Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 17:8 - ಕನ್ನಡ ಸಮಕಾಲಿಕ ಅನುವಾದ

8 ಏಕೆಂದರೆ ನೀವು ನನಗೆ ಕೊಟ್ಟ ಮಾತುಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ, ಇವರು ಅಂಗೀಕರಿಸಿದ್ದಾರೆ ಮತ್ತು ನಾನು ನಿಮ್ಮ ಬಳಿಯಿಂದ ಬಂದವನೆಂದು ಇವರು ನಿಶ್ಚಯವಾಗಿ ತಿಳಿದು, ನೀವೇ ನನ್ನನ್ನು ಕಳುಹಿಸಿದ್ದೀರಿ, ಎಂದು ನಂಬಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಹೇಗೆಂದರೆ, ನೀನು ನನಗೆ ಕೊಟ್ಟ ಮಾತುಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ. ಇವರು ಆ ಮಾತುಗಳನ್ನು ಸ್ವೀಕರಿಸಿದ್ದಾರೆ ಮತ್ತು ನಾನು ನಿನ್ನ ಬಳಿಯಿಂದ ಬಂದವನೆಂದು ಇವರು ನಿಜವಾಗಿ ತಿಳಿದು, ನೀನೇ ನನ್ನನ್ನು ಕಳುಹಿಸಿದ್ದೀ ಎಂದು ನಂಬಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನಿಮ್ಮಿಂದ ನಾನು ಕಲಿತುದೆಲ್ಲವನ್ನೂ ಇವರಿಗೆ ತಿಳಿಯಪಡಿಸಿದ್ದೇನೆ. ಅವುಗಳನ್ನು ಇವರು ಅಂಗೀಕರಿಸಿ ನಿಮ್ಮಿಂದಲೇ ನಾನು ಬಂದುದು ನಿಜವೆಂದು ಅರಿತುಕೊಂಡಿದ್ದಾರೆ. ನನ್ನನ್ನು ಕಳುಹಿಸಿದ್ದು ನೀವೇ ಎಂದು ವಿಶ್ವಾಸಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಹೇಗಂದರೆ ನೀನು ನನಗೆ ಕೊಟ್ಟ ಮಾತುಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ; ಇವರು ಆ ಮಾತುಗಳನ್ನು ಕೈಕೊಂಡು ನನ್ನನ್ನು ನಿನ್ನ ಬಳಿಯಿಂದ ಹೊರಟುಬಂದವನೆಂದು ನಿಜವಾಗಿ ತಿಳಿದು ನೀನೇ ನನ್ನನ್ನು ಕಳುಹಿಸಿಕೊಟ್ಟಿರುವದಾಗಿ ನಂಬಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನೀನು ನನಗೆ ಕೊಟ್ಟ ಮಾತುಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ. ಇವರು ಆ ಮಾತುಗಳನ್ನು ಸ್ವೀಕರಿಸಿಕೊಂಡಿದ್ದಾರೆ. ನಾನು ನಿಜವಾಗಿಯೂ ನಿನ್ನ ಬಳಿಯಿಂದ ಬಂದಿರುವುದಾಗಿಯೂ ನೀನೇ ನನ್ನನ್ನು ಕಳುಹಿಸಿರುವುದಾಗಿಯೂ ಇವರು ನಂಬಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತಿಯಾ ಮಾಜ್ಯಾ ತಾಬೆತ್ ದಿಲ್ಲಿ ಖಬರ್ ಮಿಯಾ ತೆಂಕಾ ದಿಲಾ. ಅನಿ ತೆನಿ ತಿ ಸ್ವಿಕಾರ್ ಕರ್ಲ್ಯಾನಿ, ಅನಿ ಮಿಯಾ ತುಜೆಕ್ನಾಚ್ ಯೆಲಾ ಮನುನ್ ತೆಂಕಾ ಗೊತ್ತ್ ಹಾಯ್, ಅನಿ ತಿಯಾಚ್ ಮಾಕಾ ಧಾಡುನ್ ದಿಲೆ ಮನುನ್ ತೆನಿ ವಿಶ್ವಾಸ್ ಕರ್‍ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 17:8
31 ತಿಳಿವುಗಳ ಹೋಲಿಕೆ  

ನಾನು ನಿಮ್ಮ ವಾಕ್ಯವನ್ನು ಇವರಿಗೆ ಕೊಟ್ಟಿದ್ದೇನೆ. ಇವರು ನನ್ನಂತೆ ಲೋಕದವರಲ್ಲದ ಕಾರಣ ಲೋಕವು ಇವರನ್ನು ದ್ವೇಷಿಸುತ್ತದೆ.


ಇನ್ನು ಮೇಲೆ ನಾನು ನಿಮ್ಮನ್ನು ಆಳುಗಳೆಂದು ಕರೆಯುವುದಿಲ್ಲ. ಏಕೆಂದರೆ ತನ್ನ ಧಣಿಯು ಮಾಡುವಂಥದ್ದು ಆಳಿಗೆ ತಿಳಿಯುವುದಿಲ್ಲ. ಆದರೆ ನಾನು ನಿಮ್ಮನ್ನು ಸ್ನೇಹಿತರೆಂದು ಕರೆದಿದ್ದೇನೆ. ಏಕೆಂದರೆ ನನ್ನ ತಂದೆಯಿಂದ ಕೇಳಿದ್ದನ್ನೆಲ್ಲಾ ನಾನು ನಿಮಗೆ ತಿಳಿಯಪಡಿಸಿದ್ದೇನೆ.


ನೀವು ಎಲ್ಲಾ ತಿಳಿದವರೆಂದೂ ಯಾರೂ ನಿಮ್ಮನ್ನು ಪ್ರಶ್ನಿಸುವುದು ಅಗತ್ಯವಿಲ್ಲವೆಂದು ಈಗ ನಮಗೆ ತಿಳಿಯಿತು. ಆದ್ದರಿಂದ ನೀವು ದೇವರಿಂದ ಹೊರಟು ಬಂದವರೆಂದು ನಾವು ನಂಬುತ್ತೇವೆ,” ಎಂದರು.


ಏಕೆಂದರೆ ನೀವು ನನ್ನನ್ನು ಪ್ರೀತಿಸಿ ನಾನು ದೇವರಿಂದ ಹೊರಟು ಬಂದವನೆಂದು ನಂಬಿದ್ದರಿಂದ ತಂದೆಯು ತಾವೇ ನಿಮ್ಮನ್ನು ಪ್ರೀತಿಸುತ್ತಾರೆ.


ಈ ಕಾರಣಕ್ಕಾಗಿಯೇ ನಂಬುವವರಾದ ನಿಮ್ಮಲ್ಲಿ ಕಾರ್ಯಸಾಧಿಸುವ ದೇವರ ವಾಕ್ಯವನ್ನು ನಮ್ಮಿಂದ ನೀವು ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ, ನಿಜವಾಗಿಯೂ ದೇವರ ವಾಕ್ಯವೆಂದೇ ತಿಳಿದು ಅಂಗೀಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇವೆ.


ತಂದೆಯು ಮಗನನ್ನು ಲೋಕ ರಕ್ಷಕರನ್ನಾಗಿ ಕಳುಹಿಸಿಕೊಟ್ಟಿರುವುದನ್ನು ನಾವು ನೋಡಿದ್ದೇವೆ ಮತ್ತು ಅದಕ್ಕೆ ನಾವು ಸಾಕ್ಷಿ ಹೇಳುತ್ತೇವೆ.


ತಂದೆಯೇ, ನೀವು ನನ್ನನ್ನು ಕಳುಹಿಸಿದ್ದೀರಿ ಎಂದು ಲೋಕವು ನಂಬುವುದಕ್ಕಾಗಿ ಅವರೆಲ್ಲರೂ ಒಂದಾಗಿರಬೇಕೆಂತಲೂ ತಂದೆಯೇ, ನೀವು ನನ್ನಲ್ಲಿಯೂ ನಾನು ನಿಮ್ಮಲ್ಲಿಯೂ ಇರುವ ಹಾಗೆಯೇ ಅವರು ಸಹ ನಮ್ಮಲ್ಲಿ ಒಂದಾಗಿರಬೇಕೆಂತಲೂ ಬೇಡಿಕೊಳ್ಳುತ್ತೇನೆ.


ಯೇಸು ಅವರಿಗೆ, “ದೇವರು ನಿಮ್ಮ ತಂದೆಯಾಗಿದ್ದರೆ ನೀವು ನನ್ನನ್ನು ಪ್ರೀತಿಸುತ್ತಿದ್ದಿರಿ. ಏಕೆಂದರೆ ನಾನು ದೇವರಿಂದ ಹೊರಟು ಬಂದಿದ್ದೇನೆ. ನಾನು ನನ್ನಷ್ಟಕ್ಕೆ ಬರಲಿಲ್ಲ. ಆದರೆ ದೇವರೇ ನನ್ನನ್ನು ಕಳುಹಿಸಿದ್ದು.


ನಾನು ತಂದೆಯಲ್ಲಿ ಇದ್ದೇನೆ ಮತ್ತು ತಂದೆಯು ನನ್ನಲ್ಲಿ ಇದ್ದಾರೆ ಎಂದು ನೀನು ನಂಬುವುದಿಲ್ಲವೇ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಮಾತನಾಡುವುದಿಲ್ಲ; ನನ್ನಲ್ಲಿರುವ ತಂದೆಯೇ ತಮ್ಮ ಕ್ರಿಯೆಗಳನ್ನು ಮಾಡುತ್ತಾರೆ.


ಏಕೆಂದರೆ ನನ್ನಷ್ಟಕ್ಕೆ ನಾನೇ ಮಾತನಾಡಲಿಲ್ಲ. ಆದರೆ ನಾನು ಏನು ಹೇಳಬೇಕು ಮತ್ತು ನಾನು ಏನು ಮಾತನಾಡಬೇಕು ಎಂದು ನನ್ನನ್ನು ಕಳುಹಿಸಿದ ತಂದೆಯೇ ನನಗೆ ಆಜ್ಞೆ ಕೊಟ್ಟಿದ್ದಾರೆ.


ಸೀಮೋನ್ ಪೇತ್ರನು ಯೇಸುವಿಗೆ, “ಸ್ವಾಮೀ, ನಾವು ಯಾರ ಬಳಿಗೆ ಹೋಗೋಣ? ನಿಮ್ಮಲ್ಲಿಯೇ ನಿತ್ಯಜೀವದ ವಾಕ್ಯಗಳಿವೆ.


ಅಂದರೆ, ಶಿಕ್ಷಣ, ವಿವೇಕ ನಡವಳಿ, ಸರಿಯಾದದ್ದನ್ನು ಮಾಡುವುದು ನ್ಯಾಯ ಮತ್ತು ಯುಕ್ತವಾದವುಗಳನ್ನು ನಡೆಸುವ ಜ್ಞಾನೋಕ್ತಿಗಳು;


ಪ್ರಿಯರೇ, ನೀವು ಹೇಗೆ ನಡೆದುಕೊಂಡು ದೇವರನ್ನು ಮೆಚ್ಚಿಸಬೇಕೆಂದು ನಮ್ಮಿಂದ ಕೇಳಿದಂತೆಯೇ ಜೀವಿಸುತಿರುವಿರಿ. ಇದರಲ್ಲಿ ನೀವು ಹೆಚ್ಚೆಚ್ಚಾಗಿ ಮಾಡಬೇಕೆಂದು ನಾವು ಕಡೆಯದಾಗಿ ನಮಗೆ ಕರ್ತ ಆಗಿರುವ ಯೇಸುವಿನಲ್ಲಿ ನಿಮ್ಮನ್ನು ಪ್ರಬೋಧಿಸುತ್ತೇವೆ ಮತ್ತು ಉತ್ತೇಜಿಸುತ್ತೇವೆ.


ಪ್ರಿಯರೇ, ನಾನು ನಿಮಗೆ ಸಾರಿದ ಸುವಾರ್ತೆಯನ್ನೂ, ನೀವು ಅದನ್ನು ಸ್ವೀಕರಿಸಿದ್ದನ್ನೂ, ಅದರಲ್ಲಿ ನಿಂತಿರುವುದನ್ನೂ, ಈಗ ನಿಮಗೆ ನೆನಪಿಸುತ್ತೇನೆ.


ಹೀಗೆ ನಾನು ಇವರಲ್ಲಿಯೂ ನೀವು ನನ್ನಲ್ಲಿಯೂ ಇರುವಂತೆ ಇವರೂ ಐಕ್ಯತೆಯಲ್ಲಿ ಪರಿಪೂರ್ಣವಾಗಿರಲಿ. ಆಗ ನೀವು ನನ್ನನ್ನು ಕಳುಹಿಸಿದ್ದೀರಿ ಎಂದೂ ನನ್ನನ್ನು ಪ್ರೀತಿಸಿದಂತೆ ಇವರನ್ನು ನೀವು ಪ್ರೀತಿಸಿದ್ದೀರಿ ಎಂದೂ ಲೋಕವು ತಿಳಿದುಕೊಳ್ಳುವುದು.


ನೀವು ನನ್ನನ್ನು ಲೋಕಕ್ಕೆ ಕಳುಹಿಸಿದಂತೆಯೇ ನಾನು ಸಹ ಇವರನ್ನು ಲೋಕಕ್ಕೆ ಕಳುಹಿಸಿದ್ದೇನೆ.


ಯೇಸು ಅದಕ್ಕೆ ಉತ್ತರವಾಗಿ ಹೇಳಿದ್ದು: “ಪರಲೋಕ ರಾಜ್ಯದ ರಹಸ್ಯಗಳನ್ನು ತಿಳಿದುಕೊಳ್ಳುವ ಜ್ಞಾನವು ನಿಮಗೆ ಕೊಡಲಾಗಿದೆ, ಆದರೆ ಅವರಿಗಲ್ಲ.


ಬೆಳ್ಳಿಗಿಂತ ನನ್ನ ಬೋಧನೆಯನ್ನು ಆರಿಸಿಕೋ ಉತ್ತಮ ಬಂಗಾರಕ್ಕಿಂತ ಮಿಗಿಲಾದ ತಿಳುವಳಿಕೆಯನ್ನು ಪಡೆದುಕೋ.


ನಾನು ಕರ್ತ ದೇವರಿಂದಲೇ ಪಡೆದದ್ದನ್ನು ನಿಮಗೆ ಒಪ್ಪಿಸಿಕೊಟ್ಟಿದ್ದೇನೆ: ಕರ್ತ ಆಗಿರುವ ಯೇಸು ತಮ್ಮನ್ನು ಹಿಡಿದುಕೊಡಲಾದ ರಾತ್ರಿಯಲ್ಲಿ ರೊಟ್ಟಿಯನ್ನು ತೆಗೆದುಕೊಂಡು,


ಅವರ ಸಾಕ್ಷಿಯನ್ನು ಸ್ವೀಕರಿಸಿದವರು ದೇವರು ಸತ್ಯವಂತರೆಂದು ಮುದ್ರೆ ಹಾಕಿದ್ದಾರೆ.


ದೇವರು ಲೋಕಕ್ಕೆ ತೀರ್ಪು ಮಾಡುವುದಕ್ಕಾಗಿ ಅಲ್ಲ, ತಮ್ಮ ಪುತ್ರನ ಮುಖಾಂತರ ಲೋಕದ ಜನರನ್ನು ರಕ್ಷಿಸುವುದಕ್ಕಾಗಿಯೇ ಅವರನ್ನು ಲೋಕಕ್ಕೆ ಕಳುಹಿಸಿದರು.


ನನ್ನ ಗದರಿಕೆ ಕೇಳಿ ನೀವು ಪಶ್ಚಾತ್ತಾಪಪಡಿರಿ! ಆಗ ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ, ನಿಮಗೆ ನನ್ನ ಬೋಧನೆಗಳನ್ನು ಪ್ರಕಟಿಸುವೆನು.


ಮಗನೇ, ಆಲಿಸಿ ನನ್ನ ಮಾತುಗಳನ್ನು ಸ್ವೀಕರಿಸು, ಆಗ ನಿನ್ನ ಜೀವನದ ವರ್ಷಗಳು ಹೆಚ್ಚುವವು.


ಮಗನೇ, ನನ್ನ ಮಾತುಗಳನ್ನು ನೀನು ಅಂಗೀಕರಿಸಿ, ನನ್ನ ಆಜ್ಞೆಗಳನ್ನು ನಿನ್ನಲ್ಲಿ ಕಾದಿರಿಸು.


ನಿನ್ನ ಹಾಗಿರುವ ಪ್ರವಾದಿಯನ್ನು ನಾನು ಅವರ ಸಹೋದರರ ಮಧ್ಯದಿಂದ ಅವರಿಗೆ ಎಬ್ಬಿಸುವೆನು; ನನ್ನ ವಾಕ್ಯಗಳನ್ನು ಆತನ ಬಾಯಿಯಲ್ಲಿ ಇಡುವೆನು. ನಾನು ಆತನಿಗೆ ಆಜ್ಞಾಪಿಸುವುದನ್ನೆಲ್ಲಾ ಆತನು ಅವರಿಗೆ ಹೇಳುವನು.


ಏಕೈಕ ಸತ್ಯ ದೇವರಾಗಿರುವ ನಿಮ್ಮನ್ನೂ ನೀವು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವುದೇ ನಿತ್ಯಜೀವ.


ಇದು ಕ್ರಿಸ್ತ ಯೇಸುವಿನ ಪ್ರಕಟನೆ. ಶೀಘ್ರವೇ ಸಂಭವಿಸಲಿಕ್ಕಿರುವ ಸಂಗತಿಗಳನ್ನು ತಮ್ಮ ದಾಸರಿಗೆ ತೋರಿಸುವುದಕ್ಕಾಗಿ ದೇವರಿಂದ ಈ ಪ್ರಕಟನೆಯನ್ನು ಹೊಂದಿದರು. ಇದಲ್ಲದೆ ದೇವರು ತಮ್ಮ ದೇವದೂತನನ್ನು ಕಳುಹಿಸಿ, ಅವನ ಮುಖಾಂತರ ಆ ಸಂಗತಿಗಳನ್ನು ತಮ್ಮ ದಾಸನಾದ ಯೋಹಾನನಿಗೆ ತಿಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು