದ ಬೆಳಕು ಹೊಳೆಯಲಿ,” ಎಂದು ಆಜ್ಞಾಪಿಸಿದ ದೇವರು ತಾವೇ, ತಮ್ಮ ಪ್ರಕಾಶವನ್ನು ನಮ್ಮ ಹೃದಯದ ಮೇಲೆ ಬೆಳಗಿಸಿದ್ದಾರೆ. ಹೀಗೆ ಕ್ರಿಸ್ತ ಯೇಸುವಿನ ಮುಖದಲ್ಲಿ ಪ್ರತಿಬಿಂಬಿಸುತ್ತಿರುವ ದೇವರ ಮಹಿಮೆಯ ತಿಳುವಳಿಕೆಯನ್ನು ನಮ್ಮಲ್ಲಿ ಉದಯಿಸುವಂತಾಗಿದೆ.


ನೀವು ಲೋಕದವರಾಗಿದ್ದರೆ ಲೋಕವು ನಿಮ್ಮನ್ನು ಪ್ರೀತಿಸುತ್ತಿತ್ತು. ಆದರೆ ನೀವು ಲೋಕದವರಲ್ಲದೆ ಇರುವುದರಿಂದಲೂ ನಾನು ಲೋಕದೊಳಗಿಂದ ನಿಮ್ಮನ್ನು ಆರಿಸಿಕೊಂಡದ್ದರಿಂದಲೂ ಲೋಕವು ನಿಮ್ಮನ್ನು ದ್ವೇಷಿಸುತ್ತದೆ.


ನಾನು ನಿನ್ನ ಕ್ರಿಯೆಗಳನ್ನು ಬಲ್ಲೆನು. ನಿನ್ನ ಶಕ್ತಿಯು ಸ್ವಲ್ಪವೇ ಆಗಿದ್ದರೂ ನೀನು ನನ್ನ ಹೆಸರನ್ನು ನಿರಾಕರಿಸದೆ, ನನ್ನ ವಾಕ್ಯವನ್ನು ಕಾಪಾಡಿಕೊಂಡಿದ್ದರಿಂದ, ನಿನ್ನೆದುರಿನಲ್ಲಿ ಒಂದು ದ್ವಾರವನ್ನು ತೆರೆದಿಟ್ಟಿದ್ದೇನೆ, ಅದನ್ನು ಯಾರೂ ಮುಚ್ಚಲಾರರು.


ಕ್ರಿಸ್ತ ಯೇಸುವಾದರೋ ಮಗನಾಗಿ ದೇವರ ಮನೆಯ ಮೇಲೆ ನಂಬಿಗಸ್ತರಾಗಿದ್ದಾರೆ. ಆದುದರಿಂದ ನಾವು ನಮ್ಮ ಧೈರ್ಯವನ್ನೂ ನಾವು ಹೊಗಳಿಕೊಳ್ಳುವ ನಿರೀಕ್ಷೆಯನ್ನೂ ಕಡೆಯತನಕ ದೃಢವಾಗಿ ಹಿಡಿದುಕೊಂಡಿದ್ದರೆ ನಾವೇ ದೇವರ ಮನೆಯಾಗಿರುತ್ತೇವೆ.


ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನೀವು ಬಯಸುವ ಯಾವುದನ್ನಾದರೂ ಬೇಡಿಕೊಳ್ಳಿರಿ. ಅದು ನಿಮ್ಮದಾಗುವುದು.


ನಾನು ನಿಮ್ಮ ಹೆಸರನ್ನು ನನ್ನ ಸಹೋದರರಿಗೆ ಸಾರುವೆನು; ಸಭಾ ಮಧ್ಯದಲ್ಲಿ ನಿಮ್ಮನ್ನು ಸ್ತುತಿಸುವೆನು.


ಆದರೆ ನಿಶ್ಚಯವಾಗಿ ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ, ನನ್ನ ಹೆಸರನ್ನು ಭೂಮಿಯ ಮೇಲೆಲ್ಲಾ ಪ್ರಸಿದ್ಧಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಸಾಯಿಸದೆ ಉಳಿಸಿದ್ದೇನೆ.


ನೀನು ವಾಸಮಾಡುವ ಸ್ಥಳವನ್ನು ಬಲ್ಲೆನು, ಅದು ಸೈತಾನನ ಸಿಂಹಾಸನವಿರುವ ಸ್ಥಳವಾಗಿದೆ. ನೀನು ನನ್ನ ಹೆಸರನ್ನು ಬಿಡದೇ ಹಿಡಿದುಕೊಂಡಿದ್ದೀ. ನೀನು ಇರುವ ಸೈತಾನನ ನಿವಾಸದಲ್ಲಿ ನನಗೆ ನಂಬಿಗಸ್ತ ಸಾಕ್ಷಿಯಾದ ಅಂತಿಪನನ್ನು ಕೊಲ್ಲಲಾದ ದಿನಗಳಲ್ಲಿಯೂ ನನ್ನಲ್ಲಿಟ್ಟಿರುವ ನಂಬಿಕೆಯನ್ನು ನೀನು ಅಲ್ಲಗಳೆಯಲಿಲ್ಲ.


ಹೇಳಿದ್ದು, “ನಿಮ್ಮ ಹೆಸರನ್ನು ನನ್ನ ಸಹೋದರರಿಗೆ ಸಾರುವೆನು. ಸಭಾ ಮಧ್ಯದಲ್ಲಿ ನಿಮಗೆ ಸ್ತುತಿ ಪದಗಳನ್ನು ಹಾಡುವೆನು.”


ನೀನು ನನ್ನಿಂದ ಕೇಳಿದ ಸ್ವಸ್ಥವಾಕ್ಯಗಳನ್ನು ಕ್ರಿಸ್ತ ಯೇಸುವಿನಲ್ಲಿರುವ ವಿಶ್ವಾಸ ಹಾಗೂ ಪ್ರೀತಿಯೊಂದಿಗೆ ಒಂದು ಮಾದರಿಯಾಗಿ ಹಿಡಿದುಕೋ.


ಕ್ರಿಸ್ತ ಯೇಸುವಿನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ. ಆ ವಾಕ್ಯದಿಂದಲೇ, ನೀವು ಸಕಲ ಜ್ಞಾನದಲ್ಲಿ ಕೃತಜ್ಞತೆಯೊಂದಿಗೆ ನಿಮ್ಮ ಹೃದಯಗಳಲ್ಲಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮಿಕ ಹಾಡುಗಳಿಂದಲೂ ಕರ್ತ ಯೇಸುವನ್ನು ಕೊಂಡಾಡುತ್ತಾ ಒಬ್ಬರಿಗೊಬ್ಬರು ಉಪದೇಶಿಸುತ್ತಾ, ಬುದ್ಧಿ ಹೇಳುತ್ತಾ ಇರಿ.


ದೇವರು ತಾವು ಮುಂದಾಗಿ ತಿಳಿದುಕೊಂಡ ತಮ್ಮ ಜನರನ್ನು ತ್ಯಜಿಸಲಿಲ್ಲ. ದೇವರ ವಾಕ್ಯವು ಎಲೀಯನನ್ನು ಕುರಿತು ಏನು ಹೇಳುತ್ತದೆಂದು ನಿಮಗೆ ಗೊತ್ತಿಲ್ಲವೋ?


ಯೆಹೂದ್ಯರಲ್ಲದವರು ಇದನ್ನು ಕೇಳಿದಾಗ, ಬಹಳ ಹರ್ಷಗೊಂಡು ಕರ್ತದೇವರ ವಾಕ್ಯವನ್ನು ಘನಪಡಿಸಿದರು. ನಿತ್ಯಜೀವಕ್ಕೆ ನೇಮಕರಾದ ಎಲ್ಲರೂ ವಿಶ್ವಾಸವನ್ನಿಟ್ಟರು.


ಹೀಗೆ, “ನೀನು ನನಗೆ ಕೊಟ್ಟವರಲ್ಲಿ ಯಾರನ್ನೂ ನಾನು ಕಳೆದುಕೊಳ್ಳಲಿಲ್ಲ,” ಎಂದು ತಾವೇ ಹೇಳಿದ ಮಾತು ನೆರವೇರಿತು.


ನಾನು ಲೋಕದವನಲ್ಲದೆ ಇರುವಂತೆ ಇವರೂ ಲೋಕದವರಲ್ಲ.


ನಾನು ನಿಮ್ಮ ವಾಕ್ಯವನ್ನು ಇವರಿಗೆ ಕೊಟ್ಟಿದ್ದೇನೆ. ಇವರು ನನ್ನಂತೆ ಲೋಕದವರಲ್ಲದ ಕಾರಣ ಲೋಕವು ಇವರನ್ನು ದ್ವೇಷಿಸುತ್ತದೆ.


ನಾನು ನಿಮಗೆ ಹೇಳಿದ ವಾಕ್ಯದ ದೆಸೆಯಿಂದ ನೀವು ಈಗ ಶುದ್ಧರಾಗಿದ್ದೀರಿ.


ತಂದೆಯೇ, ನಿಮ್ಮ ಹೆಸರನ್ನು ಮಹಿಮೆ ಪಡಿಸಿಕೊಳ್ಳಿರಿ,” ಎಂದರು. ಆಗ, “ಹೌದು, ನಾನು ಮಹಿಮೆಪಡಿಸಿದ್ದೇನೆ, ಪುನಃ ಮಹಿಮೆ ಪಡಿಸುವೆನು,” ಎಂಬ ಸ್ವರವು ಪರಲೋಕದಿಂದ ಕೇಳಿಸಿತು.


ನನ್ನನ್ನು ಕಳುಹಿಸಿಕೊಟ್ಟ ತಂದೆಯ ಚಿತ್ತವೇನೆಂದರೆ: ಅವರು ನನಗೆ ಕೊಟ್ಟವರಲ್ಲಿ ನಾನು ಯಾರನ್ನೂ ಕಳೆದುಕೊಳ್ಳದೆ ಕಡೆಯ ದಿನದಲ್ಲಿ ಅವರನ್ನು ಎಬ್ಬಿಸುವುದೇ.


ದೇವರನ್ನು ಯಾರೂ ಎಂದೂ ಕಂಡಿಲ್ಲ; ತಂದೆ ದೇವರ ಹೃದಯಕ್ಕೆ ಹತ್ತಿರವಾಗಿರುವ ಏಕೈಕ ಪುತ್ರ ಆಗಿರುವವರೂ ಸ್ವತಃ ದೇವರೂ ಆಗಿರುವವರೂ ತಂದೆಯನ್ನು ಪ್ರಕಟಪಡಿಸಿದ್ದಾರೆ.


ಸತ್ಯವನ್ನೂ ಜ್ಞಾನವನ್ನೂ ಶಿಕ್ಷಣವನ್ನೂ ವಿವೇಕವನ್ನೂ ಕೊಂಡುಕೋ; ಆದರೆ ಅವುಗಳನ್ನು ಮಾರಬೇಡ.


ನಿನ್ನ ಹೃದಯದಲ್ಲಿ ಜ್ಞಾನವು ಪ್ರವೇಶಿಸಿ, ನಿನ್ನ ಪ್ರಾಣಕ್ಕೆ ತಿಳುವಳಿಕೆಯು ಹಿತಕರವಾಗಿರುವುದು.


ನಿಮಗೆ ವಿರೋಧವಾಗಿ ಪಾಪಮಾಡದ ಹಾಗೆ ನನ್ನ ಹೃದಯದಲ್ಲಿ ನಿಮ್ಮ ವಾಕ್ಯವನ್ನು ಬಚ್ಚಿಟ್ಟುಕೊಂಡಿದ್ದೇನೆ.


ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೇತ್ರನು, ಪೊಂತ, ಗಲಾತ್ಯ, ಕಪ್ಪದೋಕ್ಯ, ಏಷ್ಯಾ, ಬಿಥೂನ್ಯ ಇವುಗಳಲ್ಲೆಲ್ಲಾ ಚದರಿರುವ, ದೇವರಿಂದ ಆಯ್ಕೆಯಾದ ಪ್ರವಾಸಿಗಳಿಗೆ,


ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಯಾರು ನನ್ನ ಮಾತನ್ನು ಪಾಲಿಸುತ್ತಾರೋ ಅವರು ಎಂದೆಂದಿಗೂ ಮರಣವನ್ನು ಕಾಣುವುದಿಲ್ಲ,” ಎಂದರು.


ಆಗ ಯೆಹೂದಿ ನಾಯಕರು ಯೇಸುವಿಗೆ, “ನಿನಗೆ ದೆವ್ವ ಹಿಡಿದಿದೆ ಎಂದು ನಮಗೆ ಈಗ ತಿಳಿಯಿತು. ಅಬ್ರಹಾಮನು ಮತ್ತು ಪ್ರವಾದಿಗಳು ಸತ್ತರು. ಆದರೆ, ‘ಯಾರಾದರೂ ನನ್ನ ಮಾತನ್ನು ಪಾಲಿಸಿದರೆ ಅವರು ಎಂದೆಂದಿಗೂ ಮರಣ ಹೊಂದುವುದಿಲ್ಲ,’ ಎಂದು ನೀನು ಹೇಳುತ್ತೀಯಲ್ಲಾ?


ನೀವು ನನಗೆ ಕೊಟ್ಟಿದ್ದೆಲ್ಲವೂ ನಿಮ್ಮಿಂದಲೇ ಬಂದಿವೆ ಎಂದು ಈಗ ಇವರು ತಿಳಿದುಕೊಂಡಿದ್ದಾರೆ.


ನಾನು ಇವರೊಡನೆ ಇದ್ದಾಗ ನೀವು ನನಗೆ ಕೊಟ್ಟ ನಿಮ್ಮ ಹೆಸರಿನಲ್ಲಿ ಇವರನ್ನು ಕಾಪಾಡಿ ಸಂರಕ್ಷಿಸಿದೆನು. ಪವಿತ್ರ ವಾಕ್ಯವು ನೆರವೇರುವಂತೆ ಆ ನಾಶದ ಮಗನೇ ಹೊರತು ಇವರಲ್ಲಿ ಒಬ್ಬನೂ ನಾಶವಾಗಲಿಲ್ಲ.


ನೀನು ನನ್ನ ವಾಕ್ಯವನ್ನು ಸಹನೆಯಿಂದ ಕಾಪಾಡಿಕೊಂಡಿದ್ದರಿಂದ, ಭೂನಿವಾಸಿಗಳನ್ನು ಪರೀಕ್ಷಿಸಲು ಇಡೀ ಲೋಕದಲ್ಲೆಲ್ಲಾ ಬರಲಿರುವ ಶೋಧನೆಯ ಸಮಯದಲ್ಲಿ ನಾನು ಸಹ ನಿನ್ನನ್ನು ಸುರಕ್ಷಿತವಾಗಿಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು